ರಾಯಚೂರು, ಏಪ್ರಿಲ್ 2: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಮಾರ್ಚ್ ತಿಂಗಳ ಕೇವಲ 21 ದಿನಗಳಲ್ಲಿ ಭಕ್ತರು ದಾಖಲೆ ಪ್ರಮಾಣದ ಕಾಣಿಕೆ ಅರ್ಪಿಸಿದ್ದಾರೆ. ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು 2,48,28,737 ರೂಪಾಯಿ ನಗದು ಸಂಗ್ರಹವಾಗಿದೆ. ಇದರೊಂದಿಗೆ 14 ಗ್ರಾಂ ಚಿನ್ನ ಹಾಗೂ 2.16 ಕೆಜಿ ಬೆಳ್ಳಿಯ ಆಭರಣಗಳನ್ನು ಭಕ್ತರು ರಾಯರ ಪಾದಕ್ಕೆ ಸಮರ್ಪಿಸಿದ್ದಾರೆ ಎಂದು ಶ್ರೀಮಠದ ಮೂಲಗಳು ತಿಳಿಸಿವೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಂಗೇರುತ್ತಿರುವ ಬೆನ್ನಲ್ಲೇ, ಭಾರತ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ನೀಡಿರುವ ಒಂದು ಹೇಳಿಕೆ ಈಗ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಅದು ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ತುಚ್ಛವಾಗಿ ಕಾಣುವ ಮೂಲಕ. ಅಂದರೆ ತಾನು ಐಪಿಎಲ್ ಆಡುತ್ತಿದ್ದ ಸಮಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳನ್ನು ಹೇಗೆ ನೋಡುತ್ತಿದ್ದೆವು ಎಂಬ ವಿಚಾರವನ್ನು ಸೆಹ್ವಾಗ್ ಮುಕ್ತವಾಗಿ ಹಂಚಿಕೊಂಡಿದ್ದಾರೆ.
ಸೆಹ್ವಾಗ್ ಅವರ ಪ್ರಕಾರ, ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ವಿರುದ್ಧ ಆಡುವಾಗ ಅವರಿಗೆ ಯಾವುದೇ ಭಯವಿರುತ್ತಿರಲಿಲ್ಲ. “ಸಿಎಸ್‌ಕೆ ಸೋಲಿಸುವುದು ಕಷ್ಟ ಎಂಬುದು ನಮಗೆ ತಿಳಿದಿತ್ತು, ಹಾಗಾಗಿ ಅವರ ವಿರುದ್ಧ ಗೆದ್ದರೆ ಅದು ನಮಗೆ ‘ಬೋನಸ್’ ಎಂದು ಭಾವಿಸುತ್ತಿದ್ದೆವು” ಎಂದಿದ್ದಾರೆ. ಆದರೆ ಅಸಲಿ ಭಯವಿದ್ದುದು ಆರ್‌ಸಿಬಿ ಮತ್ತು ಡೆಲ್ಲಿ ವಿರುದ್ಧ ಆಡುವಾಗವಂತೆ!
‘ಫ್ರೀ ಪಾಯಿಂಟ್ಸ್’
“ಆರ್‌ಸಿಬಿ ಮತ್ತು ಡೆಲ್ಲಿ ತಂಡಗಳ ವಿರುದ್ಧದ ಪಂದ್ಯಗಳನ್ನು ನಾವು ‘ಫ್ರೀ ಪಾಯಿಂಟ್ಸ್’ (ಸುಲಭದ ಅಂಕಗಳು) ಎಂದು ಪರಿಗಣಿಸುತ್ತಿದ್ದೆವು. ಈ ಪಂದ್ಯಗಳನ್ನು ನಾವು ಯಾವುದೇ ಕಾರಣಕ್ಕೂ ಸೋಲಬಾರದು ಎಂಬ ದೊಡ್ಡ ಒತ್ತಡ ನಮ್ಮ ಮೇಲಿರುತ್ತಿತ್ತು. ಟೇಬಲ್‌ನಲ್ಲಿ ಮೇಲೆ ಬರಲು ಈ ಎರಡು ಅಂಕಗಳು ಅತ್ಯಂತ ಸುಲಭ ಮತ್ತು ಅನಿವಾರ್ಯವಾಗಿದ್ದವು” ಎಂದು ಸೆಹ್ವಾಗ್ ಹೇಳಿದ್ದಾರೆ.
ನಾವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ನಮಗೆ ಅಂಕಗಳನ್ನು ನೀಡುವ ತಂಡಗಳೆಂದೇ ನೋಡುತ್ತಿದ್ದೆವು. ಹೀಗಾಗಿಯೇ ಅವರ ವಿರುದ್ಧ ಸೋತು ಬಿಟ್ಟರೆ ಎಂಬ ಭಯ ಕಾಡುತ್ತಿತ್ತು ಎಂದು ವೀರೇಂದ್ರ ಸೆಹ್ವಾಗ್ ವ್ಯಂಗ್ಯವಾಡಿದ್ದಾರೆ.
ಬದಲಾದ ಆರ್‌ಸಿಬಿ:
ವೀರೇಂದ್ರ ಸೆಹ್ವಾಗ್ ಅವರ ಈ ಹಳೆಯ ಅನುಭವದ ಮಾತುಗಳು ಇಂದಿನ ಐಪಿಎಲ್ 2026ಕ್ಕೆ ಅನ್ವಯಿಸುವುದಿಲ್ಲ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರಸ್ತುತ ಐಪಿಎಲ್ನ ಬಲಿಷ್ಠ ತಂಡ. ಅದರಲ್ಲೂ ಕಳೆದ ಸೀಸನ್‌ನಲ್ಲಿ (2025) ಚಾಂಪಿಯನ್ ಆಗಿ ಹೊರಹೊಮ್ಮಿರುವ ಆರ್‌ಸಿಬಿ, ಈಗ ‘ಡಿಫೆಂಡಿಂಗ್ ಚಾಂಪಿಯನ್ಸ್’ ಪಟ್ಟದೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.
ಇದಾಗ್ಯೂ ಕಾಮೆಂಟ್ರಿ ಮಾಡುವಾಗ ಇತರೆ ತಂಡಗಳ ಅಭಿಮಾನಿಗಳನ್ನು ಕೆಣಕುವ ರೀತಿಯಲ್ಲಿ ಮಾತನಾಡುವ ವೀರೇಂದ್ರ ಸೆಹ್ವಾಗ್ ವಿರುದ್ಧ ಇದೀಗ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಅದರಲ್ಲೂ ಫ್ರೀ ಪಾಯಿಂಟ್ಸ್ ಹೇಳಿಕೆ ನೀಡಿರುವ ಸೆಹ್ವಾಗ್ ಎಷ್ಟು ಐಪಿಎಲ್ ಟ್ರೋಫಿ ಗೆದ್ದಿದ್ದಾರೆ ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆಗಳನ್ನೆತ್ತಿದ್ದಾರೆ.
ಕೋಲಾರ, ಏಪ್ರಿಲ್ 2: ಕೋಲಾರ (Kolar) ಜಿಲ್ಲಾ ಕೇಂದ್ರದ ಆಜಾದ್ ನಗರದಲ್ಲಿ ಬುಧವಾರ ರಾತ್ರಿ ಭೀಕರ ಘಟನೆಯೊಂದು ಸಂಭವಿಸಿದೆ. ಅಕ್ರಮ ಸಂಬಂಧದ ಆರೋಪದ ಹಿನ್ನೆಲೆಯಲ್ಲಿ ನಡೆದ ರಾಜಿ ಸಂಧಾನ ವಿಕೋಪಕ್ಕೆ ತಿರುಗಿ, ಮಹಿಳೆಯೊಬ್ಬಳು ತನ್ನ ಪತಿಯ ಜತೆ ಅಕ್ರಮ ಸಂಬಂಧ ಹೊಂದಿದ್ದಾಕೆಯ ಮೇಲೆ ಆಸಿಡ್ ಎರಚಿದ್ದಾಳೆ. ಘಟನೆಯಲ್ಲಿ ಮುಸ್ಕಾನ್ ಎಂಬ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.
ಆರೋಪಿ ಆಯೇಷಾ ಹಾಗೂ ಗಾಯಾಳು ಮುಸ್ಕಾನ್ ಇಬ್ಬರೂ ಪರಸ್ಪರ ಸಂಬಂಧಿಕರು. ಆಯೇಷಾಳ ಪತಿ ಶಾಬಾಜ್ ಅಹಮದ್‌ನ ತಮ್ಮನ ಪತ್ನಿ ಮುಸ್ಕಾನ್ ಎನ್ನಲಾಗಿದೆ. ಮುಸ್ಕಾನ್ ಪತಿ ಕುಡಿತದ ವ್ಯಸನಿಯಾಗಿದ್ದು, ಸಂಸಾರ ನಿರ್ವಹಣೆಯಲ್ಲಿ ವಿಫಲನಾಗಿದ್ದ. ಈ ಸಂದರ್ಭದಲ್ಲಿ ಶಾಬಾಜ್ ಅಹಮದ್ ಹಣಕಾಸಿನ ನೆರವು ನೀಡುತ್ತಿದ್ದ. ಅಲ್ಲದೆ, ಆ ನೆಪದಲ್ಲಿ ಮುಸ್ಕಾನ್ ಜೊತೆಗೆ ಅಕ್ರಮ ಸಂಬಂಧ ಬೆಳೆಸಿದ್ದ ಎಂಬ ಆರೋಪವಿದೆ.
ಮೂರು ತಿಂಗಳ ಹಿಂದೆ ಮುಸ್ಕಾನ್ ಮತ್ತು ಶಾಬಾಜ್ ಅಹಮದ್ ಓಡಿಹೋಗಿ ಬೆಂಗಳೂರಿನಲ್ಲಿ ವಾಸವಿದ್ದರು. ಇತ್ತೀಚೆಗಷ್ಟೇ ಸಂಬಂಧಿಕರು ಇವರನ್ನು ಪತ್ತೆಹಚ್ಚಿ ಕೋಲಾರಕ್ಕೆ ಕರೆತಂದಿದ್ದರು.
ರಾಜಿ ಸಂಧಾನದಲ್ಲಿ ಗಲಾಟೆ
ಸಮಸ್ಯೆಯನ್ನು ಬಗೆಹರಿಸಲು ಬುಧವಾರ ರಾತ್ರಿ ಸಂಬಂಧಿಕರ ಮನೆಯೊಂದರಲ್ಲಿ ‘ರಾಜಿ ಪಂಚಾಯ್ತಿ’ ಹಮ್ಮಿಕೊಳ್ಳಲಾಗಿತ್ತು. ಮಾತಿನ ಚಕಮಕಿ ನಡೆಯುತ್ತಿರುವಾಗಲೇ ಆಕ್ರೋಶಗೊಂಡ ಆಯೇಷಾ, ತಾನು ಮೊದಲೇ ಸಿದ್ಧಪಡಿಸಿಕೊಂಡು ತಂದಿದ್ದ ಬಾತ್ ರೂಂ ಕ್ಲೀನಿಂಗ್ ಆಸಿಡ್ ಅನ್ನು ಮುಸ್ಕಾನ್ ಮುಖಕ್ಕೆ ಎರಚಿದ್ದಾಳೆ. ದಾಳಿಯ ಬಳಿಕ ಆಯೇಷಾ ಸ್ಥಳದಿಂದ ಪರಾರಿಯಾಗಿದ್ದಾಳೆ.
ವಿಷಯ ತಿಳಿಯುತ್ತಿದ್ದಂತೆಯೇ ಗಲ್ ಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿ, ನೋವಿನಿಂದ ನರಳುತ್ತಿದ್ದ ಮುಸ್ಕಾನ್ ಅವರನ್ನು ತಮ್ಮ ಜೀಪ್‌ನಲ್ಲೇ ಕರೆದೊಯ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಎಸ್‌ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಲೆಮರೆಸಿಕೊಂಡಿದ್ದ ಆಯೇಷಾಳನ್ನು ಪೊಲೀಸರು ಸದ್ಯ ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಬೆಂಗಳೂರು, ಏಪ್ರಿಲ್ 2: ಸಿಲಿಕಾನ್ ಸಿಟಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಈಗ ಕೇವಲ ಕ್ರಿಕೆಟ್ ಪಂದ್ಯಗಳಿಗಷ್ಟೇ ಅಲ್ಲ, ಸುಸಜ್ಜಿತ ಜನಸಂದಣಿ ನಿರ್ವಹಣೆಗೂ (Crowd Management) ಮಾದರಿಯಾಗಿ ಹೊರಹೊಮ್ಮಿದೆ. ಆರ್‌ಸಿಬಿ (RCB) ವಿಜಯೋತ್ಸವ ಕಾಲ್ತುಳಿತ ಘಟನೆಯಿಂದ ಇಡೀ ದೇಶದ ಗಮನ ಸೆಳೆದಿದ್ದ, ಜನಸಂದಣಿ ನಿರ್ವಹಣೆಯಲ್ಲಿ ವಿಫಲವಾಗಿದ್ದ ಬೆಂಗಳೂರು ಅದಾಗಿ ಒಂದು ವರ್ಷದ ಒಳಗೇ ದೇಶದ ಇತರ ರಾಜ್ಯಗಳ ಹುಬ್ಬೇರುವಂತೆ ಮಾಡಿದೆ. ಇತ್ತೀಚೆಗೆ ನಡೆದ ಐಪಿಎಲ್ ಉದ್ಘಾಟನಾ ಪಂದ್ಯದ ಅದ್ಭುತ ವ್ಯವಸ್ಥೆಯನ್ನು ಕಂಡು ಮುಂಬೈ ಮತ್ತು ಕೋಲ್ಕತ್ತಾದಂತಹ ಮೆಟ್ರೋ ಪಾಲಿಟನ್ ನಗರಗಳ ಕ್ರಿಕೆಟ್ ಆಡಳಿತ ಮಂಡಳಿಗಳು ಬೆಂಗಳೂರು ಮಾದರಿಯ ಮಾಹಿತಿಯನ್ನು ಕೋರಿವೆ.
ಕಳೆದ ವರ್ಷ ಆರ್‌ಸಿಬಿ ಐಪಿಎಲ್ ವಿಜಯೋತ್ಸವ ಕಾರ್ಯಕ್ರಮದ ವೇಳೆ ನಡೆದ ಕಾಲ್ತುಳಿತ ಮತ್ತು ಗೊಂದಲದ ಪರಿಸ್ಥಿತಿಯಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಮತ್ತು ಬೆಂಗಳೂರು ಪೊಲೀಸರು ಎಚ್ಚೆತ್ತುಕೊಂಡಿತ್ತು. ಆ ಕಹಿ ಘಟನೆಯನ್ನು ಸವಾಲಾಗಿ ಸ್ವೀಕರಿಸಿದ ಆಡಳಿತ ಮಂಡಳಿ, ಈ ಬಾರಿ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಐಪಿಎಲ್ ಉದ್ಘಾಟನಾ ಪಂದ್ಯದ ವೇಳೆ ಮೈದಾನದ ಒಳಗೆ ಮತ್ತು ಹೊರಗೆ ಯಾವುದೇ ನೂಕುನುಗ್ಗಲು ಉಂಟಾಗದಂತೆ ಅತ್ಯಾಧುನಿಕ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು. ಇದು ಗಮನ ಸೆಳೆದಿದೆ.
ಐಪಿಎಲ್ ಟಿಕೆಟ್ನಲ್ಲಿ ಮೆಟ್ರೋ ಕ್ಯೂಆರ್ ಕೋಡ್: ದೇಶಾದ್ಯಂತ ಮೆಚ್ಚುಗೆ
ಬೆಂಗಳೂರಿನ ಈ ಯಶಸ್ಸಿನ ಹಿಂದೆ ಇದ್ದ ಪ್ರಮುಖ ಸೂತ್ರವೆಂದರೆ ‘ಮ್ಯಾಚ್ ಟಿಕೆಟ್ ಜೊತೆಯೇ ಮೆಟ್ರೋ ಟಿಕೆಟ್’ ಸೌಲಭ್ಯ. ಕ್ರಿಕೆಟ್ ಟಿಕೆಟ್ ಖರೀದಿಸಿದವರಿಗೇ ಮೆಟ್ರೋ ಪ್ರಯಾಣದ ಕ್ಯೂಆರ್ ಕೋಡ್ (QR Code) ನೀಡಿದ ವ್ಯವಸ್ಥೆಗೆ ಮುಂಬೈ ಮತ್ತು ಕೋಲ್ಕತ್ತಾ ಕ್ರಿಕೆಟ್ ಮಂಡಳಿಗಳು ಮಾರುಹೋಗಿವೆ. ಇದರಿಂದ ಸ್ಟೇಡಿಯಂ ಸುತ್ತಮುತ್ತ ಖಾಸಗಿ ವಾಹನಗಳ ಹಾವಳಿ ಕಡಿಮೆಯಾಗಿ, ಟ್ರಾಫಿಕ್ ಸಮಸ್ಯೆ ಗಣನೀಯವಾಗಿ ತಗ್ಗಿದೆ.
ಐಪಿಎಲ್ ಪಂದ್ಯಗಳಿಗಾಗಿ ಮುಂದಿನ ಯೋಜನೆಗಳೇನು?
ಮೆಟ್ರೋ ಯಶಸ್ಸಿನ ಬೆನ್ನಲ್ಲೇ, ಮುಂದಿನ ಪಂದ್ಯಗಳ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಿಂದ ನೇರವಾಗಿ ಮೆಜೆಸ್ಟಿಕ್‌ಗೆ ವಿಶೇಷ ಬಸ್ ವ್ಯವಸ್ಥೆ ಮಾಡಲು ಬಿಎಂಟಿಸಿ ಜೊತೆ ಮಾತುಕತೆ ನಡೆಸಲಾಗುತ್ತಿದೆ. ಮತ್ತೊಂದೆಡೆ, ನಕಲಿ ಟಿಕೆಟ್ ಹಾವಳಿಗೆ ಬ್ರೇಕ್ ಹಾಕಲೂ ಕ್ರಮ ಕೈಗೊಳ್ಳಲಾಗುತ್ತಿದೆ.
1,500 ರೂಪಾಯಿ ಮುಖಬೆಲೆಯ ಟಿಕೆಟ್‌ಗಳಲ್ಲಿ ನಕಲಿ ಹಾವಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಇನ್ನು ಮುಂದೆ ಕಡಿಮೆ ಬೆಲೆಯ ಟಿಕೆಟ್‌ಗಳನ್ನು ಕೇವಲ ಆನ್‌ಲೈನ್‌ನಲ್ಲಿ ಮಾತ್ರ ಮಾರಾಟ ಮಾಡಲು ಚಿಂತನೆ ನಡೆಸಲಾಗಿದೆ. ಆಫ್‌ಲೈನ್ ಕೌಂಟರ್‌ಗಳಲ್ಲಿ ಉಂಟಾಗುವ ಜನಸಂದಣಿ ತಪ್ಪಿಸಲು ಇದು ಸಹಕಾರಿಯಾಗಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 5 ದಿನಗಳಾಗಿವೆ. ಈ ಐದು ದಿನಗಳಲ್ಲಿ 10 ತಂಡಗಳು ಕಣಕ್ಕಿಳಿದಿವೆ. ಈ ಹತ್ತು ತಂಡಗಳಲ್ಲಿ ಐದು ಟೀಮ್ಗಳು ಗೆದ್ದರೆ, ಮತ್ತೈದು ತಂಡಗಳು ಸೋಲನುಭವಿಸಿದೆ. ಈ ಸೋಲು-ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂದು ನೋಡುವುದಾದರೆ…
ರಾಜಸ್ಥಾನ್ ರಾಯಲ್ಸ್: ಪ್ರಸ್ತುತ ಅಂಕ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಅಗ್ರಸ್ಥಾನದಲ್ಲಿದೆ. ಸಿಎಸ್‌ಕೆ ನೀಡಿದ 128 ರನ್ಗಳ ಗುರಿಯನ್ನು ಕೇವಲ 12.1 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ ಆರ್ಆರ್ ತಂಡವು 8 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿದೆ. ಈ ಭರ್ಜರಿ ಗೆಲುವಿನ ಪರಿಣಾಮ ರಾಜಸ್ಥಾನ್ ರಾಯಲ್ಸ್ ತಂಡವು +4.171 ನೆಟ್ ರನ್ ರೇಟ್ನೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 202 ರನ್ಗಳ ಗುರಿಯನ್ನು 15.4 ಓವರ್ಗಳಲ್ಲಿ ಚೇಸ್ ಮಾಡಿ 6 ವಿಕೆಟ್ಗಳ ಜಯ ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಆರ್‌ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ +2.907 . ಅಂದರೆ ಆರ್‌ಸಿಬಿ ಮತ್ತು ಆರ್ಆರ್ ನಡುವೆ +1.264 ನೆಟ್ ರನ್ ರೇಟ್ ವ್ಯತ್ಯಾಸವಿದೆ.
ಡೆಲ್ಲಿ ಕ್ಯಾಪಿಟಲ್ಸ್: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮೊದಲ ಗೆಲುವಿನೊಂದಿಗೆ ಒಟ್ಟು +1.397 ನೆಟ್ ರನ್ ರೇಟ್ ಪಡೆದುಕೊಂಡಿದೆ.
ಮುಂಬೈ ಇಂಡಿಯನ್ಸ್: ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ದಾಖಲೆಯ 221 ರನ್ಗಳ ಗುರಿಯನ್ನು ಚೇಸ್ ಮಾಡಿ ಗೆದ್ದ ಮುಂಬೈ ಇಂಡಿಯನ್ಸ್ ತಂಡವು ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.687 .
ಪಂಜಾಬ್ ಕಿಂಗ್ಸ್: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 3 ವಿಕೆಟ್ಗಳ ರೋಚಕ ಜಯ ಸಾಧಿಸಿದ ಪಂಜಾಬ್ ಕಿಂಗ್ಸ್ 5ನೇ ಸ್ಥಾನವನ್ನು ಅಲಂಕರಿಸಿದೆ. ಪಂಜಾಬ್ ಪಡೆಯು ಮೊದಲ ಗೆಲುವಿನೊಂದಿಗೆ ಒಟ್ಟು +0.509 ನೆಟ್ ರನ್ ರೇಟ್ ಪಡೆದುಕೊಂಡಿದೆ.
ಇನ್ನುಳಿದಂತೆ ಗುಜರಾತ್ ಟೈಟಾನ್ಸ್ 6ನೇ ಸ್ಥಾನದಲ್ಲಿದ್ದರೆ, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 7ನೇ ಸ್ಥಾನದಲ್ಲಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್ 8ನೇ, ಸನ್ರೈಸರ್ಸ್ ಹೈದರಾಬಾದ್ 9ನೇ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ 10ನೇ ಸ್ಥಾನದಲ್ಲಿದೆ.
ಜೀ ಕನ್ನಡದಲ್ಲಿ ಏಪ್ರಿಲ್ 4ರಂದು ಜೋಡಿ ನಂಬರ್ 1 ಶೋ ಆರಂಭ ಆಗಲಿದೆ. ಈ ಶೋ ನೋಡಲು ಫ್ಯಾನ್ಸ್ ಕಾದಿದ್ದಾರೆ. 10 ಸೆಲೆಬ್ರಿಟಿ ಜೋಡಿಗಳು ಶೋನಲ್ಲಿ ಭಾಗವಹಿಸುತ್ತಿದ್ದಾರೆ. ಧನರಾಜ್, ಬಾಳು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗವಹಿಸುತ್ತಿದ್ದಾರೆ. ಈ ಶೋಗೆ ನೆನಪಿರಲಿ ಪ್ರೇಮ್, ಮಾಳವಿಕಾ, ರಾಜೇಶ್ ನಟರಂಗ, ಛಾಯಾ ಸಿಂಗ್ ಜಡ್ಜ್ ಸ್ಥಾನದಲ್ಲಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಇಲ್ಲಿದೆ.
ನವದೆಹಲಿ, ಏಪ್ರಿಲ್ 2: ಪ್ರಧಾನಿ ನರೇಂದ್ರ ಮೋದಿ (Narendra Modi) ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ ಎಂದು ಹೇಳುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಅಮರ್ಉಜಾಲಾ ನಡೆಸಿದ ಫ್ಯಾಕ್ಟ್ಚೆಕ್ನಲ್ಲಿ ಅದು ಸುಳ್ಳು ಎಂಬುದು ತಿಳಿದುಬಂದಿದೆ. ಸೋನಿಯಾ ಗಾಂಧಿ ಅವರನ್ನು ಮಂಗಳವಾರ ಬೆಳಗ್ಗೆ ರಾಜಧಾನಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ಜ್ವರ ಕಾಣಿಸಿಕೊಂಡ ನಂತರ ಮಾರ್ಚ್ 24 ರಂದು ಅವರನ್ನು ಅಲ್ಲಿಗೆ ದಾಖಲಿಸಲಾಗಿತ್ತು. ಆ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಸ್ಪತ್ರೆಗೆ ಭೇಟಿ ನೀಡಿರುವಂತೆ ಕಾಣುವ ಫೋಟೊಗಳು ಕೂಡ ಕಾಣಿಸಿಕೊಂಡಿತ್ತು. ಈ ಫೊಟೊವನ್ನು ಎಐ ಮೂಲಕ ಚಿತ್ರಿಸಲಾಗಿದೆ. ತೇಜಸ್ವಿ ಯಾದವ್ ಆರ್‌ಜೆಡಿ ಎಂಬ ಫೇಸ್‌ಬುಕ್ ಬಳಕೆದಾರರು ದೀರ್ಘಕಾಲದಿಂದ ದಾಖಲಾಗಿರುವ ಸೋನಿಯಾ ಗಾಂಧಿ ಅವರನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಆಸ್ಪತ್ರೆಯಲ್ಲಿ ಭೇಟಿ ಮಾಡಿದರು ಎಂದು ಬರೆದಿದ್ದರು.
ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿವೆ. ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಎಲ್ಲಾ ಪ್ರಮುಖ ಪಕ್ಷಗಳು ತಮ್ಮ ಕಾರ್ಯತಂತ್ರಗಳನ್ನು ಅಂತಿಮಗೊಳಿಸುವಲ್ಲಿ ನಿರತವಾಗಿವೆ ಮತ್ತು ಚುನಾವಣಾ ಪ್ರಚಾರಗಳು ತಳಮಟ್ಟದಲ್ಲಿ ವೇಗವನ್ನು ಪಡೆದಿವೆ.
ಈ ಮಧ್ಯೆ, ಸಾಮಾಜಿಕ ಮಾಧ್ಯಮದಲ್ಲಿ ಒಂದು ಫೋಟೋ ವೇಗವಾಗಿ ವೈರಲ್ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಅದು ಹೇಳುತ್ತದೆ.
ಈ ಫೋಟೋದಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಇದ್ದಾರೆ.
ಇಂದು ನರೇಂದ್ರ ಮೋದಿ ತಮ್ಮ ವಿರೋಧ ಪಕ್ಷದ ನಾಯಕರನ್ನು ಭೇಟಿಯಾದರು ಎನ್ನುವ ಶೀರ್ಷಿಕೆಯಲ್ಲಿ ಫೋಟೊ ವೈರಲ್ ಮಾಡಲಾಗಿತ್ತು. ವೈರಲ್ ಫೋಟೋದಲ್ಲಿ ಸಿಂಥ್‌ಐಡಿ ವಾಟರ್‌ಮಾರ್ಕ್ (AI ವಿಷಯ ಗುರುತಿನ ಸಾಧನ) ಕಂಡುಬಂದಿದೆ. ನೀಲಿ ಬಣ್ಣವು ಎಐ-ರಚಿತ ಭಾಗವನ್ನು ಎತ್ತಿ ತೋರಿಸುತ್ತದೆ.
ಬಾಲಿವುಡ್ನಲ್ಲಿ ಹಲವು ವರ್ಷಗಳ ಕಾಲ ಮಿಂಚಿದವರು ರಾಜೇಶ್ ಖನ್ನಾ. ಅವರು ಮೃತಪಟ್ಟು ಹಲವು ವರ್ಷಗಳೇ ಕಳೆದಿವೆ. ಆದರೆ, ಅವರ ಮೇಲೆ ಇರುವ ಒಂದು ವಿವಾದ ಮಾತ್ರ ಈಗಲೂ ಸುದ್ದಿ ಆಗುತ್ತಿದೆ. ‘ರಾಜೇಶ್ ಖನ್ನಾ ನನ್ನ ಪತಿ’ ಎಂದು ನಟಿ ಅನಿತಾ ಅಡ್ವಾಣಿ ಅವರು ಹೇಳಿಕೊಂಡಿದ್ದರು. ಅದರೆ, ಕೋರ್ಟ್ಅಲ್ಲಿ ಅವರಿಗೆ ಹಿನ್ನಡೆ ಆಗಿದೆ. ಅವರಿಗೆ ಪತ್ನಿಯ ಸ್ಥಾನ ಕೊಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.
‘ಕಾನೂನಾತ್ಮಕವಾಗಿ ರಾಜೇಶ್ ಖನ್ನಾ ನಿಮ್ಮ ಪತಿ ಆಗಲು ಸಾಧ್ಯವಿಲ್ಲ’ ಎಂದು ದಿಂಡೋಶಿ ಸೆಷನ್ ಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪನ್ನು ಅನಿತಾ ಅಡ್ವಾಣಿ ಬಾಂಬೇ ಹೈಕೋರ್ಟ್ ಅಲ್ಲಿ ಪ್ರಶ್ನೆ ಮಾಡಿದ್ದರು. ಅಲ್ಲಿಯೂ ಅನಿತಾಗೆ ಹಿನ್ನಡೆ ಆಗಿದೆ.
ಅನಿತಾ ಅವರು ಬಾಂಬೇ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ ಬಳಿಕ ರಾಜೇಶ್ ಪರವಾಗಿ ಅವರ ಮಗಳು ಟ್ವಿಂಕಲ್ ಖನ್ನಾ, ಅಳಿತ ಅಕ್ಷಯ್ ಕುಮಾರ್ ಹಾಗೂ ಪತ್ನಿ ಡಿಂಪಲ್ ಕಪಾಡಿಯಾ ವಕಲೀರೊಬ್ಬರನ್ನು ನೇಮಿಸಿದ್ದರು. ಅನಿತಾ ಅಡ್ವಾಣಿ ಅವರನ್ನು ರಾಜೇಶ್ ಪತ್ನಿ ಎಂದು ಕರೆಯಲು ಸಾಧ್ಯವಿಲ್ಲ ಎಂದು ವಾದಿಸಲಾಯಿತು. ಇದನ್ನು ಕೋರ್ಟ್ ಪುರಸ್ಕರಿಸಿದೆ.
‘ನನ್ನ ಹಾಗೂ ರಾಜೇಶ್ ಮಧ್ಯೆ ಪತ್ನಿ ರೀತಿಯ ಸಂಬಂಧ ಇತ್ತು. ಅದು ಮದುವೆ ರೀತಿಯೇ ಆಗಿತ್ತು. ರಾಜೇಶ್ ನಿಧನದ ನಂತರ ನನ್ನನ್ನು ಮನೆಯಿಂದ ಹೊರಕ್ಕೆ ಹಾಕಲಾಯಿತು’ ಎಂದು ಅನಿತಾ ಆರೋಪಿಸಿದ್ದಾರೆ. ಲಿವಿನ್ ರಿಲೇಶನ್ಶಿಪ್ಗೆ ಮದುವೆಯ ಸ್ಥಾನ ಕೊಡಲು ಸಾಧ್ಯವಿಲ್ಲ ಎಂಬುದು ಕೋರ್ಟ್ ಅಭಿಪ್ರಾಯ.
ರಾಜೇಶ್ ಖನ್ನಾ ಭಾರತ ಚಿತ್ರರಂಗದ ಅತಿದೊಡ್ಡ ಸೂಪರ್‌ಸ್ಟಾರ್‌ಗಳಲ್ಲಿ ಒಬ್ಬರು. ಅವರು 1965ರಲ್ಲಿ 1969 ಮತ್ತು 1971 ರ ನಡುವೆ, ಅವರು ಸತತ 15 ಹಿಟ್ ಚಿತ್ರಗಳನ್ನು ನೀಡಿದರು. ಇದು ಹಿಂದಿ ಚಿತ್ರರಂಗದಲ್ಲಿ ದಾಖಲೆಯಾಗಿದೆ. ಅವರು ಮೂರು ಫಿಲ್ಮ್‌ಫೇರ್ (ಅತ್ಯುತ್ತಮ ನಟ) ಪ್ರಶಸ್ತಿಗಳನ್ನು ಗೆದ್ದರು. ಅವರು ಕೆಲ ವರ್ಷ ರಾಜಕೀಯದಲ್ಲೂ ಇದ್ದರು. 1973ರಲ್ಲಿ ಡಿಂಪಲ್ ಕಪಾಡಿಯಾ ಅವರನ್ನು ರಾಜೇಶ್ ವಿವಾಹ ಆದರು.
ಚಿತ್ರದುರ್ಗ, ಏ.2: “ಸ್ಟೂಡೆಂಟ್ ಲೈಫ್ ಈಸ್ ಗೋಲ್ಡನ್ ಲೈಫ್” ಎಂಬ ಮಾತಿದೆ. ಕಾಲೇಜು ಜೀವನದಲ್ಲಿ ಎಲ್ಲವೂ ಚಂದ, ಆದರೆ ಅಲ್ಲಿ ಕೆಲವೊಂದು ಅತಿರೇಖದ ವಿಚಾರಗಳು ನಡೆಯುತ್ತದೆ, ವಿದ್ಯಾರ್ಥಿಗಳ ನಡುವೆ ಲವ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಮಿತಿಮೀರಿದ ಸಂಬಂಧಗಳು, ಹೀಗೆ ಹಲವೂ ಘಟನೆಗಳು ನಡೆದಿರುತ್ತದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಇರಬೇಕಾದ ಗುರು ಹಾಗೂ ಶಿಷ್ಯರ ಸಂಬಂಧಕ್ಕೆ ಬೇರೆ ಅರ್ಥವನ್ನು ಕಲ್ಪಿಸುವ ಚಟ ಈಗ ಕಾಲೇಜಿಗಳಲ್ಲಿ ಶುರುವಾಗಿದೆ. ಇದೀಗ ಇಂತಹದೇ ಒಂದು ವಿಚಾರಕ್ಕೆ ವಿದ್ಯಾರ್ಥಿಯೊಬ್ಬಳ ಜೀವ ಕಳೆದುಕೊಂಡಿದ್ದಾಳೆ. ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಮಲ್ಲಾಡಿಹಳ್ಳಿಯ ಆಯುರ್ವೇದ ಕಾಲೇಜಿನ ಬಿಎಎಂಎಸ್ ವಿದ್ಯಾರ್ಥಿನಿ ಲಿಖಿತಾ (23), ತನ್ನ ಅಧ್ಯಾಪಕರ ಜೊತೆ ಸಂಬಂಧ ಕಲ್ಪಿಸಿ ನಡೆಸಲಾದ ಅಪಪ್ರಚಾರಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾರೆ.
ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್‌ನ ಮನೆಯಲ್ಲಿ ಲಿಖಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಧ್ಯಾಪಕ ಡಾ. ರಾಜು ಅವರೊಂದಿಗೆ ಸಂಬಂಧವಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಿ, ತನ್ನ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದ್ದರಿಂದ ನೊಂದಿದ್ದ ವಿದ್ಯಾರ್ಥಿನಿ ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೂ ಮುನ್ನ ಲಿಖಿತಾ ಬರೆದಿಟ್ಟಿರುವ ಡೆತ್ ನೋಟ್‌ನಲ್ಲಿ ಪ್ರಾಧ್ಯಾಪಕ ಡಾ. ರಾಜು, ಅವರ ಪತ್ನಿ ನಿಶಾ ಹಾಗೂ ಕೆಲವು ವಿದ್ಯಾರ್ಥಿನಿಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಇವರ ಕಿರುಕುಳ ಮತ್ತು ಅಪಪ್ರಚಾರವೇ ನನ್ನ ಸಾವಿಗೆ ಕಾರಣ ಎಂದು ಅವರು ಡೆತ್ ನೋಟ್‌ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಧ್ಯಾಪಕ ರಾಜು, ಪತ್ನಿ ನಿಶಾ ಮತ್ತು ಡೆತ್ ನೋಟ್‌ನಲ್ಲಿ ಹೆಸರಿಸಲಾದ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
IPL 2026: ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 18.4 ಓವರ್ಗಳಲ್ಲಿ 141 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.1 ಓವರ್ಗಳಲ್ಲಿ 145 ರನ್ ಬಾರಿಸಿ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಈ ಸೋಲಿನ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಪಂದ್ಯದ ಏರಿಳಿತಗಳ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅಲ್ಲದೆ ತಂಡದ ತಂತ್ರಗಳು ಮತ್ತು ಮುಂದಿನ ಹಾದಿಯ ಬಗ್ಗೆ ಅವರು ಹೇಳಿದ ಪ್ರಮುಖ ಅಂಶಗಳು ಇಲ್ಲಿವೆ:
ರನ್ ಔಟ್ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ:
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ತಮ್ಮ ದುರದೃಷ್ಟಕರ ರನ್ ಔಟ್ ಬಗ್ಗೆ ಮಾತನಾಡಿದ ರಿಷಭ್ ಪಂತ್, “ಅದೃಷ್ಟ ಕೈಕೊಟ್ಟಾಗ ಅದನ್ನು ಮರೆತು ಮುಂದೆ ಸಾಗುವುದು ಉತ್ತಮ. ನಿಯಂತ್ರಣವಿಲ್ಲದ ವಿಷಯಗಳ ಬಗ್ಗೆ ಯೋಚಿಸುತ್ತಾ ಕುಳಿತರೆ ಅದು ನಮ್ಮ ಆತ್ಮವಿಶ್ವಾಸವನ್ನು ಕುಂದಿಸುತ್ತದೆ,” ಎಂದಿದ್ದಾರೆ.
ಬದೋನಿಯನ್ನು ಬೇಗ ಕಳುಹಿಸಿದ್ದೇಕೆ?
ನಿಕೋಲಸ್ ಪೂರನ್ ಅವರಿಗಿಂತ ಮುಂಚಿತವಾಗಿ ಆಯುಷ್ ಬದೋನಿಯನ್ನು ಕಳುಹಿಸುವ ನಿರ್ಧಾರದ ಹಿಂದೆ ಒಂದು ಸ್ಪಷ್ಟ ಉದ್ದೇಶವಿತ್ತು. ಅಕ್ಷರ್ ಪಟೇಲ್ ಅವರ ಎಡಗೈ ಸ್ಪಿನ್ ಎದುರಿಸಲು ‘ಲೆಫ್ಟ್-ರೈಟ್’ ಬ್ಯಾಟಿಂಗ್ ಜೋಡಿಯನ್ನು ಕಾಪಾಡಿಕೊಳ್ಳುವುದು ನಮ್ಮ ಯೋಜನೆಯಾಗಿತ್ತು. ಸಂಕಷ್ಟದ ಸಮಯದಲ್ಲಿ ಬದೋನಿ ಅಂತಹ ಆಟಗಾರರು ತಮ್ಮ ಸಾಮರ್ಥ್ಯ ಸಾಬೀತುಪಡಿಸಲಿ ಎಂಬುದು ತಂಡದ ಆಶಯವಾಗಿತ್ತು ಎಂದಿದ್ದಾರೆ.
140 ರನ್ ಕಡಿಮೆಯಾಯಿತು:
ಬ್ಯಾಟಿಂಗ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ರಿಷಭ್ ಪಂತ್, “ಒಳ್ಳೆಯ ಪಿಚ್‌ನಲ್ಲಿ ಕೇವಲ 140 ರನ್ ಗಳಿಸಿದರೆ ಎದುರಾಳಿ ತಂಡದ ಮೇಲೆ ಒತ್ತಡ ಹೇರಲು ಸಾಧ್ಯವಿಲ್ಲ. ನಾವು ಬ್ಯಾಟಿಂಗ್‌ನಲ್ಲಿ ದೊಡ್ಡ ಜೊತೆಯಾಟಗಳನ್ನು ಆಡುವಲ್ಲಿ ವಿಫಲವಾದೆವು,” ಎಂದು ಒಪ್ಪಿಕೊಂಡಿದ್ದಾರೆ.
ಎಕ್ಸ್ಟ್ರಾ ರನ್:
ಕಡಿಮೆ ಮೊತ್ತವನ್ನು ರಕ್ಷಿಸುವ ಭರದಲ್ಲಿ ಬೌಲರ್‌ಗಳು ಅತಿಯಾದ ಪ್ರಯತ್ನ ಮಾಡಿ 20 ಎಕ್ಸ್ಟ್ರಾ ರನ್ ನೀಡಿದ್ದು ತಂಡಕ್ಕೆ ಹೊಡೆತ ನೀಡಿತು. ಆದರೂ, ಆರಂಭದಲ್ಲಿ ವಿಕೆಟ್ ಪಡೆಯುವ ಮೂಲಕ ಬೌಲರ್‌ಗಳು ತೋರಿದ ಹೋರಾಟದ ಗುಣದ ಬಗ್ಗೆ ನಾಯಕ ರಿಷಭ್ ಪಂತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಫಿಫ್ಟಿ-ಫಿಫ್ಟಿ ಕಾದು ನೋಡಿ:
ನಿಕೋಲಸ್ ಪೂರನ್ ಅವರನ್ನು ಮಿಡ್ಲ್ ಓವರ್‌ಗಳ ಅಬ್ಬರದ ಆಟಕ್ಕಾಗಿ ಕಾಯ್ದಿರಿಸಿ, ತಾವು ಅಗ್ರ ಕ್ರಮಾಂಕದಲ್ಲೇ ಮುಂದುವರಿಯುವುದಾಗಿ ನಾಯಕ ಸ್ಪಷ್ಟಪಡಿಸಿದ್ದಾರೆ. ಸೀಸನ್‌ನ ಉಳಿದ ಪಂದ್ಯಗಳಲ್ಲಿ ಟಾಪ್ ಆರ್ಡರ್‌ನಲ್ಲಿ ಬ್ಯಾಟಿಂಗ್ ಮಾಡಲಿದ್ದೇನೆ. ಆದರೆ ಆರಂಭಿಕನಾಗಿ ಮತ್ತೆ ಕಣಕ್ಕಿಳಿಯುವುದು ಫಿಫ್ಟಿ-ಫಿಫ್ಟಿ ಸಾಧ್ಯತೆ, ಕಾದು ನೋಡಿ ಎಂದಿದ್ದಾರೆ.
ಅಂದರೆ ಮುಂದಿನ ಪಂದ್ಯಗಳಲ್ಲೂ ರಿಷಭ್ ಪಂತ್ ಆರಂಭಿಕರಾಗಿಯೇ ಕಣಕ್ಕಿಳಿಯಲಿದ್ದಾರೆ ಎಂಬುದಕ್ಕೆ ಯಾವುದೇ ಖಚಿತತೆ ಇಲ್ಲ. ಇದಾಗ್ಯೂ ಟಾಪ್ ಆರ್ಡರ್ನಲ್ಲೇ ಬ್ಯಾಟಿಂಗ್ ಮಾಡಲಿದ್ದೇನೆ ಎಂದು ಅವರು ಸ್ಫಷ್ಟಪಡಿಸಿದ್ದಾರೆ. ಒಂದು ವೇಳೆ ರಿಷಭ್ ಪಂತ್ ಮೂರನೇ ಕ್ರಮಾಂಕದಲ್ಲಿ ಆಡಿದರೆ, ಐಡೆನ್ ಮಾರ್ಕ್ರಾಮ್ ಹಾಗೂ ಮಿಚೆಲ್ ಮಾರ್ಷ್ ಲಕ್ನೋ ಸೂಪರ್ ಜೈಂಟ್ಸ್ ಪರ ಇನಿಂಗ್ಸ್ ಆರಂಭಿಸಲಿದ್ದಾರೆ.