ಬಾಗಲಕೋಟೆ ಬೈ ಎಲೆಕ್ಷನ್: ಬಿಜೆಪಿ, ಕಾಂಗ್ರೆಸ್ ನಡುವೆ ಕರಪತ್ರ ಫೈಟ್; ಸಿಪಿಐ ಕಚೇರಿ ಎದುರು ಹೈಡ್ರಾಮಾ
ಬಾಗಲಕೋಟೆ, ಏಪ್ರಿಲ್ 04: ಉಪಚುನಾವಣಾ ಕಣದಲ್ಲಿ ರಾಜಕೀಯ ಜಿದ್ದಾಜಿದ್ದಿ ತಾರಕಕ್ಕೇರಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಬಾಗಲಕೋಟೆಯಲ್ಲಿ ಕರಪತ್ರ ಯುದ್ಧ ಶುರುವಾಗಿದೆ. ವಿದ್ಯಾರ್ಥಿಗಳಿಗೆ ಕರಪತ್ರ ಹಂಚುತ್ತಿದ್ದಾರೆಂದು ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ ವಿರುದ್ಧ ಬಿಜೆಪಿ ಗಂಭೀರ ಆರೋಪ ಮಾಡಿದೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ್ ಅವರ ವಿರುದ್ಧ ಕರಪತ್ರಗಳನ್ನು ಹಂಚಲಾಗುತ್ತಿದ್ದು, ಬಿಜೆಪಿ ಕಾರ್ಯಕರ್ತರು ಕರಪತ್ರ ಸಾಗಿಸುತ್ತಿದ್ದ ಕಾರೊಂದನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಬಾಗಲಕೋಟೆಯ ಸಿಪಿಐ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಅದೇ ಸ್ಥಳಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಕೂಡ…