‘ರಾಮಾಯಣ’ ಟೀಸರ್: ದೃಶ್ಯ ವೈಭವದಲ್ಲಿ ಮಿಂದೆದ್ದ ಹಿಂದೂ ಪುರಾಣ ಪುಣ್ಯ ಕತೆ
ಭಾರತ ಚಿತ್ರರಂಗದ (Indian Film) ಅತ್ಯಂತ ದೊಡ್ಡ ಬಜೆಟ್ ಸಿನಿಮಾ ‘ರಾಮಾಯಣ’ದ (Ramayana) ಟೀಸರ್ ಇಂದು (ಏಪ್ರಿಲ್ 02) ಬಿಡುಗಡೆ ಆಗಿದೆ. ಹನುಮಜಯಂತಿಯಂದು ‘ರಾಮಾಯಣ’ ಸಿನಿಮಾದ ಟೀಸರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಭಾರತೀಯ ಚಿತ್ರರಂಗದಲ್ಲಿ ಈ ವರೆಗೆ ಹಲವಾರು ಭಾರಿ, ಹಲವಾರು ಭಾಷೆಗಳಲ್ಲಿ ರಾಮಾಯಣ ಕತೆ ಸಿನಿಮಾ ಆಗಿ ಮೂಡಿ ಬಂದಿದೆ. ಪ್ರತಿಬಾರಿಯೂ ಭಿನ್ನ ರೀತಿಯಲ್ಲಿ ಪುರಾಣ ಪುಣ್ಯ ಕತೆಯನ್ನು ಪ್ರಸ್ತುತ ಪಡಿಸಲಾಗಿದೆ. ಇದೀಗ ಬರಲಿರುವ ‘ರಾಮಾಯಣ’ ಈ ವರೆಗೆ ಭಾರತೀಯ ಚಿತ್ರರಂಗ ಮಾಡಿದ ಸಾಹಸಗಳಲ್ಲಿಯೇ…