nagaraj11081993

ವಾವ್ಹ್​​​​ ಏನ್​​ ಅದೃಷ್ಟ ಈ ರಾಶಿಯವರದ್ದು!: ಮುಟ್ಟಿದ್ದೆಲ್ಲಾ ಚಿನ್ನ, ಆದರೆ ಈ ವಿಷಯದಲ್ಲಿ ತಾಳ್ಮೆ ಮುಖ್ಯ

೨೦೨೬ರ ಏಪ್ರಿಲ್ ತಿಂಗಳು ಸಿಂಹ ರಾಶಿಯವರಿಗೆ ಗ್ರಹಗಳ ಸಂಚಾರದ ದೃಷ್ಟಿಯಿಂದ ಅತ್ಯಂತ ಮಹತ್ವದ ಕಾಲಘಟ್ಟವಿದಾಗಿದೆ. ನಿಮ್ಮ ರಾಶ್ಯಾಧಿಪತಿಯಾದ ಸೂರ್ಯನು ಈ ತಿಂಗಳ ಮಧ್ಯಭಾಗದಲ್ಲಿ ಉಚ್ಚ ಸ್ಥಾನಕ್ಕೇರುವುದರಿಂದ ಆತ್ಮವಿಶ್ವಾಸ ಹೆಚ್ಚಾಗಲಿದೆ. ವೃತ್ತಿ ಬದುಕು : ​ಉದ್ಯೋಗ ಕ್ಷೇತ್ರದಲ್ಲಿ ನೀವು ಈ ತಿಂಗಳು ಮಿಶ್ರ ಫಲಗಳನ್ನು ನಿರೀಕ್ಷಿಸಬಹುದು. ​ಸವಾಲುಗಳು: ತಿಂಗಳ ಆರಂಭದಲ್ಲಿ ಹತ್ತನೇ ಮನೆಯ ಮೇಲಿನ ಶನಿಯ ದೃಷ್ಟಿಯಿಂದಾಗಿ ಕೆಲಸದ ಸ್ಥಳದಲ್ಲಿ ಶ್ರಮ ಹೆಚ್ಚಾಗಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ತಕ್ಷಣ ಸಿಗುತ್ತಿಲ್ಲ ಎಂಬ ಭಾವನೆ ಮೂಡಬಹುದು. ಮೇಲಧಿಕಾರಿಗಳೊಂದಿಗೆ ಮಾತನಾಡುವಾಗ…

Read More

Video: ಬಂದೂಕು, ದೊಣ್ಣೆ ಹಿಡಿದು ಮನೆಗೆ ನುಗ್ಗಿದ ಮುಸುಕುಧಾರಿಗಳು

ಬಲೋತ್ರಾ, ಏಪ್ರಿಲ್ 02: ಕೆಲವು ಮುಸುಕುಧಾರಿಗಳು ಬಂದೂಕು, ದೊಣ್ಣೆಗಳನ್ನು ಹಿಡಿದು ಮನೆಯೊಂದಕ್ಕೆ ನುಗ್ಗಿರುವ ಘಟನೆ ರಾಜಸ್ಥಾನದ ಬಲೋತ್ರಾದಲ್ಲಿ ನಡೆದಿದೆ. ದುಷ್ಕರ್ಮಿಗಳನ್ನು ಇಬ್ಬರು ಯುವಕರು ಎದುರಿಸಿದ್ದಾರೆ, ಅವರನ್ನು ಓಡಿಸಿದ್ದಲ್ಲದೆ ಬೆನ್ನಟ್ಟಿದ್ದಾರೆ. ಆದರೆ ಇನ್ನೊಂದು ಬದಿಯಲ್ಲಿ ಮನೆಯಲ್ಲಿರುವ ಹೆಣ್ಣುಮಕ್ಕಳು ಭಯದಿಂದ ಅಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ, ಆರೋಪಿಗಳನ್ನು ಯಾರು ಎಂದು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

Gold Rates: ಚಿನ್ನದ ಬೆಲೆ ಗ್ರಾಮ್​ಗೆ 230 ರೂ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 2: ಸತತವಾಗಿ ಏರುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ತಗ್ಗಿವೆ. ಒಂದು ಚಿನ್ನದ ಬೆಲೆ (Gold Rates) 230 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಇಳಿದರೆ, ಇನ್ನೂ ಕೆಲವೆಡೆ ಏರಿದೆ. ಬೆಳ್ಳಿ ಬೆಲೆಯೂ ಕಡಿಮೆಗೊಂಡಿದೆ. ನಿನ್ನೆ 5 ರೂ ಹೆಚ್ಚಿದ್ದ ಬೆಳ್ಳಿ ಬೆಲೆ ಇವತ್ತು 5 ರೂ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ…

Read More

ದಿಢೀರ್ ನಿವೃತ್ತಿ ಘೋಷಿಸಿದ ಸೌತ್ ಆಫ್ರಿಕಾದ ಸ್ಫೋಟಕ ದಾಂಡಿಗ

ಸೌತ್ ಆಫ್ರಿಕಾದ ಸ್ಫೋಟಕ ಬ್ಯಾಟರ್ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ (Rassie van der Dussen) ಅವರು ಇಂದು (ಏಪ್ರಿಲ್ 2, 2026) ಎಲ್ಲಾ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಏಳು ವರ್ಷಗಳಿಂದ ಸೌತ್ ಆಫ್ರಿಕಾ ತಂಡದ ಭಾಗವಾಗಿದ್ದ ಡಸ್ಸೆನ್ ಯುವ ಆಟಗಾರರಿಗೆ ಅವಕಾಶ ಕಲ್ಪಿಸುವ ಸಲುವಾಗಿ ನಿವೃತ್ತಿ ಘೋಷಿಸುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಕ್ರಿಕೆಟ್ ಸೌತ್ ಆಫ್ರಿಕಾ (CSA) ಇತ್ತೀಚೆಗೆ ಪ್ರಕಟಿಸಿದ 2026-27ರ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಅವರ ಹೆಸರನ್ನು…

Read More

ಕರ್ನಾಟಕದಾದ್ಯಂತ ಆಟೋ ಗ್ಯಾಸ್ ಹಾಹಾಕಾರ: ಬಂಕ್‌ಗಳ ಮುಂದೆ ಕಿಲೋಮೀಟರ್‌ಗಟ್ಟಲೆ ಕ್ಯೂ, ಚಾಲಕರ ಬದುಕು ದುಸ್ತರ

ಬೆಂಗಳೂರು, ಏಪ್ರಿಲ್ 2: ಕರ್ನಾಟಕದಾದ್ಯಂತ ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಅಭಾವ, ಗೃಹ ಬಳಕೆಯ ಎಲ್​ಪಿಜಿ (LPG) ಕೊರತೆ ಒಂದೆಡೆಯಾದರೆ ಇದೀಗ ಆಟೋ ಗ್ಯಾಸ್ (Auto Gas) ಸಮಸ್ಯೆ ವಿಕೋಪಕ್ಕೆ ಹೋಗಿದೆ. ಗ್ಯಾಸ್ ಸಿಗದೆ ಆಟೋ ಚಾಲಕರು ಬೀದಿಗೆ ಬೀಳುವ ಸ್ಥಿತಿ ನಿರ್ಮಾಣವಾಗಿದ್ದು, ಹಗಲಿಡೀ ಬಂಕ್‌ಗಳ ಮುಂದೆ ಕಾದು ಕುಳಿತು ಕಣ್ಣೀರಿಡುತ್ತಿದ್ದಾರೆ. ಬೆಂಗಳೂರು (Bangalore) ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗ್ಯಾಸ್ ಅಭಾವದಿಂದಾಗಿ ಸಾರಿಗೆ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನಲ್ಲಿ ಚಾಲಕರ ಗೋಳು ಕೇಳೋರಿಲ್ಲ ಸಿಲಿಕಾನ್ ಸಿಟಿ ಬೆಂಗಳೂರಿನ…

Read More

ಬೊಲೊರೊ ವಾಹನದಲ್ಲಿ ಗ್ಯಾಂಗ್​​ ಅನುಮಾನಾಸ್ಪದ ಓಡಾಟ: ಹೆಣ್ಣುಮಕ್ಕಳೇ ಇವರ ಟಾರ್ಗೆಟ್​?

ಬೆಂಗಳೂರು, ಏಪ್ರಿಲ್​​ 02: ನಗರದ ಬನಶಂಕರಿಯಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಬೊಲೆರೊ ವಾಹನದಲ್ಲಿ ಓಡಾಟ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆಶೀರ್ವಾದ ಮಾಡುವ ನೆಪದಲ್ಲಿ ಹೆಣ್ಣುಮಕ್ಕಳನ್ನು ಗ್ಯಾಂಗ್​​ ಕರೆಯುತ್ತಿದೆ ಎಂದು ದೂರಲಾಗಿದೆ. ರಸ್ತೆಯಲ್ಲಿ ತೆರಳುತ್ತಿರುವ ಬೊಲೆರೋ ವಾಹನ ಮನೆಯೊಂದರ ಗೇಟ್​​ ಬಳಿ ಶಾಲಾ ಬಾಲಕಿ ಕಾಣುತ್ತಿದ್ದಂತೆ ನಿಂತಿದೆ. ಬಳಿಕ ಹಿಮ್ಮುಖವಾಗಿ ಹೋಗಿ ಬಾಲಕಿ ಬಳಿ ವಾಹನದಲ್ಲಿದ್ದವರು ಮಾತನಾಡಿದ್ದಾರೆ. ಈ ವೇಳೆ ಆಕೆ ಮನೆಯವರನ್ನು ಕರೆದಿದ್ದು, ಅವರು ವಿಚಾರಿಸುತ್ತಿದ್ದಂತೆ ವಾಹನ ಸಮೇತ ಗ್ಯಾಂಗ್​​ ಸ್ಥಳದಿಂದ ಕಾಲ್ಕಿತ್ತಿದೆ. ವೈರಲ್​​ ವಿಡಿಯೋ…

Read More

IPL 2026: LSG vs DC ಪಂದ್ಯದ ವೇಳೆ ಅಭಿಮಾನಿಗಳ ಮಾರಾಮಾರಿ!

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಸೀಸನ್‌ನಲ್ಲಿ ಕ್ರೀಡಾ ಸ್ಫೂರ್ತಿಗೆ ಮಸಿ ಬಳಿಯುವಂತಹ ಘಟನೆಯೊಂದು ನಡೆದಿದೆ. ಏಪ್ರಿಲ್ 1 ರಂದು ಲಕ್ನೋದ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ ಪಂದ್ಯದ ವೇಳೆ ಅಭಿಮಾನಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಪಂದ್ಯ ನಡೆಯುತ್ತಿದ್ದಾಗ ಸ್ಟೇಡಿಯಂನ ಗ್ಯಾಲರಿಯಲ್ಲಿದ್ದ ಇಬ್ಬರು ವ್ಯಕ್ತಿಗಳ ನಡುವೆ ಮೊದಲು ಮಾತಿನ ಚಕಮಕಿ ಆರಂಭವಾಗಿದೆ. ಇದು ಕ್ಷಣಾರ್ಧದಲ್ಲಿ ವಿಕೋಪಕ್ಕೆ ತಿರುಗಿ, ಒಬ್ಬರಿಗೊಬ್ಬರು ಗುದ್ದಾಟ ಮತ್ತು ಒದೆಯಾಟ ಶುರು ಮಾಡಿದ್ದಾರೆ….

Read More

ಪತಿಗೆ ಡಿವೋರ್ಸ್ ಕೊಟ್ಟಿದ್ದೇಕೆ ಪದ್ಮಜಾ ರಾವ್? ವಿವರಿಸಿದ ಹಿರಿಯ ನಟಿ

ಪದ್ಮಜಾ ರಾವ್ (Padmaja Rao) ಅವರು ಕನ್ನಡದಲ್ಲಿ ಹಲವು ಸಿನಿಮಾಗಳನ್ನು ಮಾಡಿದ್ದಾರೆ. ಇದರ ಜೊತೆಗೆ ಧಾರಾವಾಹಿಗಳಲ್ಲೂ ಪದ್ಮಜಾ ನಟಿಸಿದ್ದಾರೆ. ‘ಭಾಗ್ಯಲಕ್ಷ್ಮೀ’ ಧಾರಾವಾಹಿಯಲ್ಲಿ ಭಾಗ್ಯಾಳ ಅತ್ತೆ ಪಾತ್ರ ಮಾಡುತ್ತಿದ್ದಾರೆ. ಖಡಕ್ ಅತ್ತೆಯಾಗಿ, ಮಗ ತಪ್ಪು ಮಾಡಿದಾಗ ಶಿಕ್ಷೆ ಕೊಡುವಾಗ ಅಮ್ಮನಾಗಿ ಕಾಣಿಸಿಕೊಂಡಿದ್ದಾರೆ. ಪದ್ಮಜಾ ಅವರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಮೊದಲ ಮದುವೆ ಹಾಗೂ ಅದರ ವಿಚ್ಛೇದನದ ಬಗ್ಗೆ ಹೇಳಿದ್ದಾರೆ ಪದ್ಮಾಜಾ. ರ‍್ಯಾಪಿಡ್ ರಶ್ಮಿ ಯೂಟ್ಯೂಬ್​ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಪದ್ಮಜಾ ಹೇಳಿದ್ದಾರೆ. ‘ನಾನು ಸಣ್ಣ ವಯಸ್ಸಿಗೆ…

Read More

ಶೆಟ್ಟಿ ಗ್ಯಾಂಗ್​​ನಲ್ಲಿ ಬಿರುಕು? ಪ್ರಮೋದ್ ಶೆಟ್ಟಿ ಹೇಳಿದ್ದೇನು?

ಕನ್ನಡ ಚಿತ್ರರಂಗದ ಪ್ರತಿಭಾವಂತ ಮತ್ತು ಯಶಸ್ವಿ ಗ್ಯಾಂಗ್ ಆಗಿರುವ ‘ಶೆಟ್ಟಿ ಗ್ಯಾಂಗ್’ನಲ್ಲಿ ಬಿರುಕು ಮೂಡಿದೆ. ರಿಷಬ್ ಶೆಟ್ಟಿ, ರಾಜ್ ಶೆಟ್ಟಿ ಮತ್ತು ರಕ್ಷಿತ್ ಶೆಟ್ಟಿ ಅವರು ಪರಸ್ಪರ ದೂರಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಿಷಬ್ ಶೆಟ್ಟಿ ಇತ್ತೀಚೆಗೆ ಹೊಂಬಾಳೆಯನ್ನು ಅನ್​ಫಾಲೋ ಮಾಡಿದರು. ರಾಜ್ ಬಿ ಶೆಟ್ಟಿಯನ್ನು ಅನ್​​ಫಾಲೋ ಮಾಡಿದರು ಎಂದೆಲ್ಲ ಸುದ್ದಿ ಹರಿದಾಡುತ್ತಿದೆ. ಇದೀಗ ಇದೇ ಗ್ಯಾಂಗಿನ ಸದಸ್ಯರಾಗಿರುವ ಪ್ರಮೋದ್ ಶೆಟ್ಟಿ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ‘ಶೆಟ್ಟಿ ಗ್ಯಾಂಗಿ’ನಲ್ಲಿ ಏನೇನಾಗುತ್ತಿದೆ ಎಂಬ ಬಗ್ಗೆ ವಿವರವಾಗಿ…

Read More

RailTel Recruitment 2026: ಕೇಂದ್ರ ಸರ್ಕಾರಿ ಸ್ವಾಮ್ಯದ ರೈಲ್‌ಟೆಲ್‌ನಲ್ಲಿ ನೇಮಕಾತಿ; ಹಿಂದಿ ಅನುವಾದಕ ಹುದ್ದೆಗೆ ಅರ್ಜಿ ಆಹ್ವಾನ

ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (RailTel) 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಜೂನಿಯರ್ ಹಿಂದಿ ಅನುವಾದಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಹುದ್ದೆಗಳು ಖಾಲಿ ಇದ್ದು, ಆಯ್ಕೆಯಾದ ಅಭ್ಯರ್ಥಿಗಳು ಹೈದರಾಬಾದ್ (ತೆಲಂಗಾಣ) ಅಥವಾ ಮುಂಬೈ (ಮಹಾರಾಷ್ಟ್ರ) ನಗರಗಳಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹತೆ ಮತ್ತು ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ…

Read More