IAS ರೋಹಿಣಿ ಸಿಂಧೂರಿಗೆ ಸಂಕಷ್ಟ ತಂದಿಟ್ಟ ಬಟ್ಟೆ ಬ್ಯಾಗ್ ಖರೀದಿ ಅಕ್ರಮ ಆರೋಪದ ಹಿನ್ನೆಲೆ ಏನು ಗೊತ್ತೇ? ಇಲ್ಲಿದೆ ಮಾಹಿತಿ
ಬೆಂಗಳೂರು, ಏಪ್ರಿಲ್ 03: ಸುಮಾರು 5 ವರ್ಷಗಳ ಹಿಂದೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಆರೋಪಕ್ಕೆ ತುತ್ತಾಗಿದ್ದರು. ಈ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ದೂರುದಾರ ವಕೀಲ, ರವಿಚಂದ್ರೇಗೌಡ ಎನ್.ಆರ್ ಎನ್ನುವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತನಿಖೆಗೆ ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮ ರದ್ದುಪಡಿಸಿದೆ. ರೋಹಿಣಿ…