SSLC ತೃತೀಯ ಭಾಷೆ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರದ ‘ಗ್ರೇಡಿಂಗ್’ ನಿರ್ಧಾರ
ಬೆಂಗಳೂರು, ಏಪ್ರಿಲ್ 2: ಕರ್ನಾಟಕ ಶೈಕ್ಷಣಿಕ ವಲಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಎಸ್‌ಎಸ್‌ಎಲ್‌ಸಿ (SSLC) ತೃತೀಯ ಭಾಷಾ ಪರೀಕ್ಷೆಯಲ್ಲಿ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ತೀರ್ಮಾನ ಈಗ ಕಾನೂನು ಹೋರಾಟಕ್ಕೆ ನಾಂದಿ ಹಾಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಈ ದಿಢೀರ್ ಘೋಷಣೆಯು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕರಿ ನೆರಳು ಬೀರಲಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ (Karnataka High Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ದಾಖಲಾಗಿದೆ. ಬೆಂಗಳೂರಿನ ನಿವಾಸಿಗಳಾದ ಎಚ್.ಎನ್. ಚಂದನಾ ಮತ್ತು…