ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್, ಸರ್ಕಾರಕ್ಕೆ ಎಷ್ಟು ಉಳಿತಾಯ ಗೊತ್ತಾ? – Kannada News
ಬೆಂಗಳೂರು, (ಜೂನ್ 11): ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ(Guarantee scheme)ಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮಿ’ (Gruhalakshmi) ಯೋಜನೆ ಪರಿಷ್ಕರಣೆ ಮಾಡಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಫಿಲ್ಟರ್ ಮಾಡಿದ್ದು, ನೋಂದಣಿಯಾದ 1.30 ಕೋಟಿ ಮಂದಿ ಪೈಕಿ 3.89 ಲಕ್ಷ ಮಂದಿಯನ್ನು ಫಲಾನುಭವಿಗಳ ಪಟ್ಟಿಯಿಂದ ತೆಗೆದುಹಾಕಲಾಗಿದೆ. 1.94 ಲಕ್ಷ ಫನಾನುಭವಿಗಳು ಐಟಿ ಜಿಎಸ್ಟಿ ಪಾವತಿಸುವವರು ಆಗಿದ್ದರೆ, 1.95 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದಾರೆ. ಹೀಗಾಗಿ ಒಟ್ಟು 3.89 ಲಕ್ಷ ಫಲಾನುಭವಿಗಳ ಖಾತೆಗಳಿಗೆ ಹಣ ವರ್ಗಾವಣೆ ಬಂದ್ ಮಾಡಲಾಗಿದೆ. ಅದರಲ್ಲೂ ಬೆಂಗಳೂರು…