ಇಂದೋರ್, ಏಪ್ರಿಲ್ 03: ಇಂದೋರ್ನ ವಸತಿ ಪ್ರದೇಶದಲ್ಲಿ ನಡೆದ ಅಪಘಾತ ಎದೆ ಝೆಲ್ಲೆನಿಸುವಂತಿದೆ. ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕನ ಮೇಲೆ ಕಾರೊಂದು ಹರಿದಿದೆ. ಆದರೆ ಕೆಲವೇ ಕ್ಷಣಗಳಲ್ಲಿ ಬಾಲಕ ಎದ್ದು ನಿಂತಿರುವುದು ಪವಾಡವೇ ಸರಿ. ಆರೋಪಿ ಚಾಲಕ ಕಾರನ್ನು ನಿಲ್ಲಿಸಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಅಲ್ಲಿ ವೈದ್ಯರು ಮಗುವನ್ನು ಪರೀಕ್ಷಿಸಿದ್ದಾರೆ. ಬಾಲಕನ ಕಾಲಿನಲ್ಲಿ ಮೂಳೆ ಮುರಿತವಾಗಿದೆ. ಈ ಘಟನೆ ಮಂಗಳವಾರ ಮಧ್ಯಾಹ್ನ ಬಾಂಬೆ ಆಸ್ಪತ್ರೆಯ ಹಿಂಭಾಗದ ಐಷಾರಾಮಿ ಶಾಂತಿ ನಿಕೇತನ ಕಾಲೋನಿಯಲ್ಲಿ ನಡೆದಿದೆ.
ಡಾಲಿ ಧನಂಜಯ್ (Daali Dhananjay) ನಟ ಹಾಗೂ ನಿರ್ಮಾಪಕರಾಗಿ ಸದಾ ಹೊಸತನಕ್ಕೆ ತುಡಿಯುವ ವ್ಯಕ್ತಿ. ಸೀಮಿತ ಬಜೆಟ್‌ನಲ್ಲಿ ಹೊಸ ರೀತಿಯ ಕತೆಗಳನ್ನು ಹೇಳುತ್ತಲೇ ಬರುತ್ತಿದ್ದಾರೆ. ತಾವು ನಿರ್ಮಾಣ ಮಾಡುವ ಜೊತೆಗೆ ಸಿನಿಮಾದ ಭಿನ್ನ ಪಾತ್ರಗಳಲ್ಲಿ ನಟಿಸುತ್ತಾ ಪ್ರತಿಭಾವಂತರಿಗೆ ವೇದಿಕೆಯನ್ನು ಕಲ್ಪಿಸುತ್ತಾ ಬರುತ್ತಿದ್ದಾರೆ. ‘ಬಡವರ ಮಕ್ಳು ಬೆಳಿಬೇಕು’ ಎಂಬ ಮಾತಿಗೆ ಬದ್ಧವಾಗಿ ನಡೆದುಕೊಳ್ಳುತ್ತಾ ಸಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೆ ‘ಹೆಗ್ಗಣ ಮುದ್ದು’ ಸಿನಿಮಾ ಘೋಷಿಸಿದ ಡಾಲಿ ಧನಂಜಯ್ ಇದೀಗ ಮತ್ತೊಂದು ಹೊಸ ಸಿನಿಮಾವನ್ನು ತಮ್ಮ ನಿರ್ಮಾಣ ಸಂಸ್ಥೆಯಿಂದ ಘೋಷಿಸಿದ್ದು, ಈ ಸಿನಿಮಾಕ್ಕೆ ಡಾಲಿಯ ಎಲ್ಲ ಗೆಳೆಯರು ಒಂದಾಗಿದ್ದಾರೆ.
ಡಾಲಿ ಧನಂಜಯ್ ಮತ್ತು ಅವರ ಮೈಸೂರಿನ ಗೆಳೆಯರು ಕೆಇಬಿ ಹೆಸರಿನ ಯೂಟ್ಯೂಬ್ ಚಾನೆಲ್ ಮಾಡಿ ತಮಾಷೆಯ, ಜಾಗೃತಿಯ ಕಂಟೆಂಟ್ ಹಂಚಿಕೊಳ್ಳುತ್ತಿದ್ದರು. ಇದೀಗ ಆ ಕೆಇಬಿ ಮತ್ತು ಡಾಲಿ ಧನಂಜಯ್ ಅವರ ಡಾಲಿ ಪಿಕ್ಚರ್ಸ್ ಜೊತೆಯಾಗಿ ಹೊಸ ಸಿನಿಮಾ ಘೋಷಣೆ ಮಾಡಿದ್ದು, ಕೆಲ ದಿನಗಳ ಹಿಂದಷ್ಟೆ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದ್ದರು. ಪೋಸ್ಟರ್ನಲ್ಲಿ ಯಾರ ಮುಖವನ್ನೂ ತೋರಿಸಿರಲಿಲ್ಲ ಬದಲಿಗೆ ನಟರೆಲ್ಲ ಕ್ಯಾಮೆರಾಗಿ ಹಿಮ್ಮುಖವಾಗಿ ನಿಂತಿದ್ದರು. ಸಿನಿಮಾದ ಹೆಸರನ್ನು ಸಹ ಬೇರೆ ಬೇರೆ ಭಾಷೆಗಳಲ್ಲಿ ನೀಡಲಾಗಿತ್ತು. ಜೊತೆಗೆ ಸಿನಿಮಾದ ಹೆಸರು ಗೆಸ್ ಮಾಡಿ ಎಂಬ ಸವಾಲನ್ನು ಸಹ ಚಿತ್ರತಂಡವು ಪ್ರೇಕ್ಷಕರಿಗೆ ನೀಡಿತ್ತು.
ಇದೀಗ ಎಲ್ಲ ನಟರ ಮುಖವನ್ನು ತೋರಿಸಲಾಗಿದ್ದು, ಜೊತೆಗೆ ಸಿನಿಮಾದ ಹೆಸರನ್ನು ಸಹ ಅನಾವರಣ ಮಾಡಲಾಗಿದೆ. ಡಾಲಿ ಪಿಕ್ಚರ್ಸ್ ಮತ್ತು ಕೆಇಬಿ ಒಟ್ಟಿಗೆ ಪ್ರೆಸೆಂಟ್ ಮಾಡುತ್ತಿರುವ ಈ ಸಿನಿಮಾದ ಹೆಸರು ‘ಮದರ್ ಪ್ರಾಮಿಸ್’ ಕನ್ನಡದಲ್ಲಿ ಹೇಳುವುದಾದರೆ ‘ತಾಯಾಣೆ’. ಸಿನಿಮಾದ ಪೋಸ್ಟರ್ ನೋಡಿದರೆ ಇದು ಹಾಸ್ಯಮಯ, ಭಾವುಕ ಜೊತೆಗೆ ಥ್ರಿಲ್ಲರ್ ಅಂಶವೂ ಇರುವ ಕತೆ ಎನಿಸುತ್ತದೆ.
ಮೈಸೂರು ಪೂರ್ಣ ಈ ಸಿನಿಮಾದ ಚಿತ್ರಕತೆ ಬರೆದಿದ್ದು, ಅವರೇ ನಿರ್ದೇಶನವನ್ನೂ ಮಾಡಲಿದ್ದಾರೆ. ಸಿನಿಮಾನಲ್ಲಿ ಮೈಸೂರು ಪೂರ್ಣ, ನಾಗಭೂಷಣ, ವಿನಯಾ ಪ್ರಸಾದ್, ಡಾಲಿ ಧನಂಜಯ್, ಗುರುದತ್ ಇವರುಗಳ ಜೊತೆಗೆ ಇನ್ನೂ ಹಲವು ಜನಪ್ರಿಯ ಹಾಸ್ಯ ನಟರುಗಳು ಸಹ ಸಿನಿಮಾನಲ್ಲಿ ನಟಿಸಲಿದ್ದಾರೆ.
ಬಾಗಲಕೋಟೆ, ಏ.3: ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರ ನಡೆಸಿದ ಮಾಜಿ ಸಂಸದ ಪ್ರತಾಪಸಿಂಹ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅವರ ಹೆಸರಷ್ಟೇ ಹಿಂದೂ, ಆದರೆ ಅವರ ಗುಣನಡತೆಗಳಲ್ಲಿ ಹಿಂದೂ ಧರ್ಮದ ಯಾವ ಲಕ್ಷಣವೂ ಕಾಣಿಸುತ್ತಿಲ್ಲ ಎಂದು ಪ್ರತಾಪಸಿಂಹ ಆರೋಪಿಸಿದರು. ಯುಗಾದಿ ಮತ್ತು ದೀಪಾವಳಿ ದಿನದಂದು ಮಾಂಸಾಹಾರ ಸೇವಿಸುವ ಬಗ್ಗೆಯೂ ಟೀಕೆ ಮಾಡಿದ್ದಾರೆ. ಈಗ ಕಾಂಗ್ರೆಸ್ ಪಕ್ಷದವರು ಹಿಂದುತ್ವವನ್ನು ಮಂತ್ರ ಜಪಿಸುತ್ತಿದ್ದಾರೆ ಎಂದು ಟೀಕಿಸಿದ ಪ್ರತಾಪಸಿಂಹ, ನಾಗಮಂಗಲದಲ್ಲಿ ಗಣೇಶ ಶೋಭಾಯಾತ್ರೆ ಮೇಲೆ ಕಲ್ಲು ತೂರಾಟ ನಡೆದಾಗ ಸಣ್ಣಪುಟ್ಟ ಘಟನೆ ಎಂದು ಮುಖ್ಯಮಂತ್ರಿ ಅವರು ಹೇಳಿದ್ದರು. ಅಲ್ಲದೆ, ಸ್ಥಳಕ್ಕೆ ಭೇಟಿ ನೀಡಲಿಲ್ಲ. ಮದ್ದೂರಿನಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ, ಅಣ್ಣಮ್ಮ ಜಾತ್ರೆ ಮೇಲೆ ಕಲ್ಲು ತೂರಾಟ, ಶಿವಾಜಿ ಜಯಂತಿಯಂದು ಚಪ್ಪಲಿ ಮತ್ತು ಕಲ್ಲು ತೂರಾಟ ನಡೆದಾಗ ಸಿದ್ದರಾಮಯ್ಯ ಹಾಗೂ ಅವರ ಸಂಪುಟದ ಸದಸ್ಯರು ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರು. ಕಾಂಗ್ರೆಸ್‌ನವರು ನಿಜವಾದ ಹಿಂದುಗಳಾಗಿದ್ದರೆ ಕಠಿಣ ಕ್ರಮ ಕೈಗೊಳ್ಳುತ್ತಿದ್ದರು ಎಂದು ಅವರು ಹೇಳಿದರು.ಇಡೀ ರಾಜ್ಯದಲ್ಲಿ ಸಮಸ್ಯೆಗಳ ಆಗರವಿದೆ. ರಾಜ್ಯದಲ್ಲಿ ಸಾಲದ ಪ್ರಮಾಣ ಹೆಚ್ಚಾಗಿದ್ದು, ಪ್ರತಿ ಹುಟ್ಟುವ ಮಗುವಿನ ತಲೆಮೇಲೆ ₹1.17 ಲಕ್ಷ ಸಾಲವಿದೆ. ರಾಜ್ಯದ ಒಟ್ಟು ಸಾಲ ₹8.25 ಲಕ್ಷ ಕೋಟಿ ತಲುಪಿದೆ. ಕೆಂಗಲ್ ಹನುಮಂತಯ್ಯನವರಿಂದ ಬಸವರಾಜ್ ಬೊಮ್ಮಾಯಿ ಅವರವರೆಗಿನ ಎಲ್ಲಾ ಮುಖ್ಯಮಂತ್ರಿಗಳು ಮಾಡಿದ ಸಾಲಕ್ಕಿಂತ ಸಿದ್ದರಾಮಯ್ಯ ಅವರು ಮಾಡಿದ ಸಾಲವೇ ಜಾಸ್ತಿಯಾಗಿದೆ. ಸಿದ್ದರಾಮಯ್ಯ ಅವರು “ಸಾಲಾರಾಮಯ್ಯ” ಆಗಿದ್ದಾರೆ ಎಂದು ಅವರು ಟೀಕಿಸಿದರು. ಕಳೆದ ಮೂರು ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಕೆಲಸವಾಗಿಲ್ಲ, ರಸ್ತೆ ಅಥವಾ ಕುಡಿಯುವ ನೀರಿನ ವ್ಯವಸ್ಥೆಯೂ ಸುಧಾರಿಸಿಲ್ಲ ಎಂದು ಪ್ರತಾಪಸಿಂಹ ಆರೋಪಿಸಿದರು.
ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಕಲಹದ ಬಗ್ಗೆಯೂ ಪ್ರತಾಪಸಿಂಹ ಗಮನ ಸೆಳೆದರು. ಮುಖ್ಯಮಂತ್ರಿ ಸ್ಥಾನಕ್ಕಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಪ್ರಯತ್ನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ನಡುವೆ ಒಬ್ಬರು ಮುಖ್ಯಮಂತ್ರಿ ಕುರ್ಚಿಗೆ ಅಂಟಿಕೊಳ್ಳಲು ಯತ್ನಿಸುತ್ತಿದ್ದರೆ, ಇನ್ನೊಬ್ಬರು ಆ ಕುರ್ಚಿಯನ್ನು ಎಳೆಯಲು ಯತ್ನಿಸುತ್ತಿದ್ದಾರೆ. ಅವರಿಬ್ಬರ ಹೊಡೆದಾಟ ಬಿಟ್ಟರೆ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ ಎಂದು ಪ್ರತಾಪಸಿಂಹ ಹೇಳಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ ಈಗಿನ ಸರ್ಕಾರದ “ಲೂಟಿ” ನೋಡಿದ ಬಳಿಕ ಸತ್ತೋ ಹೋಗಿಬಿಟ್ಟ ಮನುಷ್ಯ ಎಂದು ಪ್ರತಾಪಸಿಂಹ ಪರೋಕ್ಷವಾಗಿ ಭ್ರಷ್ಟಾಚಾರವನ್ನು ಆರೋಪಿಸಿದರು. ಇದೀಗ ಈ ಹೇಳಿಕೆ ವಿವಾದಕ್ಕೀಡಾಗಬಹುದು ಎಂದು ಹೇಳಲಾಗಿದೆ.
‘ರಾಮಾಯಣ’ ಚಿತ್ರ ಬಾಲಿವುಡ್‌ನಲ್ಲಿ ಅತ್ಯಂತ ಪ್ರತಿಷ್ಠಿತ ಚಿತ್ರ. ಹಿಂದಿ ಪ್ರೇಕ್ಷಕರು ಮಾತ್ರವಲ್ಲದೆ ತೆಲುಗು ಮತ್ತು ಕನ್ನಡ ಪ್ರೇಕ್ಷಕರು ಕೂಡ ಈ ಚಿತ್ರಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕ ರಣಬೀರ್ ಕಪೂರ್ ರಾಮನ ಪಾತ್ರದಲ್ಲಿ, ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ ನಟಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಈ ಚಿತ್ರದಲ್ಲಿ ರಾವಣನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಚಿತ್ರದಿಂದ ಈಗಾಗಲೇ ಬಿಡುಗಡೆಯಾಗಿರುವ ಪೋಸ್ಟರ್‌ಗಳು ಚಿತ್ರದ ಮೇಲಿನ ನಿರೀಕ್ಷೆಗಳನ್ನು ಹೆಚ್ಚಿಸಿವೆ. ಇತ್ತೀಚೆಗೆ, ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ರಾಮಾಯಣ ಚಿತ್ರದ ಟೀಸರ್ ಅನ್ನು ಹನುಮಾನ್ ಜಯಂತಿಯಂದು ಬಿಡುಗಡೆ ಮಾಡಲಾಯಿತು. ಈ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ.ಈ ಚಿತ್ರದಲ್ಲಿ ಶೂಪರ್ನಖಿಯಾಗಿ ಪ್ರಮುಖ ನಟಿಯೊಬ್ಬರು ಅಭಿಮಾನಿಸಿದ್ದಾರೆ.
‘ರಾಮಾಯಣ’ ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ ಅದ್ಭುತವಾಗಿ ಕಾಣಿಸಿಕೊಂಡರು. ಅದೇ ರೀತಿ, ಸಾಯಿ ಪಲ್ಲವಿ ಕೂಡ ಸೀತೆಯಾಗಿ ಗಮನ ಸೆಳೆಯಲಿದ್ದಾರೆ. ರಾವಣನ ಪಾತ್ರದಲ್ಲಿ ಯಶ್ ಅವರ ಲುಕ್ ಬಹಿರಂಗಗೊಂಡಿಲ್ಲ. ಯಶ್ ಈ ಚಿತ್ರದ ಸಹ-ನಿರ್ಮಾಪಕರಾಗಿಯೂ ಆಗಿದ್ದಾರೆ. ಈ ಚಿತ್ರವನ್ನು ನಮಿತ್ ಮಲ್ಹೋತ್ರಾ ಅವರು ಭಾರಿ ಬಜೆಟ್‌ನಲ್ಲಿ ನಿರ್ಮಿಸುತ್ತಿದ್ದಾರೆ. ‘ರಾಮಾಯಣ’ ಚಿತ್ರವನ್ನು ನಿತೀಶ್ ತಿವಾರಿ ನಿರ್ದೇಶಿಸುತ್ತಿದ್ದಾರೆ.
ಶೂರ್ಪನಖಿ ಪಾತ್ರದಲ್ಲಿ ಸ್ಟಾರ್ ನಾಯಕಿ ನಟಿಸಲಿದ್ದಾರೆ ಎಂದು ತಿಳಿದುಬಂದಿದೆ. ಅವರು ಬೇರೆ ಯಾರೂ ಅಲ್ಲ, ರಾಕುಲ್ ಪ್ರೀತ್ ಸಿಂಗ್. ಈ ಹಿಂದೆ, ಕಾಜಲ್ ಅಗರ್ವಾಲ್ ಅವರನ್ನು ಈ ಪಾತ್ರಕ್ಕೆ ಪರಿಗಣಿಸಲಾಗಿತ್ತು ಎಂದು ಹೇಳಲಾಗಿತ್ತು. ಆದರೆ ಈಗ ಅವರ ಜಾಗಕ್ಕೆ ರಕುಲ್ ಪ್ರವೇಶಿಸಿದ್ದಾರೆ. ಸೀತೆಗಿಂತ ಶೂರ್ಪನಖಿ ಹೆಚ್ಚು ಸುಂದರಿ ಎಂಬ ಕಾರಣಕ್ಕೆ ಕಾಜಲ್ ಅವರನ್ನು ಕೈಬಿಡಲಾಗಿದೆ ಎಂದು ಬಿ-ಟೌನ್‌ನಲ್ಲಿ ಹೇಳಲಾಗುತ್ತಿದೆ. ರಾಕುಲ್ ಅವರ ಸ್ಥಾನದಲ್ಲಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಕೋಲಾರ, ಏಪ್ರಿಲ್ 3: ಕೋಲಾರದ ಸೆಷನ್ಸ್ ಕೋರ್ಟ್ ಒಳಗೆ ಕಬೋರ್ಡ್ನಲ್ಲಿ ದಾಖಲೆಗಳ ಮಧ್ಯೆ ಹಾವು ಕಾಣಿಸಿಕೊಂಡು ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಉರಗ ರಕ್ಷಕ ನಾಗರಾಜ್, ಅದು ಕೇರೆ ಹಾವು ಎಂಬುದನ್ನು ಗಮನಿಸಿದ್ದು, ಅದನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಅಲ್ಲದೆ, ಕೇರೆ ಹಾವಿನ ಬಗ್ಗೆ ಜಾಗೃತಿಯ ಮಾತುಗಳನ್ನಾಡಿದ್ದಾರೆ. ಸದ್ಯ ಈ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಬೆಂಗಳೂರು, ಏಪ್ರಿಲ್ 3: ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿಗೆ ಬಂದಿದೆ. ನಿನ್ನೆ ಗುರುವಾರ 230 ರೂಗಳಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ (Gold Rates) ಇಂದು ಶುಕ್ರವಾರ 180-200 ರೂಗಳಷ್ಟು ಹೆಚ್ಚಳಗೊಂಡಿದೆ. ಈ ವಾರದ ಹೆಚ್ಚಿನ ದಿನಗಳು ಬಂಗಾರದ ಬೆಲೆಯಲ್ಲಿ ಏರಿಕೆ ಆಗಿದೆ. ವಿದೇಶಗಳಲ್ಲಿ ಏರಿಳಿತಗಳು ಹೆಚ್ಚಿವೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಇವತ್ತು ಯಾವ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,38,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,50,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,38,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 3ಕ್ಕೆ)
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,093 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,835 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,320 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,093 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,835 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ರಾಶಿಕಾ ಶೆಟ್ಟಿ ಹಾಗೂ ಸೂರಜ್ ಸಿಂಗ್ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಒಳ್ಳೆಯ ಬಾಂಧವ್ಯ ಬೆಳೆಸಿಕೊಂಡಿದ್ದರು. ಬಿಗ್ ಬಾಸ್ನಿಂದ ಹೊರ ಬಂದ ಬಳಿಕವೂ ಇಬ್ಬರ ಮಧ್ಯೆ ಫ್ರೆಂಡ್ಶಿಪ್ ಬೆಳೆದಿದೆ. ಈಗ ಸೂರಜ್ ಅವರು ‘ಪವಿತ್ರ ಬಂಧನ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈಗ ಸೂರಜ್ ಸಿಂಗ್ ಸಿಂಗ್ ಅವರು ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ಗೆ ಬಂದಿದ್ದಾರೆ. ಈ ವೇಳೆ ರಾಶಿಕಾ-ಪವಿತ್ರಾ ಮಧ್ಯೆ ಯಾರು ಇಷ್ಟ ಎಂದು ಕೇಳಿದಾಗ ಪವಿತ್ರಾ ಹೆಸರನ್ನು ಸೂರಜ್ ತೆಗೆದುಕೊಂಡಿದ್ದಾರೆ.
ಬೆಂಗಳೂರು, ಏಪ್ರಿಲ್ 03: ನಗರದ ಕಬ್ಬನ್ ಪಾರ್ಕ್ನಲ್ಲಿ (Cubbon park)ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂದು ತಿಳಿದು ಬಂದಿಲ್ಲ. ಸಧ್ಯಕ್ಕೆ ಕಬ್ಬನ್ ಪಾರ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಹಿಂದಿನ ದಿನವೇ ಕಾಣೆಯಾಗಿದ್ದ ವ್ಯಕ್ತಿ
ಗುರುವಾರದಿಂದಲೇ ಕಾಣೆಯಾಗಿದ್ದ ಕಬ್ಬನ್ ಪೇಟೆ ಸುರೇಶ್, ಮನೆಗೆ ಮರಳಿರಲಿಲ್ಲ. ಈ ಬಗ್ಗೆ ಹೆಚ್ಎಸ್ಆರ್ ಪೊಲೀಸ್ ಠಾಣೆಗೆ ಆತನ ಕುಟುಂಬಸ್ಥರು ದೂರು ನೀಡಿದ್ದರು. ಇಂದು ಬೆಳಗ್ಗೆ ಪಾರ್ಕ್‌ನ ಮರೊಂದಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಕಬ್ಬನ್ ಪಾರ್ಕ್ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೃತನ ಜೇಬಿನಲ್ಲಿ ಐಡಿ ಕಾರ್ಡ್ ಲಭಿಸಿದ್ದು, ಆತ ಬೆಂಗಳೂರಿನ ಎಸ್ಪಿ ರೋಡ್ನಲ್ಲಿರುವ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಡೆತ್ನೋಟ್ ಸಿಕ್ಕಿಲ್ಲ
ಐಡಿ ಕಾರ್ಡ್ ಹೊರತುಪಡಿಸಿ ಮೃತನ ಬಳಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಯಾವುದೇ ಡೆತ್ನೋಟ್ ಲಭಿಸಿಲ್ಲವೆಂದು ಪೊಲೀಸರು ಹೇಳಿದ್ದಾರೆ. ನಂತರ ಆತನ ಕುಟುಂಬಕ್ಕೆ ಮಾಹಿತಿ ತಿಳಿಸಿದ ಅಧಿಕಾರಿಗಳು, ಘಟನೆ ಸಂಬಂಧ ಕಬ್ಬನ್ ಪಾರ್ಕ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆತ್ಮಹತ್ಯೆಗೆ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.
ಬೆಳ್ತಂಗಡಿ, ಏ.3: ತುಳುನಾಡಿನ ಪವಿತ್ರ ಹಾಗೂ ವಿಶಿಷ್ಟ ಆಚರಣೆಗಳಲ್ಲಿ ಒಂದಾದ ‘ಸಿರಿ ಆಲಡೆ’ ಉತ್ಸವವು ನಿಡಿಗಲ್‌ನ ಶ್ರೀ ಲೋಕನಾಥೇಶ್ವರ ಸಿರಿ ಕ್ಷೇತ್ರದಲ್ಲಿ ಭಕ್ತಿ-ಸಂಭ್ರಮದಿಂದ ಜರುಗಿತು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ಈ ಅಪರೂಪದ ಧಾರ್ಮಿಕ ವಿಧಿಯ ಸಡಗರಕ್ಕೆ ಸಾಕ್ಷಿಯಾದರು. ತುಳುನಾಡಿನ ಆರಾಧ್ಯ ದೈವಗಳಾದ ಸಿರಿ, ಸೋಮು, ಅಬ್ಬಗ-ದಾರಗ ಹಾಗೂ ಕುಮಾರ ದೈವಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸಿರಿಯ ಪುರಾಣವನ್ನು ಹಾಡುವ ಮೂಲಕ ಭಕ್ತರು ತಮ್ಮ ಭಕ್ತಿ ಸಮರ್ಪಿಸಿದರು. ದೇವಸ್ಥಾನದ ಆವರಣದಲ್ಲಿ ನಡೆಯುವ ‘ದರ್ಶನ’ ಮತ್ತು ‘ಪಾಡ್ದನ’ ಗಾಯನಗಳು ಭಕ್ತರಲ್ಲಿ ಧಾರ್ಮಿಕ ಭಾವನೆಯನ್ನು ಮತ್ತಷ್ಟು ಹೆಚ್ಚಿಸಿದೆ. ನೂರಾರು ಮಂದಿ ಮಹಿಳೆಯರು ‘ಸಿರಿ’ಯಾಗಿ ದರ್ಶನ ಪಡೆದು ಅಭಯ ನೀಡಿದರು. ನಿಡಿಗಲ್ ಲೋಕನಾಥೇಶ್ವರ ಕ್ಷೇತ್ರವು ಸಿರಿ ಆರಾಧನೆಗೆ ಅತ್ಯಂತ ಶ್ರೇಷ್ಠವೆಂದು ನಂಬಲಾಗಿದ್ದು, ಕರಾವಳಿಯ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸಿ ಹರಕೆ ತೀರಿಸಿದರು. ಸಿರಿ ಆಲಡೆ ಉತ್ಸವವು ಕೇವಲ ಒಂದು ಹಬ್ಬವಲ್ಲ, ಇದು ತುಳುನಾಡಿನ ಸಾಂಸ್ಕೃತಿಕ ಪರಂಪರೆಯ ಪ್ರತಿಬಿಂಬ. ಕುಟುಂಬದ ಏಳಿಗೆ, ಆರೋಗ್ಯ ಮತ್ತು ಸುಖ-ಶಾಂತಿಗಾಗಿ ಈ ಕ್ಷೇತ್ರದಲ್ಲಿ ಪ್ರಾರ್ಥಿಸುವುದು ಇಲ್ಲಿನ ವಿಶೇಷತೆಯಾಗಿದೆ
ಅಯೋಧ್ಯೆ, ಏಪ್ರಿಲ್ 03: ಅಯೋಧ್ಯೆಯಲ್ಲಿ ಹಗಲು ದರೋಡೆ ನಡೆದಿದೆ. ಬುರ್ಖಾಧಾರಿ ಮಹಿಳೆಯೊಬ್ಬಳು ಬಂದೂಕು ತೋರಿಸಿ ಆಭರಣದಂಗಡಿ ದೋಚಿರುವ ಘಟನೆ ನಡೆದಿದೆ. ರುಡೌಲಿ ಪೊಲೀಸ್ ಠಾಣೆ ಪ್ರದೇಶದ ಅಗರ್ವಾಲ್ ಕಾಂಪ್ಲೆಕ್ಸ್‌ನಲ್ಲಿರುವ ಆಭರಣ ಅಂಗಡಿಯನ್ನು ಬುರ್ಖಾ ಧರಿಸಿದ ಮಹಿಳೆಯೊಬ್ಬರು ಬಂದೂಕು ತೋರಿಸಿ ದರೋಡೆ ಮಾಡಿ, ತನ್ನ ಸಹಚರನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾಳೆ. ಈ ಘಟನೆ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆದಿದ್ದು, ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮಹಿಳೆ ಕೌಂಟರ್‌ನಿಂದ ಸುಮಾರು 26 ಗ್ರಾಂ ಚಿನ್ನಾಭರಣಗಳನ್ನು ಕದ್ದಿದ್ದಾಳೆ ಎಂದು ವರದಿಯಾಗಿದೆ. ಗುರುವಾರದ ವೇಳೆಗೆ, ಉತ್ತರ ಪ್ರದೇಶದಲ್ಲಿ ಚಿನ್ನದ ಬೆಲೆ ಪ್ರತಿ ಗ್ರಾಂಗೆ 14,684 ರೂ. ಆಗಿತ್ತು.