All posts by nagaraj11081993

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ.. – Kannada News | 45 Kannada Movie producer Ramesh Reddy talks about Box Office Collection and Piracy

ರಾಜ್​ ಬಿ. ಶೆಟ್ಟಿ, ಉಪೇಂದ್ರ, ಶಿವರಾಜ್​​ಕುಮಾರ್ ಅಭಿನಯದ ‘45’ ಸಿನಿಮಾ (45 Kannada Movie) ರಿಲೀಸ್ ಆಗಿದೆ. ಈ ಚಿತ್ರದ ಕಲೆಕ್ಷನ್ ಎಷ್ಟು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಅಲ್ಲದೇ, ಈ ಸಿನಿಮಾದ ಪೈರಸಿ ಆಗಿರುವುದು ಬೇಸರದ ಸಂಗತಿ. ಈ ಬಗ್ಗೆ ನಿರ್ಮಾಪಕ ರಮೇಶ್ ರೆಡ್ಡಿ (Ramesh Reddy) ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಕಲೆಕ್ಷನ್ ಸೂಪರ್ ಆಗಿದೆ. ಅದರ ಬಗ್ಗೆ ನನಗೆ ಖುಷಿ ಇದೆ. ನಾನು ಖಂಡಿತಾ ಸೇಫ್ ಆಗುತ್ತೇನೆ. ನಿನ್ನೆ ಒಂದು ಶೋ ಕೂಡ ಖಾಲಿ ಇಲ್ಲ. ಎಲ್ಲದೂ ಹೌಸ್​ಫುಲ್ ಆಗಿದೆ. ಬುಕ್​ ಮೈ ಶೋ ನೋಡಿ. ಸಿನಿಮಾದಲ್ಲಿ ಒಳ್ಳೆಯ ಕಂಟೆಂಟ್ ಇದೆ. ಸಿನಿಮಾವನ್ನು ಫ್ಯಾಮಿಲಿ ಆಡಿಯನ್ಸ್ ಒಪ್ಪಿಕೊಳ್ಳುತ್ತಿದ್ದಾರೆ. ಹೀಗಿರುವಾಗ ನನ್ನ ಮೊಬೈಲ್​​ಗೆ ಪೈರಸಿಯ 4-5 ಲಿಂಕ್ ಬಂದರೆ ಹೇಗೆ ಆಗುತ್ತದೆ ಅಂತ ನೀವೇ ಹೇಳಿ. 3 ವರ್ಷದ ಶ್ರಮ ನಮ್ಮದು. ಒಂದು ಸಿನಿಮಾಗೆ ಈ ರೀತಿ ಪೈರಸಿ (Piracy) ಮಾಡುವುದು ತಪ್ಪು. ಈ ರೀತಿ ಪೈರಸಿ ಮಾಡಿದರೆ ದೇವರೇ ನೋಡಿಕೊಳ್ಳುತ್ತಾರೆ’ ಎಂದು ರಮೇಶ್ ರೆಡ್ಡಿ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮನೆಗೆ ಬರ್ತಾನೆಂದು ಮಗನ ದಾರಿ ಕಾಯುತ್ತಿದ್ದ ತಾಯಿಗೆ ಬರಸಿಡಿಲು: 10 ದಿನದ ಬಳಿಕ ಪುತ್ರ ಶವವಾಗಿ ಪತ್ತೆ – Kannada News | Devanahalli: Missing Student Found Dead, Family Suspects Murder Linked to Love Affair

ದೇವನಹಳ್ಳಿ, ಡಿಸೆಂಬರ್​ 26: ಆತನದು ಹದಿಹರಿಯದ ವಯಸ್ಸು. ಈಗಷ್ಟೇ ಕಾಲೇಜು ಮೆಟ್ಟಿಲೇರಿದ್ದ. ಪ್ರಥಮ ಪಿಯುಸಿ ಓದುತ್ತಾ, ಜಾಲಿಯಾಗೆ ಊರ ತುಂಬಾ ಓಡಾಡುತ್ತಿದ್ದ. ಡಿಸೆಂಬರ್​ 15ರಂದು ಮನೆಯಿಂದ ಸ್ನೇಹಿತನ ಬೈಕ್ ತೆಗೆದುಕೊಂಡು ಹೋದವನು 10 ದಿನಗಳ ಬಳಿಕ ರಸ್ತೆ ಮೋರಿಯಲ್ಲಿ ಶವವಾಗಿ (Deadbody) ಪತ್ತೆಯಾಗಿದ್ದಾನೆ. ಪ್ರೀತಿ (Love) ವಿಚಾರಕ್ಕೆ ಯುವತಿ ಕಡೆಯವರಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಯುವಕನ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದುಕೊಂಡಿದೆ.

ನಡೆದದ್ದೇನು?

ಅಂದಹಾಗೆ ರಸ್ತೆ ಬದಿಯ ಮೋರಿಯಲ್ಲಿ ಬಿದ್ದು ದುರಂತ ಅಂತ್ಯ ಕಂಡಿರುವ ದುರ್ದೈವಿಯ ಹೆಸರು ನಿಶಾಂಕ್. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿ ನಿವಾಸಿ ನಿಶಾಂಕ್, ಡಿ. 15ರಂದು ಪಕ್ಕದ ಮನೆಯವನ ಬಳಿ ಎನ್ಎಸ್ ಪಲ್ಸರ್ ಬೈಕ್ ಪಡೆದು ಒಂದು ರೌಂಡ್ ಅಂತ ಹೊರಟ್ಟಿದ್ದ. ಆದರೆ ಬೆಳಗ್ಗೆ ಮನೆಯಿಂದ ಹೊರಗಡೆ ಹೋದ ನಿಶಾಂಕ್, ಸುಮಾರು ಗಂಟೆಯಾದರು ವಾಪಸ್ ಬಂದಿಲ್ಲ. ಹೀಗಾಗಿ ಎಲ್ಲೆಡೆ ಹುಡುಕಾಡಿದ ಕುಟುಂಬಸ್ಥರು ಕೊನೆಗೆ ಪೊಲೀಸ್ ಠಾಣೆಗೆ ಮಗನ ನಾಪತ್ತೆ ಬಗ್ಗೆ ದೂರು ನೀಡಿ ಕಾದು ಕುಳಿತಿದ್ದರು.

ಇದನ್ನೂ ಓದಿ: ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಕೃತ್ಯ; ನರ್ಸ್‌ಗಳು ಬಟ್ಟೆ ಬದಲಿಸುವ ವಿಡಿಯೋ ಮಾಡುತ್ತಿದ್ದ ಸೈಕೋ ಅಂದರ್!

ಎಷ್ಟು ಹುಡುಕಾಡಿದರು ಮನೆಯಿಂದ ಹೊರಗಡೆ ಹೋಗಿದ್ದ ಯುವಕ ವಾಪಸ್ ಬಂದಿಲ್ಲ. ಇಂದು ಬೆಳಗ್ಗೆ ಊರ ಆಚೆ ಶವವಾಗಿ ಪತ್ತೆಯಾಗಿದ್ದಾನೆ. ದೊಡ್ಡಬಳ್ಳಾಫುರ ಚಿಕ್ಕಬಳ್ಳಾಫುರ ರಸ್ತೆಯ ಕಾಲುವೆಯ ಮೋರಿಯಲ್ಲಿ ಬೈಕ್ ಸಮೇತ ಯುವಕನ ಮೃತದೇಹ ಕಂಡುಬಂದಿದೆ. ಮೃತದೇಹ ಕಂಡ ಸ್ಥಳಿಯರು ತಕ್ಷಣ ಪೋಷಕರಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಹಪಾಠಿ ಜೊತೆ ಚಿಗುರೊಡೆದಿದ್ದ ಪ್ರೀತಿ

ಪ್ರಥಮ ಪಿಯುಸಿ ಓದುತ್ತಿದ್ದ ನಿಶಾಂಕ್​ ನಿತ್ಯ ಬಸ್​ನಲ್ಲಿ ಚಿಕ್ಕಬಳ್ಳಾಪುರಕ್ಕೆ ಕಾಲೇಜಿಗೆ ಹೋಗಿ ಬರುತ್ತಿದ್ದ. ಊರಿನಲ್ಲಿ ಜಾಲಿಯಾಗಿ ಓಡಾಡಿಕೊಂಡಿದ್ದ. ಜೊತೆಗೆ ಇತ್ತೀಚೆಗೆ ಕಾಲೇಜಿಗೆ ಹೋಗುತ್ತಿದ್ದ ಸಹಪಾಠಿ ಜೊತೆ ನಿಶಾಂಕ್​ಗೆ ಪ್ರೀತಿ ಚಿಗುರೊಡೆದಿದ್ದು, ಕಾಲೇಜು ಬಳಿ ಹುಡುಗಿ ಕಡೆಯವರು ವಾರ್ನಿಂಗ್ ನೀಡಿದ್ದರು ಎನ್ನಲಾಗಿದೆ.

ಅಲ್ಲದೆ ನಿಶಾಂಕ್ ನಾಪತ್ತೆಯಾದ ಹಿಂದಿನ ದಿನ ಹುಡುಗಿ ಜೊತೆಯಾಗಿರುವ ಫೋಟೋವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಾಕಿ ಆಕೆಯ ಹುಟ್ಟುಹಬ್ಬಕ್ಕೆ ಶುಭಾಶಯ ಸಹ ಕೋರಿದ್ದನಂತೆ. ಹೀಗಾಗಿ ಹುಡುಗಿ ಮನೆ ಕಡೆಯವರೆ ನಮ್ಮ ಹುಡುಗನನ್ನ ಕೊಲೆ ಮಾಡಿರಬಹುದು ಅಂತ ಮೃತನ ಮನೆಯವರು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ನಾಪತ್ತೆಯಾದ 10 ದಿನಗಳ ಬಳಿಕ ನಿಶಾಂಕ್ ನನ್ನ ಕೊಲೆ ಮಾಡಿ ತಂದು ಮೋರಿ ಕೆಳಗಡೆ ಬಿಸಾಡಿದ್ದು, ಇದು ಅಪಘಾತವಲ್ಲ ಕೊಲೆ ಅಂತ ನಿಶಾಂಕ್ ಮನೆಯವರು ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನೆಲಮಂಗಲ: ಮದುವೆಯಾಗಿ ತಿಂಗಳು ಕಳೆಯುವುದರೊಳಗೆ ನಿಗೂಢವಾಗಿ ನವ ವಿವಾಹಿತೆ ಸಾವು

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಫುರ ಗ್ರಾಮಾಂತರ ಪೊಲೀಸರು ಮತ್ತು ಸೊಕೋ ಟೀಂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಲ್ಲದೆ ಮೃತನ ಪೋಷಕರ ಆರೋಪದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದು, ವಿದ್ಯಾರ್ಥಿಯದ್ದು ಆಕಸ್ಮಿಕ ಸಾವೋ ಅಥವಾ ಕೊಲೆಯೋ ಎನ್ನುವುದನ್ನು ಪೊಲೀಸರ ತನಿಖೆಯಿಂದ ಹೊರಬರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

VHT 2025-26: ಕೇವಲ ಬೌಂಡರಿಗಳಿಂದಲೇ ಅರ್ಧಶತಕ ಚಚ್ಚಿದ ವಿರಾಟ್ ಕೊಹ್ಲಿ

Source link

Vaibhav Suryavanshi: ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ – Kannada News | Bal Puraskar for Vaibhav Suryavanshi: 14 Year Old Cricket Star’s Record Journey

ಕೇವಲ 14 ವರ್ಷ ವಯಸ್ಸಿನಲ್ಲೇ ಕ್ರಿಕೆಟ್‌ ಲೋಕದಲ್ಲಿ ಸಂಚಲನ ಸೃಷ್ಟಿಸಿರುವ ವೈಭವ್ ಸೂರ್ಯವಂಶಿ ತಮ್ಮ ವೃತ್ತಿಜೀವನದ ಆರಂಭದ ಹಂತದಲ್ಲೇ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಸಿಡಿಸಿದ ಕಿರಿಯನೆಂಬ ದಾಖಲೆಯಿಂದ ಹಿಡಿದು, ಇಂಗ್ಲೆಂಡ್‌, ಆಸ್ಟ್ರೇಲಿಯಾದಲ್ಲೂ ವೈಭವ್ ಆರ್ಭಟ ಜೋರಿತ್ತು. ಸಿಕ್ಕ ಅವಕಾಶಗಳನ್ನು ಎರಡು ಕೈಗಳಿಂದ ಬಾಚಿಕೊಂಡಿರುವ ವೈಭವ್​ಗೆ ಇದೀಗ ಭಾರತ ಸರ್ಕಾರದಿಂದಲೂ ಮನ್ನಣೆ ಸಿಕ್ಕಿದೆ. ವೈಭವ್ ಸೂರ್ಯವಂಶಿ ಅವರಿಗೆ ದೇಶದ ಅತ್ಯುನ್ನತ ಮಕ್ಕಳ ಪ್ರಶಸ್ತಿಯಾದ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಿದ್ದಾರೆ.

ವಾಸ್ತವವಾಗಿ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಬಿಹಾರ ತಂಡದ ಪರ ಕಣಕ್ಕಿಳಿಯುತ್ತಿರುವ ವೈಭವ್ ಮೊದಲ ಪಂದ್ಯದಲ್ಲೇ 190 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದರು. ಹೀಗಾಗಿ ಇಂದು ನಡೆದ ಎರಡನೇ ಪಂದ್ಯದಲ್ಲೂ ವೈಭವ್ ಆರ್ಭಟ ನೋಡಲು ಎಲ್ಲರೂ ಕಾದಿದ್ದರು. ಆದರೆ ಇಂದಿನ ಪಂದ್ಯದಲ್ಲಿ ವೈಭವ್ ಆಡಿರಲಿಲ್ಲ. ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಈ ಸಮಾರಂಭದಲ್ಲಿ ಪ್ರತಿ ವರ್ಷದಂತೆ, ಈ ವರ್ಷವೂ ದೇಶಾದ್ಯಂತದ ಅನೇಕ ಯುವಕರು ಮತ್ತು ಮಕ್ಕಳನ್ನು ಅವರ ಸಾಧನೆಗಳಿಗಾಗಿ, ಕೆಲವರು ಅವರ ಧೈರ್ಯಕ್ಕಾಗಿ, ಇತರರು ಕ್ರೀಡೆ, ಸಂಗೀತ ಅಥವಾ ವಿಜ್ಞಾನಕ್ಕೆ ನೀಡಿದ ಕೊಡುಗೆಗಳಿಗಾಗಿ ಗೌರವಿಸಲಾಯಿತು.

ಅದರಂತೆ ಬಿಹಾರದ ಸಮಷ್ಟಿಪುರದ ವೈಭವ್ ಅವರಿಗೆ ಕ್ರಿಕೆಟ್ ಜಗತ್ತಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಐಪಿಎಲ್‌ನಲ್ಲಿ ಆಡಿದ ಅತ್ಯಂತ ಕಿರಿಯ ಆಟಗಾರ ಮತ್ತು ಅತಿ ವೇಗದ ಶತಕ ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್ ಎಂಬ ಸಾಧನೆಗಾಗಿ ರಾಷ್ಟ್ರಪತಿ ಮುರ್ಮು ವೈಭವ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ರಿಲೀಫ್​, ಬಂಧನದಿಂದ ಪಾರು – Kannada News | Karnataka High Court Grants interim bail to BJP MLA Byrathi Basavaraj In Rowdy Sheeter Biklu Shiva Murder Case

ಬೆಂಗಳೂರು, (ಡಿಸೆಂಬರ್ 26): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Biklu Shiva Murder Case) ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ (Byrathi Basavaraj) ಮಧ್ಯಂತರ ಜಾಮೀನು ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ ಜಾಮೀನು ಅರ್ಜಿ ವಜಾಗೊಳಿಸಿದ್ದರಿಂದ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇಂದು (ಡಿಸೆಂಬರ್ 26) ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ಬಸವರಾಜ ಅವರಿದ್ದ ಹೈಕೋರ್ಟ್​​ ಪೀಠ, ಬೈರತಿ ಬಸವರಾಜ್​​ಗೆ ಮಧ್ಯಂತ ಜಾಮೀನು ನೀಡಿ ಆದೇಶ ಹೊರಡಿಸಿದ್ದು, ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜನವರಿ 6ಕ್ಕೆ ಮುಂದೂಡಿದೆ. ಹೀಗಾಗಿ ಬೈರತಿ ಬಸವರಾಜ್​​ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

Source link

ಅಶ್ವಿನಿ ಪುನೀತ್ ರಾಜ್​​ಕುಮಾರ್ ಮೆಚ್ಚಿದ ‘ಪ್ರಣಯ ಪಯಣ’ ಗೀತೆ; ಡಿ.27ಕ್ಕೆ ಬಿಡುಗಡೆ – Kannada News | Pranaya Payana new Kannada Music Video to be released on PRK Audio

ಹೊಸ ಪ್ರತಿಭೆಗಳಿಗೆ ಪುನೀತ್ ರಾಜ್​​ಕುಮಾರ್ ಅವರು ಯಾವಾಗಲೂ ಪ್ರೋತ್ಸಾಹ ನೀಡುತ್ತಾ ಬಂದಿದ್ದರು. ಈಗ ಆ ಕೆಲಸವನ್ನು ಅಶ್ವಿನಿ ಪುನೀತ್ ರಾಜ್​​ಕುಮಾರ್ (Ashwini Puneeth Rajkumar) ಅವರು ಮಾಡುತ್ತಿದ್ದಾರೆ. ‘ಪಿಆರ್​ಕೆ ಪ್ರೊಡಕ್ಷನ್ಸ್’ ಮತ್ತು ‘ಪಿಆರ್​ಕೆ ಆಡಿಯೋ’ ಕಂಪನಿ ಮೂಲಕ ಹೊಸಬರ ಬೆನ್ನುತಟ್ಟುತ್ತಿದ್ದಾರೆ. ಅದಕ್ಕೆ ಹೊಸ ಉದಾಹರಣೆ ಇಲ್ಲಿದೆ. ಅರ್ಜುನ್ ಕಿಶೋರ್ ಚಂದ್ರ ಅವರು ಸಿದ್ಧಪಡಿಸಿದ ಹೊಸ ವಿಡಿಯೋ ಸಾಂಗ್​ ಅನ್ನು ‘ಪಿಆರ್​ಕೆ ಆಡಿಯೋ’ (PRK Audio) ಮೂಲಕ ಅಶ್ವಿನಿ ಪುನೀತ್ ರಾಜ್​​ಕುಮಾರ್ ಅವರು ಬಿಡುಗಡೆ ಮಾಡಲಿದ್ದಾರೆ.

ಅರ್ಜುನ್ ಕಿಶೋರ್ ಚಂದ್ರ ಅವರು ‘ಲೈಫ್ 360’ ಸಿನಿಮಾದಲ್ಲಿ ನಾಯಕನಾಗಿ ನಟಿಸಿ, ನಿರ್ದೇಶನ ಕೂಡ ಮಾಡಿದ್ದರು. ಬಳಿಕ ಉದ್ಯೋಗ ಅರಸಿ ವಿದೇಶಕ್ಕೆ ತೆರಳಿದ್ದರು. ಆದರೂ ಕೂಡ ಅವರ ಮನಸ್ಸು ಮಾತ್ರ ಬಣ್ಣದ ಲೋಕದತ್ತ ಸೆಳೆಯುತ್ತಿತ್ತು. ಬಿಡುವಿನ ಸಮಯದಲ್ಲಿ ಏನಾದರೂ ಮಾಡಬೇಕು ಎಂಬ ತುಡಿತ ಅವರಲ್ಲಿ ಇತ್ತು. ಅದರ ಫಲವಾಗಿ ಹೊಸ ಸಾಂಗ್ ಮಾಡಿದ್ದಾರೆ.

ಹೊಸ ಗೀತೆಗೆ ‘ಪ್ರಣಯ ಪಯಣ’ ಎಂದು ಶೀರ್ಷಿಕೆ ಇಡಲಾಗಿದೆ. Loving & Travelling ಎಂಬ ಅಡಿಬರಹ ಇದೆ. ಇದು 5 ನಿಮಿಷ ಅವಧಿಯ ವಿಡಿಯೋ ಸಾಂಗ್. ಅರ್ಜುನ್ ಕಿಶೋರ್ ಚಂದ್ರ ಅವರೇ ಕಥೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ಅಲ್ಲದೇ ಮುಖ್ಯ ಭೂಮಿಕೆ ಕೂಡ ನಿಭಾಯಿಸಿದ್ದಾರೆ. ರಂಗಭೂಮಿ ನಟಿ ಎಡೆಲ್ ಆಶ್ಲಿಂಗ್ ಅವರು ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

‘ಪ್ರಣಯ ಪಯಣ’ ಲಿರಿಕಲ್ ವಿಡಿಯೋ:

ಹಿರಿಯ ಉದ್ಯಮಿ ರಾಜಶೇಖರ್ ಎಸ್. ಅವರು ‘ಶ್ರೀಸಾಯಿ ಗಗನ್ ಪ್ರೊಡಕ್ಷನ್ಸ್’ ಮೂಲಕ ಹಾಡನ್ನು ನಿರ್ಮಿಸಿದ್ದಾರೆ. ಇತ್ತೀಚೆಗಷ್ಟೇ ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಅವರು ಈ ಹಾಡನ್ನು ವೀಕ್ಷಿಸಿ ಇಷ್ಟಪಟ್ಟಿದ್ದಾರೆ. ತಮ್ಮದೇ ‘ಪಿಆರ್‌ಕೆ ಆಡಿಯೋ’ ಕಂಪನಿಯಿಂದ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ನಿರ್ದೇಶಕ ಹಾಗೂ ನಿರ್ಮಾಪಕರನ್ನು ಕಚೇರಿಗೆ ಕರೆಸಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಶ್ವಿನಿ ಪುನೀತ್ ರಾಜ್​ಕುಮಾರ್ ಹಾರೈಕೆಯಿಂದ ಸೆಟ್ಟೇರಿತು ‘ರಕ್ಕಿ’ ಸಿನಿಮಾ

ಅಜೇಶ್ ಎಂ.ಸಿ. ಅವರು ಈ ಹಾಡಿಗೆ ಸಂಗೀತ ನೀಡಿದ್ದಾರೆ. ಟಲೋ ಕೆನಡಿ ಅವರು ಛಾಯಾಗ್ರಹಣ ಮಾಡಿದ್ದಾರೆ. ಶ್ರೀಪಾದ್ ಜೋಶಿ ಅವರು ಚಿತ್ರಕಥೆ ಬರೆದಿದ್ದಾರೆ. ಸಿದ್ದಾರ್ಥ್ ಬೆಲ್‌ಮಣ್ಣು ಅವರ ಧ್ವನಿಯಲ್ಲಿ ಈ ಹಾಡು ಮೂಡಿಬಂದಿದೆ. ಅದ್ವಿಕ್-ವಿನೋದ್ ಅವರು ಸಂಕಲನ ಮಾಡಿದ್ದಾರೆ. ಅನಿಲ್‌ಕುಮಾರ್ ಕೆ. ಅವರು ಕಲರಿಸ್ಟ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಐರ‍್ಲೆಂಡ್ ದೇಶದ ಸುಂದರ ತಾಣಗಳಲ್ಲಿ ಶೂಟಿಂಗ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು, 20 ಮಂದಿಗೆ ಗಾಯ – Kannada News | 8 people killed more than 20 injured as massive blast hits mosque during Friday prayers in Syria

ನವದೆಹಲಿ, ಡಿಸೆಂಬರ್ 26: ಸಿರಿಯಾದ ಹೋಮ್ಸ್ ಮಸೀದಿಯಲ್ಲಿ ಇಂದು ಪ್ರಾರ್ಥನೆಯ ಸಮಯದಲ್ಲಿ ಸಂಭವಿಸಿದ ಸ್ಫೋಟದಲ್ಲಿ (Syria Blast) 8 ಜನರು ಸಾವನ್ನಪ್ಪಿದ್ದಾರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಧ್ಯ ಸಿರಿಯಾದ ಹೋಮ್ಸ್ ನಗರದಲ್ಲಿರುವ ಇಮಾಮ್ ಅಲಿ ಬಿನ್ ಅಬಿ ತಾಲಿಬ್ ಮಸೀದಿಯಲ್ಲಿ ಸ್ಫೋಟ ಸಂಭವಿಸಿ 8 ಜನರು ಸಾವನ್ನಪ್ಪಿದ್ದಾರೆ. ಸರ್ಕಾರಿ ನಿಯಂತ್ರಿತ ಜಿಲ್ಲೆಯಾದ ವಾಡಿ ಅಲ್-ದಹಾಬ್ ನೆರೆಹೊರೆಯಲ್ಲಿರುವ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ ಎಂದು ಸಿರಿಯನ್ ಅರಬ್ ಸುದ್ದಿ ಸಂಸ್ಥೆ (SANA) ವರದಿ ಮಾಡಿದೆ.

ಗಾಯಾಳುಗಳನ್ನು ಸ್ಥಳಾಂತರಿಸಲು ಮತ್ತು ಪ್ರದೇಶವನ್ನು ಸುರಕ್ಷಿತಗೊಳಿಸಲು ತುರ್ತು ಪ್ರತಿಕ್ರಿಯೆ ತಂಡಗಳನ್ನು ತಕ್ಷಣವೇ ಸ್ಥಳಕ್ಕೆ ಕಳುಹಿಸಲಾಗಿದೆ. ತನಿಖಾಧಿಕಾರಿಗಳು ಘಟನಾ ಸ್ಥಳವನ್ನು ಪರಿಶೀಲಿಸಲು ಭದ್ರತಾ ಪಡೆಗಳು ಮಸೀದಿಯನ್ನು ಸುತ್ತುವರೆದಿವೆ. ಈ ಸ್ಫೋಟದ ಸ್ವರೂಪ ಮತ್ತು ಕಾರಣವನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆತ್ಮಾಹುತಿ ದಾಳಿಯ ಶಂಕೆಯೂ ವ್ಯಕ್ತವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಕ್ರಿಸ್ಮಸ್ ಸಂಭ್ರಮದ ಮಧ್ಯೆ ಭೀಕರ ದುರಂತ: ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ – Kannada News | Nelamangala Car Accident: Two Family Members Killed, Four in Critical Condition

ಅಪಘಾತದಲ್ಲಿ ನುಜ್ಜುಗುಜ್ಜಾದ ಕಾರು

ನೆಲಮಂಗಲ, ಡಿಸೆಂಬರ್​​ 26: ಕ್ರಿಸ್ ಮಸ್ ಹಬ್ಬದ ರಜೆಗೆಂದು ಹುಟ್ಟೂರಿಗೆ ಹೋಗಿ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (accident) ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು (death), ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೋಟಗೆರೆ ಕ್ರಾಸ್​ನಲ್ಲಿ ಘಟನೆ ನಡೆದಿದೆ. ಗೌರಿಬಿದನೂರು ಮೂಲದ ಹರೀಶ್(39) ಮತ್ತು ವೀರಭದ್ರ(80) ಮೃತರು. ಕಾರಿನಲ್ಲಿದ್ದ ಗೌರಮ್ಮ, ಮೈತ್ರಿ, ಸಿರಿ, ವಂದನಾಗೆ ಗಂಭೀರ ಗಾಯಗಳಾಗಿದ್ದು, ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಡೆದದ್ದೇನು?

ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಹರೀಶ್ (39), ಪತ್ನಿ ಮೈತ್ರಿ (32), ಮಗಳು ಸಿರಿ (10), ತಂದೆ ವೀರಭದ್ರ (88), ತಾಯಿ ಗೌರಮ್ಮ (62) ಹಾಗೂ ಪುಟ್ಟ ಬಾಲಕಿ ಹರೀಶ್ ಅಕ್ಕನ ಮಗಳು ವಂದನಾ (8) ಇವರು ಗುರುವಾರ ದಾಸರಹಳ್ಳಿಯಲ್ಲಿರುವ ಸ್ವಂತ ಮನೆಯಿಂದ ಹುಟ್ಟೂರು ಗೌರಿಬಿದನೂರಿಗೆ ತೆರಳಿದ್ದರು. ಹುಟ್ಟೂರಿನಲ್ಲಿ ಜಮೀನು ನೋಡಿಕೊಂದು ಕುಟುಂಬದವರ ಜೊತೆ ಸಮಯ ಕಳೆದು ವಾಪಸ್ ಆಗುತ್ತಿದ್ದರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಬಸ್​​ ಭಸ್ಮ: ಮೂವರು ನಾಪತ್ತೆ, ಸಾವಿನ ಸಂಖ್ಯೆಯಲ್ಲಿ ಗೊಂದಲ

ಸಂಜೆ 6ಗಂಟೆಗೆ ಗೌರಿಬಿದನೂರಿನಿಂದ ಹೊರಟಿದ್ದ ಕುಟುಂಬ, ಹರೀಶ್ ಡ್ರೈವಿಂಗ್ ಮಾಡುತ್ತಿದ್ದರು. ರೈಲ್ವೆ ಗೊಲ್ಲಹಳ್ಲಿಯಿಂದ ಹೆಸರಘಟ್ಟ ಮಾರ್ಗವಾಗಿ ದಾಸರಹಳ್ಳಿಗೆ ತೆರಳುತ್ತಿದ್ದರು. ಆದರೆ ದಾರಿ ಮಧ್ಯೆ ತೋಟದ ಗುಡ್ಡದಹಳ್ಳಿ ಟರ್ನಿಂಗ್ ಬಳಿ ಲಾರಿಯೊಂದನ್ನು ಓವರ್ ಟೇಕ್ ಮಾಡಲು ಮುಂದಾಗಿದ್ದಾರೆ. ಈ ವೇಳೆ ಎದುರಗಡೆ ಬಂದ ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬಲಭಾಗಕ್ಕೆ ಎಳೆದಿದ್ದಾರೆ.

ಸಂಜೆ 7:30 ಆಗಿದ್ದರಿಂದ ಕತ್ತಲಲ್ಲಿ ಎದುರಿಗೆ ಇದ್ದ ಮರಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಹರೀಶ್ ಹಾಗೂ ತಂದೆ ವೀರಭದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಮೈತ್ರಿ, ಗೌರಮ್ಮ, ಸಿರಿ, ವಂದನಾ ಸ್ಥಿತಿ ಚಿಂತಾಜನಕವಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಶವಾಗಾರಕ್ಕೆ ರವಾನಿಸಲಾಗಿದೆ.

ಜಮೀನಿನಲ್ಲಿ ಕಾಣಿಸಿಕೊಂಡ ಬೆಂಕಿ ನಂದಿಸಲು ಹೋಗಿ ರೈತ ಸಜೀವ ದಹನ

ಜಮೀನಿನಲ್ಲಿ ಕಾಣಿಸಿಕೊಂಡ ಬೆಂಕಿ ನಂದಿಸಲು ಹೋಗಿ ರೈತ ಸಜೀವ ದಹನವಾಗಿರುವಂತಹ ಘಟನೆ  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಕೃಷ್ಣಪ್ಪ(55) ಮೃತ ರೈತ.

ಇದನ್ನೂ ಓದಿ: ಸಿರುಗುಪ್ಪ ಬಳಿ ಕಾರು ಪಲ್ಟಿಯಾಗಿ ಭೀಕರ ಅಪಘಾತ: ತಮಿಳುನಾಡಿನ ದೇಗುಲಕ್ಕೆ ಹೋಗಿ ಬರುತ್ತಿದ್ದ ಒಂದೇ ಕುಟುಂಬದ ಮೂವರು ಸಾವು

ಜಮೀನಿನಲ್ಲಿದ್ದ ಹುಲ್ಲಿನ ರಾಶಿಗೆ ಆಕಸ್ಮಿಕ ಬೆಂಕಿ ತಗುಲಿದ್ದು, ರೈತ ಬೆಂಕಿ ನಂದಿಸಲು ಮುಂದಾಗಿದ್ದ. ಈ ವೇಳೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ರೈತ ಕೃಷ್ಣಪ್ಪ ಸಾವನ್ನಪ್ಪಿದ್ದಾರೆ. ನೆಲಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ​

ವರದಿ: ಮಂಜುನಾಥ್ ಟಿವಿ9 ನೆಲಮಂಗಲ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಆಪರೇಷನ್ ಸಿಂಧೂರ್ ವೇಳೆ ಸೈನಿಕರಿಗೆ ನೀರು, ಟೀ, ಲಸ್ಸಿ ನೀಡಿದ್ದ 10 ವರ್ಷದ ಬಾಲಕನ ದೇಶಭಕ್ತಿಗೆ ವಿಶೇಷ ಪುರಸ್ಕಾರ – Kannada News | Armys youngest civil warrior Shravan Singh Honoured With Pradhan Mantri Bal Puraskar

ನವದೆಹಲಿ, ಡಿಸೆಂಬರ್ 26: ಪಂಜಾಬ್​ನ ಫಿರೋಜ್‌ಪುರದ ಚಕ್ ತರಣ್ ವಾಲಿ ಗ್ರಾಮದ 10 ವರ್ಷದ ಶ್ರವಣ್ ಸಿಂಗ್ (Shravan Singh) ಆಪರೇಷನ್ ಸಿಂಧೂರ್ ಸಮಯದಲ್ಲಿ ಹೆಚ್ಚಿನ ಅಪಾಯದ ಗಡಿ ಪೋಸ್ಟ್‌ಗಳಲ್ಲಿ ಸೇವಾ ನಿರತರಾಗಿದ್ದ ಸೈನಿಕರಿಗೆ ಚಹಾ, ಲಸ್ಸಿ, ನೀರು ನೀಡುವ ಮೂಲಕ ಅವರ ದಾಹ ನೀಗಿಸುತ್ತಿದ್ದ. ಭಾರತ ಮತ್ತು ಪಾಕಿಸ್ತಾನದ ನಡುವೆ ಗಡಿಯಲ್ಲಿ ದಾಳಿ ನಡೆಯುತ್ತಿದ್ದುದರಿಂದ ಅದು ಅಪಾಯದ ಸ್ಥಳವಾಗಿದ್ದರೂ ಶ್ರವಣ್ ನಿಸ್ವಾರ್ಥವಾಗಿ ಭಾರತೀಯ ಸೇನಾ ಸಿಬ್ಬಂದಿಗೆ ನೀರು, ಹಾಲು ಮತ್ತು ಚಹಾವನ್ನು ನೀಡುತ್ತಿದ್ದ. ಆ ಸಮಯದಲ್ಲಿ ದೊಡ್ಡವರು ಕೂಡ ಮನೆಯಿಂದ ಹೊರಬರಲು ಹೆದರುತ್ತಿದ್ದರು. ಹೀಗಾಗಿ, ಆ ಬಾಲಕನ ಧೈರ್ಯ ಮತ್ತು ದೇಶಭಕ್ತಿಯನ್ನು ಮೆಚ್ಚಿ ಆತನಿಗೆ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ನೀಡಲಾಗಿದೆ.

10 ವರ್ಷದ ಶ್ರವಣ್ ಸಿಂಗ್ ಪಂಜಾಬ್​ನ ಸರ್ಕಾರಿ ಶಾಲೆಯಲ್ಲಿ 5ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಪ್ರದೇಶಗಳಲ್ಲಿ ನಿಯೋಜಿಸಲಾದ ಭಾರತದ ಸೇನಾ ಸಿಬ್ಬಂದಿಗೆ ನೀರು, ಚಹಾ, ಹಾಲು, ಲಸ್ಸಿ ಮತ್ತು ಐಸ್ ಒದಗಿಸಿ ತಮ್ಮ ದೇಶಭಕ್ತಿ ಪ್ರದರ್ಶಿಸಿದ್ದ. ಅಂತಹ ಅಪಾಯಕಾರಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈನಿಕರಿಗೆ ಆ ಹುಡುಗ ಸಹಾಯ ಮಾಡಿದ್ದ. ಅಷ್ಟೇ ಅಲ್ಲದೆ, ಆ ಸೈನಿಕರಿಗೆ ಉಳಿದುಕೊಳ್ಳಲು ತನ್ನ ಮನೆಯಲ್ಲಿ ಜಾಗ ನೀಡಲು ಆತ ತನ್ನ ಅಪ್ಪನನ್ನು ಒಪ್ಪಿಸಿದ್ದ. ಹೀಗಾಗಿ, ಸೇನೆಯಿಂದ ಆ ಬಾಲಕನಿಗೆ ವಿಶೇಷ ಉಡುಗೊರೆಗಳನ್ನು ಸಹ ನೀಡಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND-W vs SL-W: ಸತತ 3ನೇ ಪಂದ್ಯದಲ್ಲಿ ಟಾಸ್ ಗೆದ್ದ ಹರ್ಮನ್‌ಪ್ರೀತ್; ಭಾರತ ತಂಡದಲ್ಲಿ 2 ಬದಲಾವಣೆ – Kannada News | India Women vs Sri Lanka Women 3rd T20: IND W Aims to Seal Series, Playing XI and Toss

ಭಾರತ ಮತ್ತು ಶ್ರೀಲಂಕಾ (India Women vs Sri Lanka Women) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. ಉಭಯ ತಂಡಗಳ ನಡುವಿನ ಈ ಸರಣಿಯಲ್ಲಿ ಆತಿಥೇಯ ಟೀಂ ಇಂಡಿಯಾ 2-0 ಅಂತರದ ಮುನ್ನಡೆ ಸಾಧಿಸಿದ್ದು, ಇದೀಗ ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಇನ್ನೇರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳಲು ನೋಡುತ್ತಿದೆ. ಇತ್ತ ಮೊದಲೆರಡು ಪಂದ್ಯಗಳಲ್ಲಿ ಏಕಪಕ್ಷೀಯ ಸೋಲು ಅನುಭವಿಸಿದ್ದ ಶ್ರೀಲಂಕಾ ತಂಡ, ಈ ಪಂದ್ಯವನ್ನು ಗೆದ್ದು ಸರಣಿಯನ್ನು ಜೀವಂತವಾಗಿರಿಸಲು ನೋಡುತ್ತಿದೆ.

ಟಾಸ್ ಗೆದ್ದ ಟೀಂ ಇಂಡಿಯಾ

ಏಕದಿನ ವಿಶ್ವಕಪ್​ಗೂ ಮುನ್ನ ಸತತ ಟಾಸ್ ಸೋತು, ಟಾಸ್ ಸೋಲುವುದನ್ನೇ ಕಾಯಕ ಮಾಡಿಕೊಂಡಿದ್ದ ಟೀಂ ಇಂಡಿಯಾ ನಾಯಕಿ ಹರ್ಮನ್​ಪ್ರೀತ್​ ಕೌರ್​ ಅವರ ಲಕ್ ಬದಲಾಗಿದೆ. ಶ್ರೀಲಂಕಾ ವಿರುದ್ಧದ ಈ ಸರಣಿಯ ಮೊದಲ 3 ಪಂದ್ಯಗಳಲ್ಲೂ ಹರ್ಮನ್ ಟಾಸ್ ಗೆದ್ದಿದ್ದಾರೆ. ಅಂದರೆ ಈ ಪಂದ್ಯದಲ್ಲೂ ಟಾಸ್ ಗೆದ್ದಿರುವ ಟೀಂ ಇಂಡಿಯ ನಾಯಕಿ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಲಂಕಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.

ತಂಡದಲ್ಲಿ 2 ಬದಲಾವಣೆ

ಟಾಸ್ ಗೆದ್ದ ಬಳಿಕ ಮಾತನಾಡಿದ ನಾಯಕಿ ಹರ್ಮನ್‌ಪ್ರೀತ್ ಕೌರ್ ಭಾರತದ ಪ್ಲೇಯಿಂಗ್ 11 ರಲ್ಲಿ ಎರಡು ಬದಲಾವಣೆಗಳನ್ನು ಮಾಡಿರುವುದಾಗಿ ತಿಳಿಸಿದ್ದಾರೆ. ಆ ಪ್ರಕಾರ, ಸ್ನೇಹ್ ರಾಣಾ ಮತ್ತು ಅರುಂಧತಿ ರೆಡ್ಡಿ ಬದಲಿಗೆ ರೇಣುಕಾ ಠಾಕೂರ್ ಮತ್ತು ದೀಪ್ತಿ ಶರ್ಮಾ ತಂಡಕ್ಕೆ ಮರಳಿದ್ದಾರೆ. ಏತನ್ಮಧ್ಯೆ, ಶ್ರೀಲಂಕಾದ ನಾಯಕಿ ಚಾಮರಿಅಟಾಪಟ್ಟು ಕೂಡ ಪ್ಲೇಯಿಂಗ್ 11 ರಲ್ಲಿ ಮೂರು ಬದಲಾವಣೆಗಳನ್ನು ಮಾಡಿರುವುದಾಗಿ ತಿಳಿಸಿದ್ದಾರೆ.

ಉಭಯ ತಂಡಗಳು

ಶ್ರೀಲಂಕಾ ತಂಡ: ಚಾಮರಿ ಅಟಾಪಟು (ನಾಯಕಿ), ಹಾಸಿನಿ ಪೆರೇರಾ, ಹರ್ಷಿತಾ ಸಮರವಿಕ್ರಮ, ಕವಿಶಾ ದಿಲ್ಹಾರಿ, ನೀಲಾಕ್ಷಿಕಾ ಸಿಲ್ವಾ, ಇಮೇಶಾ ದುಲಾನಿ, ಕೌಶಿನಿ ನುತ್ಯಂಗನಾ, ಮಲ್ಶಾ ಶೆಹಾನಿ, ಇನೋಕಾ ರಣವೀರ, ಮಲ್ಕಿ ಮಾದರ, ಮತ್ತು ನಿಮಾಶಾ ಮೀಪಗೆ.

ಭಾರತ ತಂಡ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್, ದೀಪ್ತಿ ಶರ್ಮಾ, ಅಮನ್‌ಜೋತ್ ಕೌರ್, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ರೇಣುಕಾ ಸಿಂಗ್ ಠಾಕೂರ್ ಮತ್ತು ಶ್ರೀ ಚರಣಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:41 pm, Fri, 26 December 25

Source link