IPL 2026: ಪ್ರಮುಖ ಆಟಗಾರ ಗಾಯಾಳು: RCBಗೆ ಚಿಂತೆ ಶುರು
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ಇನ್ನು ಉಳಿದಿರುವುದು ತಿಂಗಳುಗಳು ಮಾತ್ರ. ಆದರೆ ತಿಂಗಳುಗಳು ಉಳಿದಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರ ಗಾಯಗೊಂಡಿರುವುದು ಇದೀಗ RCB ಫ್ರಾಂಚೈಸಿಯ ಚಿಂತೆಯನ್ನು ಹೆಚ್ಚಿಸಿದೆ. ಆರ್ಸಿಬಿ ತಂಡದ ಪ್ರಮುಖ ಆಟಗಾರ ಟಿಮ್ ಡೇವಿಡ್ ಬಿಗ್ ಬ್ಯಾಷ್ ಲೀಗ್ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪರ್ತ್ನಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್ನ 12ನೇ ಪಂದ್ಯದಲ್ಲಿ ಹೋಬರ್ಟ್ ಹರಿಕೇನ್ಸ್ ಪರ ಕಣಕ್ಕಿಳಿದಿದ್ದ ಟಿಮ್ ಡೇವಿಡ್ ಬ್ಯಾಟಿಂಗ್ ವೇಳೆ ಮಂಡಿರಜ್ಜು…