ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ಹತ್ಯೆ; 3 ವಾರಗಳಲ್ಲಿ ಅಲ್ಪಸಂಖ್ಯಾತರ ಮೇಲೆ 5ನೇ ದಾಳಿ – Kannada News | Another Hindu Man Killed In Bangladesh 5th Attack in three weeks
ಢಾಕಾ, ಜನವರಿ 5: ಬಾಂಗ್ಲಾದೇಶದಲ್ಲಿ ಇಂದು ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಡಿನ ದಾಳಿ ನಡೆದಿದ್ದು, ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ಅಲ್ಲಿ ನಡೆದ ಅಶಾಂತಿಯ ಬಳಿಕ ಬಾಂಗ್ಲಾದೇಶದಲ್ಲಿ (Bangladesh) ನಡೆದ 5ನೇ ಘಟನೆ ಇದಾಗಿದೆ. ಮೃತ ವ್ಯಕ್ತಿಯನ್ನು ರಾಣಾ ಪ್ರತಾಪ್ ಬೈರಾಗಿ ಎಂದು ಗುರುತಿಸಲಾಗಿದ್ದು, ಇಂದು ಮಧ್ಯಾಹ್ನ ಜೆಸ್ಸೋರ್ ಜಿಲ್ಲೆಯ ಕೊಪಾಲಿಯಾ ಬಜಾರ್‌ನಲ್ಲಿ ಕೆಲವು ದುಷ್ಕರ್ಮಿಗಳು ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಬೈರಾಗಿ ಅರುವಾ ಗ್ರಾಮದ ನಿವಾಸಿಯಾಗಿದ್ದು ಶಾಲೆಯಲ್ಲಿ ಪಾಠ…