Karnataka Weather forecast: ಮುಂದಿನ 5 ದಿನ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ – Kannada News
ಬೆಂಗಳೂರು, (ಜೂನ್ 10): ಕರ್ನಾಟಕದಲ್ಲಿ ಮುಂಗಾರು ಮಳೆಯ (Karnataka Monson Rain) ಅಬ್ಬರ ಜೋರಾಗಿದ್ದು, ಮುಂದಿನ ಐದು ದಿನಗಳ ಕಾಲ ವರಣು ಅಬ್ಬರ ಮುಂದುವರೆಯಲಿದೆ. ಇಂದಿನಿಂದ ಅಂದರೆ ಜೂನ್ 10ರಿಂದ ಜೂನ್ 14 ರವರೆಗೆ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಹಾಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ….