Headlines

nagaraj11081993

ಗಂಡನ ಮನೆಯವರ ಕಿರುಕುಳಕ್ಕೆ ಜೀವಬಿಟ್ಟ 4 ತಿಂಗಳ ಗರ್ಭಿಣಿ: ಪತಿ ಮನೆಯವರಿಂದಲೇ ಕೊಲೆಯೆಂದು ಪೋಷಕರ ಆರೋಪ

ಶಿವಮೊಗ್ಗ, ಏಪ್ರಿಲ್​​ 03: ಆತ್ಮಹತ್ಯೆಗೆ ಯತ್ನಿಸಿದ್ದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಡಬಟ್ಟೆ ಗ್ರಾಮದ 4 ತಿಂಗಳ ಗರ್ಭಿಣಿ ಚಿಕಿತ್ಸೆ ಫಲಿಸದೆ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶ್ವೇತಾ(30) ಮೃತಳಾಗಿದ್ದು, ಮಾ.29ರಂದು ಹೊಡಬಟ್ಟೆಯಲ್ಲಿ ಇವರು ಆತ್ಮಹತ್ಯೆಗೆ ಯತ್ನಿಸಿದ್ದರು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆ ಪೋಷಕರು ಮಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರೀಗ ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ನಾಲ್ವರ ಬಂಧನ ಸ್ಟಾಫ್​ ನರ್ಸ್ ಆಗಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದ ಶ್ವೇತಾ ಅತ್ತೆ ಮತ್ತು…

Read More

Tamil Nadu Assembly elections 2026: ತಮಿಳುನಾಡು ಚುನಾವಣೆಗೆ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ, ಅಣ್ಣಾಮಲೈ ಹೆಸರಿಲ್ಲ

ಚೆನ್ನೈ, ಏಪ್ರಿಲ್ 03: ತಮಿಳುನಾಡು ವಿಧಾನಸಭಾ ಚುನಾವಣೆ(Tamil Nadu Assembly election)ಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಚುನಾವಣಾ ಸಮಿತಿಯು 27 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಈ ಪಟ್ಟಿಯಲ್ಲಿ ಹಲವಾರು ಅನುಭವಿ ನಾಯಕರು ಮತ್ತು ಸ್ಥಳೀಯ ಪ್ರಭಾವ ಹೊಂದಿರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಪಟ್ಟಿಯಲ್ಲಿ ಕೇಂದ್ರ ಸಚಿವರಿಂದ ಹಿಡಿದು ಮಾಜಿ ರಾಜ್ಯಪಾಲರವರೆಗೆ ಪ್ರಮುಖ ನಾಯಕರ ಹೆಸರಿದೆ, ಆದರೆ  ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ…

Read More

ಇನ್ಫೋಸಿಸ್​ನ ಹಿರಿಯ ಅಧಿಕಾರಿಗಳಂತೆ ನಟಿಸಿ 6 ಕೋಟಿ ರೂ. ಪಂಗನಾಮ! ನಾಲ್ವರ ಮೇಲೆ ಎಫ್ಐಆರ್

ಬೆಂಗಳೂರು, ಏಪ್ರಿಲ್ 03: ಇನ್ಫೋಸಿಸ್ (Infosys) ಸಂಸ್ಥೆಯ ಹಿರಿಯ ಅಧಿಕಾರಿಗಳಂತೆ ನಟನೆ ಮಾಡಿ 6.3 ಕೋಟಿ ರೂ. ವಂಚನೆ ನಡೆಸಿದ ಆರೋಪ ಕೇಳಿ ಬಂದಿದ್ದು, ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೈಸೂರು ಮರ್ಕಂಟೈಲ್ ಕಂಪನಿ ನೀಡಿದ ದೂರಿನ ಪ್ರಕಾರ, ಗಗನ್ ಎಂಬಾತ ಇನ್ಫೋಸಿಸ್ ಸಂಸ್ಥೆಯ CSR ಪ್ರಾದೇಶಿಕ ಮುಖ್ಯಸ್ಥನಾಗಿ ತಾನು ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದ ಎಂದು ಆರೋಪಿಸಲಾಗಿದೆ. ನಂಬಿಕೆ ಗಳಿಸಲು ನಕಲಿ ತಂಡ ರಚಿಸಿ ಪರಿಶೀಲನೆ! ತಾನು ಹಿರಿಯ ಅಧಿಕಾರಿಗಳಾದ ನಿಲಾದ್ರಿ ಪ್ರಸಾದ್ ಮಿಶ್ರಾ ಹಾಗೂ…

Read More

ಭಾರತೀಯ ವಿವಾಹಗಳಲ್ಲಿ ಹೊಸ ಟ್ರೆಂಡ್: 13 ರಿಂದ 25 ಸಾವಿರ ರೂ. ಬೆಲೆಯ ಇಂಜೆಕ್ಷನ್ ತಗೊಳ್ತಿದ್ದಾರೆ ವಧುಗಳು!

ಇತ್ತೀಚಿನ ದಿನಗಳಲ್ಲಿ ತೂಕ ಇಳಿಸಿಕೊಳ್ಳುವುದು ಬಹಳ ಕಷ್ಟ, ಅದಕ್ಕೆ ಆಹಾರ ಪದ್ಧತಿಯಲ್ಲಿ ಬದಲಾವಣೆ, ವ್ಯಾಯಾಮ ಇನ್ನು ಅನೇಕ ಕಸರತ್ತುಗಳನ್ನು ಮಾಡಬೇಕು, ಸಾಮಾನ್ಯವಾಗಿ ಜನ ಡಯಟ್ ಮಾಡುತ್ತಾರೆ. ಈ ಕ್ರಮವು ಅನೇಕರಿಗೆ ಒಳ್ಳೆಯ ಫಲಿತಾಂಶವನ್ನು ನೀಡಿದೆ. ಆದರೆ ಇತ್ತೀಚಿನ ದಿನಗಳಲ್ಲಿ ತಕ್ಷಣಕ್ಕೆ ತೂಕ ಇಳಿಸಿಕೊಳ್ಳಲು ಔಷಧಿಗಳ ಕಡೆ ಹೋಗುತ್ತಿದ್ದಾರೆ. ಇಂಜೆಕ್ಷನ್​​ಗಳನ್ನು ತೆಗೆದುಕೊಂಡು ತೂಕ ಇಳಿಸಿಕೊಳ್ಳುತ್ತಾರೆ. ಅದರಲ್ಲೂ ಇದೀಗ ಮದುವೆ ಆಗುತ್ತಿರುವ ನೂತನ ಜೋಡಿಗಳು ಕೂಡ ಹಾದಿಯಲ್ಲೇ ಸಾಗುತ್ತಿದ್ದಾರೆ. ಈ ಬಗ್ಗೆ ಇಲ್ಲೊಂದು ವರದಿಯನ್ನು ನೀಡಲಾಗಿದೆ. ಮದುವೆ ಕಡಿಮೆ ಸಮಯ…

Read More

ಬೆಂಗಳೂರಿನಲ್ಲಿ ಆಟೋ ಗ್ಯಾಸ್ ಹಾಹಾಕಾರ: ಕಿಲೋಮೀಟರ್‌ಗಟ್ಟಲೆ ರಿಕ್ಷಾ ಸಾಲು! ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ ಎಚ್ಚರಿಕೆ

ಬೆಂಗಳೂರು, ಏಪ್ರಿಲ್ 3: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಆಟೋ ಎಲ್‌ಪಿಜಿ ಗ್ಯಾಸ್ ಅಭಾವ (Auto LPG Crisis) ವಿಕೋಪಕ್ಕೆ ತಲುಪಿದ್ದು, ಆಟೋ ಚಾಲಕರ ಬದುಕು ಬೀದಿಗೆ ಬಂದಿದೆ. ಗ್ಯಾಸ್ ಕೊರತೆ ಮತ್ತು ಅನಿಯಂತ್ರಿತ ದರ ಏರಿಕೆಯಿಂದ ಚಾಲಕರು ಕಂಗಾಲಾಗಿದ್ದಾರೆ. ಏತನ್ಮಧ್ಯೆ, ಸೋಮವಾರದೊಳಗೆ ಸಮಸ್ಯೆ ಬಗೆಹರಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ‘ಪೀಸ್ ಆಟೋ’ ಸಂಘಟನೆ ಗಡುವು ನೀಡಿದೆ. ಇಲ್ಲದಿದ್ದರೆ ಸಚಿವರ ಮನೆಗೆ ಆಟೋ ಸಮೇತ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆಯನ್ನೂ ನೀಡಿದೆ….

Read More

ಟಾಲಿವುಡ್​​ನಲ್ಲಿ ಕೆಟ್ಟ ಅನುಭವ, ತೆಲುಗು ಚಿತ್ರರಂಗದ ಇನ್ನೊಂದು ಮುಖ ತೆರೆದಿಟ್ಟ ಯುವತಿ

ಚಿತ್ರರಂಗದಲ್ಲಿ (Movie Industry) ಕೆಲಸ ಮಾಡಬೇಕು, ನಟಿಯಾಗ ಬೇಕು ಎಂಬುದು ಹಲವು ಯುವತಿಯರ ಆಸೆ. ಆದರೆ ಕಾಸ್ಟಿಂಗ್ ಕೌಚ್ ಎಂಬ ಪೆಡಂಭೂತ ಇಂಥಹಾ ಹಲವು ಪ್ರತಿಭಾವಂತ ಯುವತಿಯರನ್ನು ತಡೆಯುತ್ತಿದೆ. ಕಾಸ್ಟಿಂಗ್ ಕೌಚ್ ವಿರುದ್ಧ ಹೋರಾಟಗಳು ನಡೆಯುತ್ತಲೇ ಇವೆ, ಕಾನೂನು ಕಟ್ಟಳೆಗಳನ್ನು ಸಹ ಮಾಡಲಾಗಿದೆ. ಅದರೂ ಸಹ ಇದು ಸಂಪೂರ್ಣ ನಿಂತಿಲ್ಲ. ಇದೀಗ ವಿದೇಶದಲ್ಲಿ ನೆಲೆಸಿರುವ ಭಾರತೀಯ ಮೂಲದ ಯುವತಿಯೊಬ್ಬರು ತಮಗೆ ಟಾಲಿವುಡ್​​ನಲ್ಲಿ ಆದ ಕೆಟ್ಟ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇನ್​​ಸ್ಟಾಗ್ರಾಂನಲ್ಲಿ ‘ಪೀಕು ನೆಮಿಲಿ’ ಹೆಸರಿನಲ್ಲಿ ಯುವತಿಯೊಬ್ಬರು…

Read More

ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು: ಭೀಕರ ದೃಶ್ಯ ಸೆರೆ

ಬೀದರ್​​, ಏಪ್ರಿಲ್​​ 03: ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಪೊಲೀಸ್​​ ಕಾನ್ಸ್​ಟೇಬಲ್​ ಕಾರು ಹರಿದಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ನಡೆದಿದೆ. ಅಪಘಾತದಲ್ಲಿ ಭಾಲ್ಕಿ ಪಟ್ಟಣದ ನಿವಾಸಿ ಜ್ಞಾನಬಾಯಿ(45) ಸ್ಥಿತಿ ಗಂಭೀರವಾಗಿದ್ದು, ಪಟ್ಟಣದ ರಸ್ತೆಯಲ್ಲಿ ಕಸ ಗುಡಿಸುತ್ತಿದ್ದ ವೇಳೆ ವೇಗವಾಗಿ ಬಂದ ಮೇಹಕರ್ ಪೊಲೀಸ್ ‌ಠಾಣೆಯ ಪಿಸಿ ಉಮಾಕಾಂತ್ ಕಾರು ಮಹಿಳೆ ಮೇಲೆ ಹರಿದಿದೆ. ಗಂಭೀರ ಗಾಯಗೊಂಡ ಜ್ಞಾನಬಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಭಾಲ್ಕಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಮತ್ತು ಸ್ಥಳದಲ್ಲಿದ್ದ…

Read More

ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಸಿಎಂ ಡಿ.ಕೆ. ಶಿವಕುಮಾರ್​

ದಾವಣಗೆರೆ, ಏಪ್ರಿಲ್​​ 03: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಾವಣಗೆರೆಯಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭ ಶಾಮನೂರು ಶಿವಶಂಕರಪ್ಪ ಕುಟುಂಬದ ಕೊಡುಗೆಗಳನ್ನು ಮನಸಾರೆ ಹೊಗಳಿದ್ದಾರೆ. ಆಸ್ಪತ್ರೆಗಳು, ಚೌಲ್ಟ್ರಿಗಳು ಮತ್ತು ಶಿಕ್ಷಣ ಸಂಸ್ಥೆಗಳ ಮೂಲಕ ಸಮಾಜಕ್ಕೆ ಈ ಕುಟುಂಬವು ದೊಡ್ಡ ನೆರವು ನೀಡಿದೆ. ನಗರದ ಅಭಿವೃದ್ಧಿ ಕಾರ್ಯಗಳು, ರಸ್ತೆಗಳು, ಪಾರ್ಕ್‌ಗಳ ನಿರ್ವಹಣೆ ಮತ್ತು ಬಸ್ ನಿಲ್ದಾಣಗಳು ಬೆಂಗಳೂರಿಗಿಂತಲೂ ಉತ್ತಮವಾಗಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಆರ್​​ಸಿಬಿ ವಿರುದ್ಧದ ಪಂದ್ಯಕ್ಕೆ ಥಲಾ ಲಭ್ಯ? ಧೋನಿ ಫ್ಯಾನ್ಸ್​​ಗೆ ಖುಷಿ ಸುದ್ದಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ಚಿನ್ನಸ್ವಾಮಿ ಸ್ಟೇಡಿಯಂ ಸಿದ್ಧವಾಗುತ್ತಿದೆ. ಈ ಪಂದ್ಯ ನೋಡಲು ಅಭಿಮಾನಿಗಳು ಕಾದಿದ್ದಾರೆ. ಧೋನಿ ಅವರು ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರಿಗೆ ಎರಡು ವಾರ ರೆಸ್ಟ್ ಸೂಚಿಸಲಾಗಿತ್ತು. ಆದರೆ, ಅವರು ಈಗ ಆರ್​​ಸಿಬಿ ವಿರುದ್ಧ ಪಂದ್ಯಕ್ಕೆ ಲಭ್ಯರಾಗುತ್ತಾರಾ ಎನ್ನುವ ಕುತೂಹಲ ಮೂಡಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಹೀನಾಯವಾಗಿ ಸೋತಿತು. ಇಂದು (ಏಪ್ರಿಲ್ 3) ಚೆನ್ನೈ ತಂಡ ಪಂಜಾಬ್ ಅನ್ನು ಎದುರಿಸಲಿದೆ….

Read More

ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: 4 ತಂಡಗಳಿಂದ ಶೋಧ ಕಾರ್ಯ

ಮಡಿಕೇರಿ, ಏಪ್ರಿಲ್​​ 03: ಟ್ರೆಕ್ಕಿಂಗ್​ಗೆ ತೆರಳಿದ್ದ ಯುವತಿ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ನಡೆದಿದೆ. ಕೇರಳ ಮೂಲದ ಯುವತಿ ಶರಣ್ಯ ಜಿ.ಎಸ್. ನಿನ್ನೆ ನಾಪತ್ತೆಯಾಗಿದ್ದು, ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ‌ಕ್ಕೆ ತೆರಳಿದ್ದಾಗ ಆಕೆ ಮಿಸ್ಸಾಗಿದ್ದಾಳೆ. ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದ ಯುವತಿ ನಿನ್ನೆ ಒಬ್ಬಳೇ ಚಾರಣಕ್ಕೆ ತೆರಳಲು ಮುಂದಾಗಿದ್ದಳು. ಆ ಪ್ರದೇಶದಲ್ಲಿ ಕಾಡಾನೆಗಳ ಕಾಟ ಇರುವ ಕಾರಣ ಬೇರೆಯವರ ಜತೆ ಸಿಬ್ಬಂದಿ ಕಳುಹಿಸಿದ್ದರು. ಸಂಜೆಯಾದ್ರೂ ಶರಣ್ಯ ವಾಪಸಾಗದ ಹಿನ್ನೆಲೆ ಶರಣ್ಯಗಾಗಿ ಪೊಲೀಸರು, ಅರಣ್ಯ ಇಲಾಖೆ…

Read More