ಏರ್‌ಪೋರ್ಟ್‌ಗೆ ಬಂದ ಬಾಕ್ಸ್‌ನಲ್ಲಿತ್ತು ಕೊಳೆತ ಟೊಮೆಟೊ, ಅಶ್ಲೀಲ ಚಿತ್ರಗಳು! ಆರೋಪಿ ಕೊಟ್ಟ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!
ಬೆಂಗಳೂರು, ಏ.3: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೇರೆ ಬೇರೆ ಬೆದರಿಕೆ ಕರೆಗಳು ಬಂದಿರುವುದನ್ನು ನೋಡಬಹುದು. ಆದರೆ ಇದೀಗ ವಿಚಿತ್ರ ಘಟನೆಯೊಂದು ನಡೆದಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲೂ ಭಾರೀ ವೈರಲ್ ಆಗಿದೆ. ವಿಮಾನ ನಿಲ್ದಾಣದ ಆಡಳಿತ ಕಚೇರಿಗೆ ಅಸಾಮಾನ್ಯ ವಸ್ತುಗಳನ್ನು ಒಳಗೊಂಡಿರುವ ಬಾಕ್ಸ್ವೊಂದು ಬಂದಿದೆ. ಈ ವಿಚಿತ್ರ ಪಾರ್ಸೆಲ್ ಅನ್ನು ಕಳುಹಿಸಿದ ಆರೋಪದ ಮೇಲೆ ಭಾರತೀಯ ಮೂಲದ 65 ವರ್ಷದ ಡಚ್ ಪ್ರಜೆಯನ್ನು ಬಂಧಿಸಲಾಗಿದೆ. ಸುಭಾಷ್ ಜೈ ಅಜೀಜ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯನ್ನು ಬುಧವಾರ…