Video: ರಾಮಲೀಲಾ ಮೈದಾನದ ಮಸೀದಿ ಬಳಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ – Kannada News | Tensions Flare During Demolition Drive Near Delhi Mosque
ನವದೆಹಲಿ, ಜನವರಿ 07: ದೆಹಲಿಯ ರಾಮಲೀಲಾ ಮೈದಾನದ ಮಸೀದಿ ಬಳಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ಹಿಂಸಾತ್ಮಕವಾಗಿ ಮಾರ್ಪಟ್ಟಿದ್ದು, ಐವರು ಪೊಲೀಸರು ಗಾಯಗೊಂಡಿದ್ದಾರೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಫೈಜ್-ಎ-ಇಲಾಹಿ ದರ್ಗಾದ ಹೊರಗೆ ಅಕ್ರಮವಾಗಿ ಕಟ್ಟಿರುವ ಬ್ಯಾಂಕ್ವೆಟ್ ಹಾಲ್ ಮತ್ತು ಖಾಸಗಿ ಆರೋಗ್ಯ ಕೇಂದ್ರವನ್ನು ನೆಲಸಮ ಮಾಡಲಾಯಿತು. ಬೆಳಗ್ಗೆ 8 ಗಂಟೆಗೆ ನೆಲಸಮ ಕಾರ್ಯ ಆರಂಭವಾಗಬೇಕಿತ್ತು, ಆದರೆ ಬೆಳಗಿನ ಜಾವ 1.30 ರ ಸುಮಾರಿಗೆ ಇದನ್ನು ಆರಂಭಿಸಲಾಯಿತು. ನ್ಯಾಯಾಲಯದ ನಿರ್ದೇಶನಗಳಿಗೆ ಅನುಸಾರವಾಗಿ ಮತ್ತು ಕಟ್ಟುನಿಟ್ಟಾದ…