ಕಂಬ್ಯಾಕ್ ಬೆನ್ನಲ್ಲೇ ಶ್ರೇಯಸ್ ಅಯ್ಯರ್ಗೆ ಒಲಿದ ನಾಯಕತ್ವ
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ (Shreyas Iyer) ಇದೀಗ ಮತ್ತೆ ಮೈದಾನಕ್ಕಿಳಿಯಲು ಸಜ್ಜಾಗಿದ್ದಾರೆ. ಅದು ಸಹ ವಿಜಯ ಹಝಾರೆ ಟೂರ್ನಿಯ ಮೂಲಕ ಎಂಬುದು ವಿಶೇಷ. ಅಂದರೆ ಪ್ರಸ್ತುತ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯ ಪಂದ್ಯದಲ್ಲಿ ಅಯ್ಯರ್ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಮುಂಬೈ ತಂಡದ ನಾಯಕ ಶಾರ್ದೂಲ್ ಠಾಕೂರ್ ಗಾಯಗೊಂಡಿದ್ದು, ಹೀಗಾಗಿ ಉಳಿದ ಪಂದ್ಯಗಳಿಂದ ಅವರು ಹೊರಗುಳಿದಿದ್ದಾರೆ. ಹೀಗಾಗಿ ಮುಂಬೈ ತಂಡದ ಸಾರಥ್ಯವನ್ನು ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ಗೆ ವಹಿಸಲಾಗಿದೆ. ಅದರಂತೆ…