ಸಿಎಂ ಕುರ್ಚಿ ಕಿತ್ತಾಟ ತಾರಕಕ್ಕೆ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ – Kannada News | Power Tussle In Karnataka Congress: AICC President Mallikarjun Kharge Passed message to Siddaramaiah And DK Shivakumar
ಕಲಬುರಗಿ, (ಡಿಸೆಂಬರ್ 21): ಕರ್ನಾಟಕ ಕಾಂಗ್ರೆಸ್ನಲ್ಲಿ (Karnataka Congress) ಕುರ್ಚಿ ಕದನ ದಿನೇ ದಿನೇ ತಾರಕಕ್ಕೇರುತ್ತಿದೆ. ಸಿಎಂ-ಡಿಸಿಎಂ ಬಣದ ನಾಯಕರು ದಿನಕ್ಕೊಂದು ಹೇಳಿಕೆ ಕೊಡುವ ಮೂಲಕ ಕುರ್ಚಿ ಕದನವನ್ನೂ ಜೀವಂತವಾಗಿಟ್ಟಿದ್ದಾರೆ. ನಾನೇ 5 ವರ್ಷ ಸಿಎಂ, ಎರಡೂವರೆ ವರ್ಷಕ್ಕೆ ನಾಯಕತ್ವ ಬದಲಾಗುತ್ತೆ ಅಂತ ಎಲ್ಲೂ ಒಪ್ಪಂದ ಆಗಿಲ್ಲ. ಹೈಕಮಾಂಡ್ ಹೇಳೋವರೆಗೂ ನಾನೇ ಸಿಎಂ ಅಂತ ಸಿದ್ದರಾಮಯ್ಯ (Siddaramaiah) ಅಧಿವೇಶನದಲ್ಲೇ ಹೇಳಿಕೆ ಕೊಟ್ಟ ಬೆನ್ನಲ್ಲೇ ಸಿಎಂ ಆಪ್ತರ ಭೇಟಿಗೆ ಡಿಕೆಶಿ ಮುಂದಾಗಿದ್ದಾರೆ. ಈ ನಡುವೆ ಸ್ಥಳೀಯ ನಾಯಕರಿಗೆ ಮಲ್ಲಿಕಾರ್ಜುನ…