ಟ್ರೆಕ್ಕಿಂಗ್ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: ಮೂರು ದಿನಗಳಾದರೂ ಆಗಿಲ್ಲ ಪತ್ತೆ!
ಮಡಿಕೇರಿ, ಏಪ್ರಿಲ್ 05: ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ಟ್ರೆಕ್ಕಿಂಗ್ಗೆ ತೆರಳಿದ್ದ ಕೇರಳ ಮೂಲದ ಯುವತಿ ನಾಪತ್ತೆಯಾಗಿ ಮೂರು ದಿನಗಳಾದರೂ ಆಕೆಯ ಸುಳಿವು ಮಾತ್ರ ಈವರೆಗೂ ಸಿಕ್ಕಿಲ್ಲ. ಎರ್ನಾಕುಲಂನಲ್ಲಿ ಐಟಿ ಉದ್ಯೋಗಿಯಾಗಿರುವ ಕೇರಳದ ಕೋಯಿಕ್ಕೋಡ್ ನಿವಾಸಿ 35 ವರ್ಷದ ಶರಣ್ಯಾ ಕಕ್ಕಬ್ಬೆ ಗ್ರಾಮದ ಹೋಂಸ್ಟೇಯೊಂದರಿಂದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆಂದು ತೆರಳಿದ್ದಳು. ಬೆಳಗ್ಗೆ 8.30ರ ಸುಮಾರಿಗೆ ಟ್ರೆಕ್ಕಿಂಗ್ಗೆ ತೆರಳಲು ಅರಣ್ಯ ಇಲಾಖೆಯ ಚೆಕ್ಪೋಸ್ಟ್ ಬಳಿ ಈಕೆ ಬಂದಿದ್ದಳು. ಆದ್ರೆ ಒಬ್ಬೊಬ್ಬರನ್ನೇ ಟ್ರೆಕ್ಕಿಂಗ್ ಬಿಡದ ಕಾರಣ ಬೇರೊಂದು ಗ್ರೂಪ್…