ಕೋಲಾರ: ಗಂಡನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಹಿಳೆ ಮೇಲೆ ಆ್ಯಸಿಡ್ ದಾಳಿ ಮಾಡಿದ ಪತ್ನಿ
ಕೋಲಾರ, ಏಪ್ರಿಲ್ 2: ಕೋಲಾರ (Kolar) ಜಿಲ್ಲಾ ಕೇಂದ್ರದ ಆಜಾದ್ ನಗರದಲ್ಲಿ ಬುಧವಾರ ರಾತ್ರಿ ಭೀಕರ ಘಟನೆಯೊಂದು ಸಂಭವಿಸಿದೆ. ಅಕ್ರಮ ಸಂಬಂಧದ ಆರೋಪದ ಹಿನ್ನೆಲೆಯಲ್ಲಿ ನಡೆದ ರಾಜಿ ಸಂಧಾನ ವಿಕೋಪಕ್ಕೆ ತಿರುಗಿ, ಮಹಿಳೆಯೊಬ್ಬಳು ತನ್ನ ಪತಿಯ ಜತೆ ಅಕ್ರಮ ಸಂಬಂಧ ಹೊಂದಿದ್ದಾಕೆಯ ಮೇಲೆ ಆಸಿಡ್ ಎರಚಿದ್ದಾಳೆ. ಘಟನೆಯಲ್ಲಿ ಮುಸ್ಕಾನ್ ಎಂಬ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿ ಆಯೇಷಾ ಹಾಗೂ ಗಾಯಾಳು ಮುಸ್ಕಾನ್ ಇಬ್ಬರೂ ಪರಸ್ಪರ ಸಂಬಂಧಿಕರು. ಆಯೇಷಾಳ ಪತಿ ಶಾಬಾಜ್ ಅಹಮದ್‌ನ ತಮ್ಮನ ಪತ್ನಿ…