All posts by nagaraj11081993

Bengaluru: ರಸ್ತೆ ಬದಿ ಕಸ ಎಸೆದ ಯುವತಿಗೆ ಸ್ಥಳೀಯರಿಂದ ಸಖತ್​ ಕ್ಲಾಸ್ – Kannada News | Bengaluru Littering: Jayanagar Woman Confronted for Dumping Garbage; Video Viral

ಬೆಂಗಳೂರು, ಜನವರಿ 05: ನಗರವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಹತ್ತು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಹುಡುಕಿ ಹುಡುಕಿ ದಂಡ ವಿಧಿಸಲಾಗುತ್ತಿದೆ. ಇದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ತ್ಯಾಜ್ಯ ಎಸೆಯುವವರ ಮನೆ ಮುಂದೆಯೇ ಲೋಡ್​​ಗಟ್ಟಲೆ ಕಸ ಸುರಿದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್​​ ಮಾಡಿ ಅವರಿಗೆ ನಾಚಿಕೆ ಉಂಟು ಮಾಡುವ ಕೆಲಸವನ್ನೂ ಮಾಡಿದೆ. ಹೀಗಿದ್ದರೂ ಬೆಂಗಳೂರು ಮಂದಿ ಮಾತ್ರ ಬುದ್ಧಿ ಕಲಿಯುತ್ತಿಲ್ಲ. ನೀವೇನಾದ್ರೂ ಮಾಡ್ಕೊಳ್ಳಿ, ನಾವು ಮಾತ್ರ ಹೀಗೆ ಇರೋದು ಎಂಬ ರೀತಿ ಕೆಲವರು ವರ್ತಿಸುತ್ತಿದ್ದಾರೆ. ಈ ನಡುವೆ ಜನವಸತಿ ಪ್ರದೇಶದಲ್ಲಿ ಕಸ ಎಸೆದು ಹೋಗುತ್ತಿದ್ದ ಯುವತಿಗೆ ಸ್ಥಳೀಯರೇ ಕ್ಲಾಸ್​​ ತೆಗೆದುಕೊಂಡ ವಿಡಿಯೋವೊಂದು ವೈರಲ್​​ ಆಗಿದೆ.

ಬುದ್ಧಿ ಹೇಳಿದವರ ಜೊತೆಗೇ ಯುವತಿ ವಾಗ್ವಾದ

ಜಯನಗರದ 8ನೇ ಅಡ್ಡ ರಸ್ತೆಯ ಮಾರುತಿ ಲೇಔಟ್​​ನಲ್ಲಿ ಓರ್ವ ಯುವತಿ ತನ್ನ ಸ್ಕೂಟರ್​​ನಲ್ಲಿ ರಾಶಿ ರಾಶಿ ಕಸ ತೆಗೆದುಕೊಂಡು ಬಂದು ಪಕ್ಕದ ಏರಿಯಾದ ಜನವಸತಿ ಪ್ರದೇಶದ ಬಳಿ ಸುರಿದಿದ್ದಾಳೆ. ಇದನ್ನು ಗಮನಿಸಿದ ಸ್ಥಳೀಯರು ಇಲ್ಲಿ ಕಸ ಹಾಕಬೇಡಿ ಎಂದು ಮನವರಿಕೆ ಮಾಡಿದ್ದಾರೆ. ರೆಸಿಡೆನ್ಸಿಯಲ್ ಏರಿಯಾದಲ್ಲಿ ಈ ರೀತಿ ಕಸ ಹಾಕಿ ಹೋದ್ರೆ ಇಲ್ಲಿನ ನಿವಾಸಿಗಳಿಗೆ ಬಹಳ ಸಮಸ್ಯೆ ಆಗುತ್ತೆ ಎಂದು ಹೇಳಿದರೂ ಯುವತಿ ಮಾತ್ರ ಯಾವುದನ್ನೂ ಲೆಕ್ಕಿಸಿಲ್ಲ. ಬದಲಾಗಿ ತನಗೆ ಬುದ್ಧಿ ಹೇಳಿದವರ ಜೊತೆಗೇ ವಾಗ್ವಾದಕ್ಕೆ ಇಳಿದಿದ್ದಾಳೆ.

ಇದನ್ನೂ ಓದಿ:  ಕಸ ಎಸೆದಿದ್ದಲ್ಲದೆ ನಗರ ಸಭೆ ಸಿಬ್ಬಂದಿಗೇ ಆವಾಜ್​; ಯುವಕನ ದ್ವಿಚಕ್ರ ವಾಹನ ​ವಶಕ್ಕೆ

ಸ್ಥಳೀಯರ ಮಾತಿಗೆ ಕೋಪಗೊಂಡ ಯುವತಿ ನಾನು ಇಲ್ಲೇ ಕಸವನ್ನು ಹಾಕೋದು, ಯಾರು ಏನು ಬೇಕಾದರೂ ಮಾಡಿಕೊಳ್ಲಿ ಎಂದು ಆವಾಜ್​​ ಹಾಕಿದ್ದಾಳೆ. ಈ ವೇಳೆ ನೀವು ಓದಿದ್ದೀರಲ್ವಾ? ನಿಮಗೆ ಇಷ್ಟೂ ಬುದ್ಧಿ ಇಲ್ವಾ ಎಂದು ಸ್ಥಳಿಯರು ಆಕೆಯನ್ನು ಪ್ರಶ್ನಿಸಿದ್ದಾರೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡ್ತೀವಿ ಅಂತಲೂ ಹೇಳಿದ್ದಾರೆ. ಹೀಗಿದ್ದರೂ ತಲೆ ಕೆಡಿಸಿಕೊಳ್ಳದ ಆಕೆ ಕಸವನ್ನ ರಸ್ತೆ ಮಧ್ಯದಲ್ಲೇ ಚೆಲ್ಲಿ ತೆರಳಿದ್ದಾಳೆ. ಬಳಿಕ ಸ್ಥಳೀಯ ನಿವಾಸಿಗಳು ಮೊದಲೇ ಹೇಳಿದಂತೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್​​ ಮಾಡಿದ್ದು, ಯುವತಿಯ ಕೆಲಸಕ್ಕೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ವರದಿ: ನಟರಾಜ್, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.​​

Published On – 4:57 pm, Mon, 5 January 26

Source link

ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ – Kannada News | Udupi Shri Krishna Temple Receives Golden Bhagavad Gita as Offering from Delhi Devotee

ಉಡುಪಿ, ಜನವರಿ 05: ಉಡುಪಿ ಶ್ರೀ ಕೃಷ್ಣನಿಗೆ ದೆಹಲಿಯ ಭಕ್ತರೊಬ್ಬರು ಚಿನ್ನದ ಭಗವದ್ಗೀತೆ ಅರ್ಪಣೆಗೆ ಮುಂದಾಗಿದ್ದಾರೆ. ಜನವರಿ 8ರಂದು ನಡೆಯಲಿರುವ ವಿಶ್ವಗೀತಾ ಪರ್ಯಾಯ ಸಮಾರೋಪ ವಿಶೇಷ ಕಾರ್ಯಕ್ರಮದಂದು ಕೃಷ್ಣ ಸನ್ನಿಧಿಯಲ್ಲಿ ಹೊನ್ನಿನ ಭಗವದ್ಗೀತೆ ಲೋಕಾರ್ಪಣೆಗೊಳ್ಳಲಿದೆ. ಸುಮಾರು 2 ಕೋಟಿ ರೂ ವೆಚ್ಚದಲ್ಲಿ ಚಿನ್ನದ ಹಾಳೆಯಲ್ಲಿ ಭಗವದ್ಗೀತೆಯ 18 ಅಧ್ಯಾಯಗಳ 700 ಶ್ಲೋಕಗಳನ್ನು ಮುದ್ರಿಸಲಾಗಿದೆ. ಚಿನ್ನದ ರಥದಲ್ಲಿ ಭಗವದ್ಗೀತೆಯ ಮೆರವಣಿಗೆ ಮೂಲಕ ಅರ್ಪಿಸಲಿದ್ದಾರೆ. ಅಯೋಧ್ಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟೆಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸೇರಿ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಬ್ಯಾನರ್ ಗಲಾಟೆ ಪ್ರಕರಣ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು – Kannada News | Bellary violence: bomb Disposal squad Verification In MLA Gali Janardhan Reddy Office

ಬಳ್ಳಾರಿ, (ಜನವರಿ 05): ಬಳ್ಳಾರಿ ಬ್ಯಾನರ್ ಗಲಾಟೆ ಹಾಗೂ ಫೈರಿಂಗ್ ಪ್ರಕರಣದ (bellary violence) ತನಿಖೆ ಚುರುಕುಗೊಂಡಿದೆ. ಬಳ್ಳಾರಿಯ ಅವಂಭಾವಿಯಲ್ಲಿರುವ ರೆಡ್ಡಿ ನಿವಾಸದಲ್ಲಿ ಬಾಂಬ್ ನಿಷ್ಕ್ರಿಯ ದಳ ಇಂಚಿಂಚೂ ಪರಿಶೀಲನೆ ನಡೆಸಿದೆ. ಬುಲೆಟ್ ಪತ್ತೆ ಹಚ್ಚಲು ಬಾಂಬ್ ನಿಷ್ಕ್ರಿಯ ದಳ ಎಂಟ್ರಿ ಕೊಟ್ಟಿದ್ದು, ಬುಲೆಟ್‌ಗಳಿಗಾಗಿ ಹುಡುಕಾಟ ನಡೆಸಿತ್ತು. DSMD ಮಿಷನ್​ಗಳ ಮೂಲಕ ಘಟನಾ ಸ್ಥಳದ ಮೂಲೆ ಮೂಲೆಯನ್ನ ಸರ್ಚ್ ಮಾಡಿದ್ರು. ಬಾಂಬ್ ನಿಷ್ಕ್ರೀಯ ತಂಡಕ್ಕೆ FSL ಟೀಮ್ ಕೂಡಾ ಸಾಥ್ ನೀಡಿದೆ. ಇನ್ನು ಗಲಾಟೆ ವೇಳೆ ಹಾರಿದ್ದ ಗುಂಡು ಗಾಲಿ ಜನಾರ್ದನ ರೆಡ್ಡಿ ನಿವಾಸದಲ್ಲಿರುವ ಕಚೇರಿಯ ಗ್ಲಾಸ್​​​ಗೆ ತಗುಲಿದ್ದು, ಗಾಜು ಪುಡಿ ಪುಡಿಯಾಗಿದೆ. ಇದರಿಂದ ಬಾಂಬ್ ನಿಷ್ಕ್ರಿಯ ದಳ, ಜನಾರ್ದನ ರೆಡ್ಡಿ  ಕಚೇರಿಯೊಳಗೆ ಪರಿಶೀಲನೆ ನಡೆಸಿದೆ.

ಇದನ್ನೂ ನೋಡಿ: ಬಳ್ಳಾರಿ ಗಲಭೆ: ಪೊಲೀಸ್ ವಶದಲ್ಲಿದ್ದ 9 ಗನ್​​ಮ್ಯಾನ್​​ ಪೈಕಿ ಓರ್ವ ಅರೆಸ್ಟ್

Source link

‘ರಾಶಿಕಾಗೆ ಮಲಗೋಕೆ ರಘು ತೊಡೆ ಬೇಕು’; ಅಶ್ವಿನಿ ಹೆಣ್ಣು ಮಕ್ಕಳ ಪರ ನಿಲ್ಲೋದು ಅಂದ್ರೆ ಇದೇನಾ? – Kannada News | Ashwini Gowda’s Controversial Statement on Rashika: Needs Raghu’s Lap Sparks Outrage

ಕೆಲ ವಾರಗಳ ಹಿಂದಿನ ಮಾತು. ಬಿಗ್ ಬಾಸ್ (Bigg Boss)  ಮನೆಯಲ್ಲಿ ಉಂಟಾದ ಗಲಾಟೆಯಲ್ಲಿ ‘ನಾನು ಹೆಣ್ಣುಮಕ್ಕಳ ಪರವಾಗಿ ನಿಲ್ಲುತ್ತಿದ್ದೇನೆ’ ಎಂದು ಅಶ್ವಿನಿ ಗೌಡ ಹೇಳಿಕೊಂಡಿದ್ದರು. ಆದರೆ, ಈಗ ಹೆಣ್ಣು ಮಕ್ಕಳ ಬಗ್ಗೆಯೇ ಕೆಟ್ಟದಾಗಿ ಮಾತನಾಡಿ ಚರ್ಚೆಗೆ ಕಾರಣರಾಗಿದ್ದಾರೆ. ‘ರಾಶಿಕಾಗೆ ಮಲಗೋಕೆ ರಘು ತೊಡೆ ಬೇಕು’ ಎಂಬ ಮಾತು ಚರ್ಚೆಗೆ ಕಾರಣ ಆಗಿದೆ. ಅವರು ಆ ರೀತಿ ಮಾತನಾಡಬಾರದಿತ್ತು ಎಂದು ಅನೇಕರು ಹೇಳಿದ್ದಾರೆ. ‘ಅಶ್ವಿನಿ ಮಹಿಳೆಯರ ಪರ ನಿಲ್ಲೋದು ಅಂದ್ರೆ ಇದೇನಾ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ವೀಕೆಂಡ್​​ನಲ್ಲಿ ಚಟುವಟಿಕೆ ಒಂದನ್ನು ನೀಡಲಾಯಿತು. ಇದರ ಅನುಸಾರ ಪಂಚಿಂಗ್ ಬ್ಯಾಗ್ ಮೇಲೆ ತಮಗೆ ಇಷ್ಟ ಇಲ್ಲದವರ ಫೋಟೋ ಹಾಕಬೇಕು. ಆ ಬಳಿಕ ಕೈಗೆ ಪಂಚಿಂಗ್ ಬಾಕ್ಸ್ ಹಾಕಿಕೊಂಡು ಗುದ್ದಬೇಕು. ಅಶ್ವಿನಿ ಅವರು ರಾಶಿಕಾ ಹೆಸರು ತೆಗೆದುಕೊಂಡರು. ಅವರು ನೀಡಿದ ಕಾರಣ ಚರ್ಚೆಗೆ ಕಾರಣ ಆಗಿದೆ.

‘ರಾಶಿಕಾ ತನ್ನನ್ನು ತಾನು ಮಿಸ್ ಯೂನಿವರ್ಸ್ ಎಂದುಕೊಂಡಿದ್ದಾರೆ. ನಿನ್ನ ವಯಸ್ಸಿಗೂ ನನ್ನ ವಯಸ್ಸಿಗೂ ತುಂಬಾ ಅಂತರ ಇದೆ. ನೀನೆ ಸ್ಟ್ರಾಂಗ್ ಎಂದು ಹೇಳಿ ಕೊಳ್ಳುತ್ತಾ ಇದ್ದೀಯಾ. ಆದರೆ ನೀನು ಸ್ಟ್ರಾಂಗ್ ಅಲ್ಲ. ಕಳೆದ ವಾರ ನಿಮ್ಮನ್ನು ನಾವು ಸೋಲಿಸಿದ್ದೇವೆ’ ಎಂದು ಅಶ್ವಿನಿ ಗೌಡ ಹೇಳಿದರು.

‘ನಿನ್ನ ರೀತಿ ಬಿಗ್ ಬಾಸ್ ಅಲ್ಲಿ ಮತ್ತೊಂದು ಟ್ರ್ಯಾಕ್​ನ ನಾನು ಶುರು ಮಾಡಿಕೊಂಡಿಲ್ಲ. ನಿನಗೆ ನಿಯತ್ತಿಲ್ಲ ಎಂಬುದಕ್ಕು ಸೂರಜ್ ದೊಡ್ಡ ಉದಾಹರಣೆ. ನಿನಗೆ ಒರಗಿಕೊಳ್ಳೋಕೆ ರಘು ತೊಡೆ ಬೇಕು, ಹೆಗಲು ಬೇಕು. ನನಗೆ ಬೇಡ’ ಎಂದು ಅಶ್ವಿನಿ ಗೌಡ ಹೇಳಿದರು.

ಇದನ್ನೂ ಓದಿ: ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ

ರಾಶಿಕಾ ಬಗ್ಗೆ ಅಶ್ವಿನಿ ಆಡಿದ ಮಾತು ಚರ್ಚೆ ಹುಟ್ಟುಹಾಕಿದೆ. ರಾಶಿಕಾ ಕೂಡ ಈ ಬಗ್ಗೆ ಮಾತನಾಡಿದ್ದಾರೆ. ‘ಧನುಷ್ ಆಡಿದ್ದಕ್ಕೆ ಅಶ್ವಿನಿ ಕ್ಯಾಪ್ಟನ್ಸಿ ಟಾಸ್ಕ್​ಗೆ ಹೋಗಿದ್ದು. ಧೈರ್ಯ ಇದ್ದರೆ ಅವರು ನನ್ನ ಜೊತೆ ಟಾಸ್ಕ್ ಆಡಿ ಗೆಲ್ಲಲಿ’ ಎಂದು ರಾಶಿಕಾ ಸವಾಲು ಹಾಕಿದ್ದಾರೆ. ‘ಅಶ್ವಿನಿ ಗೌಡ ತುಂಬಾ ಅಸಹ್ಯವಾಗಿ ಯೋಚಿಸ್ತಾರೆ’ ಎಂದು ರಾಶಿಕಾ ಅಭಿಪ್ರಾಯಪಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅಶ್ವಿನಿಗೆ ಅನೇಕರು ಕ್ಲಾಸ್ ತೆಗೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದೀರ್ಘಾವಧಿ ಸಿಎಂ: ದೇವರಾಜ ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು – Kannada News | Siddaramaiah Reacts about Breaks Devaraj urs record of karnatakas long term chief minister

ಮೈಸೂರು, (ಜನವರಿ 05): ಕರ್ನಾಟಕದ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ (Siddaramaiah) ಅವರು ಪಾತ್ರರಾಗಲು ಕೇವಲ ಒಂದೇ ದಿನ ಬಾಕಿ ಇದ್ದು, ದೇವರಾಜ ಅರಸು ಅವರ ದಾಖಲೆಯನ್ನು ನಾಳೆ (ಜನವರಿ 06) ಮುರಿಯಲಿದ್ದಾರೆ. 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು (D Devaraj urs )ಕರ್ನಾಟಕದ ಸಿಎಂ‌ ಆಗಿದ್ದ‌ರು. ಇದೀಗ ಈ ದಾಖಲೆಯನ್ನು ನಾಳೆ ಸಿದ್ದರಾಮಯ್ಯ ಮುರಿಯಲಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಇಂದು (ಜನವರಿ 05) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಜನರ ಅರ್ಶಿವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘವಾದಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ. ನನಗೆ ಖುಷಿ ಏನೆಂದರೆ ದೇವರಾಜ ಅರಸು ಹಾಗೂ ನಾನು ಒಂದೇ ಜಿಲ್ಲೆಯವರು. ನನಗೂ ದೇವರಾಜ ಅರಸ್ ಅವರಿಗೂ ಹೋಲಿಕೆ ಇಲ್ಲ.ಯಾವುದೇ ದಾಖಲೆ ಶಾಶ್ವತವಲ್ಲ. ಕ್ರಿಕೆಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ವಿರಾಟ್ ಕೋಹ್ಲಿ ಮುರಿದಿಲ್ಲವೇ? ಮುಂದೆ ಯಾರಾದರೂ ನನ್ನ ದಾಖಲೆಯನ್ನು ಮುರಿಯಬಹುದು. ನನಗಿಂತ ಹೆಚ್ಚಿನ ಬಜೆಟ್ ಮಂಡಿಸುವವರು ಕೂಡ ಬರಬಹುದು. ಹೀಗಾಗಿ ನನ್ನ ದಾಖಲೆಯನ್ನು ಯಾರೂ ಮುರಿಯಲು ಸಾಧ್ಯವಿಲ್ಲ ಎಂದು ನಾನು ಹೇಳುವುದಿಲ್ಲ ಎಂದರು.

ಇದನ್ನೂ ಓದಿ: ರಾಜ್ಯದ ದೀರ್ಘಾವಧಿ ಸಿಎಂ ಆಗಲಿದ್ದಾರೆ ಸಿದ್ದರಾಮಯ್ಯ: ದೇವರಾಜ ಅರಸು​​ ದಾಖಲೆ ನಾಳೆ ಬ್ರೇಕ್​​

Source link

ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ಶಿವರಾಜ್ ತಂಗಡಗಿ – Kannada News | Talk of war Between V Somanna And Shivaraj Tangadagi at Koppal Over violate protocol

ಕೊಪ್ಪಳ, (ಜನವರಿ 05): ಹಿಟ್ನಾಳ ಗ್ರಾಮದ ಬಳಿ ಹಮ್ಮಿಕೊಂಡಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮವು ರಣರಂಗವಾಗಿ ಮಾರ್ಪಟ್ಟಿದೆ. ಹೌದು…ಇಂದು (ಜನವರಿ 05) ಕೊಪ್ಪಳದ (Koppal) ಹಿಟ್ನಾಳ ಗ್ರಾಮದಲ್ಲಿ 27 ಕೋಟಿ ರೂಪಾಯಿ ವೆಚ್ಚದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೇಂದ್ರ ಸಚಿವ ವಿ ಸೋಮಣ್ಣ ನಡುವೆ ಸಂಘರ್ಷ ಏರ್ಪಟ್ಟಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಂಸದರ ಹೆಸರು ಹಾಕಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿ ತೂರಾಟ ನಡೆಸಿ, ಸಚಿವರ ಕಾರಿಗೆ ಅಡ್ಡಿಪಡಿಸಿದರು. ಇನ್ನು ಇದೇ ವೇಳೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಅವರು ಟಿವಿ9 ಜತೆ ಮಾತನಾಡುವುದನ್ನು ಅರ್ಧಕ್ಕೆ ಬಿಟ್ಟು ಆಕ್ರೋಶದಿಂದ ಸೋಮಣ್ಣ ಇದ್ದ ವೇದಿಕೆಗೆ ನುಗ್ಗಿರುವ ಪ್ರಸಂಗ ಜರುಗಿದೆ.

ಇದನ್ನೂ ನೋಡಿ: ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ

Source link

ಥಿಯೇಟರ್ ಶೌಚಾಲಯದಲ್ಲಿ ಕ್ಯಾಮರಾ: ಮೊಬೈಲ್​​​ನಲ್ಲಿ ಯುವತಿಯರ ಖಾಸಗಿ ವಿಡಿಯೋಗಳು ಪತ್ತೆ; ಕೇಸ್ ಬುಕ್ – Kannada News | Hidden Camera Found in Sandhya Theatre Women’s Toilet: FIR Filed Against Theatre Management and Staff

ಬೆಂಗಳೂರು, ಜನವರಿ 05: ಸಂಧ್ಯಾ ಥಿಯೇಟರ್‌ನ (Sandhya Theatre) ಬಾತ್‌ ರೂಮ್‌ನಲ್ಲಿ ಕ್ಯಾಮರಾ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಡಿವಾಳ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ಮಹಿಳಾ ಟೆಕ್ಕಿ ದೂರಿನ ಮೇರೆಗೆ ಥಿಯೇಟರ್ ಹಾಗೂ ಸಿಬ್ಬಂದಿ ರಾಜೇಶ್, ಕಮಲ್​​ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಆರೋಪಿಗಳನ್ನ ವಶಕ್ಕೆ ಪಡೆದು ಮಡಿವಾಳ ಪೊಲೀಸರಿಂದ ವಿಚಾರಣೆ ನಡೆದಿದೆ.

ನಡೆದದ್ದೇನು?

ರವಿವಾರದಂದು ಮಹಿಳಾ ಟೆಕ್ಕಿಯೊಬ್ಬರು ಸ್ನೇಹಿತರ ಜೊತೆ ಸಿನಿಮಾ ನೋಡಲು ಸಂಧ್ಯಾ ಥಿಯೇಟರ್​​ಗೆ ಹೋಗಿದ್ದರು. ಇಂಟರ್ವೆಲ್ ವೇಳೆ ವಾಶ್ ರೂಂಗೆ ಹೋದಾಗ ಮಹಿಳಾ ಟೆಕ್ಕಿ ಹಾಗೂ ಸ್ನೇಹಿತೆಯರ ಖಾಸಗಿ ವಿಡಿಯೋವನ್ನು ರಾಜೇಶ್ ಎಂಬಾತ ಚಿತ್ರೀಕರಣ ಮಾಡಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ಮಡಿವಾಳ ಸಂಧ್ಯಾ ಥಿಯೇಟರ್ ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟ ಯುವಕ, ಯುವತಿಯರು ಶಾಕ್

ಮಹಿಳಾ ಟೆಕ್ಕಿ ಆರೋಪಿಯನ್ನ ಹಿಡಿದು ಮಾಲೀಕರ ಬಳಿ ಕರೆದೊಯ್ದಿದ್ದಾರೆ. ಈ ವೇಳೆ ಕಮಲ್ ಎಂಬಾತ ವಿಡಿಯೋ ಮಾಡಲು ಹೇಳಿದ್ದಾಗಿ ಹೇಳಿಕೆ ನೀಡಿದ್ದಾನೆ. ಸದ್ಯ ರಾಜೇಶ್, ಕಮಲ್ ಮತ್ತು ಸಂಧ್ಯಾ ಥಿಯೇಟರ್ ವಿರುದ್ಧ ಕೇಸ್ ದಾಖಲಾಗಿದೆ. ಇನ್ನು ಆತನ ಮೊಬೈಲ್‌ನಲ್ಲಿ ಹಲವು ಯುವತಿಯರ ಖಾಸಗಿ ವಿಡಿಯೋಗಳು ಪತ್ತೆಯಾಗಿದ್ದು, ಹಲವು ದಿನಗಳಿಂದ ಖಾಸಗಿ ವಿಡಿಯೋಗಳ ಚಿತ್ರೀಕರಣ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಎಫ್​ಐಆರ್​​​ನಲ್ಲಿ ಏನಿದೆ? 

ದೂರುದಾರೆ ಮತ್ತು ಅವರ ಸ್ನೇಹಿತೆಯರು ಬೆಂಗಳೂರಿನ ಮಡಿವಾಳಾದ ವಿ.ಪಿ. ರಸ್ತೆಯಲಿರುವ ಸಂಧ್ಯಾ ಥಿಯೇಟರ್‌ಗೆ “ನೂವು ನಾಕು ನಚ್ಚಾವು” ಸಿನಿಮಾವನ್ನು ರಾತ್ರಿ 7 ರಿಂದ 10 ಗಂಟೆಯ ಸಮಯದಲ್ಲಿ ವೀಕ್ಷಿಸಲು ಹೋಗಿದ್ದು, ವಿರಾಮದ ಸಮಯದಲ್ಲಿ ಸುಮಾರು ರಾತ್ರಿ 8:30 ಗಂಟೆಗೆ, ದೂರುದಾರೆ ಮತ್ತು ಅವರ ಸ್ನೇಹಿತೆಯರು ಥಿಯೇಟರ್ ಆವರಣದಲ್ಲಿರುವ ಶೌಚಾಲಯಕ್ಕೆ ಹೋದಾಗ, ಅಲ್ಲಿ ಮಹಿಳಾ ಶೌಚಾಲಯದ ಮಧ್ಯದಲ್ಲಿ, ಒಬ್ಬ ವ್ಯಕ್ತಿ ಮೊಬೈಲ್ ಫೋನ್ ಬಳಸಿ ವಿಡಿಯೋ ತೆಗೆಯುತ್ತಿರುವುದನ್ನು ನೋಡಿ, ತಕ್ಷಣ ತಮ್ಮ ಗಂಡನಿಗೆ ಕರೆ ಮಾಡಿ, ಆ ವ್ಯಕ್ತಿಯನ್ನು ಹಿಡಿದುಕೊಂಡು, ಅವರ ಫೋನ್ ಅನ್ನು ಪರಿಶೀಲಿಸಿದಾಗ ಅದರಲ್ಲಿ ದೂರುದಾರೆ ಮತ್ತು ಅವರ ಸ್ನೇಹಿತೆಯರ ಖಾಸಗಿ ವಿಡಿಯೋಗಳು ಇರುವುದು ಕಂಡುಬಂದಿದೆ.

ಇದನ್ನೂ ಓದಿ: ಮದ್ಯದ ನಶೆಯಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದ ಯುವಕರು ಜೈಲುಪಾಲು

ಸಂಧ್ಯಾ ಥಿಯೇಟರ್‌ನ ಮ್ಯಾನೆಜ್​ಮೆಂಟ್​ನವರನ್ನು  ವ್ಯಕ್ತಿಯ ಬಗ್ಗೆ ವಿಚಾರಿಸಿದಾಗ ಆತ ಸುಮಾರು ಒಂದು ತಿಂಗಳಿನಿಂದ ಅಲ್ಲಿ ಕೆಲಸ ಮಾಡುತ್ತಿದ್ದು, ಆತನ ಹೆಸರು ರಾಜೇಶ್ ಎಂದು ತಿಳಿಸಿದ್ದಾರೆ. ನಂತರ  ವಿಡಿಯೋಗಳನ್ನು ತೆಗೆಯಲು ಯಾರು ಸೂಚನೆ ನೀಡಿದರು ಎಂದು ದೂರುದಾರೆ ರಾಜೇಶ್​ನನ್ನು ಕೇಳಿದಾಗ, ಕಮಲ್ ಎಂಬ ವ್ಯಕ್ತಿ ಹೆಸರನ್ನು ಉಲ್ಲೇಖಿಸಿದ್ದಾನೆ. ನಂತರ ದೂರುದಾರೆ 112 ಪೊಲೀಸ್ ಹೆಲ್‌ಪ್‌ಲೈನ್‌ಗೆ ಕರೆ ಮಾಡಿದ್ದು, ನಂತರ ಪೊಲೀಸರು ಬಂದು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ದೂರುದಾರೆಯ ಸುರಕ್ಷತೆಯ ಕಾರಣಕ್ಕಾಗಿ ರಾಜೇಶ್ ಬಳಸಿದ ರೆಡ್ಡಿ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆದು, ಜೊತೆಗೆ ರಾಜೇಶ್, ಕಮಲ್ ಮತ್ತು ಸಂಧ್ಯಾ ಥಿಯೇಟರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 4:16 pm, Mon, 5 January 26

Source link

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್ – Kannada News | Clash between Mutant Raghu and Dhruvanth in Bigg Boss Kannada Season 12 Latest Episode

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಆಟದಲ್ಲಿ ಈಗ 8 ಜನರ ನಡುವೆ ಪೈಪೋಟಿ ಮುಂದುವರಿದಿದೆ. ಧ್ರುವಂತ್ ಮತ್ತು ಮ್ಯೂಟೆಂಟ್ ರಘು (Mutant Raghu) ಜಗಳ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಅವರಿಬ್ಬರು ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ. ಇಬ್ಬರೂ ಕೂಡ ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ಕಿತ್ತಾಡಿದ್ದಾರೆ. ನಾಮಿನೇಷನ್ ಪ್ರಕ್ರಿಯೆ ವೇಳೆ ಈ ಜಗಳ ನಡೆದಿದೆ. ಕಳೆದ ವಾರ ಸ್ಪಂದನಾ ಸೋಮಣ್ಣ ಅವರು ಎಲಿಮಿನೇಟ್ ಆದರು. ಮುಂದಿನ ವಾರ ಬಿಗ್ ಬಾಸ್ ಮನೆಯಿಂದ ಯಾರಿಗೆ ಗೇಟ್ ಪಾಸ್ ನೀಡಲಾಗುತ್ತದೆ ಎಂಬುದನ್ನು ತಿಳಿಯುವ ಕೌತುಕ ಹೆಚ್ಚಾಗಿದೆ. ಜನವರಿ 5ರ ಬಿಗ್ ಬಾಸ್ ಸಂಚಿಕೆಯ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Udupi: ಕಾರ್ಕಳದ ವಿವಾದಿತ ಪರಶುರಾಮ ಥೀಮ್ ಪಾರ್ಕ್​​ನ ತಾಮ್ರದ ತಗಡಿಗೆ ಕನ್ನ – Kannada News | Copper sheets were stolen from the Parashurama Theme Park in Karkala

ತಾಮ್ರದ ತಗಡನ್ನು ಕತ್ತರಿಸಿರುವುದು.

ಉಡುಪಿ, ಜನವರಿ 05: ಭಾರಿ ವಿವಾದಕ್ಕೆ ಕಾರಣವಾಗಿ ಪಾಳುಬಿದ್ದಿರುವ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿನ ಪರಶುರಾಮ ಥೀಂ ಪಾರ್ಕ್ನನಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಕಟ್ಟಡದ ಬಾಗಿಲನ್ನು ಮುರಿದು ಒಳ ನುಗ್ಗಿರುವ ಚಾಲಾಕಿಗಳು, ಮೇಲ್ಚಾವಣಿಗೆ ಹಾಕಿದ್ದ ತಾಮ್ರದ ಹೊದಿಕೆಗಳನ್ನು ಕಿತ್ತು ಹೊತ್ತೊಯ್ದಿದ್ದಾರೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಥೀಮ್​​ ಪಾರ್ಕ್​​ ನಿರ್ಮಾಣ ಮಾಡಲಾಗಿತ್ತು. ಪರಶುರಾಮ ಪ್ರತಿಮೆ ವಿಚಾರವಾಗಿ ಅವ್ಯವಹಾರ ಆರೋಪ ಕೇಳಿಬಂದಿದ್ದ ಹಿನ್ನೆಲೆ ತನಿಖೆಯೂ ನಡೆದಿತ್ತು. ಅನುದಾನವಿಲ್ಲದೆ ಸದ್ಯ ಥೀಂಪಾರ್ಕ್​​ ಪಾಳು ಬಿದ್ದಿದ್ದು, ಇಲ್ಲಿನ ವಸ್ತುಗಳು ಕಳ್ಳಕಾಕರ ಪಾಲಾಗತೊಡಗಿವೆ.

ಘಟನೆ ಬೆನ್ನಲ್ಲೇ ಕಾರ್ಕಳದ ಬೈಲೂರು ಉಮಿಕಲ್ ಬೆಟ್ಟದಲ್ಲಿರುವ ಥೀಂ ಪಾರ್ಕ್​​ಗೆ ಶಾಸಕ ಸುನಿಲ್ ಕುಮಾರ್ ಭೇಟಿ ನೀಡಿದ್ದಾರೆ. ಈ ಸ್ಥಳಕ್ಕೆ ಎರಡೂವರೆ ವರ್ಷಗಳ ಬಳಿಕ ಶಾಸಕರು ಭೇಟಿ ನೀಡಿದ್ದು, ಅಲ್ಲಿನ ಸ್ಥಿತಿ ನೋಡಿ ಬೇಸರ ಹೊರಹಾಕಿದ್ದಾರೆ. ಬಳಿಕ ಮಾತನಾಡಿದ ಅವರು, ಕಾರ್ಕಳದ ಇತಿಹಾಸಕ್ಕೆ ಇದು ದುರ್ದೈವ. ಕಳ್ಳತನವಾಗಲು ಕಾಂಗ್ರೆಸ್ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣ. ಪರಶುರಾಮ ಥೀಂ ಪಾರ್ಕ್​​ ಈಗ ಅನೈತಿಕ ಚಟುವಟಿಕೆಯ ತಾಣವಾಗುತ್ತಿದ್ದು, ಬಿಜೆಪಿ ಸರಕಾರ ಮಂಜೂರು ಮಾಡಿದ ನಾಲ್ಕೂವರೆ ಕೋಟಿ ಹಣ ಇನ್ನೂ ಬರಬೇಕಿದೆ. ತಕ್ಷಣ ಈ ಹಣ ಬಿಡುಗಡೆ ಮಾಡಿ, ಥೀಂ ಪಾರ್ಕ್​​ಗೆ ಸಾರ್ವಜನಿಕರ ಭೇಟಿಗೆ ಅವಕಾಶ ಮಾಡಿಕೊಡಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಪ್ರಕರಣ; ಶಿಲ್ಪಿ ಬಂಧನ

ಧರ್ಮಸ್ಥಳದಲ್ಲಿ ಬುರುಡೆ ಗ್ಯಾಂಗ್ ರೀತಿ ಇಲ್ಲೊಂದು ಫೈಬರ್ ಗ್ಯಾಂಗ್ ಇದೆ. ಎಲ್ಲ ಕಾಮಗಾರಿಗಳು ದಾಖಲೆ ಪ್ರಕಾರವೇ ನಡೆದಿದೆ. ಇದು ಫೈಬರ್ ಪ್ರತಿಮೆ ಅಲ್ಲ ಅನ್ನೋದು ಚಾರ್ಜ್​​ಶೀಟ್​​ನಲ್ಲಿ ಸ್ಪಷ್ಟವಾಗಿದ್ದು, ವಿವಾದಗಳು ಅಲ್ಲಿಗೆ ಮುಗಿದಿವೆ. ಹೀಗಾಗಿ ಇನ್ನೂ ರಾಜಕೀಯ ಮಾಡುವುದು ಬೇಡ.  ಅಭಿವೃದ್ಧಿ ದೃಷ್ಟಿಯಿಂದ ಕೆಲಸ ಮಾಡೋಣ. ರಾಜಕೀಯ ಕಾರಣಕ್ಕೆ ಸರಕಾರ ಹಣ ಬಿಡುಗಡೆ ಮಾಡಿಲ್ಲ. ಸಾರ್ವಜನಿಕರ ತಾಳ್ಮೆಯ ಕಟ್ಟೆ ಒಡೆಯುವ ಮುಂಚೆ ಎಚ್ಚೆತ್ತುಕೊಳ್ಳಿ . ಜೊತೆಗೆ ಮುಂದಿನ ಮಸ್ತಕಾಭಿಷೇಕದ ವೇಳೆ ಪ್ರವಾಸಿಗರು ಇಲ್ಲಿಗೆ ಬರುವಂತಾಗಬೇಕು ಎಂದು ಸುನಿಲ್​​ ಕುಮಾರ್​ ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ಶಿವರಾಜ್ ತಂಗಡಗಿ

ಕೊಪ್ಪಳ, (ಜನವರಿ 05): ಹಿಟ್ನಾಳ ಗ್ರಾಮದ ಬಳಿ ಹಮ್ಮಿಕೊಂಡಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮವು ರಣರಂಗವಾಗಿ ಮಾರ್ಪಟ್ಟಿದೆ. ಹೌದು…ಇಂದು (ಜನವರಿ 05) ಕೊಪ್ಪಳದ (Koppal) ಹಿಟ್ನಾಳ ಗ್ರಾಮದಲ್ಲಿ 27 ಕೋಟಿ ರೂಪಾಯಿ ವೆಚ್ಚದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೇಂದ್ರ ಸಚಿವ ವಿ ಸೋಮಣ್ಣ ನಡುವೆ ಸಂಘರ್ಷ ಏರ್ಪಟ್ಟಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಂಸದರ ಹೆಸರು ಹಾಕಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿ ತೂರಾಟ ನಡೆಸಿ, ಸಚಿವರ ಕಾರಿಗೆ ಅಡ್ಡಿಪಡಿಸಿದರು. ಇನ್ನು ಇದೇ ವೇಳೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಅವರು ಟಿವಿ9 ಜತೆ ಮಾತನಾಡುವುದನ್ನು ಅರ್ಧಕ್ಕೆ ಬಿಟ್ಟು ಆಕ್ರೋಶದಿಂದ ಸೋಮಣ್ಣ ಇದ್ದ ವೇದಿಕೆಗೆ ನುಗ್ಗಿರುವ ಪ್ರಸಂಗ ಜರುಗಿದೆ.

ಇದನ್ನೂ ನೋಡಿ: ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ

Source link