All posts by nagaraj11081993

ಕೇವಲ 2 ಸಾವಿರದಲ್ಲಿ BJP ಮಾಜಿ ಎಂಎಲ್​​ಸಿಯ 30 ಕೋಟಿ ರೂ ಆಸ್ತಿ ಲಪಟಾಯಿಸಲು ಯತ್ನ – Kannada News | Mysuru land fraud ex mlc siddaraju 30 cr property targeted with fake docs

ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು

ಮೈಸೂರು, ಡಿಸೆಂಬರ್​​ 26: ಬಿಜೆಪಿ ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜುಗೆ (former mlc siddaraju) ಸೇರಿರುವ ಆಸ್ತಿಗೆ (land) ಕನ್ನ ಹಾಕಲು ಖದೀಮರು ಯತ್ನಿಸಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. 30 ಕೋಟಿ‌ ರೂ. ಆಸ್ತಿಯನ್ನು ಕೇವಲ 2 ಸಾವಿರ ರೂ. ಖರ್ಚು ಮಾಡಿ, ನಕಲಿ ದಾಖಲೆ ಸೃಷ್ಟಿಸಿ 30 ಕೋಟಿ ರೂ. ಮೌಲ್ಯದ 22 ನಿವೇಶನಗಳನ್ನು ಬರೆಸಿಕೊಳ್ಳಲು ಯತ್ನಿಸಿರುವಂತಹ ಆರೋಪ ಕೇಳಿಬಂದಿದೆ. ವಿಷಯ ತಿಳಿದು ಉಪ ನೋಂದಣಾಧಿಕಾರಿ ಕಚೇರಿಗೆ ಬರುತ್ತಿದ್ದಂತೆ ಭೂಗಳ್ಳರು ಪರಾರಿ ಆಗಿರುವಂತಹ ಘಟನೆ ಮೈಸೂರಿನ ಪಶ್ಚಿಮ ಉಪ ನೋಂದಣಿ ಕಚೇರಿಯಲ್ಲಿ ನಡೆದಿದೆ.

ನಡೆದದ್ದೇನು?

ಮೈಸೂರು ತಾಲೂಕಿನ ಜಯಪುರ ಹೋಬಳಿಯ ಕೇರ್ಗಳ್ಳಿ ಗ್ರಾಮ ಮತ್ತು ಚಾಮುಂಡಿ ಸೂರು ನಗರ ಬಡಾವಣೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜುಗೆ ವಿವಿಧ ಸರ್ವೆ ನಂಬರ್​ಗಳಲ್ಲಿ 22 ನಿವೇಶನಗಳಿವೆ.

ಇದನ್ನೂ ಓದಿ: ಮುಡಾ ಕೇಸ್​​ ವಿಚಾರಣೆ ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ: ವಾದ-ಪ್ರತಿವಾದ ಹೇಗಿತ್ತು?

ಖದೀಮರು ಸಿದ್ಧರಾಜು ಅವರ ನಕಲಿ ಫೋಟೋ ಒಳಗೊಂಡ ಆಧಾರ್​ ಕಾರ್ಡ್​​​, ಪಾನ್ ಕಾರ್ಡ್, ಮನೆ ವಿಳಾಸ ಬದಲಿಸಿ ಮೋಸ ಮಾಡಲು ಮುಂದಾಗಿದ್ದರು. ಇದಕ್ಕಾಗಿ ಬೋಗಾದಿ ಪಟ್ಟಣ ಪಂಚಾಯ್ತಿಯಲ್ಲಿ ಇ ಖಾತಾ ಪಡೆಯಲಾಗಿತ್ತು. ಅದೇ ಪ್ರತಿ ಸಲ್ಲಿಸಿ 22 ನಿವೇಶನಗಳನ್ನು ಜಿಪಿಎ ನೊಂದಣಿ ಮಾಡಿಸಲು ಭೂಗಳ್ಳರು ಮುಂದಾಗಿದ್ದರು.

ಡಿ.23 ರಂದು ಪಶ್ಚಿಮ ಉಪನೋಂದಣಾಧಿಕಾರಿ ಕಚೇರಿಗೆ ನಿವೇಶನ ನೋಂದಣಿಗೆ ಅರ್ಜಿ ಸಲ್ಲಿಸಲಾಗಿತ್ತು. ಉಪನೋಂದಣಾಧಿಕಾರಿ ಕಚೇರಿ ಸಿಬ್ಬಂದಿಯೊಬ್ಬರು ಮಾಜಿ ಎಂಎಲ್​​ಸಿ ಸಿದ್ದರಾಜು ದಾಖಲೆಗಳನ್ನ ಗಮನಿಸಿ ಅವರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೇಕ್ ಇನ್ ಇಂಡಿಯಾ ಬಲಪಡಿಸಲು ಮೈಸೂರಿನಲ್ಲಿ ನಿರ್ಮಾಣವಾಗುತ್ತಿದ್ದ ಯೂನಿಟಿ ಮಾಲ್​​​ಗೆ ವಿಘ್ನ

ಇತ್ತ ಉಪನೋಂದಣಾಧಿಕಾರಿ ಕಚೇರಿಗೆ ಸಿದ್ಧರಾಜು ಬೆಂಬಲಿಗರೊಂದಿಗೆ ಆಗಮಿಸುತ್ತಿದ್ದಂತೆ ಭೂಗಳ್ಳರು ಪರಾರಿ ಆಗಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಮಾರಾಟ ಮಾಡಲು ಬಂದಿದ್ದ ಭೂಗಳ್ಳರನ್ನ ಸಿಸಿಟಿವಿ ದೃಶ್ಯಾವಳಿ ಹಾಗೂ ದಾಖಲೆಗಳ ಪ್ರತಿ ನೀಡುವಂತೆ ಸಿದ್ದರಾಜು ಮನವಿ ಮಾಡಿದ್ದಾರೆ. ಪ್ರಕರಣ ಸಂಬಂಧ ಕಂದಾಯ ಸಚಿವರಿಗೆ ದೂರು ನೀಡಿದ್ದು, ತನಿಖೆ ನಡೆಸುವಂತೆ ಒತ್ತಾಯಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮುಟ್ಟು ನಿಲ್ಲುವ ಅವಧಿಯಲ್ಲಿ ಮಹಿಳೆಯರು ತಪ್ಪದೆ ಈ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುತ್ತಾರೆ ಡಾ. ಸಂಹಿತಾ – Kannada News | Menopause Health Tips from Dr. Samhita

Menopause Health Tips From Dr. Samhita

ಮಹಿಳೆಯರ ಜೀವನದಲ್ಲಿ ಮೆನೋಪಾಸ್ (Menopause) ಒಂದು ಸಹಜ ಹಾಗೂ ಬಹುಮುಖ್ಯ ಶಾರೀರಿಕ ಹಂತ. ನಿಮಗೂ ತಿಳಿದಿರಬಹುದು ಮೆನೋಪಾಸ್ ಎಂದರೆ ಋತುಚಕ್ರ (Menstrual Cycles) ಸಂಪೂರ್ಣವಾಗಿ ನಿಲ್ಲುವ ಒಂದು ಪ್ರಕ್ರಿಯೆ. ಸಾಮಾನ್ಯವಾಗಿ 45- 55 ವರ್ಷದೊಳಗಿನ ಅವಧಿಯಲ್ಲಿ ಋತು ಚಕ್ರ ನಿಲ್ಲುತ್ತದೆ. ಈ ಸಮಯದಲ್ಲಿ ಆಗುವ ಹಾರ್ಮೋನ್ ಗಳ ಬದಲಾವಣೆಗಳಿಂದ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಸ್ಥಿತಿಗಳಲ್ಲಿ ಹಲವು ಪರಿವರ್ತನೆಗಳು ಕಂಡುಬರುತ್ತದೆ. ಇಂತಹ ಸಂದರ್ಭದಲ್ಲಿ ಆರೋಗ್ಯಕರ ಜೀವನಶೈಲಿ ಮತ್ತು ಆರೈಕೆಯಿಂದ ಈ ಹಂತವನ್ನು ಸುಲಭವಾಗಿ ಎದುರಿಸಬಹುದು. ಈ ಕುರಿತು, ಬೆಂಗಳೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಸಂಹಿತಾ ಸಿದ್ಧಾಂತ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸಂಹಿತಾ ಉಲ್ಲೋಡು ಅವರು ಟಿವಿ9 ಕನ್ನಡ ಜೊತೆ ಹಂಚಿಕೊಂಡಿದ್ದು ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಡಾ. ಸಂಹಿತಾ ಉಲ್ಲೋಡು ಅವರು ಹೇಳುವ ಪ್ರಕಾರ, ಮೆನೋಪಾಸ್ ಸಮಯದಲ್ಲಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಲವು ರೀತಿಯ ಬದಲಾವಣೆಗಳು ಉಂಟಾಗುತ್ತದೆ. ಹಾಗಂತ ಇದಕ್ಕೆ ಭಯಪಡುವ ಅವಶ್ಯಕತೆಯೂ ಇರುವುದಿಲ್ಲ. ಇದಕ್ಕೆ ಹಲವು ಪರಿಹಾರಗಳಿದ್ದು, ಇವುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು.

ಆಹಾರದಲ್ಲಿ ಸಮತೋಲನ:

ಮೆನೋಪಾಸ್ ನಂತರ ಎಲುಬುಗಳ ಸಾಂದ್ರತೆ ಕಡಿಮೆಯಾಗುವ ಅಪಾಯ ಹೆಚ್ಚಾಗಿರುತ್ತದೆ. ಆದ್ದರಿಂದ ಕ್ಯಾಲ್ಸಿಯಂ ಮತ್ತು ವಿಟಮಿನ್- ಡಿಯುಕ್ತ ಆಹಾರಗಳನ್ನು ಅಂದರೆ ಹಾಲು, ಮೊಸರು, ಎಳ್ಳು, ಹಸಿರು ಸೊಪ್ಪುಗಳನ್ನು ನಿಯಮಿತವಾಗಿ ಸೇವನೆ ಮಾಡುವುದು ಅಗತ್ಯ. ಜೊತೆಗೆ ಪ್ರೋಟೀನ್ ಯುಕ್ತ ಆಹಾರಗಳಾದ, ಹಣ್ಣು- ತರಕಾರಿ, ಧಾನ್ಯಗಳನ್ನು ದೈನಂದಿನ ಆಹಾರದಲ್ಲಿ ಸೇವನೆ ಮಾಡಬೇಕು. ಅತಿಯಾದ ಸಕ್ಕರೆ, ಉಪ್ಪು, ಪ್ಯಾಕೇಜ್ಡ್ ಮತ್ತು ತೈಲಯುಕ್ತ ಆಹಾರಗಳನ್ನು ಕಡಿಮೆ ಮಾಡುವುದು ಒಳಿತು.

ನಿಯಮಿತ ವ್ಯಾಯಾಮ:

ಮೆನೋಪಾಸ್ ಸಮಯದಲ್ಲಿ ತೂಕ ಹೆಚ್ಚಳ ಮತ್ತು ಎಲುಬು- ಸಂಧಿ ನೋವು ಸಾಮಾನ್ಯ. ಹಾಗಾಗಿ ಪ್ರತಿದಿನ 30 ರಿಂದ 40 ನಿಮಿಷಗಳ ಕಾಲ ನಡೆಯುವುದು, ಯೋಗ, ಪ್ರಾಣಾಯಾಮ, ಲಘು ಶಕ್ತಿ ಅಭ್ಯಾಸಗಳು ದೇಹದ ಮೆಟಾಬಾಲಿಸಂ ಸುಧಾರಿಸಿ, ಮನೋಸ್ಥಿತಿ ಸರಿಪಡಿಸುತ್ತವೆ. ಯೋಗದಲ್ಲಿ ಬದ್ಧಕೋಣಾಸನ, ಭುಜಂಗಾಸನ, ವಜ್ರಾಸನ, ಶವಾಸನ ಹಂತಗಳು ವಿಶೇಷವಾಗಿ ಸಹಾಯಕವಾಗುತ್ತದೆ.

ಮಾನಸಿಕ ಆರೈಕೆ:

ದಿನನಿತ್ಯ 10- 15 ನಿಮಿಷ ಧ್ಯಾನ, ಪ್ರಾಣಾಯಾಮ, ಮನಸ್ಸನ್ನು ಪ್ರಸನ್ನವಾಗಿಡುವ ಹವ್ಯಾಸಗಳು ಅಂದರೆ ಪಠಣ, ಸಂಗೀತ, ತೋಟಗಾರಿಕೆ ಮಾಡುವುದು ಉಪಯುಕ್ತ. ಅಗತ್ಯವಿದ್ದರೆ ಪರಿಣಿತರಿಂದ ಕೌನ್ಸೆಲಿಂಗ್ ಪಡೆಯುವುದು ಉತ್ತಮ.

ಇದನ್ನೂ ಓದಿ: ಹೆರಿಗೆ ನಂತರ ಮುಟ್ಟು ಯಾವಾಗ ಬರಬೇಕು ಎಂಬುದು ತಿಳಿದಿದೆಯೇ?

ರಾತ್ರಿ ಬೆವರುವಿಕೆ:

ಇದಕ್ಕೆ ಎಳನೀರು, ಶತಾವರಿ ಹಾಲು ಉಪಯುಕ್ತ ಅದರ ಜೊತೆಗೆ ತಂಪಾದ ಪರಿಸರದಲ್ಲಿ ವಾಯುವಿಹಾರ, ಕಾಫಿ/ ಚಹಾ/ಮಸಾಲೆ ಹೆಚ್ಚಿರುವ ಆಹಾರಗಳ ಬಳಕೆಯನ್ನು ಕಡಿಮೆ ಮಾಡುವುದು ಈ ಲಕ್ಷಣಗಳನ್ನು ತಗ್ಗಿಸುತ್ತದೆ. ಇದೆಲ್ಲದರ ಜೊತೆಗೆ ಸಾಕಷ್ಟು ನೀರು ಕುಡಿಯುವುದು ಅಗತ್ಯ.

ಜನನಾಂಗ ಮತ್ತು ಮೂತ್ರನಾಳ ಆರೈಕೆ:

ಈ ಅವಧಿಯಲ್ಲಿ ಯೋನಿ ಸುರಕ್ಷತೆ ಮತ್ತು ಸೋಂಕಿನ ಸಮಸ್ಯೆಗಳು ಹೆಚ್ಚಳವಾಗಬಹುದು. ಹಾಗಾಗಿ ನೀರು ಹೆಚ್ಚು ಕುಡಿಯುವುದು, ಸ್ವಚ್ಛತೆ ಕಾಪಾಡುವುದು, ಕೊಬ್ಬರಿ ಎಣ್ಣೆ ಬಳಕೆ ಮಾಡಬಹುದು ಅವಶ್ಯಕ.

ನಿಯಮಿತ ಆರೋಗ್ಯ ತಪಾಸಣೆ:

ರಕ್ತದ ಒತ್ತಡ, ಸಕ್ಕರೆ, ಲಿಪಿಡ್ ಪ್ರೊಫೈಲ್, ಥೈರಾಯ್ಡ್, ಮ್ಯಾಮೋಗ್ರಾಫಿ, ಪ್ಯಾಪ್ ಸ್ಮಿಯರ್ ಮುಂತಾದ ಮೂಲ ಪರಿಶೀಲನೆಗಳನ್ನು ವರ್ಷಕ್ಕೊಮ್ಮೆ ಮಾಡಿಸಿಕೊಳ್ಳುವುದು ಅತ್ಯವಶ್ಯಕ. ಆದರೆ ನಿರಂತರ ರಕ್ತಸ್ರಾವ, ತೀವ್ರ ನೋವು, ಅನಿರೀಕ್ಷಿತ ತೂಕ ಬದಲಾವಣೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು.

ಸಮರ್ಪಕ ನಿದ್ರೆ ಮತ್ತು ಒತ್ತಡ ನಿರ್ವಹಣೆ:

ರಾತ್ರಿ ಚೆನ್ನಾಗಿ ನಿದ್ರೆ ಮಾಡಿ ಒತ್ತಡ ಕಡಿಮೆ ಮಾಡಿಕೊಂಡರೆ ಮೆನೋಪಾಸ್ ನಿಂದ ಆಗುವ ಹಲವಾರು ತೊಂದರೆಗಳನ್ನು ತಡೆಯಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅರಮನೆ ಮೈದಾನದಲ್ಲಿ ರಿಸೆಪ್ಷನ್: ಶ್ರೀಲಂಕಾ ಹನಿಮೂನ್ ಟ್ರಿಪ್​ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ – Kannada News | Newly married Bengaluru Ganavi Suicide: Grandmother Alleged On Husband Family

ಬೆಂಗಳೂರು, (ಡಿಸೆಂಬರ್ 26): ಬೆಂಗಳೂರಿನ (Bengaluru) ಪ್ಯಾಲೆಸ್‌ ಗ್ರೌಂಡ್‌ನಲ್ಲಿ (Palace Ground) ಅದ್ದೂರಿ ರಿಸೆಪ್ಷನ್ ಮಾಡಿಕೊಂಡು ಶ್ರೀಲಂಕಾಕ್ಕೆ (Srilanka) ಹನಿಮೂನ್ ಹೋಗಿದ್ದ ನವದಂಪತಿ ಅರ್ಧದಲ್ಲೇ ಮನೆಗೆ ವಾಪಸ್ಸಾಗಿದ್ದು, ಬಳಿಕ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ (Ramamurthy Nagar) ಈ ಘಟನೆ ನಡೆದಿದ್ದು, 26 ವರ್ಷದ ಗಾನವಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಕ್ಟೋಬರ್ 29ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟು, ಪ್ಯಾಲೆಸ್‌ ಗ್ರೌಂಡ್‌ನಲ್ಲಿ ಅದ್ದೂರಿಯಾಗಿ ರಿಸೆಪ್ಷನ್ ಮಾಡಿಕೊಂಡಿದ್ದರು. ಕಳೆದ ಹತ್ತು ದಿನಗಳ ಹಿಂದೆ ಶ್ರೀಲಂಕಾಗೆ ಹನಿಮೂನ್‌ಗೆಂದು ಹೋಗಿದ್ದರು. ಆದ್ರೆ, ಅಲ್ಲಿ ಅದೇನಾಯ್ತೋ ಏನೋ ಅರ್ಧಕ್ಕೆ ಶ್ರೀಲಂಕಾದಿಂದ ಇಬ್ಬರು ವಾಪಸ್ಸಾಗಿದ್ದರು. ಬಳಿಕ ನೇಣಿಗೆ ಹಾಕಿಕೊಳ್ಳಲು ಯತ್ನಿಸಿದ್ದಾರೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಇನ್ನು ಈ ಬಗ್ಗೆ ಮೃತ ಗಾನವಿ ದೊಡ್ಡಮ್ಮ ಮಾತನಾಡಿದ್ದು, ಗಾನವಿ ಗಂಡ ಸೂರಜ್​​​ ಗಂಡಸ್ತನದ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹನಿಮೂನ್​​ಗೆಂದು ಶ್ರೀಲಂಕಾಕ್ಕೆ ಹೋಗಿದ್ದರು. ಆದ್ರೆ, ಅಲ್ಲಿ ಹೆಂಡ್ತಿನ ಟಚ್​​ ಸಹ ಮಾಡಿಲ್ಲ. ನಪುಂಸಕ ಮಗನಿಗೆ ಮದುವೆ ಯಾಕೆ ಮಾಡಿದ್ರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

BEML Recruitment 2025: BEMLನಲ್ಲಿ 27 ಮ್ಯಾನೇಜರ್ ಹುದ್ದೆಗೆ ನೇಮಕಾತಿ; 50,000 ರಿಂದ 2,80,000 ರೂ. ತಿಂಗಳ ವೇತನ – Kannada News | BEML Manager Recruitment 2025: 27 Vacancies in Karnataka Apply Now!

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್(BEML) ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಮೈಸೂರು, ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 10ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

BEML ಹುದ್ದೆಯ ಅಧಿಸೂಚನೆ:

  • ಸಂಸ್ಥೆಯ ಹೆಸರು : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ( BEML )
  • ಹುದ್ದೆಗಳ ಸಂಖ್ಯೆ: 27
  • ಉದ್ಯೋಗ ಸ್ಥಳ: ಮೈಸೂರು, ಬೆಂಗಳೂರು
  • ಹುದ್ದೆಯ ಹೆಸರು: ಮ್ಯಾನೇಜರ್
  • ಸಂಬಳ: ತಿಂಗಳಿಗೆ 50,000 – 2,80,000 ರೂ.

ಶೈಕ್ಷಣಿಕ ಅರ್ಹತೆ:

BEML ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ CA. CMA, ಪದವಿ, BE/ B.Tech, MBA, ಸ್ನಾತಕೋತ್ತರ ಪದವಿ/ ಡಿಪ್ಲೊಮಾ, MA, PGDM ಅನ್ನು ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ:

ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ST/ PwD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಆಯ್ಕೆ ಪ್ರಕ್ರಿಯೆ:

  • ಸಂದರ್ಶನ
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲನೆಯದಾಗಿ BEML ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • BEML ಮ್ಯಾನೇಜರ್ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • BEML ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • BEML ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಗೆ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗಾನವಿ ಸಾವು ಪ್ರಕರಣ: ‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಒಂದು ದಿನವೂ ಮಲಗಿಲ್ಲ ಅವನು!’

ಬೆಂಗಳೂರು, ಡಿ.26: ಬೆಂಗಳೂರು, ರಾಮಮೂರ್ತಿನಗರದಲ್ಲಿ ನವ ವಿವಾಹಿತೆ ಗಾನವಿ ಮದುವೆಯಾದ ಕೇವಲ ಒಂದೂವರೆ ತಿಂಗಳಿಗೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ವರದಕ್ಷಿಣೆ ಕಿರುಕುಳ ಮತ್ತು ಮಾನಸಿಕ ಹಿಂಸೆಯ ಆರೋಪಕ್ಕೆ ಸಂಬಂಧಿಸಿದೆ. ಗಾನವಿ ಅವರ ಚಿಕ್ಕಪ್ಪ ಕಾರ್ತಿಕ್ ನೀಡಿರುವ ಹೇಳಿಕೆ ಪ್ರಕಾರ, ಮದುವೆಯಾದ ಮರುದಿನದಿಂದಲೇ ಗಾನವಿ ಪತಿ ಸೂರಜ್ ಆಭರಣ, ಆಸ್ತಿ ಹಾಗೂ ಕಾರಿಗಾಗಿ ನಿರಂತರ ಕಿರುಕುಳ ನೀಡುತ್ತಿದ್ದರು. ಅಲ್ಲದೆ, ಸೂರಜ್ ಅವರು ಗಾನವಿ ಜೊತೆ ದೈಹಿಕ ಸಂಪರ್ಕ ಹೊಂದಲು ನಿರಾಕರಿಸಿ, ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಕಾರ್ತಿಕ್ ಆರೋಪಿಸಿದ್ದಾರೆ. ಮದುವೆಗೂ ಮುನ್ನ ವರದಕ್ಷಿಣೆ ಕೇಳಿರಲಿಲ್ಲ, ಆದರೆ ಮದುವೆಯ ನಂತರ ಕಿರುಕುಳ ಶುರುವಾಗಿದೆ. ಗಾನವಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕುಟುಂಬಸ್ಥರು ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಪತಿ ಸೂರಜ್, ಅವರ ಅಣ್ಣ ಸಂಜಯ್ ಮತ್ತು ತಾಯಿ ಜಯಂತಿ ವಿರುದ್ಧ ದೂರು ದಾಖಲಾಗಿದ್ದು, ಮೂವರೂ ತಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಚಿವ ಸೋಮಣ್ಣ ಎದುರೇ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ – Kannada News | Ramanagara: Heated Argument Between MLA Iqbal Hussain and City Municipal Council President in Front of Minister V Somanna

ರಾಮನಗರ, ಡಿಸೆಂಬರ್ 26: ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಹಾಗೂ ನಗರಸಭೆ ಅಧ್ಯಕ್ಷರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರ ಎದುರೇ ಈ ಘಟನೆ ನಡೆದಿರುವುದು ವಿಶೇಷ. ರಾಮನಗರಕ್ಕೆ ರೈಲ್ವೆ ಕಾಮಗಾರಿಗಳ ವೀಕ್ಷಣೆಗೆ ಆಗಮಿಸಿದ್ದ ಸಚಿವ ವಿ. ಸೋಮಣ್ಣ ಅವರ ಎದುರಲ್ಲೇ, ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹಾಗೂ ರಾಮನಗರ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ನಡುವೆ ಮಾತಿನ ಜಟಾಪಟಿ ಆರಂಭವಾಯಿತು. ಕೆಲಕಾಲ ಇಬ್ಬರ ನಡುವಿನ ವಾಗ್ವಾದ ತೀವ್ರಗೊಂಡಿತು. ಪರಿಸ್ಥಿತಿ ಕೈ ಮೀರುವ ಲಕ್ಷಣ ಕಾಣುತ್ತಿದ್ದಂತೆಯೇ ಸಚಿವ ವಿ. ಸೋಮಣ್ಣ ಮಧ್ಯ ಪ್ರವೇಶಿಸಿ ನಗರಸಭೆ ಅಧ್ಯಕ್ಷರನ್ನು ಸಮಾಧಾನಪಡಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೈಸೂರು ಅರಮನೆ ಬಳಿ ಸ್ಫೋಟ: ಹತ್ತಾರು ಅನುಮಾನ; ಇಬ್ಬರ ವಿಚಾರಣೆ – Kannada News | Major Twist in Mysuru Palace Helium Blast Case as NIA Enters Probe

ಮೈಸೂರು, ಡಿಸೆಂಬರ್​​ 26: ಮೈಸೂರು ಅರಮನೆ ಬಳಿ ಸಂಭವಿಸಿದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ದೊರೆತಿದೆ. ಆರಂಭದಲ್ಲಿ ಇದೊಂದು ಸಾಮಾನ್ಯ ಸ್ಫೋಟ, ಬಹುಶಃ ಗ್ಯಾಸ್ ತುಂಬಿಸುವ ವೇಳೆ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಈಗ ಈ ಘಟನೆಯಲ್ಲಿ ಹಲವು ಗಂಭೀರ ವಿಚಾರಗಳು ಅಡಗಿವೆ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳ ತಂಡ ಮೈಸೂರಿಗೆ ಆಗಮಿಸಲಿದೆ. ಘಟನೆಯಲ್ಲಿ ಮೃತಪಟ್ಟಿರೋ ಸಲೀಂ ಜತೆ ವಾಸವಿದ್ದ ಇಬ್ಬರನ್ನು ಪೊಲೀಸರು ಈಗಾಗಲೇ ವಿಚಾರಣೆಗೆ ಕರೆದೊಯ್ದಿದ್ದಾರೆ.ಪ್ರತಿ ದಿನ ಸಲೀಂ ಜೊತೆ ಬಲೂನ್ ಮಾರಲು ಹೋಗುತ್ತಿದ್ದ ಈ ಇಬ್ಬರು, ನಿನ್ನೆ ರೂಂನಲ್ಲಿಯೇ ಇದ್ದರು ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ದಾವಣಗೆರೆ: ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ – Kannada News | CM Siddaramaiah and DCM D.K. Shivakumar Fly Together to Davangere Amidst Political Buzz

ದಾವಣಗೆರೆ. ಡಿಸೆಂಬರ್​​ 27: ಸಿಎಂ ಕುರ್ಚಿ ವಿಚಾರವಾಗಿ ರಾಜ್ಯ ಕಾಂಗ್ರೆಸ್​​ನಲ್ಲಿ ಬಣ ಬಡಿದಾಟದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ದಾವಣಗೆರೆಗೆ ಒಂದೇ ಹೆಲಿಕಾಪ್ಟರ್​ನಲ್ಲಿ ಜಂಟಿಯಾಗಿ ಪ್ರಯಾಣಿಸಿದ್ದಾರೆ. ನಾಯಕರ ಈ ಜಂಟಿ ಪ್ರಯಾಣ ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನವಾ ಎಂಬ ಪ್ರಶ್ನೆಯೂ ಉದ್ಭವಿಸಿದೆ. ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್​​ ಮಟ್ಟದಲ್ಲೂ ವಿಷಯ ಚರ್ಚೆ ನಡೆಯುತ್ತಿರುವ ಹೊತ್ತಲ್ಲಿ ಸಿಎಂ ಮತ್ತು ಡಿಸಿಎಂ ನಡೆ ನಾನಾ ರಾಜಕೀಯ ವಿಶ್ಲೇಷಣೆಗೆ ಒಳಗಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ? ಯಾರು ಏನು ಬೇಕಾದ್ರೂ ಮಾರಾಟ ಮಾಟಬಹುದಾ? ಸಚಿವರು ಹೇಳಿದ್ದಿಷ್ಟು – Kannada News | Are Vendors Being Monitored Near Mysuru Palace? Minister Mahadevappa Clarifies Rules, Helium Cylinder Blast

ಮೈಸೂರು, ಡಿಸೆಂಬರ್ 28: ಅರಮನೆ ಬಳಿ ಸಂಭವಿಸಿದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಸಚಿವ ಡಾ. ಹೆಚ್​.ಸಿ.ಮಹದೇವಪ್ಪ ಪ್ರತಿಕ್ರಿಯಿಸಿದ್ದು, ಭವಿಷ್ಯದಲ್ಲಿ ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಭರವಸೆ ನೀಡಿದರು. ಸೀಸನಲ್ ವ್ಯಾಪಾರಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ವ್ಯವಸ್ಥೆ ರೂಪಿಸಲಾಗಿದ್ದು, ಅಪಾಯಕಾರಿ ರಾಸಾಯನಿಕಗಳನ್ನು ಬಳಸಿ ಬಲೂನ್ ತಯಾರಿಸುವುದನ್ನು ನಿಷೇಧಿಸುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಿದೆ. ಪ್ರವಾಸಿ ತಾಣಗಳಲ್ಲಿ ಸುರಕ್ಷತೆಯನ್ನು ಖಾತ್ರಿಪಡಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವರು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಲಕ್ಷ್ಮಿ ಮತ್ತು ಮಂಜುಳಾ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಕೊಟ್ರೇಶ್ ಅವರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿಸಿದರು. ಎಲ್ಲಾ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಭರವಸೆ ನೀಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಪ್ರಧಾನಿ ಮೋದಿ ಕಾರ್ಯಕ್ರದ ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ – Kannada News | Flower Pots Installed for City Beautification Go Missing After PM’s Lucknow Visit

ಲಕ್ನೋ, ಡಿಸೆಂಬರ್ 26: ಪ್ರಧಾನಿ ನರೇಂದ್ರ ಮೋದಿ ಲಕ್ನೋಗೆ ಭೇಟಿ ನೀಡಿದ್ದರು. ಆದರೆ ಅವರ ಕಾರ್ಯಕ್ರಮದ ಬಳಿಕ ವೈರಲ್ ಆದ ವಿಡಿಯೋ ತೀವ್ರ ಮುಜುಗರವನ್ನುಂಟು ಮಾಡಿದೆ. ಪ್ರಧಾನಿಯವರ ಕಾರ್ಯಕ್ರಮಕ್ಕೂ ಮುನ್ನ ಇಡೀ ನಗರವನ್ನು ಹಸಿರು ಗಿಡಗಳು, ಹೂವಿನ ಕುಂಡಗಳಿಂದ ಅಲಂಕರಿಸಲಾಗಿತ್ತು. ಕಾರ್ಯಕ್ರಮ ಮುಗಿಯುತ್ತಿದ್ದಂತೆ ಜನರು ಹೂವಿನ ಪಾಟ್​ಗಳನ್ನು ಕದ್ದೊಯ್ಯುತ್ತಿರುವ ವಿಡಿಯೋ ವೈರಲ್ ಆಗಿದೆ.

ಹಸಿರನ್ನು ಹೆಚ್ಚಿಸಲು ಮತ್ತು ಲಕ್ನೋದ ಸ್ವಚ್ಛ, ದೃಶ್ಯ ಆಕರ್ಷಕ ಚಿತ್ರಣವನ್ನು ಪ್ರಸ್ತುತಪಡಿಸಲು ನೂರಾರು ಅಲಂಕಾರಿಕ ಹೂವಿನ ಕುಂಡಗಳನ್ನು ಇರಿಸಲಾಗಿತ್ತು. ಧಾನಿ ನಿರ್ಗಮಿಸಿದ ಕೂಡಲೇ ಮತ್ತು ಭದ್ರತಾ ವ್ಯವಸ್ಥೆಗಳನ್ನು ಸಡಿಲಿಸಿದ ನಂತರ, ಹಲವಾರು ವ್ಯಕ್ತಿಗಳು ಹೂವಿನ ಕುಂಡಗಳನ್ನು ವೈಯಕ್ತಿಕ ಆಸ್ತಿಯಂತೆ ತೆಗೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಯಾವುದೇ ಭಯ ಅಥವಾ ಹಿಂಜರಿಕೆಯಿಲ್ಲದೆ ಜನರು ಹಗಲಿನಲ್ಲೇ ಜನರು ಇವುಗಳನ್ನು ಹೊತ್ತೊಯ್ದಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link