SSLC ಪರೀಕ್ಷೆಯ ತೃತೀಯ ಭಾಷೆ ಅಂಕಕ್ಕೆ ಕೊಕ್: ನಿರ್ಧಾರ ಪರಿಶೀಲಿಸುವಂತೆ ಸಿಎಸ್ಗೆ ರಾಜ್ಯಪಾಲರ ಪತ್ರ
ಬೆಂಗಳೂರು, ಏಪ್ರಿಲ್ 03: SSLC ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರ ವಿಚಾರ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿಗೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಈ ಕುರಿತು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಲೆಟರ್ ಬರೆದಿದ್ದು, ಸರ್ಕಾರದ ನಿರ್ಧಾರವನ್ನು ಮರು ಪರಿಶೀಲನೆ ಮಾಡುವಂತೆ ತಿಳಿಸಲಾಗಿದೆ. SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳನ್ನು ನೀಡದೆ ಕೇವಲ ಗ್ರೇಡ್ ನೀಡುವ ನಿರ್ಧಾರವನ್ನು ಮರು ಪರಿಶೀಲಿಸಿ. ಭಾಷಾವೈವಿಧ್ಯತೆ, ಜಾಗೃತಿ, ಬೌದ್ಧಿಕ ಬೆಳವಣಿಗೆಯನ್ನು ಬೆಳೆಸುವಲ್ಲಿ ತೃತೀಯ…