ಬರ–ಪ್ರವಾಹಕ್ಕೆ ವರ್ಷಗಳ ನಿರೀಕ್ಷೆ, ಕೋಗಿಲು ಲೇಔಟ್‌ಗೆ ಎರಡು ದಿನಗಳಲ್ಲಿ ಪರಿಹಾರ: ಸರ್ಕಾರದ ವಿರುದ್ಧ ಗುಡುಗಿದ ಜೋಶಿ – Kannada News | Kogilu Layout Rehabilitation: Prahlad Joshi Slams Karnataka Govt on this action
ಬೆಂಗಳೂರು, ಡಿಸೆಂಬರ್ 30: ಇತ್ತೀಚೆಗೆ ಕೋಗಿಲು ಬಡಾವಣೆಯಲ್ಲಿ (Kogilu Layout) ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ಜೆಸಿಬಿ ಬಳಸಿ ತೆರವು ಮಾಡಿತ್ತು. ಇದೀಗ ರಾಜ್ಯ ಸರ್ಕಾರ ಕೋಗಿಲು ಲೇಔಟ್ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲು ತೀರ್ಮಾನಿಸಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕರ್ನಾಟಕದ ಜನ ವಿಪತ್ತಿಗೊಳಗಾಗಿ ಪರಿಹಾರಕ್ಕಾಗಿ ಕಾಯುತ್ತಿದ್ದರೂ ಕೇವಲ ಎರಡೇ ದಿನಗಳಲ್ಲಿ ಒಂದು ಸಮುದಾಯಕ್ಕೆ ಪರಿಹಾರ ಒದಗಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ. 11 ಲಕ್ಷ ರೂ….