ಪುಟ್ಟಣ ಕಣಗಾಲ್ ಶಿಷ್ಯ, ಖ್ಯಾತ ನಿರ್ದೇಶಕ ಭಾರತಿ ರಾಜ ನಿಧನ – Kannada News
ಬಹುಭಾಷಾ ಹಿರಿಯ ನಿರ್ದೇಶಕ ಮತ್ತು ನಟ ಭಾರತಿ ರಾಜ (86) ನಿಧನರಾಗಿದ್ದಾರೆ. ವೃದ್ಧಾಪ್ಯ ಮತ್ತು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ (ಜೂನ್ 10) ಮುಂಜಾನೆ ಅವರು ಕೊನೆಯುಸಿರೆಳೆದರು. ಅವರ ಸಾವಿಗೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. 1977ರ ತಮಿಳು ಚಿತ್ರ ’16 ವಯತಿನಿಲೆ’ ಮೂಲಕ ಭಾರತಿ ರಾಜ ನಿರ್ದೇಶಕರಾದರು. ಅದಾದ ನಂತರ, ಅವರು ‘ಕಿಲಕ್ಕೆ ಪೋಗಮ್ ರೈಲ್’, ‘ಸಿಗಪ್ಪು ರೋಜಕ್ಕಲ್’, ‘ಅಲೈಗಲ್ ಒಯಿವತಿಲ್ಲೈ’, ‘ಕಾದಲ್…