ಜೀವನದಲ್ಲಿ ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ ತಿರುಗೇಟು – Kannada News | Ram Mandir fund row Those who never visited Ayodhya now talking about Ram bhakti CM Yogi Adityanath said
ಅಯೋಧ್ಯೆ, ಜೂನ್ 19: ಅಯೋಧ್ಯೆಯ (Ayodhya) ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಭೂಮಿ ಖರೀದಿ ವ್ಯವಹಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿರೋಧ ಪಕ್ಷಗಳು ಮಾಡಿದ್ದ ಆರೋಪಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ತಿರುಗೇಟು ನೀಡಿದ್ದಾರೆ. ತಮ್ಮ ಜೀವನದಲ್ಲಿ ಒಮ್ಮೆಯೂ ಅಯೋಧ್ಯೆಗೆ ಭೇಟಿ ನೀಡದ ಮತ್ತು ಪ್ರಭು ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದ ನಾಯಕರು ಇಂದು ರಾಜಕೀಯ ಲಾಭಕ್ಕಾಗಿ ‘ರಾಮಭಕ್ತಿ’ಯ ನಾಟಕವಾಡುತ್ತಿದ್ದಾರೆ. ಜೈ ಶ್ರೀರಾಮ್ ಎಂದು ಘೋಷಣೆ ಕೂಗುವವರ ಮೇಲೆ ಲಾಠಿ ಚಾರ್ಜ್ ಮಾಡುತ್ತಿದ್ದವರು ಈಗ ರಾಮ…