ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ – Kannada News | Guarantee Scheme Revisions: HM Revanna Clarifies, Assures Continuity and Addresses Fund Recovery
ಹಾಸನ, ಜೂನ್ 19: ಕರ್ನಾಟಕದಲ್ಲಿ ಜಾರಿಯಲ್ಲಿರುವ ಐದು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಉಂಟಾಗಿರುವ ಆತಂಕವನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ನಿವಾರಿಸಿದ್ದಾರೆ. ಈ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಅವರು ಹೇಳಿದ್ದು, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಮತ್ತು ಯುವನಿಧಿ ಸೇರಿದಂತೆ ಎಲ್ಲಾ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿವೆ. ಈವರೆಗೂ ಗೃಹಲಕ್ಷ್ಮಿ ಅಡಿಯಲ್ಲಿ 29 ಕಂತುಗಳನ್ನು ನೀಡಲಾಗಿದ್ದು, ಉಚಿತ ಬಸ್ ಸೇವೆ 600 ಕೋಟಿ ಟ್ರಿಪ್‌ಗಳನ್ನು ದಾಟಿದೆ. ಇದರಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗಿದೆ…