All posts by nagaraj11081993

ದಾಖಲೆ ಬರೆಯುತ್ತಾ ‘ರಾಮಾಯಣ’? ಬರೋಬ್ಬರಿ 1000 ಕೋಟಿ ರೂಪಾಯಿಗೆ ಒಟಿಟಿ ಬೇಡಿಕೆ

ದಾಖಲೆ ಬರೆಯುತ್ತಾ ‘ರಾಮಾಯಣ’? ಬರೋಬ್ಬರಿ 1000 ಕೋಟಿ ರೂಪಾಯಿಗೆ ಒಟಿಟಿ ಬೇಡಿಕೆ

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ಎನಿಸಿಕೊಂಡಿರುವ ‘ರಾಮಾಯಣ’ (Ramayana) ಈಗ ವ್ಯವಹಾರದ ವಿಚಾರದಲ್ಲಿ ಹೊಸ ಸಂಚಲನ ಮೂಡಿಸಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ, ರಾಕಿಂಗ್ ಸ್ಟಾರ್ ಯಶ್ ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಬಿಗ್ ಬಜೆಟ್ ಚಿತ್ರದ ಡಿಜಿಟಲ್ ಹಕ್ಕುಗಳಿಗಾಗಿ (OTT Rights) ನಿರ್ಮಾಪಕರು ಭಾರಿ ಮೊತ್ತದ ಬೇಡಿಕೆಯಿಟ್ಟಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ನೂರಲ್ಲ, ಇನ್ನೂರಲ್ಲ.. ಬರೋಬ್ಬರಿ ಸಾವಿರ ಕೋಟಿ ರೂಪಾಯಿ ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ.

ವರದಿಗಳ ಪ್ರಕಾರ, ಹೆಸರಾಂತ ಒಟಿಟಿ ಸಂಸ್ಥೆಯೊಂದು ‘ರಾಮಾಯಣ’ ಸಿನಿಮಾದ ಎರಡು ಭಾಗಗಳ ಡಿಜಿಟಲ್ ಹಕ್ಕುಗಳಿಗಾಗಿ ಬರೋಬ್ಬರಿ 700 ಕೋಟಿ ರೂಪಾಯಿಗಳ ಆಫರ್ ನೀಡಿತ್ತು. ಆದರೆ, ಚಿತ್ರದ ನಿರ್ಮಾಪಕ ನಮಿತ್ ಮಲ್ಹೋತ್ರಾ ಈ ಆಫರ್ ತಿರಸ್ಕರಿಸಿದ್ದಾರೆ ಎನ್ನಲಾಗಿದೆ. ಈ ಬೃಹತ್ ಬಜೆಟ್​ನ ದೃಶ್ಯಕಾವ್ಯಕ್ಕೆ ಕನಿಷ್ಠ 1000 ಕೋಟಿ ರೂಪಾಯಿಗಳ ಡೀಲ್ ಕುದುರಿಸುವುದು ಅವರ ಗುರಿಯಾಗಿದೆ.

ಈ ಚಿತ್ರವು ಸುಮಾರು 4000 ಕೋಟಿ ರೂಪಾಯಿ ಬೃಹತ್ ಬಜೆಟ್‌ನಲ್ಲಿ ತಯಾರಾಗುತ್ತಿದೆ ಎಂಬ ಮಾಹಿತಿ. ಹೂಡಿಕೆಯನ್ನು ಹಿಂಪಡೆಯಲು ಚಿತ್ರತಂಡಕ್ಕೆ ಥಿಯೇಟರ್ ಮತ್ತು ಡಿಜಿಟಲ್ ಮೂಲಗಳಿಂದ ದೊಡ್ಡ ಮಟ್ಟದ ಆದಾಯದ ಅಗತ್ಯವಿದೆ. ಆ ಕಾರಣದಿಂದಲೇ ದೊಡ್ಡ ಮೊತ್ತದ ಒಟಿಟಿ ಡೀಲ್ ಸಲುವಾಗಿ ಚಿತ್ರತಂಡ ಕಾಯುತ್ತಿದೆ ಎನ್ನಲಾಗಿದೆ.

ರಾಮಾಯಣ ಸಿನಿಮಾದ ಟೀಸರ್:

ಎಸ್‌ಎಸ್‌ ರಾಜಮೌಳಿ ನಿರ್ದೇಶನದ, ಮಹೇಶ್ ಬಾಬು ನಟನೆಯ ‘ವಾರಾಣಸಿ’ ಚಿತ್ರಕ್ಕೂ ಇದೇ ರೀತಿಯ ದೊಡ್ಡ ಮೊತ್ತದ ಒಟಿಟಿ ಆಫರ್ ಬಂದಿತ್ತು ಎಂಬ ಸುದ್ದಿಯಿದೆ. ನೆಟ್‌ಫ್ಲಿಕ್ಸ್ ಸಂಸ್ಥೆಯು ಈ ಚಿತ್ರಕ್ಕೆ ಭಾರಿ ಮೊತ್ತದ ಆಫರ್ ನೀಡಿತ್ತು ಎನ್ನಲಾಗಿದ್ದರೂ, ಇನ್ನೂ ಅಧಿಕೃತವಾಗಿ ಯಾವುದೇ ಒಪ್ಪಂದ ನಡೆದಿಲ್ಲ. ‘ವಾರಣಸಿ’ ಚಿತ್ರಕ್ಕಿಂತಲೂ ದೊಡ್ಡ ಮೊತ್ತಕ್ಕೆ ತಮ್ಮ ಸಿನಿಮಾದ ಒಟಿಟಿ ಡೀಲ್ ಕುದುರಬೇಕು ಎಂಬ ಹಠ ‘ರಾಮಾಯಣ’ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರಿಗೆ ಇರಬಹುದು.

ಇದನ್ನೂ ಓದಿ: ರಾಮಾಯಣ ಟೀಸರ್: ‘ಇದಕ್ಕಿಂತ ಆದಿಪುರುಷ್ ಎಷ್ಟೋ ಚೆನ್ನಾಗಿತ್ತು’ ಎಂದ ನೆಟ್ಟಿಗರು

‘ರಾಮಾಯಣ’ ಸಿನಿಮಾದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆ ಆಗಿದೆ. ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ವಿಶೇಷವಾಗಿ ವಿಎಫ್‌ಎಕ್ಸ್ ವಿಚಾರದಲ್ಲಿ ಪ್ರೇಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದು, ನಿರೀಕ್ಷಿತ ಮಟ್ಟದಲ್ಲಿಲ್ಲ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಮತ್ತೊಂದೆಡೆ, ರಾಜಮೌಳಿ ಅವರ ‘ವಾರಾಣಸಿ’ ಮೊದಲ ಗ್ಲಿಂಪ್ಸ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

CSK vs PBKS Playing XI: ಟಾಸ್ ಗೆದ್ದ ಪಂಜಾಬ್; ಸಿಎಸ್​ಕೆ ತಂಡದಲ್ಲಿ 1 ಬದಲಾವಣೆ

ಐಪಿಎಲ್ 2026 (IPL 2026) ರ ಏಳನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್ (CSK vs PBKS) ತಂಡವನ್ನು MA ಚಿದಂಬರಂ ಕ್ರೀಡಾಂಗಣದಲ್ಲಿ ಎದುರಿಸಿದೆ. ಕಳೆದ ಸೀಸನ್​ನಲ್ಲಿ ಕೊನೆಯ ಸ್ಥಾನ ಪಡೆದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಆವೃತ್ತಿಯ ಆರಂಭವನ್ನು ಕಳಪೆಯಾಗಿ ಮಾಡಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಹೀನಾಯ ಸೋಲನ್ನು ಎದುರಿಸಿರುವ ಸಿಎಸ್​ಕೆ, ಬಲಿಷ್ಠ ಪಂಜಾಬ್ ವಿರುದ್ಧ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ. ಇತ್ತ ಪಂಜಾಬ್ ಕಿಂಗ್ಸ್ ತನ್ನ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವು ಸಾಧಿಸಿದ್ದು, ತನ್ನ ಅಜೇಯ ಓಟವನ್ನು ಮುಂದುವರೆಸುವ ಇರಾದೆಯಲ್ಲಿದೆ.

ಟಾಸ್ ಗೆದ್ದ ಪಂಜಾಬ್

ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸಿಎಸ್​ಕೆ ಮೊದಲು ಬ್ಯಾಟಿಂಗ್‌ ಮಾಡಲಿದೆ. ಇದರೊಂದಿಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಖಚಿತವಾಗಿದೆ. ಅದರಂತೆ ಗೆಲುವಿನ ಲಯದಲ್ಲಿರುವ ಪಂಜಾಬ್ ಕಿಂಗ್ ತನ್ನ ಪ್ಲೇಯಿಂಗ್​ 11ನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಪ್ರಶಾಂತ್ ವೀರ್ ಪ್ಲೇಯಿಂಗ್​ 11ನಲ್ಲಿ ಸ್ಥಾನ ಪಡೆದಿದ್ದಾರೆ.

ಹೆಡ್ ಟು ಹೆಡ್ ರೆಕಾರ್ಡ್

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ಎರಡೂ ತಂಡಗಳು ಸ್ಪರ್ಧೆಯ ಮೊದಲ ಸೀಸನ್‌ನಿಂದ ಆಡುತ್ತಿವೆ. ಇಲ್ಲಿಯವರೆಗೆ, ಎರಡೂ ತಂಡಗಳು 32 ಬಾರಿ ಪರಸ್ಪರ ಮುಖಾಮುಖಿಯಾಗಿವೆ. ಇದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 16 ಪಂದ್ಯಗಳನ್ನು ಗೆದ್ದಿದ್ದರೆ, ಪಂಜಾಬ್ ಕಿಂಗ್ಸ್ 16 ಪಂದ್ಯಗಳನ್ನು ಗೆದ್ದಿದೆ. ಆದ್ದರಿಂದ ಈ ಪಂದ್ಯವನ್ನು ಯಾರು ಗೆಲ್ಲುತ್ತಾರೆ ಎಂಬ ಕುತೂಹಲವಿದೆ. ಐಪಿಎಲ್ ಇತಿಹಾಸದಲ್ಲಿ, ಎರಡೂ ತಂಡಗಳು ಮೊದಲ ಬಾರಿಗೆ ಏಪ್ರಿಲ್ 19, 2008 ರಂದು ಪರಸ್ಪರ ಮುಖಾಮುಖಿಯಾಗಿದ್ದವು, ಆ ಪಂದ್ಯದಲ್ಲಿ ಚೆನ್ನೈ ಗೆದ್ದಿತ್ತು. ಇನ್ನು ಕೊನೆಯ ಮುಖಾಮುಖಿಯಲ್ಲಿ ಪಂಜಾಬ್ ಗೆಲುವು ಸಾಧಿಸಿದೆ.

ಉಭಯ ತಂಡಗಳ ಪ್ಲೇಯಿಂಗ್ 11

ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ (ನಾಯಕ), ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಕೂಪರ್ ಕೊನೊಲಿ, ಶಶಾಂಕ್ ಸಿಂಗ್, ನೆಹಾಲ್ ವಧೇರಾ, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಯಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ವಿಜಯ್ಕುಮಾರ್ ವೈಶಾಕ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.

CSK vs PBKS IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ

ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್(ನಾಯಕ), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಆಯುಷ್ ಮ್ಹಾತ್ರೆ, ಸರ್ಫರಾಜ್ ಖಾನ್, ಶಿವಂ ದುಬೆ, ಕಾರ್ತಿಕ್ ಶರ್ಮಾ, ಪ್ರಶಾಂತ್ ವೀರ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಮ್ಯಾಟ್ ಹೆನ್ರಿ, ಖಲೀಲ್ ಅಹ್ಮದ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

GLP-1 ಔಷಧಿ ನಿಜವಾಗಿಯೂ ಬೊಜ್ಜು ಕಡಿಮೆ ಮಾಡುತ್ತದೆಯೇ? ಕೇಂದ್ರ ಸರ್ಕಾರ ಇದಕ್ಕೆ ನಿಯಂತ್ರಣ ಹೇರಿರುವುದಕ್ಕೆ ಕಾರಣವೇನು?

ಇತ್ತೀಚಿನ ದಿನಗಳಲ್ಲಿ ಬೊಜ್ಜು (Obesity) ಒಂದು ಪ್ರಮುಖ ಜಾಗತಿಕ ಆರೋಗ್ಯ ಸವಾಲಾಗುತ್ತಿದ್ದು ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹರಸಾಹಸ ಪಡುವಂತಾಗಿದೆ. ಇನ್ನು, ಬೊಜ್ಜು ಕಡಿಮೆ ಮಾಡಲು ಕೆಲವರು ಸಾಮಾನ್ಯವಾಗಿ ಸೇವಿಸುವ ಕೆಲವು ಔಷಧಿಗಳು ಅಡ್ಡಪರಿಣಾಮಗಳನ್ನು ಉಂಟುಮಾಡುತ್ತಿವೆ. ಅದರಲ್ಲಿ GLP-1 ರಿಸೆಪ್ಟರ್ ಅಗೋನಿಸ್ಟ್‌ಗಳು ಎಂಬ ಔಷಧಿ ಕೂಡ ಒಂದು. ಈ ಔಷಧಿಯನ್ನು ಬಳಸುವವರಿಗೆ ಈ ಹಿಂದೆ ವಿಶ್ವ ಆರೋಗ್ಯ ಸಂಸ್ಥೆ (WHO) ಜಾಗತಿಕ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿತ್ತು. ಇದೀಗ ಭಾರತ ಸರ್ಕಾರವು ಇತ್ತೀಚೆಗೆ GLP-1 (Glucagon-Like Peptide-1 agonist) ಔಷಧಿಗಳ ಬಳಕೆ, ಅದರ ಅಪಾಯಗಳು ಹಾಗೂ ನಿಯಂತ್ರಣ ಕುರಿತು ಮಹತ್ವದ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಈ ಔಷಧಿಗಳು ಮುಖ್ಯವಾಗಿ ಟೈಪ್-2 ಮಧುಮೇಹ ಮತ್ತು ಅತಿದಪ್ಪತನ ಅಂದರೆ ಒಬೆಸಿಟಿ ಚಿಕಿತ್ಸೆ ನೀಡಲು ಬಳಸಲಾಗುತ್ತವೆ. ಹಾಗಾದರೆ GLP-1 ಔಷಧಿ ಎಂದರೇನು, ಇದನ್ನು ಹೇಗೆ ಬಳಕೆ ಮಾಡಬೇಕು ಎಂಬುದರ ಕುರಿತ ಮಾಹಿತಿ ಸ್ಟೋರಿಯಲ್ಲಿದೆ.

GLP-1 ಔಷಧಿಗಳು ಎಂದರೇನು?

ಸಾಮಾನ್ಯವಾಗಿ ಈ GLP-1 ಔಷಧಿಗಳು ದೇಹದಲ್ಲಿ ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. ಜೊತೆಗೆ ತೂಕ ಇಳಿಕೆಸಿಕೊಳ್ಳುವವರಿಗೂ ಸಹ ಇದು ಸಹಕಾರಿಯಾಗಿದೆ.

ಇದನ್ನೂ ಓದಿ: ಆತ್ಮಹತ್ಯೆ ಯೋಚನೆ, ಖಿನ್ನತೆ; ತೂಕ ಇಳಿಸುವ ಔಷಧಿಗಳ ಅಡ್ಡಪರಿಣಾಮದ ಬಗ್ಗೆ WHO ಎಚ್ಚರಿಕೆ

ವೈದ್ಯರ ಸಲಹೆ ಇಲ್ಲದೆಯೇ ತೆಗೆದುಕೊಳ್ಳಬಹುದೇ?

ತಜ್ಞರ ಪ್ರಕಾರ, ಈ ಔಷಧಿಗಳನ್ನು ವೈದ್ಯರ ಸಲಹೆಯಿಲ್ಲದೆ ಬಳಸುವುದು ಅಪಾಯಕಾರಿಯಾಗಿದೆ. ಇವುಗಳಿಂದ ಕೆಲವು ಗಂಭೀರ ಪಾರ್ಶ್ವ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ, ಈ ಔಷಧಿಗಳನ್ನು ಕಡ್ಡಾಯವಾಗಿ ಅರ್ಹ ವೈದ್ಯರ ಮೇಲ್ವಿಚಾರಣೆಯಲ್ಲೇ ತೆಗೆದುಕೊಳ್ಳಬೇಕು. ಅದರಲ್ಲಿಯೂ ಭಾರತದಲ್ಲಿ GLP-1 ಔಷಧಿಗಳನ್ನು ಯಾವುದೇ ಮೆಡಿಕಲ್ ಅಂಗಡಿಗಳಲ್ಲಿ ಸ್ವತಃ ಖರೀದಿಸಲು ಅವಕಾಶ ಇಲ್ಲ. ಇವುಗಳನ್ನು ಎಂಡೋಕ್ರಿನಾಲಜಿಸ್ಟ್‌ಗಳು, ಇಂಟರ್ನಲ್ ಮೆಡಿಸಿನ್ ತಜ್ಞರು, ಕಾರ್ಡಿಯಾಲಜಿಸ್ಟ್‌ಗಳು ಮಾತ್ರ ನೀಡಬಹುದಾಗಿದೆ. ರೋಗಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕೈಗೊಂಡ ಕ್ರಮವಾಗಿದ್ದು, ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ರಾಜ್ಯ ಔಷಧ ನಿಯಂತ್ರಕರ ಜೊತೆಗೂಡಿ ಈ ಔಷಧಿಗಳ ಮೇಲಿನ ನಿಯಂತ್ರಣವನ್ನು ಇನ್ನಷ್ಟು ಬಲಪಡಿಸಿದೆ. ವಿವಿಧ ಸ್ಥಳಗಳಲ್ಲಿ ಪರಿಶೀಲನೆಗಳನ್ನು ನಡೆಸಲಾಗುತ್ತಿದ್ದು, ನಿಯಮ ಉಲ್ಲಂಘನೆ ಮಾಡಿದರೆ, ಲೈಸೆನ್ಸ್ ರದ್ದುಪಡಿಸುವುದು, ದಂಡ ವಿಧಿಸುವುದು, ಕಾನೂನು ಕ್ರಮ ಕೈಗೊಳ್ಳಬಹುದಾಗಿದೆ.

ಹಾಗಾಗಿ, GLP-1 ಔಷಧಿಗಳು ಪರಿಣಾಮಕಾರಿ ಆಗಿದ್ದರೂ, ಅವುಗಳನ್ನು ಸ್ವಯಂಪ್ರೇರಿತವಾಗಿ ಬಳಸಬಾರದು. ಯಾವುದೇ ಚಿಕಿತ್ಸೆ ಆರಂಭಿಸುವ ಮೊದಲು ವೈದ್ಯರ ಸಲಹೆ ಪಡೆಯುವುದು ಅತ್ಯಂತ ಮುಖ್ಯ. ಒಟ್ಟಿನಲ್ಲಿ, ಈ ಔಷಧಿಗಳ ಸರಿಯಾದ ಬಳಕೆ ಆರೋಗ್ಯಕ್ಕೆ ಸಹಾಯಕವಾಗಬಹುದು, ಆದರೆ ಗೊತ್ತಿಲ್ಲದೆಯೇ, ನೀವಾಗಿಯೇ ಬಳಸಿದರೆ ಗಂಭೀರ ಸಮಸ್ಯೆಗಳಿಗೂ ಕಾರಣವಾಗಬಹುದು. ಆದ್ದರಿಂದ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದು ಅಗತ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶರಣ್ಯ ನಾಪತ್ತೆ ಕೇಸ್​​: 24ಗಂಟೆ ಕಳೆದರೂ ಸಿಗದ ಸುಳಿವು; ಹರಕೆ ಹೊತ್ತ ಕುಡಿಯ ಜನಾಂಗ

ಕೊಡಗು, ಏಪ್ರಿಲ್​ 03: ಚಾರಣಕ್ಕೆ ತೆರಳಿದ್ದ ಯುವತಿ ಶರಣ್ಯ (35) ನಾಪತ್ತೆ ಪ್ರಕರಣಕ್ಕೆ (Missing Case)  ಸಂಬಂಧಿಸಿದಂತೆ 24 ಗಂಟೆ ಕಳೆದರು ಇನ್ನೂ ಪತ್ತೆಯಾಗಿಲ್ಲ. ಪೊಲೀಸ್ ಶ್ವಾನಕ್ಕೂ ಯಾವುದೇ ಸುಳಿವು ಸಿಕ್ಕಿಲ್ಲ. ಅರಣ್ಯ ಇಲಾಖೆಯ 60ಕ್ಕೂ ಅಧಿಕ‌ ಸಿಬ್ಬಂದಿ ಸೇರಿದಂತೆ ಪೊಲೀಸರು ತಡಿಯಂಡ ಬೆಟ್ಟ ಪ್ರದೇಶದಲ್ಲಿ ವ್ಯಾಪಕ‌ ಶೋಧ ನಡೆಸಿದ್ದಾರೆ. ದಾರಿ ತಪ್ಪುವಂತಹ ಮಾರ್ಗವಲ್ಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಸದ್ಯ ಪ್ರಕರಣ ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ತಲೆನೋವಾಗಿದೆ.

ಕೇರಳದ ಕೋಯಿಕ್ಕೋಡ್ ನಿವಾಸಿ ಶರಣ್ಯ ನಿನ್ನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದರು. ಮನೆಯಲ್ಲಿ ಹೇಳದೆಯೇ ಟ್ರೆಕ್ಕಿಂಗ್ ಬಂದಿದ್ದರು. 9 ಜನರ ಜೊತೆಗೆ ಚಾರಣ ತೆರಳುದ್ದರು. ಆದರೆ ನಾಯಿಗಳ‌ ಜೊತೆ ಆಟವಾಡುತ್ತಾ ಹಿಂದೆ ಉಳಿದಿದ್ದಾರೆ.

ಇದನ್ನೂ ಓದಿ: ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: 4 ತಂಡಗಳಿಂದ ಶೋಧ ಕಾರ್ಯ

ನಿನ್ನೆ ಸಂಜೆ ದಾರಿ ತಪ್ಪಿರುವುದಾಗಿ ತಾನು ತಂಗಿದ್ದ ಹೋಂ ಸ್ಟೇ ಮಾಲೀಕರಿಗೆ ಕರೆ ಮಾಡಿ ಮಾಹಿತಿ ನಿಡಿದ್ದಾರೆ. ಅದಾದ ಬಳಿಕ ಶರಣ್ಯ ಮೊಬೈಲ್‌ ನಾಟ್ ರೀಚೇಬಲ್​ ಆಗಿದೆ. ಟ್ರೆಕ್ಕಿಂಗ್​ಗೆ ತೆರಳಿರುವ ಪ್ರದೇಶದಲ್ಲಿ ವಿಪರೀತ ಕಾಡಾನೆ ಕಾಟ ಇದೆ ಎನ್ನಲಾಗುತ್ತಿದೆ. ಕಳೆದ‌ ರಾತ್ರಿ 3 ಗಂಟೆಯವರೆಗೂ ಶೋಧ ಮಾಡಲಾಗಿದ್ದು, ಇದುವರೆಗೂ ಯುವತಿಯ ಬಗ್ಗೆ ಯಾವುದೇ ಸುಳಿವಿಲ್ಲ.

ದೇವರಿಗೆ ಹರಿಕೆ ಹೊತ್ತ ಕುಡಿಯ ಜನಾಂಗ

ಸದ್ಯ  ಶರಣ್ಯಳ ಪತ್ತೆಗೆ ಅರಣ್ಯ ಮತ್ತು ಪೊಲೀಸ್ ಇಲಾಖೆಯ ನಾಲ್ಕು ತಂಡದಿಂದ‌ ಶೋಧ ಮುಂದುವರೆದಿದೆ.  ಆದರೆ ಯಾವುದೇ ಸುಳಿವು ಸಿಗದೆ ನಿರಾಶೆ ಮೂಡಿದೆ. ಹೀಗಿರುವಾಗ ಟ್ರೆಕ್ಕಿಂಗ್​ಗೆ ತೆರಳಿರುವ ಶರಣ್ಯ ಸುರಕ್ಷಿತವಾಗಿ‌ ಮರಳಿ ಬರಲೆಂದು ಬೆಟ್ಟ ಪ್ರದೇಶದಲ್ಲಿ ವಾಸಿಸುವ ಕುಡಿಯ ಜನಾಂಗ ಮಲೆ‌ ತಮ್ಮಚ್ಚ ದೇವರಿಗೆ ಹರಕೆ ಹೊತ್ತಿದ್ದಾರೆ. ಇನ್ನು ತಡಿಯಂಡಮೋಳ್‌ ಬೆಟ್ಟದಲ್ಲಿ ದಟ್ಟ ಮಳೆ‌ ಮೋಡ ಕವಿದಿದ್ದು, ಆತಂಕ ಮನೆಮಾಡಿದೆ.

ಸ್ಥಳೀಯರು ಹೇಳುವುದೇನು?

ಶರಣ್ಯ ನಾಪತ್ತೆ ಪ್ರಕರಣದ ಬಗ್ಗೆ ಸ್ಥಳೀಯರು ಮಾತನಾಡಿದ್ದು, ದಾರಿ ತಪ್ಪುವುದಕ್ಕೆ ಸಾಧ್ಯವೇ ಇಲ್ಲ. ಏಕೆಂದರೆ ದಾರಿ ತಪ್ಪುವಂತಹ ದುರ್ಗಮ‌ ಹಾದಿ‌ ಏನು ಅಲ್ಲ ಎಂದು ಹೇಳುತ್ತಿದ್ದಾರೆ. ಸದ್ಯ ಶೋಧ ಕಾರ್ಯಕ್ಕೆ ಯವಕಪಾಡಿ ಗ್ರಾಮಸ್ಥರು ಸಾಥ್​ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಭಾರತಕ್ಕೆ ಬರುತ್ತಿದ್ದ ಇರಾನ್​ನ ತೈಲ ತುಂಬಿದ ಹಡಗು ಇದ್ದಕ್ಕಿದ್ದಂತೆ ಚೀನಾದ ಕಡೆ ತಿರುಗಿದ್ದೇಕೆ?

ನವದೆಹಲಿ, ಏಪ್ರಿಲ್ 3: ಭಾರತಕ್ಕೆ ಇರಾನಿನ ಕಚ್ಚಾ ತೈಲವನ್ನು ಸಾಗಿಸಬೇಕಾಗಿದ್ದ ತೈಲ ಟ್ಯಾಂಕರ್ (Oil Tanker) ಸಮುದ್ರದ ಮಧ್ಯೆ ಮಾರ್ಗವನ್ನು ಬದಲಾಯಿಸಿ ಚೀನಾದ ಕಡೆಗೆ ಸಾಗುತ್ತಿದೆ. ಮಧ್ಯ ಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನತೆಯ ನಡುವೆ ಭಾರತ ಇರಾನ್​ನಿಂದ ಕಚ್ಚಾ ತೈಲವನ್ನು ಖರೀದಿಸಲು ಮುಂದಾಗಿತ್ತು. ಆದರೆ, ಆ ಟ್ಯಾಂಕರ್ ಗುಜರಾತ್​ ಬಂದರಿಗೆ ಆಗಮಿಸುವ ಬದಲು ಚೀನಾದ ಕಡೆ ತೆರಳುತ್ತಿದೆ. ಕಳೆದ 3 ದಿನಗಳಿಂದ ಗುಜರಾತ್‌ನ ವಡಿನಾರ್‌ಗೆ ತೆರಳುತ್ತಿದ್ದ ಇರಾನಿನ ಕಚ್ಚಾ ತೈಲದ ಹಡಗು ಪಿಂಗ್ ಶುನ್ ಭಾರತದ ಬದಲಾಗಿ ಚೀನಾಕ್ಕೆ ಸಿಗ್ನಲ್ ನೀಡುತ್ತಿದೆ ಎಂದು ಮೂಲಗಳು ತಿಳಿಸಿವೆ.

2002ರಲ್ಲಿ ನಿರ್ಮಿಸಲಾದ ಅಫ್ರಾಮ್ಯಾಕ್ಸ್ ಟ್ಯಾಂಕರ್ ಪಿಂಗ್ ಶುನ್ ಭಾರತಕ್ಕೆ ಆಗಮಿಸಬೇಕಿತ್ತು. ಆದರೆ ಈಗ ಗುಜರಾತ್​ ಬದಲಾಗಿ ಚೀನಾದ ಡಾಂಗ್ಯಿಂಗ್‌ನತ್ತ ಸಾಗುತ್ತಿದೆ ಎಂದು ಹಡಗು ಟ್ರ್ಯಾಕಿಂಗ್ ಸಂಸ್ಥೆ ಕೆಪ್ಲರ್ ತಿಳಿಸಿದೆ. ಈ ವಾರದ ಆರಂಭದಲ್ಲಿ ಈ ಹಡಗು ಭಾರತದ ಪಶ್ಚಿಮ ಕರಾವಳಿಯ ವಾಡಿನಾರ್‌ಗೆ ಆಗಮನವನ್ನು ಸೂಚಿಸಿತ್ತು. ಆದರೆ ಅದು ಚೀನಾದ ದಿಕ್ಕಿಗೆ ತಿರುಗಿದೆ. ಬ್ಲೂಮ್‌ಬರ್ಗ್ ವರದಿಯ ಪ್ರಕಾರ ಈ ಹಡಗಿನ ಗಮ್ಯಸ್ಥಾನ ಇನ್ನೂ ಬದಲಾಗುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: 7 ವರ್ಷಗಳ ಬಳಿಕ ಇರಾನ್​ನಿಂದ ಭಾರತ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹೊತ್ತ ಹಡಗು!

ಈಸ್ವತಿನಿ ಧ್ವಜ ಹೊತ್ತ ಪಿಂಗ್ ಶುನ್ ಹಡಗು ತನ್ನ ಟ್ರಾನ್ಸ್‌ಪಾಂಡರ್‌ಗಳು ಮತ್ತು AIS (ಸ್ವಯಂಚಾಲಿತ ಗುರುತಿನ ವ್ಯವಸ್ಥೆ) ಮೂಲಕ ಏಪ್ರಿಲ್ 4ರಂದು ಗುಜರಾತ್​​ನ ಟರ್ಮಿನಲ್‌ಗೆ ಹೋಗುವ ಮಾರ್ಗದಲ್ಲಿದೆ ಎಂದು ಸೂಚಿಸಿತ್ತು. ಆದರೆ, ಅದು ಈಗ ಚೀನಾಗೆ ತೆರಳುತ್ತಿದೆ. ಬೆಲೆ, ವಿಮೆ, ಕಾರ್ಯಾಚರಣಾ ಸಿಬ್ಬಂದಿ ಅಥವಾ ದಾಖಲಾತಿಯಲ್ಲಿನ ಸಮಸ್ಯೆಗಳು ಸೇರಿದಂತೆ ಹಲವು ಅಂಶಗಳು ಈ ರೀತಿಯ ಹಡಗಿನ ಮಾರ್ಗದಲ್ಲಿನ ಬದಲಾವಣೆಗೆ ಕಾರಣವಾಗಿರಬಹುದು ಎನ್ನಲಾಗಿದೆ. ಆದರೆ ಹಡಗು ತನ್ನ ಗಮ್ಯಸ್ಥಾನವನ್ನು ಬದಲಾಯಿಸಿದ ನಿಖರವಾದ ಕಾರಣ ಖಚಿತವಾಗಿಲ್ಲ. ಈ ಬಗ್ಗೆ ಯಾವುದೇ ಸ್ಪಷ್ಟನೆಯೂ ಬಂದಿಲ್ಲ.

ಇದಕ್ಕೂ ಮೊದಲು, ಮಾರ್ಚ್ 21ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಗನಕ್ಕೇರುತ್ತಿರುವ ಕಚ್ಚಾ ತೈಲದ ಬೆಲೆಗಳನ್ನು ಕಡಿಮೆ ಮಾಡುವ ಪ್ರಯತ್ನದಲ್ಲಿ ಟ್ಯಾಂಕರ್‌ಗಳಿಗೆ ಈಗಾಗಲೇ ಲೋಡ್ ಮಾಡಲಾದ ಇರಾನಿನ ತೈಲವನ್ನು ಮಾರಾಟ ಮಾಡಲು ಅನುಮತಿ ನೀಡಿದ್ದರು. ಇರಾನ್​ನಿಂದ ಹೊರಟಿದ್ದ ಈ ಹಡಗನ್ನು ಚೀನಾದ ಕಂಪನಿಯಾದ ನೈಸಿಟಿ ಶಿಪ್‌ಮ್ಯಾನೇಜ್‌ಮೆಂಟ್ ಕಂ. ಲಿಮಿಟೆಡ್ ನಿರ್ವಹಿಸುತ್ತದೆ. ಇದು ಇರಾನ್‌ನ ಖಾರ್ಗ್ ದ್ವೀಪದಿಂದ ಕಚ್ಚಾ ತೈಲವನ್ನು ಲೋಡ್ ಮಾಡಿತ್ತು.

ಇದನ್ನೂ ಓದಿ: ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದೆ ಎಲ್​ಪಿಜಿ ಹೊತ್ತ 2 ಹಡಗುಗಳು

ಭಾರತವು ತನ್ನ ಇಂಧನ ಅಗತ್ಯಗಳಿಗಾಗಿ ಆಮದುಗಳ ಮೇಲೆ ಹೆಚ್ಚು ಅವಲಂಬಿತವಾಗಿದೆ. ಇದು ತನ್ನ ಕಚ್ಚಾ ತೈಲದ ಸುಮಾರು ಶೇ. 90ರಷ್ಟು ದ್ರವೀಕೃತ ನೈಸರ್ಗಿಕ ಅನಿಲದ (LNG) ಅರ್ಧದಷ್ಟು ಮತ್ತು LPGಯ ಸರಿಸುಮಾರು ಮೂರನೇ ಎರಡರಷ್ಟು ಭಾಗವನ್ನು ವಿದೇಶದಿಂದ ಆಮದು ಮಾಡಿಕೊಳ್ಳುತ್ತದೆ. ಈ ಸರಬರಾಜುಗಳಲ್ಲಿ ಹೆಚ್ಚಿನವು ಹಾರ್ಮುಜ್ ಜಲಸಂಧಿಯ ಮೂಲಕ ಹಾದು ಹೋಗುತ್ತವೆ. ಭಾರತದ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯನ್ನು ದಾಟಲು ಅನುಮತಿ ನೀಡಿದ್ದರೂ ಬಿಕ್ಕಟ್ಟು ಇನ್ನೂ ಪೂರ್ತಿಯಾಗಿ ಬಗೆಹರಿದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್: ಜಿಮ್ ಟ್ರೈನರ್ ಫೋನ್​​ನಲ್ಲಿ ಯುವತಿಯರ ಫೋಟೋ, ಗರ್ಭನಿರೋಧಕ ಮಾತ್ರೆ ಪತ್ತೆ

ಹುಬ್ಬಳ್ಳಿ, (ಏಪ್ರಿಲ್ 03): ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ (Hubballi Love Jihad Case) ಸ್ಫೋಟಕ ತಿರುವು ಸಿಕ್ಕಿದೆ. ಅಜ್ಞಾತ ಸ್ಥಳದಿಂದ ಸಂತ್ರಸ್ತ ಯುವತಿ ವಿಡಿಯೋವೊಂದನ್ನ ಬಿಡುಗಡೆ ಮಾಡಿದ್ದು, ವಿಡಿಯೋನಲ್ಲಿ ಜಿಮ್ ಟ್ರೈನರ್ (Gym Trainer) ಸಮೀರ್ ನ ಕಾಮುಕ ಮುಖ ಬಿಚ್ಚಿಟ್ಟಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು, ಬೊಬೈಲ್ ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸಿದಾಗ ಸಮೀರ್ ಮತ್ತಷ್ಟು ಬಂಡಾಳ ಬಟಾಬಯಲಾಗಿದೆ. ಸಮೀರ್​​ನ ಮೊಬೈಲ್​ನಲ್ಲಿ ಬೇರೆ ಬೇರೆ ಯುವತಿಯ ಜತೆ ಇದ್ದ ಫೋಟೋಗಳು ಪತ್ತೆಯಾಗಿವೆ. ಅಲ್ಲದೇ ಗರ್ಭನಿರೋಧಕ ಮಾತ್ರೆ ಫೋಟೋ ಸಹ ಸಿಕ್ಕಿದೆ. ಇನ್ನು ಸಮೀರ್ ತನ್ನ ಅರೆಬೆತ್ತಲೆ ಫೋಟೋಗಳನ್ನ ಯುವತಿಯರಿಗೆ ಕಳುಹಿಸುತ್ತಿದ್ದನಂತೆ. ಈ ಸಂಬಂಧ ಪೊಲೀಸ್ ತನಿಖೆ ಚುರುಕುಗೊಳಡಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲೊಂದು ಲವ್ ಜಿಹಾದ್: ಜಿಮ್ ಟ್ರೈನರ್​ನ​​​​​​​​​ ಕಾಮುಕ ಮುಖ ಬಿಚ್ಚಿಟ್ಟ ಯುವತಿ

Source link

ಮೂರನೇ ಮಗುವೂ ಹೆಣ್ಣಾಗುತ್ತದೆಂದು ಹೆದರಿ ಗರ್ಭಿಣಿ ಹೆಂಡತಿ, ಮಕ್ಕಳನ್ನು ನೀರಲ್ಲಿ ಮುಳುಗಿಸಿ ಕೊಂದ ಪಾಪಿ

ಹೈದರಾಬಾದ್, ಏಪ್ರಿಲ್ 3: ತೆಲಂಗಾಣದಲ್ಲಿ ಶಾಕಿಂಗ್ ಘಟನೆಯೊಂದು ನಡೆದಿದೆ. ಮತ್ತೊಂದು ಬಾರಿ ಗರ್ಭಿಣಿಯಾಗಿದ್ದ (Pregnant Death) ಹೆಂಡತಿ ಈ ಬಾರಿಯೂ ಹೆಣ್ಣುಮಗುವನ್ನೇ ಹೆರುತ್ತಾಳೆ ಎಂಬ ಭಯದಿಂದ ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ, ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ. ಆ ಬಳಿಕ ಇದೊಂದು ಆಕಸ್ಮಿಕ ಸಾವು ಎಂದು ಎಲ್ಲರನ್ನೂ ನಂಬಿಸಿದ್ದಾನೆ. ಆದರೂ ಮೃತ ಮಹಿಳೆಯ ಕುಟುಂಬಸ್ಥರ ಅನುಮಾನದಿಂದಾಗಿ ಆತ ಸಿಕ್ಕಿಹಾಕಿಕೊಂಡಿದ್ದಾನೆ. ತೆಲಂಗಾಣದ ಹನ್ಮಕೊಂಡ ಜಿಲ್ಲೆಯ ಐನವೊಲು ಮಂಡಲದ ಪುನ್ನೇಲು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಅಜರುದ್ದೀನ್ ಎಂಬ ವ್ಯಕ್ತಿಗೆ ಈಗಾಗಲೇ ಇಬ್ಬರು ಹೆಣ್ಣುಮಕ್ಕಳಿದ್ದರು. ಅವರ ಪತ್ನಿ ಗರ್ಭಿಣಿಯಾಗಿದ್ದರು. ಈಗಾಗಲೇ ಇಬ್ಬರು ಹೆಣ್ಣುಮಕ್ಕಳು ಇದ್ದುದರಿಂದ ಈ ಬಾರಿಯೂ ಹೆಣ್ಣುಮಗುವಾಗುತ್ತದೆ ಎಂದು ಆತನಿಗೆ ಆತಂಕವಿತ್ತು. ಆಕೆ ಗರ್ಭಪಾತ ಮಾಡಿಸಿಕೊಳ್ಳಲು ನಿರಾಕರಿಸಿದ್ದರಿಂದ ಆತನ ಭಯ ಹೆಚ್ಚಾಗಿತ್ತು. ಆಕೆಯ ಹೊಟ್ಟೆಯಲ್ಲಿರುವುದು ಹೆಣ್ಣು ಮಗುವೇ ಎಂಬ ಅನುಮಾನದಿಂದ ಆತ ಕೋಪಗೊಂಡಿದ್ದ.

ಇದನ್ನೂ ಓದಿ: ಕೌಟಿಂಬಿಕ ಕಲಹ: ಬೆಂಕಿ ಹಚ್ಚಿಕೊಂಡು ರಾಮನಗರದಲ್ಲಿ 5 ತಿಂಗಳ ಗರ್ಭಿಣಿ ಆತ್ಮಹತ್ಯೆ

ಎರಡು ಬಾರಿ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದರೂ ಆಕೆ ಒಪ್ಪಿರಲಿಲ್ಲ. ಅಜರುದ್ದೀನ್ ಮತ್ತು ಫರ್ಹತ್ ಅವರಿಗೆ ಉಮೇರಾ (8) ಮತ್ತು ಆಯೇಷಾ (6) ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದರು. ವಾರಂಗಲ್-ಖಮ್ಮಮ್ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಗ್ರಾಮದ ಹೊರವಲಯದಲ್ಲಿರುವ ಈಜುಕೊಳವನ್ನು ನಿರ್ವಹಿಸುವ ಕೆಲಸವನ್ನು ಅಜರುದ್ದೀನ್ ಮಾಡುತ್ತಿದ್ದರು. ಅದೇ ಅವರ ಜೀವನಕ್ಕೆ ಆಧಾರವಾಗಿತ್ತು.

ವಿಚಿತ್ರ ಸಂಗತಿಯೆಂದರೆ, ಇಬ್ಬರು ಹೆಣ್ಣು ಮಕ್ಕಳ ಜನನದ ನಂತರ ಫರ್ಹತ್ ಮತ್ತೆ 2 ಬಾರಿ ಗರ್ಭಿಣಿಯಾಗಿದ್ದರು. ಆದರೆ ಎರಡೂ ಬಾರಿ ಆಕೆ ಇನ್ನೊಂದು ಹೆಣ್ಣು ಮಗುವಿಗೆ ಜನ್ಮ ನೀಡುತ್ತಾರೆ ಎಂಬ ಭಯದಿಂದ ಅಜರುದ್ದೀನ್ ಗರ್ಭಪಾತ ಮಾಡಿಸಿದ್ದ. ಅದಾದ 4 ವರ್ಷಗಳ ನಂತರ ಆಕೆ ಮತ್ತೆ ಗರ್ಭಿಣಿಯಾಗಿದ್ದರು. ಈ ಬಾರಿಯೂ ಹೆಣ್ಣುಮಗುವೇ ಆಗುತ್ತದೆ ಎಂದು ಅಜರುದ್ದೀನ್​ಗೆ ಅನಿಸತೊಡಗಿತ್ತು. ಹೀಗಾಗಿ, ಮತ್ತೆ ಗರ್ಭಪಾತ ಮಾಡಿಸಿಕೊಳ್ಳಲು ಒತ್ತಾಯಿಸಿದ್ದ. ಆದರೆ, ಈ ಬಾರಿ ಆಕೆ ಅದಕ್ಕೆ ಒಪ್ಪಿರಲಿಲ್ಲ. ಏನೇ ಆದರೂ ಈ ಮಗುವಿಗೆ ಜನ್ಮ ನೀಡುತ್ತೇನೆ ಎಂದು ಆಕೆ ಹಠ ಹಿಡಿದಿದ್ದರು. ಇದರಿಂದ ಆತ ಕೋಪಗೊಂಡಿದ್ದ.

ಇದನ್ನೂ ಓದಿ: ಗೋಲ್ಗಪ್ಪಲ್ಲಿ ವಿಷ ಬೆರೆಸಿ ಗರ್ಭಿಣಿ ಗೆಳತಿಯ ಕೊಲೆಗೆ ಯತ್ನ, ಆಸ್ಪತ್ರೆಗೆಂದು ಕರೆದು ಕಾಡಿನಲ್ಲಿ ಬಿಟ್ಟು ಬಂದ ವ್ಯಕ್ತಿ

ಬಳಿಕ ಆತ ತಾನು ಕೆಲಸ ಮಾಡುವ ಈಜುಕೊಳಕ್ಕೆ ತನ್ನ ಹೆಂಡತಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಕರೆದೊಯ್ದು, ನೀರಿಗೆ ತಳ್ಳಿ ಕೊಲೆ ಮಾಡಿದ. ಇದಾದ ನಂತರ ಈ ಘಟನೆಯನ್ನು ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿರುವುದಾಗಿ ಬಿಂಬಿಸಲು ಪ್ರಯತ್ನಿಸಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ತನ್ನ ಮಗಳು ಮತ್ತು ಮೊಮ್ಮಕ್ಕಳ ಸಾವು ಸಹಜವಲ್ಲ ಎಂದು ಫರ್ಹತ್‌ನ ತಂದೆ ಅನುಮಾನ ವ್ಯಕ್ತಪಡಿಸಿ ಅಜರುದ್ದೀನ್ ವಿರುದ್ಧ ಆರೋಪ ಮಾಡಿದ್ದರು. ಇದರ ಆಧಾರದ ಮೇಲೆ ಪೊಲೀಸರು ಅವನನ್ನು ವಿಚಾರಣೆಗಾಗಿ ವಶಕ್ಕೆ ಪಡೆದರ. ಆ ಸಮಯದಲ್ಲಿ ಆತ ತಾನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಣ್ಣನ ಮೇಲಿನ ಕೋಪಕ್ಕೆ ಆತ ಸಾಕಿದ್ದ ನಾಯಿಗೆ ಗುಂಡಿಟ್ಟು ಕೊಂದ ಸಹೋದರ!: ಆರೋಪಿ ವಿರುದ್ಧ ಕೇಸ್ ದಾಖಲು​

ದೇವನಹಳ್ಳಿ, ಏಪ್ರಿಲ್​​ 03: ಅಣ್ಣನ ಮೇಲಿನ ಕೋಪಕ್ಕೆ ಆತ ಸಾಕಿದ್ದ ನಾಯಿಗೆ ಗುಂಡಿಟ್ಟು ವ್ಯಕ್ತಿಯೋರ್ವ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ರೆಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಹೋದರ ವೆಂಕಟೇಶ್ ಮೇಲೆ ಇದ್ದ ಕೋಪಕ್ಕೆ ತಮ್ಮ ನಾರಾಯಣಸ್ವಾಮಿ ಈ ಕೃತ್ಯ ಎಸಗಿದ್ದು, ಆಸ್ತಿ ವಿಚಾರವಾಗಿ ಸಹೋದರರ ನಡುವೆ ಬಹು ಸಮಯದಿಂದ ಜಗಳ ನಡೆಯುತ್ತಿತ್ತು. ಈ ನಡುವೆ ತಾನು ಹೂಕೋಸು ಬೆಳೆದಿದ್ದ ಜಮೀನಿನಲ್ಲಿ ವೆಂಕಟೇಶ್​​ ಸಾಕಿದ್ದ ನಾಯಿ ಯಾವಾಗಲೂ ಸುತ್ತಾಡುತ್ತೆ ಎಂದು ಆರೋಪಿಸಿ ಸಹೋದರನ ಮನೆ ಬಳಿ ಬಂದ ನಾರಾಯಣಸ್ವಾಮಿ ಬಂದೂಕಿನಿಂದ ನಾಯಿಗೆ ಶೂಟ್​​ ಮಾಡಿದ್ದಾನೆ ಎನ್ನಲಾಗಿದೆ.

ಅಂದಹಾಗೆ ಇವರಿಬ್ಬರೂ ಮಲತಾಯಿ ಮಕ್ಕಳಾಗಿದ್ದು, ಇಬ್ಬರ ನಡುವೆ ಹಳೆಯ ದ್ವೇಷವಿತ್ತು. ನಾರಾಯಣಸ್ವಾಮಿ ಯಾವಾಗಲೂ ಅಣ್ಣ ವೆಂಕಟೇಶ್ ಕುಟುಂಬವನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದನಂತೆ. ಮೊನ್ನೆಯೂ ಬೇಕು ಅಂತಾ ರಸ್ತೆಯಲ್ಲಿ ಹೋಗ್ತಿದ್ದ ನಾಯಿಗೆ ನಾರಾಯಣಸ್ವಾಮಿ ಕಲ್ಲು ಹೊಡೆದು ಓಡಿಸಿದ್ದಲ್ಲದೆ, ಅದರ ಮೇಲೆ ಫೈರಿಂಗ್ ಮಾಡಿದ್ದಾನೆ. ಪರಿಣಾಮ ಗುಂಡೇಟು ತಿಂದ ಸಾಕು ನಾಯಿ ಸ್ಥಳದಲ್ಲೇ ಜೀವ ಬಿಟ್ಟಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೃತ ನಾಯಿಯ ಶವ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ಮಾಡಲಾಗಿದೆ. ಅಲ್ಲದೆ ಘಟನೆ ಬಗ್ಗೆ ವೆಂಕಟೇಶ್ ನೀಡಿದ ದೂರಿನ ಅನ್ವಯ ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.

ಇದನ್ನೂ ಓದಿ: ಗಂಡನ ಮನೆಯವರ ಕಿರುಕುಳಕ್ಕೆ ಜೀವಬಿಟ್ಟ 4 ತಿಂಗಳ ಗರ್ಭಿಣಿ; ಪತಿ ಮನೆಯವರಿಂದಲೇ ಕೊಲೆಯೆಂದು ಪೋಷಕರ ಆರೋಪ

ಇನ್ನು ಕೇಸ್​​ ದಾಖಲಾಗುತ್ತಿದ್ದಂತೆ ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ನಾಯಿ ಮೇಲೆ ಶೂಟ್ ಮಾಡಿದ್ದ ಗುಂಡನ್ನ ವಶಕ್ಕೆ ಪಡೆದಿದಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ನಾರಾಯಣಸ್ವಾಮಿ ಹಾಗೂ ಆತನ ಪತ್ನಿ ನಾಗಮ್ಮ ಮೇಲೆ FIR ದಾಖಲಾಗಿದ್ದು, ಸಹೋದರನ ಮೇಲಿನ ಸಿಟ್ಟಿಗೆ ಮೂಖ ಪ್ರಾಣಿಯನ್ನ ಕೊಂದ ಇಂತವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

CSK vs PBKS IPL 2026 Live Score: ತವರಿನಲ್ಲಿ ಗೆಲುವಿನ ಹುಡುಕಾಟದಲ್ಲಿ ಸಿಎಸ್​​ಕೆ – Kannada News | Chennai Super Kings vs Punjab Kings IPL 2026 Live Cricket Score CSK vs PBKS Match on 3rd april latest news in Kannada

ಐಪಿಎಲ್ 2026 ರ ಏಳನೇ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ತಮ್ಮ ತವರು ಮೈದಾನದಲ್ಲಿ ಎದುರಿಸುತ್ತಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ತಮ್ಮ ಮೊದಲ ಗೆಲುವಿನ ನಿರೀಕ್ಷೆಯನ್ನು ಕೊನೆಗೊಳಿಸಲು ಪ್ರಯತ್ನಿಸಿದರೆ, ಇತ್ತ ಪಂಜಾಬ್ ಕಿಂಗ್ಸ್ ತಂಡ ಸತತ ಎರಡನೇ ಪಂದ್ಯವನ್ನು ಗೆಲ್ಲ್ಲುವ ಇರಾದೆಯಲ್ಲಿದೆ.

Source link

ವೇದಿಕೆ ಮೇಲೆ ವಾಂತಿ ಮಾಡಿ ಬಿದ್ರು: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ

ಬೆಂಗಳೂರು, (ಏಪ್ರಿಲ್ 03): ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ (santosh hegde) ಅವರು ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದುಬಿದ್ದಿದ್ದಾರೆ. ಬೆಂಗಳೂರಿನ (Bengaluru) ಮಹಾರಾಣಿ ಕಾಲೇಜಿನ ಸಮೀಪವಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸಂತೋಷ್ ಹೆಗ್ಡೆ ಅವರನ್ನು ಆಹ್ವಾನಿಸಲಾಗಿತ್ತು. ವೇದಿಕೆಯ ಮೇಲೆ ಡಯಾಸ್ ಬಳಿ ನಿಂತು ನೆರೆದಿದ್ದವರನ್ನು ಉದ್ದೇಶಿಸಿ ಮಾತಾಡುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದಾರೆ. ಬಳಿಕ ಭಾಷಣ ಮುಗಿಸಿ ಕುರ್ಚಿ ಮೇಲೆ ಕುಳಿತುಕೊಳ್ಳಬೇಕೆನ್ನುವಷ್ಟರಲ್ಲೇ ಕೆಳಗೆ ಕುಸಿದು ಬಿದ್ದಿದ್ದಾರೆ. ಕೂಡಲೂ ಸಂತೋಷ್ ಹೆಗ್ಡೆ ಅವರನ್ನು ಸ್ಫೀಕರ್ ಯುಟಿ ಖಾದರ್ ತಮ್ಮ ಕಾರಿನಲ್ಲಿ ಮಣಿಪಾಲ್ ಆಸ್ಪತ್ರಗೆ ಕರೆದುಕೊಂಡು ಹೋಗಿದ್ದಾರೆ. ಸದ್ಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಇನ್ನು ಸಂತೋಷ್ ಹೆಗ್ಡೆ ಅವರಿಗೆ ಏಕಾಏಕಿ ಏನಾಯ್ತು? ಎನ್ನುವ ಬಗ್ಗೆ ಖಾದರ್ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

Source link