Ashes Sydney Test: ಹಠಾತ್ತನೆ ಸ್ಥಗಿತಗೊಂಡ ಸಿಡ್ನಿ ಟೆಸ್ಟ್ ಪಂದ್ಯ
ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಆಶಸ್ ಸರಣಿ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಸರಣಿಯ ಕೊನೆಯ ಪಂದ್ಯ ಸಿಡ್ನಿ ಮೈದಾನದಲ್ಲಿ ಇಂದಿನಿಂದ ಆರಂಭವಾಗಿದೆ. ಆದರೆ ಪಂದ್ಯದ ಮೊದಲ ದಿನದಾಟ ಭಾಗಶಃ ಮಳೆಗೆ ಆಹುತಿಯಾಯಿತು. ಹೀಗಾಗಿ ಆರಂಭಿಕ ಆಘಾತದಿಂದ ಹೊರಬಂದಿದ್ದ ಇಂಗ್ಲೆಂಡ್ಗೆ ಬೃಹತ್ ಮೊತ್ತವನ್ನು ಕಲೆಹಾಕಲು ಸಾಧ್ಯವಾಗಲಿಲ್ಲ. ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಆರಂಭಿಸಿರುವ ಇಂಗ್ಲೆಂಡ್ ಮೊದಲ ದಿನದಾಟದಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 211 ರನ್ ಕಲೆಹಾಕಿದೆ. ಆದಾಗ್ಯೂ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಡುವಲ್ಲಿ ತಂಡದ…