ಬೆಳ್ಳಂ ಬೆಳಿಗ್ಗೆ ಬಿರಿಯಾನಿ ತಿನ್ನಲು ಹೋದವರಿಗೆ ಭರ್ಜರಿ ಶಾಕ್: ಕಾಲೇಜು ವಿದ್ಯಾರ್ಥಿಗಳ ಅಡ್ಡಗಟ್ಟಿ ದರೋಡೆ – Kannada News | Gang Robs Students Returning After Eating Hoskote Biryani
ಬೆಂಗಳೂರು, ಡಿಸೆಂಬರ್ 23: ಹೊಸಕೋಟೆ ಬಿರಿಯಾನಿ ತಿನ್ನಲು ತೆರಳಿದ್ದ ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳನ್ನ ದರೋಡೆ ಮಾಡಿದ್ದಲ್ಲದೆ, ಒತ್ತೆಯಾಳಾಗಿ ಇಟ್ಟುಕೊಂಡು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ವಿದ್ಯಾರ್ಥಿಗಳ ಸ್ನೇಹಿತರಿಂದಲೂ ಹಣ ಪೀಕಿದ ದುಷ್ಕರ್ಮಿಗಳು ಬಾಗಲೂರು ವ್ಯಾಪ್ತಿಯ ಪ್ರತಿಷ್ಟಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ನಾಲ್ವರು ವಿದ್ಯಾರ್ಥಿಗಳು ಎರಡು ಪ್ರತ್ಯೇಕ ಬೈಕ್‌ಗಳಲ್ಲಿ ಭಾನುವಾರ ಮುಂಜಾನೆ ಹೊಸಕೋಟೆ ಬಿರಿಯಾನಿ ತಿನ್ನಲು ತೆರಳಿದ್ದರು. ಬಿರಿಯಾನಿ ತಿಂದು…