6 ಸಾವಿರ ಕೊಟ್ರೆ ಒಂದು ವಿಷಯ ಪಾಸ್: ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮತ್ತೊಂದು ಕಳ್ಳಾಟ ಬಯಲು – Kannada News
ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವ ವಿದ್ಯಾಲಯImage Credit source: getmycollege.com ಬಳ್ಳಾರಿ, ಜೂನ್ 11: ವಿಶ್ವ ವಿದ್ಯಾಲಯಗಳೆಂದರೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕೇಂದ್ರಗಳು. ಆದರೆ ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಮಾತ್ರ ಮಾತಿಗೆ ವಿರುದ್ಧ ಎಂಬಂತಿದೆ. ಹಣ ಪಡೆದು ನಕಲಿ ಘಟಿಕೋತ್ಸವ ಸರ್ಟಿಫಿಕೇಟ್ ಕೊಡುತ್ತಿದ್ದ ಹಗರಣದ ಬೆನ್ನಲ್ಲೇ ಯೂನಿವರ್ಸಿಟಿಯ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಡಿಗ್ರಿ ಫೇಲ್ ಆದ ವಿದ್ಯಾರ್ಥಿಗಳಿಂದ ಹಣ ಪಡೆದು ಪಾಸ್ ಮಾಡುವ ದಂಧೆಯಲ್ಲಿ ವಿಶ್ವವಿದ್ಯಾಲಯದ ಸಿಬ್ಬಂದಿಯೇ ಭಾಗಿಯಾಗಿರೋದು ಹೌಹಾರುವಂತೆ ಮಾಡಿದೆ. ಒಂದು ಸಬ್ಜೆಕ್ಟ್ಗೆ ಇಷ್ಟೆಂದು…