ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ: ಕಾಂಗ್ರೆಸ್ಗೆ ಟಕ್ಕರ್ ಕೊಡಲು ಕೇಸರಿ ಪಡೆ ರಣತಂತ್ರ – Kannada News | Karnataka BJP Core Committee Meeting: Major Decision
ಬೆಂಗಳೂರು, ಜನವರಿ 05: ಮಲ್ಲೇಶ್ವರಂನ ಕಚೇರಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿದ್ದು, ಮೀಟಿಂಗ್ನಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಕೋಗಿಲು ಲೇಔಟ್ನಲ್ಲಿ ಅಕ್ರಮ ಮನೆಗಳ ತೆರವು, ಬ್ಯಾನರ್ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದಿರುವ ಮಾರಾಮಾರಿ, ಪರಿಷತ್ ಚುನಾವಣೆ ಮತ್ತು ವಿಧಾನಸಭೆ ಬೈ ಎಲೆಕ್ಷನ್ ಸೇರಿ ಪ್ರಮುಖ ವಿಚಾರಗಳ ಬಗ್ಗೆ ನಾಯಕರು ಸಮಾಲೋಚನೆ ನಡೆಸಿದ್ದಾರೆ. ಪಕ್ಷದ ಮುಂದಿನ ನಡೆ ಬಗ್ಗೆಯೂ ಸಭೆಯಲ್ಲಿ ರೂಪುರೇಷೆ ಸಿದ್ಧಪಡಿಸಲಾಗಿದೆ. ಸಭೆಯ ತೀರ್ಮಾನಗಳೇನು? ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗಲಾಟೆ ವಿಚಾರದಲ್ಲಿ…