All posts by nagaraj11081993

ಲಿವರ್ ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ನೀವು ಈ ಮೂರು ಆಹಾರಗಳಿಂದ ದೂರವಿರಲೇಬೇಕು!

ಲಿವರ್ ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ನೀವು ಈ ಮೂರು ಆಹಾರಗಳಿಂದ ದೂರವಿರಲೇಬೇಕು!

ಇತ್ತೀಚಿನ ದಿನಗಳಲ್ಲಿ ಲಿವರ್ (Liver) ಸಂಬಂಧಿತ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿರುವುದನ್ನು ನೀವು ಗಮನಿಸಿರಬಹುದು. ಇದಕ್ಕೆ ಪ್ರಮುಖ ಕಾರಣಗಳು ಅಸ್ವಸ್ಥ ಜೀವನಶೈಲಿ, ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ಹೆಚ್ಚುತ್ತಿರುವ ಜಂಕ್ ಫುಡ್ ಸೇವನೆಯಾಗಿದೆ. ಲಿವರ್ ನಮ್ಮ ದೇಹದ ಪ್ರಮುಖ ಅಂಗವಾಗಿದ್ದು, ದೇಹವನ್ನು ಡಿಟಾಕ್ಸ್ ಮಾಡುವುದು, ಜೀರ್ಣಕ್ರಿಯೆಗೆ ಸಹಾಯ ಮಾಡುವುದು ಮತ್ತು ಅಗತ್ಯ ಪೋಷಕಾಂಶಗಳನ್ನು ಸಂಗ್ರಹಿಸುವ ಕೆಲಸ ಮಾಡುತ್ತದೆ. ಹಾಗಾಗಿ ಲಿವರ್ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ಫ್ಯಾಟಿ ಲಿವರ್, ಹೆಪಟೈಟಿಸ್ ಮತ್ತು ಲಿವರ್ ಹಾನಿ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಆದ್ದರಿಂದ ಲಿವರ್ ಆರೋಗ್ಯವನ್ನು ಕಾಪಾಡಿಕೊಳ್ಳಲು ಸರಿಯಾದ ಆಹಾರ ಮತ್ತು ಉತ್ತಮ ಜೀವನಶೈಲಿ ಅಗತ್ಯವಾಗಿದೆ. ಆಹಾರದಲ್ಲಿ ಅಲಕ್ಷ್ಯ ತೋರಿದರೆ ಲಿವರ್ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ, ಅದರ ಕಾರ್ಯಕ್ಷಮತೆ ನಿಧಾನವಾಗಿ ಕುಂದುತ್ತದೆ. ಹೀಗಾಗಿ ದೈನಂದಿನ ಜೀವನದಲ್ಲಿ ಸಮತೋಲನಯುತ ಆಹಾರವನ್ನು ಸೇರಿಸಿಕೊಳ್ಳುವುದು ಮತ್ತು ಹಾನಿಕಾರಕ ಆಹಾರಗಳಿಂದ ದೂರವಿರುವುದು ಮುಖ್ಯ. ಹಾಗಾದರೆ ಲಿವರ್ ಆರೋಗ್ಯ ಕಾಪಾಡಿಕೊಳ್ಳಲು ಯಾವ ರೀತಿಯ ಆಹಾರ ಸೇವನೆ ಮಾಡಬಾರದು ಮತ್ತು ಯಾವ ಆಹಾರಗಳ ಸೇವನೆ ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ. ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಲಿವರ್ ಆರೋಗ್ಯವಾಗಿರಲು ಯಾವ ಆಹಾರಗಳ ಸೇವನೆ ಮಾಡಬಾರದು?

ಲೆಡಿ ಹಾರ್ಡಿಂಗ್ ಆಸ್ಪತ್ರೆಯ ಮೆಡಿಸಿನ್ ವಿಭಾಗದ ನಿರ್ದೇಶಕ ಹಾಗೂ ಎಚ್‌ಒಡಿ ಡಾ. ಎಲ್. ಎಚ್. ಘೋಟೇಕರ್ ಅವರ ಪ್ರಕಾರ, ಲಿವರ್ ಆರೋಗ್ಯವನ್ನು ಕಾಪಾಡಿಕೊಳ್ಳಲು ಈ ಮೂರು ವಿಧದ ಆಹಾರಗಳಿಂದ ದೂರವಿರಬೇಕು:

ಹೆಚ್ಚು ಎಣ್ಣೆಯಲ್ಲಿ ತಯಾರಿಸಿದ ಹಾಗೂ ಕರಿದ ಆಹಾರಗಳು: ಇವು ದೇಹದಲ್ಲಿ ಕೊಬ್ಬು ಸಂಗ್ರಹವಾಗಲು ಕಾರಣವಾಗುತ್ತವೆ ಮತ್ತು ಫ್ಯಾಟಿ ಲಿವರ್ ಸಮಸ್ಯೆಯನ್ನು ಹೆಚ್ಚಿಸಬಹುದು.

ಅತಿಯಾದ ಸಕ್ಕರೆ ಇರುವ ಆಹಾರಗಳು: ಹೆಚ್ಚು ಸಿಹಿ ಪದಾರ್ಥಗಳು ಲಿವರ್‌ನಲ್ಲಿ ಕೊಬ್ಬನ್ನು ಹೆಚ್ಚಿಸಿ ಇನ್ಸುಲಿನ್ ಪ್ರತಿರೋಧದ ಸಮಸ್ಯೆಗೆ ಕಾರಣವಾಗಬಹುದು.

ಪ್ರೊಸೆಸ್ಡ್ ಮತ್ತು ಪ್ಯಾಕೇಜ್ಡ್ ಫುಡ್‌ಗಳು: ಇವುಗಳಲ್ಲಿ ಪ್ರಿಸರ್ವೇಟಿವ್‌ಗಳು ಮತ್ತು ಹಾನಿಕಾರಕ ರಾಸಾಯನಿಕಗಳು ಇರುವುದರಿಂದ ಲಿವರ್ ಮೇಲೆ ದುಷ್ಪರಿಣಾಮ ಬೀರುತ್ತವೆ.

ಇದನ್ನೂ ಓದಿ: ಫ್ಯಾಟಿ ಲಿವರ್ ಯಾವಾಗ ಅಪಾಯಕಾರಿಯಾಗಬಹುದು? ಲಕ್ಷಣಗಳು ಹೇಗಿರುತ್ತವೆ ತಿಳಿದುಕೊಳ್ಳಿ

ಲಿವರ್ ಆರೋಗ್ಯಕ್ಕಾಗಿ ಯಾವ ಆಹಾರಗಳ ಸೇವನೆ ಮಾಡಬೇಕು?

ಸಾಮಾನ್ಯವಾಗಿ ಲಿವರ್ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಸಿರು ತರಕಾರಿ, ಹಣ್ಣು ಮತ್ತು ಫೈಬರ್‌ ಸಮೃದ್ಧ ಆಹಾರಗಳನ್ನು ಸೇವಿಸಬೇಕು. ವಿಶೇಷವಾಗಿ ಪಾಲಕ್, ಬ್ರೋಕೋಲಿ, ಕ್ಯಾರೆಟ್ ಮತ್ತು ಬೀಟ್‌ರೂಟ್ ಲಿವರ್‌ಗೆ ಬಹಳ ಉಪಯುಕ್ತ. ಇದರ ಜೊತೆಗೆ ಬೆಳ್ಳುಳ್ಳಿ ಮತ್ತು ಅರಿಶಿನ ಲಿವರ್ ಡಿಟಾಕ್ಸ್ ಮಾಡಲು ಸಹಾಯ ಮಾಡುತ್ತವೆ. ಸಾಕಷ್ಟು ನೀರು ಕುಡಿಯುವುದು ಕೂಡ ಅಗತ್ಯ, ಇದರಿಂದ ದೇಹದಲ್ಲಿನ ವಿಷಪದಾರ್ಥಗಳು ಹೊರಹೋಗುತ್ತವೆ. ಸಮತೋಲನಯುತ ಮತ್ತು ಪೌಷ್ಟಿಕ ಆಹಾರ ಲಿವರ್ ಅನ್ನು ಬಲವಾಗಿಡಲು ನೆರವಾಗುತ್ತದೆ. ಆಹಾರ ಮಾತ್ರವಲ್ಲ, ಜೀವನಶೈಲಿಯೂ ಮುಖ್ಯವಾಗುತ್ತದೆ. ಪ್ರತಿದಿನ ವ್ಯಾಯಾಮ ಮಾಡುವುದು, ತೂಕವನ್ನು ನಿಯಂತ್ರಣದಲ್ಲಿಡುವುದು ಮತ್ತು ಮದ್ಯಪಾನದಿಂದ ದೂರವಿರುವುದು ಅಗತ್ಯ. ಜೊತೆಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಲಿವರ್ ಸಂಬಂಧಿತ ಸಮಸ್ಯೆಗಳನ್ನು ಸಮಯಕ್ಕೆ ಮುನ್ನ ಗುರುತಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯುದ್ಧದ ಎಫೆಕ್ಟ್: ಗ್ಯಾಸ್ ಅಭಾವದ ಬೆನ್ನಲ್ಲೇ ರೋಗಿಗಳಿಗೂ ಶಾಕ್, ಈ ವಾರದಿಂದಲೇ ಔಷಧ ಬೆಲೆ ಏರಿಕೆ

ಬೆಂಗಳೂರು, ಏಪ್ರಿಲ್ 1: ಅಮೆರಿಕಾ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮ ಜಾಗತಿಕ ಪೂರೈಕೆ ಸರಪಳಿಯ (Supply Chain) ಮೇಲೆ ತೀವ್ರ ಪರಿಣಾಮ ಬೀರಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರು ವಾರಗಳಿಂದ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ (Commercial LPG) ತೀವ್ರ ಕೊರತೆ ಎದುರಾಗಿದೆ. ಇದರ ನೇರ ಪರಿಣಾಮ ಹೋಟೆಲ್ ಉದ್ಯಮದ ಮೇಲೆ ಬಿದ್ದಿದ್ದು, ಹೋಟೆಲ್‌ಗಳು ಪರದಾಡುವಂತಾಗಿದೆ. ಈ ಸಂಕಷ್ಟದ ನಡುವೆಯೇ ಈಗ ಔಷಧಗಳ ಬೆಲೆಯೂ ಏರಿಕೆಯಾಗುವ ಲಕ್ಷಣಗಳು ಕಾಣಿಸುತ್ತಿದ್ದು, ಸಾಮಾನ್ಯ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಔಷಧಗಳ ಮೇಲೆ ಯುದ್ಧದ ಕರಿನೆರಳು

ಕಚ್ಚಾ ತೈಲ ಮತ್ತು ಪೆಟ್ರೋಕೆಮಿಕಲ್ಸ್‌ ಬೆಲೆ ಏರಿಕೆಯಾಗಿರುವುದರಿಂದ ಮಾತ್ರೆಗಳ ಪ್ಯಾಕೇಜಿಂಗ್‌ಗೆ ಬಳಸುವ ಫಾಯಿಲ್ಸ್ ತಯಾರಿಕೆ ವೆಚ್ಚ ಹೆಚ್ಚಾಗಿದೆ. ಈ ಕಾರಣದಿಂದಾಗಿ ಏಪ್ರಿಲ್ ಮೊದಲ ವಾರದಿಂದ ಔಷಧಗಳ ದರ ಶೇ 15 ರಿಂದ 20 ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

ಯಾವೆಲ್ಲ ಔಷಧಗಳ ಬೆಲೆ ಏರಿಕೆ?

ಪ್ಯಾರಸಿಟಮಾಲ್, ಹೃದಯ ಸಂಬಂಧಿ ಕಾಯಿಲೆ, ಮಧುಮೇಹ, ಗ್ಯಾಸ್ಟ್ರಿಕ್ ಮಾತ್ರೆಗಳು ಹಾಗೂ ಕೆಮ್ಮಿನ ಸಿರಪ್ ಸೇರಿದಂತೆ ಸುಮಾರು 600ಕ್ಕೂ ಹೆಚ್ಚು ಅಗತ್ಯ ಔಷಧಗಳ ಬೆಲೆ ಏರಿಕೆಯಾಗಲಿದೆ. ಇದರೊಂದಿಗೆ ಸೌಂದರ್ಯವರ್ಧಕಗಳು (Cosmetics) ಮತ್ತು ಮಕ್ಕಳ ಉತ್ಪನ್ನಗಳ ಬೆಲೆಯೂ ಹೆಚ್ಚಾಗಲಿದೆ ಎಂದು ಬೆಂಗಳೂರು ನಗರ ಡ್ರಗ್ಸ್ ಅಂಡ್ ಕೆಮಿಸ್ಟ್ ಅಸೋಸಿಯೇಷನ್ ಅಧ್ಯಕ್ಷ ಮಾಯಣ್ಣ ತಿಳಿಸಿದ್ದಾರೆ.

ಔಷಧ ಬೆಲೆ ಏರಿಕೆ ಬಗ್ಗೆ ಆರೋಗ್ಯ ಸಚಿವರು ಹೇಳಿದ್ದೇನು?

ಔಷಧ ದರ ಏರಿಕೆ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ಔಷಧ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರದ ಪಾಲಿಸಿಯ ಮೇಲೆ ಅವಲಂಬಿತವಾಗಿದೆ. ಯುದ್ಧದ ಎಫೆಕ್ಟ್‌ನಿಂದ ದರ ಏರಿಕೆಯಾದರೆ ಅದು ನಮ್ಮ ಕೈಯಲ್ಲಿ ಇಲ್ಲ. ಆದರೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಔಷಧದ ಕೊರತೆಯಾಗದಂತೆ ನಾವು ಕ್ರಮ ಕೈಗೊಳ್ಳುತ್ತೇವೆ. ಹೆಚ್ಚಿನ ದರ ನೀಡಿಯಾದರೂ ಔಷಧ ಖರೀದಿ ಮಾಡಿ ಜನರಿಗೆ ತಲುಪಿಸುತ್ತೇವೆ’ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಪೆಟ್ರೋಲ್, ಎಲ್​ಪಿಜಿ, ನ್ಯಾಚುರಲ್ ಗ್ಯಾಸ್ ಪೂರೈಕೆ ಹೇಗಿದೆ? ಸರ್ಕಾರದಿಂದ ಮಾಹಿತಿ

ಒಟ್ಟಿನಲ್ಲಿ ವಾಣಿಜ್ಯ ಗ್ಯಾಸ್ ಕೊರತೆ ಬಳಿಕ ಈಗ ಔಷಧಗಳ ಬೆಲೆ ಏರಿಕೆ ಬಿಸಿ ಜನರಿಗೆ ತಟ್ಟಲಿದ್ದು, ಮುಂದಿನ ದಿನಗಳಲ್ಲಿ ಏನೆಲ್ಲ ಸಮಸ್ಯೆಯಾಗಲಿದೆ ಎಂದು ಕಾದು ನೋಡಬೇಕಿದೆ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿವಿಧ ಹಣಕಾಸು ಕಾರ್ಯಗಳಿಗೆ ಪ್ಯಾನ್ ನಿಯಮಗಳಲ್ಲಿ ಬದಲಾವಣೆಗಳಿವೆ, ಗಮನಿಸಿ

ನವದೆಹಲಿ, ಏಪ್ರಿಲ್ 1: ಆದಾಯ ತೆರಿಗೆ ಕಾಯ್ದೆ ಅಡಿ ರೂಪಿಸಲಾಗಿರುವ ಹೊಸ ಐಟಿ ನಿಯಮಾವಳಿಯಲ್ಲಿ (Income tax framework) ಕೆಲ ಮಹತ್ವದ ಬದಲಾವಣೆ ಇದೆ. ಹೊಸ ಪ್ಯಾನ್ ಪಡೆಯಲು ಬೇಕಾದ ಪ್ರಕ್ರಿಯೆ, ಕೆಲ ನಿರ್ದಿಷ್ಟ ಹಣಕಾಸು ವಹಿವಾಟಿಗೆ ಪ್ಯಾನ್ ಅಗತ್ಯ ಇರುವುದು ಇತ್ಯಾದಿ ಕೆಲ ಗಮನಾರ್ಹ ಬದಲಾವಣೆಗಳಿವೆ. 10 ಲಕ್ಷಕ್ಕೂ ಅಧಿಕ ಮೊತ್ತದ ಕ್ಯಾಷ್ ಡೆಪಾಸಿಟ್ ಇತ್ಯಾದಿ ಅಧಿಕ ಮೌಲ್ಯದ ಟ್ರಾನ್ಸಾಕ್ಷನ್​ಗಳಿಗೆ ಪ್ಯಾನ್ ನಂಬರ್ ನೀಡುವುದು ಕಡ್ಡಾಯ ಮಾಡಲಾಗಿದೆ. ಹಾಗೆಯೇ, ವಿವಿಧ ಪ್ರಾಕಾರದ ತೆರಿಗೆ ಪಾವತಿದಾರರಿಗೆ ಬೇರೆ ಬೇರೆ ನಮೂನೆಯ ಅರ್ಜಿಗಳನ್ನು ನೀಡಲಾಗುತ್ತದೆ.

ಹೊಸ ಪ್ಯಾನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು…

ಹಳೆಯ ವ್ಯವಸ್ಥೆ ಅಡಿ ಹೊಸ ಪ್ಯಾನ್ ಕಾರ್ಡ್​ಗೆ ಅರ್ಜಿ ಸಲ್ಲಿಸಲು ಫಾರ್ಮ್ 49ಎ ಅಥವಾ 49ಎಎ ನೀಡಲಾಗುತ್ತಿತ್ತು. ಭಾರತೀಯ ನಾಗರಿಕರು ಮತ್ತು ಕಂಪನಿಗಳಿಗೆ ಫಾರ್ಮ್ 49ಎ ಮತ್ತು ವಿದೇಶೀ ಪ್ರಜೆಗಳು ಮತ್ತು ಸಂಸ್ಥೆಗಳಿಗೆ ಫಾರ್ಮ್ 49ಎಎ ನೀಡಲಾಗುತ್ತಿತ್ತು.

ಹೊಸ ನಿಯಮ ಅಡಿ ಫಾರ್ಮ್ 93, 94, 95, 96 ಅನ್ನು ನೀಡಲಾಗುತ್ತಿದೆ. ಭಾರತೀ ಪ್ರಜೆಗಳು ಫಾರ್ಮ್ 93 ಅನ್ನು ಭರ್ತಿ ಮಾಡಬೇಕು. ಭಾರತೀಯ ಕಂಪನಿಗಳು ಫಾರ್ಮ್ 94, ಭಾರತೀಯ ಪ್ರಜೆಗಳಲ್ಲದವರು ಫಾರ್ಮ್ 95, ಹಾಗೂ ಭಾರತದ ಹೊರಗಿನ ಕಂಪನಿಗಳು ಫಾರ್ಮ್ 96 ಅನ್ನು ಪಡೆದು ಭರ್ತಿ ಮಾಡಬೇಕು.

ಇದನ್ನೂ ಓದಿ: April 2026 Rules Changes: ಡಿಜಿಟಲ್ ಪಾವತಿ, ಪ್ಯಾನ್ ಇತ್ಯಾದಿ ನಿಯಮಗಳಲ್ಲಿ ಬದಲಾವಣೆ; ಆರ್‌ಬಿಐಯಿಂದ ಹೊಸ ಗೈಡ್‌ಲೈನ್ಸ್ ತಿಳಿದಿರಿ

ಮುಂಚೆ ಇದ್ದ ನಿಯಮ ಪ್ರಕಾರ ಹೊಸ ಪ್ಯಾನ್ ಕಾರ್ಡ್​ಗೆ ಅರ್ಜಿ ಸಲ್ಲಿಸಲು ಆಧಾರ್ ಅನ್ನು ಕಡ್ಡಾಯವಾಗಿ ನೀಡಬೇಕಿತ್ತು. ಈಗ ಆಧಾರ್ ಜೊತೆಗೆ ಹೆಚ್ಚುವರಿ ದಾಖಲೆಗಳನ್ನೂ ನೀಡಬೇಕಾಗುತ್ತದೆ. ಜನನ ಪ್ರಮಾಣಪತ್ರ, ವೋಟರ್ ಐಡಿ, ಪಾಸ್​ಪೋರ್ಟ್, ಡಿಎಲ್, ಎಸ್ಸೆಸ್ಸೆಲ್ ಸರ್ಟಿಫಿಕೇಟ್ ಮತ್ತು ಇತರ ಸರ್ಕಾರಿ ದಾಖಲೆಗಳಿದ್ದರೆ ಅದನ್ನು ನೀಡಬಹುದು.

ಈ ಕಾರ್ಯಗಳಿಗೆ ಪ್ಯಾನ್ ನೀಡುವುದು ಅಗತ್ಯ

ಬ್ಯಾಂಕ್​ನಲ್ಲಿ ಒಂದು ದಿನದಲ್ಲಿ 50,000 ರೂಗಿಂತ ಹೆಚ್ಚು ಕ್ಯಾಷ್ ಡೆಪಾಸಿಟ್ ಮಾಡಿದರೆ ಮಾಡಿದರೆ ಪ್ಯಾನ್ ನಮೂದಿಸಬೇಕಿತ್ತು. ಈಗ ಹೊಸ ನಿಯಮದ ಪ್ರಕಾರ ಒಂದು ವರ್ಷದಲ್ಲಿ 10 ಲಕ್ಷ ರೂಗಿಂತ ಕಡಿಮೆ ಕ್ಯಾಷ್ ಡೆಪಾಸಿಟ್ ಅಥವಾ ವಿತ್​ಡ್ರಾಯಲ್​ಗೆ ಪ್ಯಾನ್ ಕಡ್ಡಾಯವಲ್ಲ. ಹಾಗೆಯೇ ಈ ಕೆಳಗಿನ ಕಾರ್ಯಗಳಿಗೆ ಪ್ಯಾನ್ ಕಡ್ಡಾಯ ಇರುತ್ತದೆ, ಗಮನಿಸಿ:

ಇದನ್ನೂ ಓದಿ: ವಿವಿಧ ಪೋಸ್ಟ್ ಆಫೀಸ್ ಸ್ಕೀಮ್ಸ್; ಏಪ್ರಿಲ್-ಜೂನ್ ಕ್ವಾರ್ಟರ್​ಗೆ ಬಡ್ಡಿದರ ಘೋಷಣೆ; ಇಲ್ಲಿದೆ ಪಟ್ಟಿ

  • ಐದು ಲಕ್ಷ ರೂಗಿಂತ ಹೆಚ್ಚಿನ ಮೌಲ್ಯದ ವಾಹನ ಖರೀದಿಸುತ್ತಿದ್ದರೆ ಪ್ಯಾನ್ ನೀಡಬೇಕು.
  • ಹೋಟೆಲ್ ಅಥವಾ ರೆಸ್ಟೋರೆಂಟ್, ಇವೆಂಟ್​ಗಳಿಗೆ ಒಂದು ಲಕ್ಷ ರೂಗಿಂತ ಹೆಚ್ಚಿನ ಪೇಮೆಂಟ್ ಮಾಡುವುದಾದರೆ ಪ್ಯಾನ್ ನೀಡಬೇಕು.
  • ಚಿರಾಸ್ತಿಯ ಖರೀದಿ ಮತ್ತು ಮಾರಾಟ ಮಾಡುವಾಗ, ಅದರ ಮೌಲ್ಯ 20 ಲಕ್ಷ ರೂಗಿಂತ ಹೆಚ್ಚಿದ್ದರೆ ಪ್ಯಾನ್ ಕಡ್ಡಾಯ.
  • ಜೀವ ವಿಮೆ ಪಾಲಿಸಿಗೆ ಪ್ಯಾನ್ ಕಡ್ಡಾಯ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

LSG vs DC Playing XI: ಟಾಸ್ ಗೆದ್ದ ಡೆಲ್ಲಿ; ಬಲಿಷ್ಠ ಪಡೆ ಕಣಕ್ಕಿಳಿಸಿದ ಉಭಯ ತಂಡಗಳು

ಐಪಿಎಲ್ 19 (IPL 2026) ನೇ ಸೀಸನ್​ನ ಮೊದಲ ಹಂತದ ಐದನೇ ಮತ್ತು ಕೊನೆಯ ಪಂದ್ಯ ಇಂದು ಬುಧವಾರ, ಏಪ್ರಿಲ್ 1 ರಂದು ನಡೆಯಲಿದೆ. ಈ ಸೀಸನ್​ನ ಐದನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು (LSG vs DC) ಎದುರಿಸುತ್ತಿದೆ. ಎರಡೂ ತಂಡಗಳಿಗೆ ಇದು ಈ ಸೀಸನ್​ನ ಮೊದಲ ಪಂದ್ಯವಾಗಿದೆ. ಆದ್ದರಿಂದ, ಎರಡೂ ತಂಡಗಳು ಪಂದ್ಯವನ್ನು ಗೆದ್ದು ಸೀಸನ್ ಅನ್ನು ಗೆಲುವಿನೊಂದಿಗೆ ಆರಂಭಿಸಲು ಪ್ರಯತ್ನಿಸುತ್ತವೆ. ಇದರಲ್ಲಿ ಯಾವ ತಂಡ ಯಶಸ್ವಿಯಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಟಾಸ್ ಗೆದ್ದ ಡೆಲ್ಲಿ

ಟಾಸ್ ಗೆದ್ದ ಡೆಲ್ಲಿ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಲಕ್ನೋ ತಂಡ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಪ್ರಕಟವಾಗಿದೆ. ಡೆಲ್ಲಿ ತಂಡದ ಆರಂಭಿಕರು ಬದಲಾಗಿದ್ದು, ಕನ್ನಡಿಗ ಕೆಎಲ್ ರಾಹುಲ್ ಜೊತೆಗೆ ಪಾತುಮ್ ನಿಸ್ಸಾಂಕ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಹೆಡ್ ಟು ಹೆಡ್ ದಾಖಲೆ

ಐಪಿಎಲ್ ಇತಿಹಾಸದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಇದುವರೆಗೆ ಏಳು ಪಂದ್ಯಗಳನ್ನು ಆಡಿವೆ. ಇವುಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕು ಪಂದ್ಯಗಳನ್ನು ಗೆದ್ದಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ಮೂರು ಪಂದ್ಯಗಳನ್ನು ಗೆದ್ದಿದೆ. ಅಂದರೆ ಎರಡೂ ತಂಡಗಳು ಸಮಬಲದ ಹೋರಾಟದ ನೀಡಿವೆ. ಕಳೆದ ಸೀಸನ್‌ನಲ್ಲಿ ಎರಡು ಪಂದ್ಯಗಳನ್ನು ಆಡಲಾಗಿದ್ದು, ಡೆಲ್ಲಿ ಎರಡೂ ಪಂದ್ಯಗಳನ್ನು ಗೆದ್ದಿದೆ. 2024 ರ ಸೀಸನ್‌ನಲ್ಲಿಯೂ ಡೆಲ್ಲಿ ಕ್ಯಾಪಿಟಲ್ಸ್ ಎರಡೂ ಪಂದ್ಯಗಳನ್ನು ಗೆದ್ದಿತ್ತು. ಅಂದರೆ, ಲಕ್ನೋ ಸೂಪರ್ ಜೈಂಟ್ಸ್ ಕೊನೆಯದಾಗಿ 2023 ರ ಐಪಿಎಲ್​ನಲ್ಲಿ ಡೆಲ್ಲಿ ವಿರುದ್ಧ ಗೆದ್ದಿತ್ತು.

ಉಭಯ ತಂಡಗಳ ಪ್ಲೇಯಿಂಗ್ 11

ಡೆಲ್ಲಿ ಕ್ಯಾಪಿಟಲ್ಸ್: ಕೆಎಲ್ ರಾಹುಲ್ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ನಿತೀಶ್ ರಾಣಾ, ವಿಪ್ರಜ್ ನಿಗಮ್, ಅಕ್ಸರ್ ಪಟೇಲ್ (ನಾಯಕ), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಲುಂಗಿ ಎನ್‌ಗಿಡಿ, ಕುಲ್ದೀಪ್ ಯಾದವ್, ಟಿ.ನಟರಾಜನ್ ಮತ್ತು ಮುಖೇಶ್ ಕುಮಾರ್.

ಲಕ್ನೋ ಸೂಪರ್ ಜೈಂಟ್ಸ್: ಐಡೆನ್ ಮಾರ್ಕ್ರಾಮ್, ಮಿಚೆಲ್ ಮಾರ್ಷ್, ರಿಷಭ್ ಪಂತ್(ನಾಯಕ ಮತ್ತು ವಿಕೆಟ್ ಕೀಪರ್), ಆಯುಷ್ ಬಡೋನಿ, ನಿಕೋಲಸ್ ಪೂರನ್, ಅಬ್ದುಲ್ ಸಮದ್, ಮುಕುಲ್ ಚೌಧರಿ, ಮೊಹ್ಸಿನ್ ಖಾನ್, ಮೊಹಮ್ಮದ್ ಶಮಿ, ಅನ್ರಿಚ್ ನೋಕಿಯಾ ಮತ್ತು ಪ್ರಿನ್ಸ್ ಯಾದವ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ರೆ ಇನ್ನೇನಾಗುತ್ತೆ: ಇನ್ಸ್‌ಪೆಕ್ಟರ್​​ಗೆ ಹೈಕೋರ್ಟ್ ತರಾಟೆ

ಬೆಂಗಳೂರು/ಮಂಗಳೂರು, (ಮೇ 01): ಅಮಾನತುಗೊಂಡ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಪ್ರಕರಣ ರಾಜ್ಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಶಿಕ್ಷಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಂದೇಶ್ ವಿರುದ್ದ ಹೊಸ ಎಫ್ಐಆರ್ ದಾಖಲಾಗಿದೆ. ಇದೀಗ ಈ ಪ್ರಕರಣವನ್ನು ರದ್ದುಕೋರಿ ಸಂದೇಶ ಹೈಕೋರ್ಟ್ (Karnataka High Court) ಮೆಟ್ಟಿಲೇರಿದ್ದಾರೆ. ಆದ್ರೆ, ಹೈಕೋರ್ಟ್​, ಇನ್ಸ್‌ಪೆಕ್ಟರ್ ಮಾಡಿರುವುದು ಅಧಿಕಾರದ ದುರುಪಯೋಗವಲ್ಲವೇ? ದೂರು ಕೊಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ರೆ ಇನ್ನೇನಾಗುತ್ತೆ ಎಂದು ಸಂದೇಶ್​​ಗೆ ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿ ವಿಚಾರಣೆಯನ್ನು ಮುಂದೂಡಿದೆ.

ಮಹಿಳೆ ದಾಖಲಿಸಿದ ಅತ್ಯಾಚಾರ ಪ್ರಕರಣ ರದ್ದು ಕೋರಿ ಅಮಾನತುಗೊಂಡ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಈ ವೇಳೆ ಇನ್ಸ್​ಪೆಕ್ಟರ್ ಪರ ವಕೀಲ ವಾದ ಮಾಡಿ, ಮಹಿಳೆಯೊಂದಿಗೆ ಒಪ್ಪಿತ ಸಂಬಂಧವಿತ್ತು. ಇನ್ಸ್‌ಪೆಕ್ಟರ್ ವಿರುದ್ಧದ ಅತ್ಯಾಚಾರ ಆರೋಪಕ್ಕೆ ಆಧಾರಗಳಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್​​ಗೆ ಬಿಗ್​​ ಶಾಕ್​​: ಅತ್ಯಾಚಾರ ಪ್ರಕರಣ ದಾಖಲು

ಸಂದೇಶ್​​​ಗೆ ಹೈಕೋರ್ಟ್​ ತರಾಟೆ

ಇನ್ಸ್‌ಪೆಕ್ಟರ್ ಮಾಡಿರುವುದು ಅಧಿಕಾರದ ದುರುಪಯೋಗವಲ್ಲವೇ? ದೂರು ಕೊಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ರೆ ಇನ್ನೇನಾಗುತ್ತೆ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಖಾರವಾಗಿ ಪ್ರಶ್ನಿಸಿ ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಿದೆ. ಅಲ್ಲದೇ ಅಲ್ಲಿಯವರೆಗೆ ಬಂಧಿಸದಂತೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಇದರಿಂದ ಸಂದೇಶ್​​​ಗೆ ಬಂಧನದ ಭೀತಿ ಶುರುವಾಗಿದೆ.

ಪ್ರಕರಣದ ಹಿನ್ನೆಲೆ

ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಮೂಡಿಬಿದಿರೆ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್ ವಿರುದ್ದ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ ಬಿಎನ್ ಎಸ್ 376(2)(A)(1), 376(2)(n), 384, 506 ಅಡಿ ಎಫ್ಐಆರ್ ದಾಖಲಾಗಿದೆ. ಈಗಾಗಲೇ ಮಹಿಳೆಯರನ್ನು ಲೈಂಗಿಕವಾಗಿ ಪೀಡಿಸಿದ ಆರೋಪ ಸಂದೇಶ್ ಮೇಲಿದೆ. ಇತ್ತೀಚೆಗೆ ಇಬ್ಬರು ಮಹಿಳೆಯರು ಮಾಡಿದ್ದ ಆರೋಪ ಬಾರಿ ಚರ್ಚೆಯಾಗಿತ್ತು. ಆದರೆ ಪೊಲೀಸ್ ಪ್ರಾಥಮಿಕ ತನಿಖೆಯಲ್ಲಿ ಇದು ಪ್ರಚೋದಿತ ಹಾಗೂ ಸುಳ್ಳು ಆರೋಪ ಎಂದು ಕೇಳಿಬಂದಿತ್ತು. ಇದರ ಬೆನ್ನಲ್ಲೇ ಶಿಕ್ಷಕಿಯೊಬ್ಬರು ದೂರು ನೀಡಿದ್ದು ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್, 2018 ರಿಂದ 2023ರ ವರೆಗೆ ಮನೆಗೆ ಬಂದು ಅತ್ಯಾಚಾರ ಮಾಡಿರುವುದಾಗಿ ಸ್ವತಃ ಶಿಕ್ಷಕಿ ಆರೋಪಿಸಿದ್ದಾರೆ. ಹಲವು ಕಾರಣಗಳನ್ನು ಹಿಡಿದು, ಕೆಲ ಪ್ರಕರಣಗಳ ಕುರಿತು ಬೆದರಿಸಿ ನಿರಂತರವಾಗಿ ಅತ್ಯಾಚಾರ ಮಾಡಿದ್ದಾರೆ. 2018 ರಿಂದ 2023ರವರೆಗೆ ಸತತ 5 ವರ್ಷಗಳ ಕಾಲ ಅತ್ಯಾಚಾರ ಎಸಗಿದ್ದಾರೆ. ಜೀವ ಭಯ, ಮಾನ, ಕುಟುಂಬಸ್ಥರ ವಿರುದ್ಧವೂ ಬೆದರಿಕೆ ಹಾಕಿದ್ದ ಕಾರಣ ಮೌನವಾಗಿದ್ದೆ ಎಂದು ಶಿಕ್ಷಕಿ ದೂರಿನಲ್ಲಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಡಿಕ್ಕಿ ಹೊಡೆದ ರಭಸಕ್ಕೆ ಹೊತ್ತಿಉರಿದ ಕಾರು: ಮೂವರು ಸಜೀವದಹನ, ಓರ್ವ ಗಂಭೀರ

ತುಮಕೂರು, ಏಪ್ರಿಲ್​ 01: ಭೀಕರ ಅಪಘಾತಕ್ಕೆ ಕಾರೊಂದು ಹೊತ್ತಿಉರಿದಿದ್ದು, ಮೂವರು ಸಜೀವದಹನವಾಗಿರುವಂತಹ (death) ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ಕೋರಗೆರೆ ಸೇತುವೆ ಮೇಲೆ ನಡೆದಿದೆ. ಮೃತರು ಗುಬ್ಬಿ ತಾಲೂಕಿನವರು ಎನ್ನಲಾಗುತ್ತಿದೆ. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಸದ್ಯ ಗಾಯಾಳನ್ನು ಹತ್ತಿರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಳಿಯಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಡೆದಿದ್ದೇನು?

ನಾಲ್ವರು ಇಂದು ಪಂಚಣಿಯಹಳ್ಳಿ ಹತ್ತಿರದ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದುಕೊಂಡು ವಾಪಸ್​ ಆಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಸೇತುವೆಯ ತಡೆಗೊಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿದ್ದ ಮೂವರು ಸಜೀವದಹನವಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದ್ದು,  ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಕಸ್ಮಿಕ ಬೆಂಕಿ: ಕುರಿಗಾಹಿ ಸೇರಿ 45 ಕುರಿಗಳು ಸಜೀವದಹನ

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೊರಾಳ ಗ್ರಾಮದಲ್ಲಿ ತಡರಾತ್ರಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಗೆ ಕುರಿಗಾಹಿ ಸೇರಿದಂತೆ ಸುಮಾರು 45 ಕುರಿಗಳು ಸಜೀವ ದಹನಗೊಂಡಿರುವಂತಹ ಘಟನೆ ನಡೆದಿದೆ. ಶಂಕರ ಮೇತ್ರ (65) ಮೃತ ವ್ಯಕ್ತಿ. ಪ್ರಾಥಮಿಕ ತನಿಖೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಥವಾ ಬೇರೆ ಆಕಸ್ಮಿಕ ಕಾರಣದಿಂದ ಬೆಂಕಿ ತಗುಲಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ತನ್ನದೇ ಟೆಂಪೋದಲ್ಲಿ ಶವವಾಗಿ ಪತ್ತೆಯಾದ ಮಾಲೀಕ: ಸಾವಿನ ಸುತ್ತ ಅನುಮಾನದ ಹುತ್ತ

ಇನ್ನು ಈ ಘಟನೆ ಔರಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಮಾಹಿತಿ ದೊರಯುತ್ತಿದ್ದಂತೆ ಬೀದರ್ ಎಸ್ಪಿ ಪ್ರದೀಪ್ ಗುಂಟೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಘಟನೆಯ ನಿಖರ ಕಾರಣ ಸ್ಪಷ್ಟವಾಗಿಲ್ಲ.

ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ. ಬೈಕ್‌ನಲ್ಲಿ ಪೊಲೀಸ್ ಠಾಣೆಗೆ ಹೊರಟ್ಟಿದ್ದ ಶ್ರೀನಿವಾಸ್(54) ಮೃತ ವ್ಯಕ್ತಿ. ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಜೀಪ್ ಚಾಲಕರಾಗಿದ್ದರು. ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಗದಗ: ಎಗ್ಗಿಲ್ಲದೇ ನಡೀತಿದೆ ಅಕ್ರಮ ಮರಳು ಲೂಟಿ, ಸರ್ಕಾರಕ್ಕೆ ನಿತ್ಯ ಲಕ್ಷಾಂತರ ರೂ. ತೆರಿಗೆ ವಂಚನೆ

ಗದಗ, ಏಪ್ರಿಲ್ 1: ಗದಗ (Gadag) ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಮರಳು ಗಣಿಗಾರಿಕೆ ಎಗ್ಗಿಲ್ಲದೇ ಸಾಗಿದ್ದು, ಕಾನೂನಿನ ಭಯವಿಲ್ಲದೇ ಹಗಲು-ರಾತ್ರಿ ಮರಳು ಲೂಟಿ ಮಾಡಲಾಗುತ್ತಿದೆ. ಸಕ್ರಮದ ಪರವಾನಗಿ ಪಡೆದು ಅದರ ಮರೆಯಲ್ಲಿ ಅಕ್ರಮವಾಗಿ ಮರಳು ಸಾಗಿಸುವ ಮೂಲಕ ಸರ್ಕಾರಕ್ಕೆ ನಿತ್ಯ ಲಕ್ಷಾಂತರ ರೂಪಾಯಿ ತೆರಿಗೆ ವಂಚನೆ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಸಕ್ರಮದ ಹೆಸರಲ್ಲಿ ಅಕ್ರಮದ ಅಟ್ಟಹಾಸ

ನರಗುಂದ ತಾಲೂಕಿನ ವಾಸನ, ಕಲ್ಲಾಪುರ ಹಾಗೂ ಶಿರೋಳ ಗ್ರಾಮಗಳ ವ್ಯಾಪ್ತಿಯ ಪಟ್ಟಾ ಭೂಮಿಯಲ್ಲಿ ಮರಳು ತೆಗೆಯಲು ಸರ್ಕಾರದಿಂದ ಅನುಮತಿ ಪಡೆಯಲಾಗಿದೆ. ಆದರೆ, ನಿಯಮದ ಪ್ರಕಾರ 10-12 ಟನ್‌ಗೆ ಬಿಲ್ ಮಾಡಿ, ವಾಸ್ತವದಲ್ಲಿ 15-18 ಟನ್ ಮರಳನ್ನು ಓವರ್‌ಲೋಡ್ ಮಾಡಿ ಸಾಗಿಸಲಾಗುತ್ತಿದೆ. ಗಣಿಗಾರಿಕೆ ನಡೆಯುವ ಜಾಗದಲ್ಲಿ ಸಿಸಿ ಕ್ಯಾಮರಾ ಅಳವಡಿಸಿಲ್ಲ ಹಾಗೂ ವೇ-ಬ್ರಿಡ್ಜ್ (ತೂಕದ ಯಂತ್ರ) ವ್ಯವಸ್ಥೆಯೂ ಇಲ್ಲದೆ ಬೇಕಾಬಿಟ್ಟಿ ಲೂಟಿ ಮಾಡಲಾಗುತ್ತಿದೆ.

ಅಧಿಕಾರಿಗಳ ಎದುರಲ್ಲೇ ಸಾಗಾಟ!

ಅಚ್ಚರಿಯ ವಿಷಯವೆಂದರೆ, ಈ ಓವರ್‌ಲೋಡ್ ಟಿಪ್ಪರ್‌ಗಳು ನರಗುಂದ ಪೊಲೀಸ್ ಠಾಣೆ ಹಾಗೂ ತಹಶೀಲ್ದಾರ್ ಕಚೇರಿಯ ಮುಂದೆಯೇ ರಾಜಾರೋಷವಾಗಿ ಸಂಚರಿಸುತ್ತಿದ್ದರೂ ಅಧಿಕಾರಿಗಳು ಮಾತ್ರ ‘ಡೋಂಟ್ ಕೇರ್’ ಎನ್ನುತ್ತಿದ್ದಾರೆ. ಬೋಟ್ ಬಳಸಿ ಮರಳು ಫಿಲ್ಟರ್ ಮಾಡುವುದು ನಿಷೇಧವಿದ್ದರೂ, ಇಲ್ಲಿ ಬಹಿರಂಗವಾಗಿ ಬೋಟ್ ಬಳಸಿ ಮರಳು ತೆಗೆಯಲಾಗುತ್ತಿದೆ. ಅಧಿಕಾರಿಗಳು ಲೂಟಿಕೋರರೊಂದಿಗೆ ಕೈಜೋಡಿಸಿ ಕುಂಭಕರ್ಣ ನಿದ್ದೆಗೆ ಜಾರಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವಧಿ ಮುಗಿದರೂ ನಿಂತಿಲ್ಲ ದಂಧೆ

ವಾಸನ ಗ್ರಾಮದಲ್ಲಿ ಕೆಲವು ಪಟ್ಟಾ ಜಮೀನುಗಳ ಲೀಜ್ ಅವಧಿ ಮುಗಿದಿದ್ದರೂ ರಾತ್ರೋರಾತ್ರಿ ಮರಳು ಲೂಟಿ ಮುಂದುವರಿದಿದೆ. ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹಾಗೂ ಎಸಿ ಗಂಗಪ್ಪ ಅವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ರಜೆ ತಂದ ಆಪತ್ತು; ಈಜಲು ತೆರಳಿದ್ದ ಐವರು ಬಾಲಕರು ನೀರುಪಾಲು

ಜಿಲ್ಲಾಡಳಿತವೇ ಈ ದಂಧೆಗೆ ರಕ್ಷಣೆ ನೀಡುತ್ತಿದೆಯೇ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಇನ್ನಾದರೂ ಜಿಲ್ಲಾಡಳಿತ ಎಚ್ಚೆತ್ತು ತೆರಿಗೆ ಕಳ್ಳರ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

LSG vs DC IPL 2026 Live Score: ಲಕ್ನೋ- ಡೆಲ್ಲಿ ಮುಖಾಮುಖಿ – Kannada News | Lucknow Super Giants vs Delhi Capitals IPL 2026 Live Cricket Score LSG vs DC Match on 1st April latest news in Kannada

ಐಪಿಎಲ್ 2026 ರ ಐದನೇ ಪಂದ್ಯವು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ಎರಡೂ ತಂಡಗಳು ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿವೆ. ಈ ಪಂದ್ಯದೊಂದಿಗೆ ಎರಡೂ ತಂಡಗಳು ತಮ್ಮ ಅಭಿಯಾನವನ್ನು ಪ್ರಾರಂಭಿಸುತ್ತವೆ. ರಿಷಭ್ ಪಂತ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸುತ್ತಿದ್ದರೆ, ಅಕ್ಷರ್ ಪಟೇಲ್ ದೆಹಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

Source link

ಮಹತ್ವದ ಕಾರ್ಯಕ್ಕೆ ಕೈ ಹಾಕಿದ ಅಲ್ಲು ಅರ್ಜುನ್ ಅಭಿಮಾನಿಗಳು, ಎಲ್ಲರಿಗೂ ಮಾದರಿ

ಭಾರತದಲ್ಲಿ ಸಿನಿಮಾ (Cinema) ನಟರನ್ನು ಆರಾಧಿಸುವವರ ಸಂಖ್ಯೆ ಹೆಚ್ಚು. ಅದರಲ್ಲೂ ದಕ್ಷಿಣ ಭಾರತ ಚಿತ್ರರಂಗದಲ್ಲಿ ಈ ಸಂಸ್ಕೃತಿ ತುಸು ಹೆಚ್ಚಾಗಿಯೇ ಇದೆ. ದಕ್ಷಿಣದಲ್ಲಿ ಸ್ಟಾರ್ ನಟರುಗಳ ಅಭಿಮಾನಿಗಳು ಪರಸ್ಪರ ಕಿತ್ತಾಡುವುದು, ಜಗಳ ಮಾಡುವುದು, ಪರಸ್ಪರರ ನಟರ ನಿಂದನೆ ಮಾಡುವುದು, ಚಿತ್ರಮಂದಿರಗಳಲ್ಲಿ ಗಲಾಟೆ ಮಾಡುವುದು ಕೆಲವು ಸಂದರ್ಭದಲ್ಲಿ ಇದೇ ಕಾರಣಕ್ಕೆ ಕೊಲೆಗಳು ಸಹ ನಡೆದಿರುವುದು ಇದೆ. ಆದರೆ ತೀರಾ ಅಪರೂಪಕ್ಕೆ ಈ ಅಭಿಮಾನಿ ಸಂಘಗಳು ನಿಜಕ್ಕೂ ಸಮಾಜದಲ್ಲಿ ಬದಲಾವಣೆ ತರುವ ಕಾರ್ಯಗಳನ್ನು ಮಾಡುತ್ತವೆ. ಇದೀಗ ಅಲ್ಲು ಅರ್ಜುನ್ ಅವರ ಅಭಿಮಾನಿಗಳು ಈ ರೀತಿಯ ಒಂದು ಅಭಿನಂದನಾರ್ಹ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಅಭಿಮಾನಿ ಸಂಘಗಳು ಸಾಮಾನ್ಯವಾಗಿ ಸ್ಟಾರ್ ನಟನ ಹುಟ್ಟುಹಬ್ಬದಂದು ಅನ್ನದಾನ ಮಾಡುತ್ತಾರೆ, ತೀರ ಹೆಚ್ಚೆಂದರೆ ರಕ್ತದಾನ ಮಾಡುತ್ತಾರೆ. ಎಲ್ಲೋ ಕೆಲವರು ಸರ್ಕಾರಿ ಶಾಲೆ ಮಕ್ಕಳಿಗೆ ಪುಸ್ತಕ ಬ್ಯಾಗು ವಿತರಣೆ ಮಾಡುತ್ತಾರೆ. ಇವು ಸಹ ಒಳ್ಳೆಯ ಸಮಾಜ ಮುಖಿ ಕೆಲಸಗಳೇ ಆದರೆ ಇದೀಗ ಅಲ್ಲು ಅರ್ಜುನ್ ಅಭಿಮಾನಿಗಳು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದು, ಇಡೀ ಸಮಾಜದ ಮೇಲೆ ಪರಿಣಾಮ ಬೀರಬಹುದಾದಂಥಹ ಒಂದು ಕಾರ್ಯಕ್ಕೆ ಕೈ ಹಾಕಿದ್ದಾರೆ. ಅದುವೇ ಎಚ್​​ಪಿವಿ (HPV) ಲಸಿಕೆ ಅಭಿಯಾನ.

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ (Cervical Cancer) ಉಂಟುಮಾಡುವ ಪ್ರಮುಖ ಕಾರಣಗಳಲ್ಲಿ ಒಂದಾದ HPV (ಹ್ಯೂಮನ್ ಪ್ಯಾಪಿಲೋಮವೈರಸ್) ಬಗ್ಗೆ ಜಾಗೃತಿ ಮೂಡಿಸಲು ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರ ಅಭಿಮಾನಿಗಳು ಮುಂದಾಗಿದ್ದಾರೆ. ಭಾರತ ಸರ್ಕಾರವು ದೇಶಾದ್ಯಂತ HPV ಲಸಿಕೆಯನ್ನು ಉತ್ತೇಜಿಸುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 13 ರಿಂದ 16 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಈ ಲಸಿಕೆ ಉಚಿತವಾಗಿ ಲಭ್ಯವಿದೆ. ಇದರ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ‘ಅಲ್ಲು ಅರ್ಜುನ್ ಫ್ಯಾನ್ಸ್ ಅಸೋಸಿಯೇಷನ್’ ವಿಶೇಷ ಅಭಿಯಾನ ಕೈಗೆತ್ತಿಕೊಂಡಿದೆ.

ಇದನ್ನೂ ಓದಿ:ಜೂ ಎನ್​​ಟಿಆರ್-ನೀಲ್ ಸಿನಿಮಾಕ್ಕೆ ಜೊತೆಯಾದ ಹಾಲಿವುಡ್ ತಂಡ

ಪ್ರತಿ ವರ್ಷ ಒಂದು ಅರ್ಥಪೂರ್ಣ ಸಾಮಾಜಿಕ ಕಾರ್ಯ ಮಾಡಬೇಕು ಎನ್ನುವ ಅಲ್ಲು ಅರ್ಜುನ್ ಅವರ ಆಶಯದಂತೆ, ಈ ಬಾರಿ ಅಭಿಮಾನಿಗಳು HPV ಲಸಿಕೆ ಜಾಗೃತಿಯನ್ನು ತಮ್ಮ ಗುರಿಯನ್ನಾಗಿ ಮಾಡಿಕೊಂಡಿದ್ದಾರೆ. ಹಳ್ಳಿಗಳಲ್ಲಿ ಮತ್ತು ಅರೆ-ನಗರ ಪ್ರದೇಶಗಳಲ್ಲಿ ಈ ಆರೋಗ್ಯ ಸಮಸ್ಯೆಯ ಬಗ್ಗೆ ಅರಿವು ಕಡಿಮೆ ಇರುವುದರಿಂದ, ಅಲ್ಲಿನ ಜನರಿಗೆ ಲಸಿಕೆಯ ಪ್ರಾಮುಖ್ಯತೆಯನ್ನು ತಿಳಿಸುವುದು ಮತ್ತು ಉಚಿತ ಲಸಿಕೆಯ ಪ್ರಯೋಜನ ಪಡೆಯುವಂತೆ ಪ್ರೇರೇಪಿಸುವುದು ಅಭಿಮಾನಿಗಳ ಮುಖ್ಯ ಉದ್ದೇಶವಾಗಿದೆ.

ಅಭಿಮಾನಿ ಸಂಘವನ್ನು ಸಮಾಜದ ಒಳಿತಿಗಾಗಿ ಬಳಸುತ್ತಿರುವ ಅಲ್ಲು ಅರ್ಜುನ್ ಅವರ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಭಿಮಾನಿ ಸಂಘದ ಉದ್ದೇಶ ಕೇವಲ ಸ್ಟಾರ್ ನಟನ ಬೆಂಬಲ ಮಾತ್ರವಲ್ಲದೆ, ಸಮಾಜಕ್ಕೆ ಒಳ್ಳೆಯದನ್ನು ಮಾಡುವುದು ಕೂಡ ಆಗಿದೆ ಎಂದು ಈ ಅಭಿಯಾನ ಸಾಕ್ಷಿಯಾಗಲಿದೆ. ಅಭಿಮಾನಿಗಳು, ಕಟೌಟ್ ಕಟ್ಟಲು, ಹಾಲಿನಭಿಷೇಕ ಮಾಡಲು, ಚಿತ್ರಮಂದಿರಗಳನ್ನು ಸಿಂಗರಿಸಲು ಮಾತ್ರವಲ್ಲ, ಅವರನ್ನು ಸಮಾಜದ ಆಸ್ತಿಯನ್ನಾಗಿಸಬೇಕು ಎಂಬುದಕ್ಕೆ ಅಲ್ಲು ಅರ್ಜುನ್ ಮಾದರಿ ಹಾಕಿಕೊಟ್ಟಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೈರತ್‌ನಲ್ಲಿ ಇಸ್ರೇಲ್ ನೌಕಾಪಡೆಯಿಂದ ಹಿಜ್ಬೊಲ್ಲಾದ ಕಮಾಂಡರ್ ಹತ್ಯೆ

ಟೆಹ್ರಾನ್, ಏಪ್ರಿಲ್ 1: ದಕ್ಷಿಣ ಲೆಬನಾನ್‌ನಲ್ಲಿ ಭಯೋತ್ಪಾದಕ ಗುಂಪಿನ ಮಿಲಿಟರಿ ಚಟುವಟಿಕೆಗೆ ಕಾರಣರಾಗಿದ್ದ ಹೆಜ್ಬೊಲ್ಲಾದ ಟಾಪ್ ಕಮಾಂಡರ್ ನಿನ್ನೆ ಬೈರತ್‌ನಲ್ಲಿ ನಡೆದ ಇಸ್ರೇಲ್ ನೌಕಾಪಡೆಯ ದಾಳಿಯಲ್ಲಿ (Israel Attack) ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಲೆಬನಾನ್ ರಾಜಧಾನಿಯಲ್ಲಿ ನಡೆದ ದಾಳಿಯಲ್ಲಿ ಹಜ್ ಯೂಸುಫ್ ಇಸ್ಮಾಯಿಲ್ ಹಶೆಮ್ ಸಾವನ್ನಪ್ಪಿದ್ದಾರೆ. ಅವರು ಸೆಪ್ಟೆಂಬರ್ 2024ರಲ್ಲಿ ಅಲಿ ಕರಕಿಯಿಂದ ದಕ್ಷಿಣದ ಟಾಪ್ ಕಮಾಂಡರ್ ಹುದ್ದೆಯನ್ನು ವಹಿಸಿಕೊಂಡರು.

ಈ ಬಗ್ಗೆ ಐಡಿಎಫ್ ಮಾಹಿತಿ ಪ್ರಕಟಿಸಿದ್ದು, ಇಸ್ರೇಲಿ ದಾಳಿಯಲ್ಲಿ ಹಿಜ್ಬೊಲ್ಲಾ ಕಮಾಂಡರ್ ಹಜ್ ಯೂಸುಫ್ ಇಸ್ಮಾಯಿಲ್ ಹಶೆಮ್ ಮೃತಪಟ್ಟಿದ್ದಾರೆ ಎಂದು ಘೋಷಿಸಿದೆ. ಹಶೆಮ್ ಅವರು 40 ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಹೆಜ್ಬೊಲ್ಲಾದ ಹಿರಿಯ ಕಮಾಂಡರ್ ಮತ್ತು ಭಯೋತ್ಪಾದಕ ಸಂಘಟನೆಯಲ್ಲಿ ಕೇಂದ್ರ ವ್ಯಕ್ತಿ ಎಂದು ಮಿಲಿಟರಿ ಹೇಳಿದೆ.


ಇರಾನ್‌ನೊಂದಿಗಿನ ಯುದ್ಧದ ನಡುವೆ ಯುದ್ಧಗಳು ಉಲ್ಬಣಗೊಂಡ ನಂತರ ಇಸ್ರೇಲ್‌ನಿಂದ ಕೊಲ್ಲಲ್ಪಟ್ಟ ಅತ್ಯಂತ ಹಿರಿಯ ಹಿಜ್ಬೊಲ್ಲಾ ಕಮಾಂಡರ್ ಹಶೆಮ್ ಆಗಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link