ಟೋಲ್‌ನಲ್ಲಿ ಹೊಸ ನಿಯಮ: ಕ್ಯಾಶ್‌ಲೆಸ್‌ನಿಂದ ಫಾಸ್ಟ್ಟ್ಯಾಗ್ಗೆ ಹೆಚ್ಚಿದ ಬೇಡಿಕೆ
ನೆಲಮಂಗಲ, ಏಪ್ರಿಲ್ 1: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇಂದಿನಿಂದ (ಏಪ್ರಿಲ್ 1) ನಗದುರಹಿತ ಟೋಲ್ ಪಾವತಿ ಕಡ್ಡಾಯಗೊಳಿಸಲಾಗಿದೆ. ಹೊಸ ನಿಯಮದ ಪ್ರಕಾರ, ವಾಹನ ಸವಾರರು ಟೋಲ್ ಶುಲ್ಕವನ್ನು ನಗದು ರೂಪದಲ್ಲಿ ಪಾವತಿಸುವಂತಿಲ್ಲ. ಬದಲಿಗೆ, ಫಾಸ್ಟ್‌ಟ್ಯಾಗ್ ಅಥವಾ ಡಿಜಿಟಲ್ ಪಾವತಿ ವಿಧಾನಗಳಾದ ಫೋನ್‌ಪೇ ಮತ್ತು ಗೂಗಲ್‌ಪೇ ಮೂಲಕ ಸ್ಕ್ಯಾನ್ ಮಾಡಿ ಶುಲ್ಕ ಪಾವತಿಸಬೇಕಾಗುತ್ತದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಹಿಂದೆ ಹೊರಡಿಸಿದ್ದ ಸುತ್ತೋಲೆಯಂತೆ ಈ ಕ್ರಮ ಜಾರಿಯಾಗಿದೆ. ಬೆಂಗಳೂರು ಸಮೀಪದ ನೆಲಮಂಗಲದ ಟೋಲ್ ಬಳಿ ಈ ಹೊಸ ನಿಯಮವನ್ನು ಪರಿಣಾಮಕಾರಿಯಾಗಿ…