All posts by nagaraj11081993

‘ತೀರ್ಥರೂಪ ತಂದೆಯವರಿಗೆ’ ವಿಮರ್ಶೆ: ಭಾವನೆಗಳ ಪಯಣದಲಿ ‘ಹೊಂದಿಸಿ ಬರೆಯಿರಿ’ ಆಟ – Kannada News | Nihar Mukesh and Rachana Inder Starrer Ramenahalli Jagannatha Directional Theertharoopa Thandeyavarige Movie Review in Kannada

ತೀರ್ಥರೂಪ ತಂದೆಯವರಿಗೆ ಸಿನಿಮಾ ವಿಮರ್ಶೆ

2023ರಲ್ಲಿ ಬಂದ ‘ಹೊಂದಿಸಿ ಬರೆಯಿರಿ’ ಸಿನಿಮಾ ಗಮನ ಸೆಳೆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ರಾಮೇನಹಳ್ಳಿ ಜಗನ್ನಾಥ. ಈಗ ಅವರು ‘ತೀರ್ಥರೂಪ ತಂದೆಯವರಿಗೆ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಸ್ಟಾರ್ ಕಲಾವಿದರು ಇಲ್ಲದೆ ಇದ್ದರೂ ಟ್ರೇಲರ್ ಮೂಲಕ ಈ ಸಿನಿಮಾ ಗಮನ ಸೆಳೆದಿದೆ. ಆ ಚಿತ್ರದ ವಿಮರ್ಶೆ ಇಲ್ಲಿದೆ.

ಜಾನಕಿ (ಸಿತಾರಾ) ಜೀವನದಲ್ಲಿ ಸಾಕಷ್ಟು ಏರಿಳಿತ ಕಂಡವಳು. ಈಗ ಆಕೆಗೆ ಮಗನೇ ಪ್ರಪಂಚ. ಆದರೆ, ಮಗ ಪೃಥ್ವಿ ಸಂಚಾರಿ (ನಿಹಾರ್ ಮುಕೇಶ್​​) ಮನೆಯ ಮೇಲೆ ತಾಯಿ ಮೇಲೆ ಅದೇನೋ ದ್ವೇಷ. ಯೂಟ್ಯೂಬ್ ಚಾನೆಲ್ ಹೊಂದಿರುವ ಆತನಿಗೆ ಬೇರೆಯದೇ ಪ್ರಪಂಚ ಇದೆ. ಈತ ಮೇಲೆ ತಾಯಿ ಪ್ರೀತಿಯ ಮಳೆ ಸುರಿಸಿದರೂ ಅದು ಕೆಸುವಿನ ಎಲೆಯ ಮೇಲೆ ಬಿದ್ದ ನೀರಂತೆ, ನಿಲ್ಲುವುದಿಲ್ಲ ಜಾರಿ ಹೋಗುತ್ತದೆ. ಜಾನಕಿ ಹಾಗೂ ಊರಿನವನೇ ಆದ ವಿಶ್ವನಾಥ್ (ರಾಜೇಶ್ ನಟರಂಗ) ಒಡನಾಟ ಕೂಡ ಇದಕ್ಕೆ ಕಾರಣ ಇದ್ದಿರಬಹುದು. ತಾಯಿಯನ್ನು ದ್ವೇಷಿಸುವ ಪೃಥ್ವಿ ಬಾಳಲ್ಲಿ ಅಕ್ಷರಾನ (ರಚನಾ ಇಂದರ್) ಎಂಟ್ರಿ ಆಗುತ್ತದೆ. ಅಲ್ಲಿಂದ ಭಾವನೆಗಳ ಸವಾರಿ ಶುರು.

‘ತೀರ್ಥರೂಪ ತಂದೆಯವರಿಗೆ’ ಸಿನಿಮಾದಲ್ಲಿ ಹಲವು ಭಾವನೆಗಳನ್ನು ಸೇರಿಸಿದ್ದಾರೆ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ. ಇಲ್ಲಿ ಒಡೆದ ಹೃದಯವಿದೆ. ಮಗನ ಪ್ರೀತಿಗಾಗಿ ಹಂಬಲಿಸುವ ತಾಯಿಯ ಕರುಳಿದೆ. ದೇಹದ ಆಸೆಯನ್ನು ಮೀರಿ ನಿಂತ ಸಂಬಂಧಕ್ಕೆ ವಿವಿಧ ರೀತಿಯ ಬಣ್ಣ ಕಟ್ಟಿದಾಗ ನಿಶ್ಚಲವಾಗಿ ನಿಲ್ಲುವ ವ್ಯಕ್ತಿಯಿದ್ದಾನೆ. ಮಾಡಿದ ತಪ್ಪಿಗೆ ಪ್ರಾಯಶ್ಚಿತ ಮಾಡಿಕೊಳ್ಳಬೇಕಿರುವ ತಂದೆ ಒಂದು ಕಡೆಯಾದರೆ, ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸುವ ಅಪ್ಪ ಮತ್ತೊಂದು ಕಡೆ. ಅವರೆಲ್ಲಾ ಬೆಳೆದು ದೊಡ್ಡವರಾಗುತ್ತಿದ್ದಾರೆ, ನಮ್ಮ ಏಳ್ಗೆ ಯಾವಾಗ ಎಂದು ಉರಿದುಕೊಳ್ಳುವ ಗೆಳೆಯನಿದ್ದಾನೆ. ಎಲ್ಲವೂ ಕಥೆಯಲ್ಲಿ ಬೆಸೆದುಕೊಂಡಿದೆ.

ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಅವರು ‘ಹೊಂದಿಸಿ ಬರೆಯಿರಿ’ ಸಿನಿಮಾ ಮೂಲಕ ಭಾವನಾತ್ಮಕ ವಿಷಯಗಳನ್ನು ಎಷ್ಟು ಚೆನ್ನಾಗಿ ಹೆಣೆಯಬಲ್ಲರು ಎಂಬುದನ್ನು ತೋರಿಸಿದ್ದರು. ಈಗ ಅವರು ಮತ್ತೊಮ್ಮೆ ತಮ್ಮನ್ನು ತಾವು ಸಾಬೀತು ಮಾಡಿಕೊಂಡಿದ್ದಾರೆ. ಒಂದೊಳ್ಳೆಯ ಕಥೆ ಹೆಣೆದು, ಅದಕ್ಕೆ ಕೌಟುಂಬಿಕ ಮೌಲ್ಯ ಹಾಗೂ ಭಾವನೆಗಳನ್ನು ತುಂಬಿದ್ದಾರೆ. ಇಲ್ಲಿಯೂ ಹೊಂದಿಸಿ ಬರೆಯಿರಿ ಆಟ ಮುಂದುವರಿದಿದೆ. ಕ್ಲೈಮ್ಯಾಕ್ಸ್ ಭಾವನಾತ್ಮಕ ಜೀವಿಗಳ ಕಣ್ಣಲ್ಲಿ ನೀರು ತರಿಸೋ ಶಕ್ತಿ ಹೊಂದಿದೆ. ಜೋ ಕೋಸ್ಟಾ ಅವರ ಹಿನ್ನೆಲೆ ಸಂಗೀತ ಹಾಗೂ ದೀಪಕ್ ಯರಗೆರಾ ಛಾಯಾಗ್ರಹಣ ಇಡೀ ಸಿನಿಮಾದ ಅಂದವನ್ನು ಹೆಚ್ಚಿಸಿದೆ.

ಕಥಾ ನಾಯಕ ನಿಹಾರ್ ಅವರಿಗೆ ನಟನೆಯಲ್ಲಿ ಇದು ಮೊದಲ ಅನುಭವ. ಅವರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಭಾವನಾತ್ಮಕ ದೃಶ್ಯಗಳನ್ನು ಮತ್ತಷ್ಟು ಅಂದವಾಗಿ ನಿರ್ವಹಿಸೋ ಅವಕಾಶ ಅವರಿಗೆ ಇತ್ತು. ಕಲಿಕೆ ಮುಂದುವರಿದರೆ ಅವರು ಭರವಸೆಯ ನಾಯಕನಾಗಿ ಕಾಣಿಸುತ್ತಾರೆ. ರಚನಾ ಇಂದರ್ ಅಕ್ಷರಾ ಆಗಿ ಇಷ್ಟ ಆಗುತ್ತಾರೆ. ಅವರ ಮುದ್ದುತನ ಇಷ್ಟ ಆಗುತ್ತದೆ. ಸಿತಾರಾ, ಅಜಿತ್ ಹಂಡೆ, ರಾಜೇಶ್ ನಟರಂಗ, ಅಶ್ವಿತಾ ಹೆಗಡೆ ತಮಗೆ ಸಿಕ್ಕ ಪಾತ್ರವನ್ನು ಉತ್ತಮವಾಗಿ ನಿರ್ವಹಿಸಿದ್ದಾರೆ. ಕನ್ನಡದವರೇ ಆದ ರವೀಂದ್ರ ವಿಜಯ್ ಪಾತ್ರ ಸಿನಿಮಾಗೆ ಮತ್ತೊಂದು ತೂಕ ಕೊಡುತ್ತದೆ. ಅವರ ಪಾತ್ರಕ್ಕೆ ತುಂಬಾನೇ ಪ್ರಾಮುಖ್ಯತೆ ಇದೆ.

ಹಾಗಾದರೆ ಇದು ಪರಿಪೂರ್ಣ ಚಿತ್ರವೇ? ಅಲ್ಲ. ಬರವಣಿಗೆಯ ವಿಷಯದಲ್ಲಿ ಈ ಚಿತ್ರ ಪರಿಪೂರ್ಣವಾಗಿಲ್ಲ. ಸಿನಿಮಾದಲ್ಲಿ ಕೆಲವು ನ್ಯೂನ್ಯತೆಗಳು ಇವೆ. ಸಿನಿಮಾನ ಸಂಪೂರ್ಣ ನೋಡಿದ ಬಳಿಕ ಕೆಲವು ವಿಷಯಗಳಲ್ಲಿ, ಕೆಲವು ಪಾತ್ರಗಳಲ್ಲಿ ಪ್ರೇಕ್ಷಕನಿಗೆ ಗೊಂದಲ ಮೂಡುತ್ತದೆ. ಆ ವಿಷಯಗಳನ್ನು ಇನ್ನಷ್ಟು ಸರಳೀಕೃತಗೊಳಿಸಿದ್ದರೆ ಸಿನಿಮಾ ಇನ್ನಷ್ಟು ಸುಂದರವಾಗಿ ಮೂಡಿ ಬರುತ್ತಿತ್ತು. ಕೆಲವು ಪಾತ್ರಗಳು ಆರಂಭದಲ್ಲಿ ತುಂಬಾನೇ ಪ್ರಾಮುಖ್ಯತೆ ಪಡೆದುಕೊಂಡಿದ್ದರೂ ನಂತರ ಬಾಲಿಶಗೊಂಡು ಕಥೆಗೆ ಬೆಂಬಲವಾಗಿ ನಿಲ್ಲುವುದಿಲ್ಲ. ಕೆಲವು ಪಾತ್ರ ಹೊರ ನಡೆದಿದ್ದಕ್ಕೆ ಸರಿಯಾದ ಸಮರ್ಥನೆ ಇಲ್ಲ. ಕೆಲವು ದೃಶ್ಯಗಳಿಗೆ ಕತ್ತರಿ ಹಾಕುವ ಅವಶ್ಯಕತೆ ಇತ್ತು.

ಒಟ್ಟಾರೆ ನೋಡುವುದಾದರೆ 2026ರ ಆರಂಭದಲ್ಲಿ ಬಿಡುಗಡೆ ಆಗುತ್ತಿರುವ ಈ ಚಿತ್ರ ಸುಂದರ ಹಾಗೂ ಭಾವನಾತ್ಮಕ ಚಿತ್ರ ಎನಿಸಿಕೊಳ್ಳುತ್ತದೆ. ಕೆಲವು ನ್ಯೂನ್ಯತೆಗಳನ್ನು ಗಣನೆಗೆ ತೆಗೆದುಕೊಳ್ಳದೆ ನೋಡಿದರೆ ಚಿತ್ರ ಇಷ್ಟ ಆಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 3:16 pm, Wed, 31 December 25

Source link

ಕೋಲಾರ: ಒಂದುವರೆ ಗಂಟೆಯಲ್ಲಿ 21 ಜನರಿಗೆ ಕಚ್ಚಿ ಗಾಯ ಮಾಡಿದ ಬೀದಿ ನಾಯಿ – Kannada News | Karnataka Stray Dog Menace: Kolar Incident Sparks Safety Concerns

ಕೋಲಾರ, ಡಿ.31: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಈ ಬೀದಿಗಳು ಸಾರ್ವಜನಿಕರಿಗೆ ಕಚ್ಚಿರುವ ಹಲವು ಪ್ರಕರಣಗಳು ವರದಿಯಾಗಿವೆ. ಇದೀಗ ಕೋಲಾರದಲ್ಲಿ ಬೀದಿ ನಾಯಿ ಕಚ್ಚಿರುವ ವಿಡಿಯೋವೊಂದು ವೈರಲ್​​ ಆಗಿದೆ. ಈ ಬಗ್ಗೆ ಸಿಸಿಟಿವಿ ವಿಡಿಯೋ ಲಭ್ಯವಾಗಿದ್ದು, ಒಂದುವರೆ ಗಂಟೆ ಅವಧಿಯಲ್ಲಿ ಸುಮಾರು 21 ಜನರಿಗೆ ಕಚ್ಚಿ ಗಾಯಗೊಳಿಸಿದೆ. ಈ ನಾಯಿ ಕೋಲಾರ ಆರ್​.ಟಿ.ಓ ಆಫೀಸ್​, ಹಳೇ ಹಂಚಿನ ಕಾರ್ಖಾನೆ ಬಡಾವಣೆ, ಬೆತ್ಲಹೆಮ್ ನಗರ, ಸೇರಿ ಹಲವೆಡೆ ಜನರ ಮೇಲೆ ದಾಳಿ ಮಾಡಿದೆ. ಗಾಯಾಳುಗಳನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಅಲ್ಲಿನ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು, 21 ಜನರಿಗೆ ಕಚ್ಚಿರುವ ನಾಯಿಯನ್ನು ಹೊಡೆದು ಕೊಂದಿದ್ದಾರೆ. ಇನ್ನು ಬೀದಿ ನಾಯಿ ಹಾವಳಿಗೆ ಕಡಿವಾಣ ಹಾಕದ ನಗರಸಭೆ ವಿರುದ್ದ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Forgot UAN: ನಿಮ್ಮ EPF UAN ಸಂಖ್ಯೆ ಮರೆತಿದ್ದೀರಾ? ಚಿಂತಿಸಬೇಡಿ, ಈ ರೀತಿ ಸುಲಭವಾಗಿ ಮರುಪಡೆಯಿರಿ – Kannada News | Forgot UAN? Retrieve Your EPF UAN in Minutes

ಪ್ರತಿ ತಿಂಗಳು ಸಂಬಳದಿಂದ ಪಿಎಫ್ ಕಡಿತಗೊಳಿಸಲಾಗುತ್ತದೆ. ಪಿಎಫ್ ಖಾತೆಗೆ ಸಂಬಂಧಿಸಿದ ಪ್ರತಿಯೊಂದು ಸೌಲಭ್ಯಕ್ಕೂ ಈ 12-ಅಂಕಿಯ ಯುನಿವರ್ಸಲ್ ಅಕೌಂಟ್ ಸಂಖ್ಯೆ (ಯುಎಎನ್) ಅಗತ್ಯವಿದೆ. ಆದರೆ ಅನೇಕ ಬಾರಿ ಉದ್ಯೋಗಿಗಳು ತಮ್ಮ ಯುಎಎನ್ ಸಂಖ್ಯೆಯನ್ನು ಮರೆತುಬಿಡುತ್ತಾರೆ. ಇಪಿಎಫ್ ಸೈಟ್‌ಗೆ ನಿಯಮಿತವಾಗಿ ಲಾಗಿನ್ ಆಗದಿರುವುದು ಸೇರಿದಂತೆ ಹಲವು ಕಾರಣಗಳಿವೆ. ಪ್ರತಿಯೊಬ್ಬ ಉದ್ಯೋಗಿ ತಮ್ಮ ವೃತ್ತಿಜೀವನದುದ್ದಕ್ಕೂ ಒಂದೇ ಯುಎಎನ್ ಅನ್ನು ಹೊಂದಿರುತ್ತಾರೆ. ನೀವು ಅದನ್ನು ಮರೆತರೂ ಚಿಂತಿಸಬೇಕಾಗಿಲ್ಲ. ಏಕೆಂದರೆ ಈಗ ನೀವು ನಿಮ್ಮ ಯುಎಎನ್ ಅನ್ನು ನಿಮಿಷಗಳಲ್ಲಿ ಮರಳಿ ಪಡೆಯಬಹುದು. ನೀವು ನಿಮ್ಮ ಯುಎಎನ್ ಸಂಖ್ಯೆಯನ್ನು ಸಹ ಮರೆತರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂಬುದರ ಕುರಿತು ವಿವರವಾದ ಮಾರ್ಗದರ್ಶಿ ಇಲ್ಲಿದೆ.

UAN ಸಂಖ್ಯೆ ಮರಳಿ ಪಡೆಯುವುದು ಹೇಗೆ?

  • ನಿಮ್ಮ UAN ಸಂಖ್ಯೆಯನ್ನು ಪಡೆಯುವುದು ತುಂಬಾ ಸುಲಭ. ಇದಕ್ಕಾಗಿ EPFO ​​ತನ್ನ ವೆಬ್‌ಸೈಟ್‌ನಲ್ಲಿ ವಿಶೇಷ ಸೌಲಭ್ಯವನ್ನು ಒದಗಿಸಿದೆ. ಇದಕ್ಕಾಗಿ, ನಿಮಗೆ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಕೆಲವು ಮಾಹಿತಿ ಮಾತ್ರ ಬೇಕಾಗುತ್ತದೆ.
  • ಯುಎಎನ್ ಸಂಖ್ಯೆಯನ್ನು ಪಡೆಯಲು , ಮೊದಲು ಇಪಿಎಫ್‌ಒ ವೆಬ್‌ಸೈಟ್ unifiedportal-mem.epfindia.gov.in ಗೆ ಭೇಟಿ ನೀಡಿ .
  • ಇದರ ನಂತರ, ನಿಮ್ಮ UAN ಅನ್ನು ತಿಳಿದುಕೊಳ್ಳಿ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ .
  • ಈಗ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು OTP ಅನ್ನು ಪರಿಶೀಲಿಸಿ.
  • ಅದರ ನಂತರ, ನಿಮ್ಮ ಹೆಸರು, ಜನ್ಮ ದಿನಾಂಕ, ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್ (PAN) ನಂತಹ ಮೂಲಭೂತ ಮಾಹಿತಿಯನ್ನು ನೀವು ಒದಗಿಸಬೇಕಾಗುತ್ತದೆ.
  • ಈಗ ಫಾರ್ಮ್ ಸಲ್ಲಿಸಿದ ತಕ್ಷಣ, UAN ಸಂಖ್ಯೆ ನಿಮ್ಮ ಪರದೆಯ ಮೇಲೆ ಕಾಣಿಸುತ್ತದೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಪಿಎಫ್ ಖಾತೆಗೆ ಯುಎಎನ್ ಏಕೆ ಬೇಕು ?

ಯುಎಎನ್ ಸಂಖ್ಯೆ ಇಲ್ಲದೆ, ನಿಮ್ಮ ಭವಿಷ್ಯ ನಿಧಿ ಖಾತೆಗೆ ಲಾಗಿನ್ ಆಗಲು ಸಾಧ್ಯವಿಲ್ಲ. ನಿಮ್ಮ ಇಪಿಎಫ್ ಬ್ಯಾಲೆನ್ಸ್ ಅನ್ನು ನೀವು ಪರಿಶೀಲಿಸಲು ಸಾಧ್ಯವಿಲ್ಲ. ಪಿಎಫ್ ಹಿಂಪಡೆಯುವಿಕೆಯಂತಹ ಪ್ರಕ್ರಿಯೆಗಳನ್ನು ನೀವು ಪೂರ್ಣಗೊಳಿಸಲು ಸಾಧ್ಯವಿಲ್ಲ. ಅದೇ ಸಮಯದಲ್ಲಿ, ನೀವು ಉದ್ಯೋಗಗಳನ್ನು ಬದಲಾಯಿಸಿದಾಗ ನಿಮ್ಮ ಹಳೆಯ ಪಿಎಫ್ ಅನ್ನು ಹೊಸ ಕಂಪನಿಗೆ ವರ್ಗಾಯಿಸಬೇಕಾದರೆ, ಯುಎಎನ್ ಅಗತ್ಯವಿದೆ. ನಿಮ್ಮ ಪಿಎಫ್ ಖಾತೆಗೆ ಸಂಬಂಧಿಸಿದ ಪ್ರತಿಯೊಂದು ಸಣ್ಣ ಕೆಲಸದಲ್ಲೂ ಉದ್ಯೋಗಿಗೆ ಯುಎಎನ್ ಸಂಖ್ಯೆ ಬಹಳ ಮುಖ್ಯ.

SMS ಮೂಲಕವೂ UAN ಸಂಖ್ಯೆ ಲಭ್ಯ:

ನಿಮ್ಮ UAN ಸಂಖ್ಯೆಯನ್ನು SMS ಮೂಲಕ ಪಡೆಯಬಹುದು . ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ 7738299899 ಗೆ EPFOHO UAN ENG ಎಂಬ ಸಂದೇಶವನ್ನು ಕಳುಹಿಸಬೇಕು . ಸಂದೇಶ ಕಳುಹಿಸಿದ ಸ್ವಲ್ಪ ಸಮಯದ ನಂತರ ನಿಮ್ಮ ಮೊಬೈಲ್‌ಗೆ ನಿಮ್ಮ UAN ಸಂಖ್ಯೆ ಬರುತ್ತದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸರ್ಕಾರದ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ಗೆ ಜೆಡಿಎಸ್​​ ​ದೂರು: ಆರೋಪವೇನು? – Kannada News | JDS Approaches Governor Against Karnataka Government Over Hate Speech Bill

ಬೆಂಗಳೂರು, ಡಿಸೆಂಬರ್​​ 31: ರಾಜ್ಯ ಸರ್ಕಾರದ ದ್ವೇಷ ಭಾಷಣ ಮಸೂದೆ, ರೈತರಿಗೆ ಪರಿಹಾರ ನೀಡುವಲ್ಲಿನ ವಿಳಂಬ ಮತ್ತು ಕೋಗಿಲು ಲೇಔಟ್‌ನಲ್ಲಿ ಮನೆಗಳ ತೆರವು ಕಾರ್ಯಾಚರಣೆ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್​​ ದೂರು ಸಲ್ಲಿಸಿದೆ. ದ್ವೇಷ ಭಾಷಣ ಮಸೂದೆಯನ್ನು ಚರ್ಚೆಯಿಲ್ಲದೆ ಅಂಗೀಕರಿಸಲಾಗಿದೆ. ಇದು ವಾಕ್​​ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಕಾನೂನಾಗಿರುವ ಕಾರಣ ಬಿಲ್ ತಿರಸ್ಕಾರ ಮಾಡುವಂತೆ ಆಗ್ರಹಿಸಲಾಗಿದೆ.  ಕಲಬುರಗಿ, ಬೀದರ್, ಯಾದಗಿರಿ ಸೇರಿದಂತೆ ಹತ್ತು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಬೆಳೆಗಳು ನಾಶವಾಗಿದ್ದರೂ ಸರ್ಕಾರ ಸೂಕ್ತ ಪರಿಹಾರ ನೀಡಲು ವಿಫಲವಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನಡೆದಿದ್ದರೂ ಮುಖ್ಯಮಂತ್ರಿಗಳು ಯಾವುದೇ ವಿಶೇಷ ಪ್ಯಾಕೇಜ್ ಘೋಷಿಸಿಲ್ಲ ಎಂದು ಜೆಡಿಎಸ್​​ ಆರೋಪಿಸಿದೆ. ಅಲ್ಲದೆ, ಕೋಗಿಲು ಲೇಔಟ್‌ನಲ್ಲಿ ಮನೆಗಳನ್ನು ತೆರವುಗೊಳಿಸುವ ಸರ್ಕಾರದ ಕ್ರಮವನ್ನು ಜೆಡಿಎಸ್ ತೀವ್ರವಾಗಿ ಖಂಡಿಸಿದ್ದು, ಇದು ಜನವಿರೋಧಿ ನೀತಿ ಎಂದು ಕರೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆ; ಕುಟುಂಬಕ್ಕೆ ಪ್ರಧಾನಿ ಮೋದಿಯ ಪತ್ರ ನೀಡಿದ ಸಚಿವ ಜೈಶಂಕರ್ – Kannada News | Khaleda Zia’s Funeral Minister Jaishankar Hands Over PM Modi’s Letter To BNP Leaders family

ನವದೆಹಲಿ, ಡಿಸೆಂಬರ್ 31: ಬಾಂಗ್ಲಾದೇಶದ (Bangladesh) ಮಾಜಿ ಪ್ರಧಾನಿ ಮತ್ತು ಬಿಎನ್‌ಪಿ ಮುಖ್ಯಸ್ಥೆ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯ ಹಿನ್ನೆಲೆಯಲ್ಲಿ ಅಂತಿಮ ದರ್ಶನಕ್ಕಾಗಿ ಇಂದು ಢಾಕಾದಲ್ಲಿ ಲಕ್ಷಾಂತರ ಜನರು ಸೇರಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದಾಗಿ ಖಲೀದಾ ಜಿಯಾ ಮಂಗಳವಾರ ತಮ್ಮ 80ನೇ ವಯಸ್ಸಿನಲ್ಲಿ ನಿಧನರಾಗಿದ್ದರು. ಹಲವು ದಶಕಗಳಿಂದ ಬಾಂಗ್ಲಾದೇಶದ ರಾಜಕೀಯದಲ್ಲಿ ಪ್ರಾಬಲ್ಯ ಹೊಂದಿದ್ದ ಖಲೀದಾ ಜಿಯಾ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದರು.

ರಾಷ್ಟ್ರೀಯ ಸಂಸತ್ ಭವನದ ದಕ್ಷಿಣ ಪ್ಲಾಜಾದಲ್ಲಿ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಗಾಗಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಬೆಂಬಲಿಗರು ಢಾಕಾದ ಬೀದಿಗಳಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಸೇರಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಾಂಗ್ಲಾದೇಶದ ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಅಂತ್ಯಕ್ರಿಯೆಗಾಗಿ ರಾಜಧಾನಿ ಢಾಕಾದಲ್ಲಿ ಭದ್ರತೆಯನ್ನು ಹೆಚ್ಚಿಸಿದೆ.

ಇದನ್ನೂ ಓದಿ: Khaleda Zia Death: ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಖಲೀದಾ ಜಿಯಾ ನಿಧನ

1981ರಲ್ಲಿ ಹತ್ಯೆಗೀಡಾದ ಅವರ ಪತಿ ಮಾಜಿ ಅಧ್ಯಕ್ಷ ಜಿಯಾವುರ್ ರೆಹಮಾನ್ ಅವರ ಸಮಾಧಿಯ ಪಕ್ಕದಲ್ಲಿಯೇ ಶೇರ್-ಎ-ಬಾಂಗ್ಲಾ ನಗರದ ಜಿಯಾ ಉದ್ಯಾನ್‌ನಲ್ಲಿ ಖಲೀದಾ ಜಿಯಾ ಅವರ ಅಂತ್ಯಕ್ರಿಯೆ ನಡೆದಿದೆ. ಈ ವೇಳೆ ಭಾರತದ ಪ್ರತಿನಿಧಿಯಾಗಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದಾರೆ.

ಭಾರತವನ್ನು ಪ್ರತಿನಿಧಿಸಿ ಢಾಕಾದಲ್ಲಿ ನಡೆದ ಖಲೀದಾ ಜಿಯಾ ಅವರ ಅಂತಿಮ ಯಾತ್ರೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಕೂಡ ಭಾಗವಹಿಸಿದ್ದರು. ಅಂತ್ಯಕ್ರಿಯೆಗೂ ಮೊದಲು ಜೈಶಂಕರ್ ಅವರು ಪ್ರಧಾನಿ ನರೇಂದ್ರ ಮೋದಿ ಬರೆದ ವೈಯಕ್ತಿಕ ಪತ್ರವನ್ನು ಖಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಅವರಿಗೆ ಹಸ್ತಾಂತರಿಸಿದರು.

“ಢಾಕಾಗೆ ತೆರಳಿ ಬಿಎನ್‌ಪಿಯ ಕಾರ್ಯಕಾರಿ ಅಧ್ಯಕ್ಷೆ ಮತ್ತು ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಅವರನ್ನು ಭೇಟಿಯಾದೆ. ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಪತ್ರವನ್ನು ಅವರಿಗೆ ಹಸ್ತಾಂತರಿಸಿದೆ. ಭಾರತ ಸರ್ಕಾರ ಮತ್ತು ಜನರ ಪರವಾಗಿ ತೀವ್ರ ಸಂತಾಪ ಸೂಚಿಸಿದೆ” ಎಂದು ವಿದೇಶಾಂಗ ಸಚಿವ ಜೈಶಂಕರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ನಾಳೆ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಭಾರತದ ಸಚಿವ ಜೈಶಂಕರ್

ಖಲೀದಾ ಜಿಯಾ ಅವರ ದೃಷ್ಟಿಕೋನ ಮತ್ತು ಮೌಲ್ಯಗಳು ಭಾರತದ ಅಭಿವೃದ್ಧಿ ಮತ್ತು ಬಾಂಗ್ಲಾದೇಶದ ಪಾಲುದಾರಿಕೆಗೆ ಮಾರ್ಗದರ್ಶನ ನೀಡುತ್ತವೆ ಎಂದು ಜೈಶಂಕರ್ ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 3:39 pm, Wed, 31 December 25

Source link

2025ರಲ್ಲಿ ಕನ್ನಡ ಸಿನಿಮಾಗಳು ಸೋತಿದ್ದೇ ಜಾಸ್ತಿ; ಬುದ್ಧಿ ಕಲಿಯಬೇಕಾಗಿದ್ದು ಯಾರು? – Kannada News | Kannada Film Industry witnesses more failure than success in year 2025

2025ರಲ್ಲಿ ಗೆದ್ದ ಕನ್ನಡ ಸಿನಿಮಾಗಳ (Kannada Movies) ಸಂಖ್ಯೆ ಕಡಿಮೆ. ಸೋಲಿನ ಸಂಖ್ಯೆಯೇ ಬಹುಪಾಲು ಇದೆ. ಆ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಕನ್ನಡ ಚಿತ್ರರಂಗ (Kannada Film Industry) ಎಲ್ಲಿ ಎಡವುತ್ತಿದೆ? ತಪ್ಪು ತಿದ್ದಿಕೊಳ್ಳಬೇಕಾಗಿದ್ದು ಯಾರು? ಯಾವ ರೀತಿ ಒಳ್ಳೆಯ ಸಿನಿಮಾ ಮಾಡಬೇಕು ಎಂಬ ಬಗ್ಗೆ ‘ಕರ್ನಾಟಕ ಬಾಕ್ಸ್ ಆಫೀಸ್’ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ‘2025 ಕನ್ನಡ ಚಿತ್ರರಂಗದ ಪಾಲಿಗೆ ಸವಾಲಿನ ವರ್ಷವಾಗಿತ್ತು ಎಂಬುದನ್ನು ಭಾರವಾದ ಹೃದಯದಿಂದ ಹೇಳುತ್ತಿದ್ದೇವೆ’ ಎನ್ನುವ ಮೂಲಕ ಈ ಬರಹ ಆರಂಭಿಸಲಾಗಿದೆ.

‘250ಕ್ಕೂ ಹೆಚ್ಚು ಸಿನಿಮಾಗಳು ಬಿಡುಗಡೆ ಆದರೂ, ಚಿತ್ರೋದ್ಯಮವು ಬಹಳ ಸೀಮಿತ ಯಶಸ್ಸನ್ನು ಕಂಡಿತು. ಕೇವಲ 4 ಅಥವಾ 5 ಸಿನಿಮಾಗಳನ್ನು ಹೊರತುಪಡಿಸಿ, ಬಹುತೇಕ ಎಲ್ಲಾ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಪರಿಣಾಮ ಬೀರಲು ವಿಫಲವಾದವು. ಇದು ಕಂಟೆಂಟ್ ಮತ್ತು ಪ್ರೇಕ್ಷಕರ ನಿರೀಕ್ಷೆಗಳ ನಡುವೆ ಹೆಚ್ಚುತ್ತಿರುವ ಅಂತರವನ್ನು ಸ್ಪಷ್ಟವಾಗಿ ತಿಳಿಸುತ್ತಿದೆ. ಒಳ್ಳೆಯ ಸ್ಕ್ರಿಪ್ಟ್‌ಗಳು, ಉತ್ತಮ ಯೋಜನೆ ಮತ್ತು ಹೆಚ್ಚು ಪ್ರಾಮಾಣಿಕ ಸಿನಿಮಾಗಳ ನಿರ್ಮಾಣ ಮಾಡುವುದು ತುರ್ತು ಅಗತ್ಯವಾಗಿದೆ.’

‘ದೊಡ್ಡ ಸ್ಟಾರ್ ಕಲಾವಿದರು, ಹೆಸರಾಂತ ನಿರ್ದೇಶಕರು, ಪ್ರಮುಖ ನಿರ್ಮಾಣ ಸಂಸ್ಥೆಗಳು ಮತ್ತು ಭರವಸೆಯ ಯುವ ಪ್ರತಿಭೆಗಳು ಕೂಡ ತಮ್ಮ ಅಹಂಕಾರವನ್ನು ಬದಿಗಿಟ್ಟು ಅರ್ಥಪೂರ್ಣ ಸಹಯೋಗದತ್ತ ಗಮನ ಹರಿಸಬೇಕು. ಆಗ ಮಾತ್ರ ನಾವು ನಿಜವಾಗಿಯೂ ಬಲವಾದ ಬಾಕ್ಸ್ ಆಫೀಸ್ ಸಂಖ್ಯೆಗಳನ್ನು ವೀಕ್ಷಿಸಬಹುದು. ಇನ್ನೂ ಹೆಚ್ಚು ಕಳವಳಕಾರಿ ಸಂಗತಿಯೆಂದರೆ, ಹಲವಾರು ದೊಡ್ಡ ಸಿನಿಮಾಗಳಿಗೆ ಒಟಿಟಿ ಮತ್ತು ಕಿರುತೆರೆ ಪ್ರಸಾರ ಹಕ್ಕುಗಳ ಮಾರಾಟ ಕೂಡ ಕಷ್ಟಕರವಾಗಿದೆ.’

‘ಟ್ರೆಂಡ್ ಫಾಲೋ ಮಾಡುವುದು ಬಿಟ್ಟು ಮೂಲಭೂತ ವಿಷಯಗಳಾದ ಕಠಿಣ ಪರಿಶ್ರಮ, ಪ್ರಾಮಾಣಿಕತೆ ಮತ್ತು ಪ್ರತಿಭೆ ಮೇಲಿನ ನಂಬಿಕೆಗೆ ಮರಳುವ ಸಮಯ ಇದು. ಪ್ರೇಕ್ಷಕರು ಯಾವಾಗಲೂ ಉತ್ತಮ ಸಿನಿಮಾ ನೋಡಲು ಸಿದ್ಧರಿರುತ್ತಾರೆ. ಸಿನಿಮಾವನ್ನು ಪಾಪರಾಜಿ ಸಂಸ್ಕೃತಿ, ಕೃತಕ ಖ್ಯಾತಿ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಫಾಲೋವರ್ಸ್​​ಗಳಿಂದ ಗೊಂದಲಗೊಳಿಸಬೇಡಿ. ಲೈಕ್‌ಗಳು, ವೀಕ್ಷಣೆಗಳು ಮತ್ತು ಕಾಮೆಂಟ್‌ಗಳನ್ನು ಖರೀದಿಸುವ ರೀತಿಯಲ್ಲಿ ನೀವು ಪ್ರೇಕ್ಷಕರನ್ನು ಖರೀದಿಸಲು ಸಾಧ್ಯವಿಲ್ಲ.’

ಇದನ್ನೂ ಓದಿ: ‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?

‘ನಿಜವಾದ ತಾರಾಪಟ್ಟವು ಸ್ಥಿರವಾದ ಪ್ರಯತ್ನ ಮತ್ತು ಗುಣಮಟ್ಟದ ಕಥೆ ಹೇಳುವಿಕೆಯ ಮೂಲಕ ನಿರ್ಮಿಸಲ್ಪಡುತ್ತದೆ. ಹೆಚ್ಚು ಕೆಲಸ ಮಾಡಿ, ಕಡಿಮೆ ಮಾತನಾಡಿ. ಒಂದು ಕಲಾ ಪ್ರಕಾರವಾಗಿ ಸಿನಿಮಾ ಗೌರವಕ್ಕೆ ಅರ್ಹವಾಗಿದೆ. ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಿ, ಪ್ರಾಮಾಣಿಕ ಕಥೆಗಳನ್ನು ಹೇಳಿ ಮತ್ತು ಕೆಲಸವೇ ಮಾತನಾಡಲು ಬಿಡಿ. ಏಕೆಂದರೆ ಇತಿಹಾಸವು ನಮಗೆ ತೋರಿಸಿರುವ ಪ್ರಕಾರ, ಕಲ್ಪಿತ ಸ್ಟಾರ್​ಡಮ್ ಮತ್ತು ಬಾಹ್ಯ ಪ್ರಚಾರವು ದೊಡ್ಡ ನಿರ್ದೇಶಕರು ಮತ್ತು ನಿರ್ಮಾಪಕರನ್ನು ಸಹ ಕೆಡವಬಲ್ಲದು’ ಎಂದು ‘ಕರ್ನಾಟಕ ಬಾಕ್ಸ್ ಆಫೀಸ್’ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

KSRTC ಬಸ್​​-ಲಾರಿ ನಡುವೆ ಭೀಕರ ಅಪಘಾತ: ತುಂಡಾದ ಚಾಲಕನ ಕಾಲು; ಹಲವರು ಗಂಭೀರ – Kannada News | KSRTC Bus and Lorry Accident on the Outskirts of Lokapur, Bagalakot

ಬಾಗಲಕೋಟೆ, ಡಿಸೆಂಬರ್​​ 31: ಕೆಎಸ್​​ಆರ್​ಟಿಸಿ ಬಸ್​ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್​​ ಚಾಲಕನ ಕಾಲು ತುಂಡಾಗಿರುವ ಜೊತೆಗೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲೋಕಾಪುರ ಹೊರವಲಯದಲ್ಲಿ ನಡೆದಿದೆ. ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ ಗಾಯಗೊಂಡವರನ್ನು ಲೋಕಾಪೂರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್​​ ಮತ್ತು ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಲೋಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೆಂಗಳೂರು ಜನರ ದೋಚುತ್ತಿರುವ ‘ಜನ ನಾಯಕ’ ವಿಜಯ್ – Kannada News | Jana Nayagan movie advance booking open in Bengaluru with high ticket price

ದಳಪತಿ ವಿಜಯ್ (Thalapathy Vijay) ತಮ್ಮ ಕೊನೆಯ ಸಿನಿಮಾಕ್ಕೆ ‘ಜನ ನಾಯಗನ್’ ಎಂದು ಹೆಸರಿಟ್ಟಿದ್ದಾರೆ. ವಿಜಯ್ ರಾಜಕೀಯಕ್ಕೆ ಪ್ರವೇಶಿಸಿದ್ದು, ಸಿನಿಮಾ ಅನ್ನು ತಮ್ಮ ರಾಜಕೀಯ ಅಜೆಂಡಕ್ಕೆ ಪ್ರಚಾರ ಕೊಡಲು ಟೂಲ್ ಆಗಿ ಬಳಸುತ್ತಿದ್ದಾರೆ. ವಿಪರ್ಯಾಸವೆಂದರೆ ‘ಜನ ನಾಯಗನ್’ (ಜನ ನಾಯಕ) ಎಂದು ಹೆಸರಿಟ್ಟುಕೊಂಡು ಬೆಂಗಳೂರಿನ ಸಿನಿಮಾ ಪ್ರೇಮಿಗಳ ಲೂಟಿಗೆ ಇಳಿದಿದ್ದಾರೆ ನಟ ವಿಜಯ್ ಮತ್ತು ‘ಜನ ನಾಯಗನ್’ ಚಿತ್ರತಂಡ. ಹೇಗದು? ವಿವರ ಇಲ್ಲಿದೆ ನೋಡಿ…

‘ಜನ ನಾಯಗನ್’ ತಮಿಳು (ಕನ್ನಡ ಡಬ್ ಇಲ್ಲ) ಸಿನಿಮಾ ಜನವರಿ 09 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಈಗಾಗಲೇ ಆರಂಭವಾಗಿದೆ. ಜನವರಿ 09ರ ಬೆಳಿಗ್ಗೆ 6:30ಕ್ಕೆ ವಿಶೇಷ ಶೋ ಪ್ರದರ್ಶನವಾಗುತ್ತಿದ್ದು, ಬೆಂಗಳೂರಿನಲ್ಲೂ ಮುಂಗಡ ಬುಕಿಂಗ್ ಓಪನ್ ಆಗಿದ್ದು, ಬೆಂಗಳೂರಿನಲ್ಲಿ ಪ್ರತಿ ಟಿಕೆಟ್ ದರ 1000 ರೂಪಾಯಿಗಳಿಗೂ ಹೆಚ್ಚಿದೆ. ಪ್ರಸ್ತುತ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಮಾತ್ರವೇ ಮುಂಗಡ ಬುಕಿಂಗ್ ಓಪನ್ ಆಗಿದ್ದು, ಸಿಂಗಲ್ ಸ್ಕ್ರೀನ್​​ಗಳಲ್ಲಿಯೇ ಟಿಕೆಟ್ ದರ 800 ರಿಂದ ಪ್ರಾರಂಭವಾಗುತ್ತಿದ್ದು, ಕೆಲವೆಡೆ 1200-1500 ರೂಪಾಯಿಗಳು ಸಹ ನಿಗದಿಪಡಿಸಲಾಗಿದೆ.

ಮಧ್ಯಮ ವರ್ಗದ ಚಿತ್ರಮಂದಿರಗಳು ಎನಿಸಿಕೊಂಡಿದ್ದ ವೀರೇಶ್, ನವರಂಗ ಅಂಥಹಾ ಚಿತ್ರಮಂದಿರಗಳಲ್ಲಿಯೂ ಸಹ ‘ಜನ ನಾಯಗನ್’ ಸಿನಿಮಾದ ಟಿಕೆಟ್​ನ ಆರಂಭಿಕ ದರವೇ 800 ರೂಪಾಯಿಗಳಿವೆ. ಬಾಲ್ಕನಿ ಟಿಕೆಟ್ ದರ 1000 ರೂಪಾಯಿಗಳಿದೆ. ಮಲ್ಟಿಪ್ಲೆಕ್ಸ್​​ಗಳಲ್ಲಿ ಮುಂಗಡ ಬುಕಿಂಗ್ ಇನ್ನೂ ಆರಂಭ ಆಗಿಲ್ಲ, ಸಿಂಗಲ್ ಸ್ಕ್ರೀನ್​​ಗಳಲ್ಲಿಯೇ 1000 ರೂಪಾಯಿ ಇರುವ ಟಿಕೆಟ್ ದರ ಮಲ್ಟಿಪ್ಲೆಕ್ಸ್​​ಗಳಲ್ಲಿ ದುಪ್ಪಟ್ಟಾಗುವ ಸಾಧ್ಯತೆ ಇದೆ. ಒಟ್ಟಾರೆ, ವಿಜಯ್, ಬೆಂಗಳೂರಿನ ಸಿನಿಮಾ ಪ್ರೇಮಿಗಳನ್ನು ದೋಚಲೆಂದೇ ಬಂದಂತಿದೆ.

ಇದನ್ನೂ ಓದಿ:ಕರೂರು ಘಟನೆಯಿಂದ ‘ಜನ ನಾಯಗನ್’ ರಿಲೀಸ್ ಮುಂದಕ್ಕೆ? ಇಲ್ಲಿದೆ ಹೊಸ ಅಪ್​ಡೇಟ್

ಲೂಟಿಗೆ ಬೆಂಗಳೂರನ್ನೇ ಆಯ್ಕೆ ಮಾಡಿಕೊಂಡಂತಿದೆ ‘ಜನ ನಾಯಗನ್’ ಚಿತ್ರತಂಡ, ಏಕೆಂದರೆ ಈ ಮುಂಗಡ ಬುಕಿಂಗ್, ವಿಶೇಷ ಶೋ ಸದ್ಯಕ್ಕೆ ಬೆಂಗಳೂರಿನಲ್ಲಿ ಮಾತ್ರ. ಚೆನ್ನೈ, ಹೈದರಾಬಾದ್​​ನಲ್ಲಿ ಇನ್ನೂ ಮುಂಗಡ ಬುಕಿಂಗ್ ಆರಂಭವೇ ಆಗಿಲ್ಲ. ಆರಂಭ ಆದರೂ ಸಹ ಚೆನ್ನೈನಲ್ಲಿ ತೀರ ಹೆಚ್ಚೆಂದರೆ 300 ರೂಪಾಯಿ ವಿಶೇಷ ಶೋಗೆ ಹಾಗೂ 100 ರೂಪಾಯಿ ಸಾಮಾನ್ಯ ಶೋಗೆ ಬೆಲೆ ಇರಲಿದೆ. ವಿಜಯ್ ಅವರ ಈ ಹಿಂದಿನ ಸಿನಿಮಾಗಳಿಗೆ ಚೆನ್ನೈನಲ್ಲಿ ಇಷ್ಟೆ ಟಿಕೆಟ್ ಬೆಲೆ ಇತ್ತು. ಹೈದರಾಬಾದ್​​ನಲ್ಲಿಯೂ ಸಹ ಇದೇ ಪರಿಸ್ಥಿತಿ ಇರಲಿದೆ. ಆದರೆ ಬೆಂಗಳೂರಿನಲ್ಲಿ ಮಾತ್ರ ನಾಲ್ಕು ಪಟ್ಟು ಹೆಚ್ಚು ಬೆಲೆಗೆ ಟಿಕೆಟ್ ಮಾರಾಟ ಮಾಡಲಾಗುತ್ತಿದೆ.

‘ಜನ ನಾಯಗನ್’ ವಿಜಯ್ ಅವರ ಕೊನೆಯ ಸಿನಿಮಾ ಆಗಿರಲಿದೆ. ರಾಜಕೀಯ ಪಕ್ಷ ಕಟ್ಟಿರುವ ವಿಜಯ್, ‘ಜನ ನಾಯಗನ್’ ಬಳಿಕ ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಳ್ಳುವುದಾಗಿ ಹೇಳಿದ್ದಾರೆ. ‘ಜನ ನಾಯಗನ್’ ಸಿನಿಮಾ ತೆಲುಗಿನ ‘ಭಗವಂತ್ ಕೇಸರಿ’ ಸಿನಿಮಾದ ರೀಮೇಕ್ ಆಗಿದ್ದು, ಸಿನಿಮಾನಲ್ಲಿ ಪೂಜಾ ಹೆಗ್ಡೆ ನಾಯಕಿ, ಮಲಯಾಳಂ ನಟಿ ಮಮಿತಾ ಬಿಜು ಸಹ ನಟಿಸಿದ್ದಾರೆ. ಬಾಬಿ ಡಿಯೋಲ್ ವಿಲನ್. ಎಚ್ ವಿನೋದ್ ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ಬಂಡವಾಳ ಹೂಡಿರುವುದು ಕೆವಿಎನ್ ಪ್ರೊಡಕ್ಷನ್ಸ್. ಕನ್ನಡದ ‘ಸಖತ್’, ‘ಬೈ ಟು ಲವ್’ ಸಿನಿಮಾಗಳನ್ನು ನಿರ್ಮಿಸಿರುವ ಕೆವಿಎನ್, ಪ್ರಸ್ತುತ ‘ಟಾಕ್ಸಿಕ್’, ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾವನ್ನೂ ನಿರ್ಮಾಣ ಮಾಡುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ನೆಲಮಂಗಲ: ಎಣ್ಣೆ ನಶೆಯಲ್ಲಿ ತಮಾಷೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ – Kannada News | Drunken Prank Leads to Death: Youth Tragically Dies in Nelamangala

ನೆಲಮಂಗಲ, ಡಿಸೆಂಬರ್​​ 31: ಮದ್ಯದ ನಶೆಯಲ್ಲಿ ತಾಯಿಯ ಜೊತೆ ತಮಾಷೆ ಮಾಡಲು ಹೋಗಿ ನೇಣಿಗೆ ಸಿಲುಕಿ ಯುವಕನೋರ್ವ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರೋಹಿತ್​​ ನಗರದಲ್ಲಿ ನಡೆದಿದೆ. ವಿಜಯಕುಮಾರ್(28) ಮೃತ ದುರ್ದೈವಿಯಾಗಿದ್ದು, ಮಗನ ಹುಚ್ಚಾಟಕ್ಕೆ ತಾಯಿ ಹಾಗೂ ಸಂಬಂಧಿಕರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ.

ನಿನ್ನೆ ಸಂಜೆ ಮದ್ಯ ಸೇವಿಸಿ ಮನೆಗೆ ತೆರಳಿದ್ದ ವಿಜಯ್ ಕುಮಾರ್ ತಾಯಿ ಬಳಿ ಖರ್ಚಿಗೆ ಹಣ ನೀಡುವಂತೆ ಕೇಳಿದ್ದ. ಈ ವೇಳೆ ಆಕೆ ಕೊಡಲ್ಲ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಬೆದರಿಕೆ ಹಾಕಿದ್ದ. ಬಳಿಕ ತಮಾಷೆ ಮಾಡಲು ಹೋಗಿ ನೇಣಿನ ಕುಣಿಕೆಗೆ ಸಿಲುಕಿ ವಿಜಯ್ ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ 8 ಗಂಟೆಗೆ ಘಟನೆ ನಡೆದಿದ್ದು, ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ನೆಲಮಂಗಲ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: ಲಿಫ್ಟ್​ ಕೊಡುವುದಾಗಿ ಹತ್ತಿಸಿಕೊಂಡು ಕಾರಿನಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಇದೇ ರೀತಿ ಹಿಂದೆಯೂ ತಮಾಷೆ ಮಾಡಿದ್ದ ವಿಜಯ್​​

ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದ ವಿಜಯ್​​ಕುಮಾರ್​​ಗೆ ಮದುವೆ ಮಾಡಬೇಕೆಂದು ತಾಯಿ ಕನಸು ಕಂಡಿದ್ದರು. ಚೆನ್ನಾಗಿ ಮಾತನಾಡುತ್ತಾ ತಮಾಷೆಯ ಸ್ವಾಭಾವ ಹೊಂದಿದ್ದ ವಿಜಯ್​​ ಮದ್ಯಪಾನ ಮಾಡಿ ಬಂದಿದ್ದಕ್ಕೆ ತಾಯಿ ಬೈದಿದ್ದರು. ಆ ವೇಳೆ ಆಕೆಯನ್ನು ತಮಾಷೆಗೆ ಹೆದರಿಸಲು ಹೋಗಿ ವಿಜಯ್​​ ನೇಣಿನ ಕುಣಿಕೆಗೆ ಸಿಲುಕಿದ್ದು, ಮನೆಯವರಿಗೆ ಇದು ಗಮನಕ್ಕೆ ಬರುವಷ್ಟರಲ್ಲಿ ಆತನ​​ ಪ್ರಾಣಪಕ್ಷಿ ಹಾರಿ ಹೋಗಿತ್ತು. ಹೆತ್ತವರ ಬಳಿ ಇದೇ ರೀತಿ ಹಲವು ಬಾರಿ ಈತ ತಮಾಷೆ ಮಾಡಿದ್ದು, ಸಾವಿನ ವಿಚಾರದಲ್ಲಿ ತಮಾಷೆ ಮಾಡಬೇಡ ಕಣೋ ಎಂದು ಹಲವು ಬಾರಿ ತಾಯಿಯೂ ವಿಜಯ್​​ಗೆ ಬುದ್ಧಿ ಹೇಳಿದ್ದರು. ಆದರೂ ಅದೇ ಚಾಳಿ ಮುಂದುವರಿಸಿದ್ದ ಕಾರಣ ಈಗ ಮಗ ಪ್ರಾಣವನ್ನೇ ಕಳೆದುಕೊಂಡಿದ್ದಾನೆ ಎಂದು ಕುಟುಂಬಸ್ಥರು ಅಲವತ್ತುಕೊಂಡಿದ್ದಾರೆ.

ವರದಿ: ಮಂಜುನಾಥ್​​, ಡಿವಿ9 ನೆಲಮಂಗಲ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮಜೆಸ್ಟಿಕ್ ಮೆಟ್ರೋದಲ್ಲಿ ಭದ್ರತೆಗೇ ಇಲ್ಲ ಭದ್ರತೆ: ಸರದಿ ಪಾಲಿಸುವಂತೆ ಹೇಳಿದ್ದ ಸಿಬ್ಬಂದಿಗೆ ಪ್ರಯಾಣಿಕರಿಂದ 7 ಬಾರಿ ಕಪಾಳಮೋಕ್ಷ – Kannada News | Bengaluru Majestic Metro: Security Guard Assaulted for Queue Instruction

ಸರದಿ ಪಾಲಿಸುವಂತೆ ಹೇಳಿದ್ದ ಸಿಬ್ಬಂದಿಗೆ ಪ್ರಯಾಣಿಕರಿಂದ 7 ಬಾರಿ ಕಪಾಳಮೋಕ್ಷ

ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನ ಕೆಂಪೇಗೌಡ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣದ ಮಜೆಸ್ಟಿಕ್‌ನಲ್ಲಿ ಭಾನುವಾರ ಮಧ್ಯಾಹ್ನ ಮೆಟ್ರೋ (Namma Metro) ಭದ್ರತಾ ಸಿಬ್ಬಂದಿಯೊಬ್ಬರ ಮೇಲೆ ನಾಲ್ವರು ಪ್ರಯಾಣಿಕರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಗ್ರೀನ್ ಲೈನ್ ರೈಲು ಹತ್ತುವಾಗ ಸರದಿಯಲ್ಲಿ ನಿಲ್ಲುವಂತೆ ಸೂಚಿಸಿದ್ದಕ್ಕೆ ಕೋಪಗೊಂಡ ಆರೋಪಿಗಳು ಸಿಬ್ಬಂದಿಯನ್ನು ಥಳಿಸಿದ್ದಾರೆ.

ಭದ್ರತಾ ಸಿಬ್ಬಂದಿಗೇ ಕಾಲಿನಿಂದ ಒದ್ದ ಪ್ರಯಾಣಿಕ

ಹಲ್ಲೆಗೊಳಗಾದ ಭದ್ರತಾ ಸಿಬ್ಬಂದಿಯ ಹೆಸರು ಇಂದ್ರಜಿತ್. ಮಧ್ಯಾಹ್ನ 12.45ರ ಸುಮಾರಿಗೆ ಗ್ರೀನ್ ಲೈನ್‌ನ ಪ್ಲಾಟ್‌ಫಾರ್ಮ್ 3ರಲ್ಲಿ ಈ ಘಟನೆ ನಡೆದಿದೆ. ಮಡವಾರದ ಕಡೆ ಪ್ರಯಾಣಿಸಲು ಬಂದಿದ್ದ ನಾಲ್ವರು ಯುವಕರು ಪ್ಲಾಟ್‌ಫಾರ್ಮ್‌ನಲ್ಲಿ ಸರದಿ ಪಾಲಿಸದೆ ರೈಲಿಗೆ ಏರಲು ಯತ್ನಿಸಿದರು. ಸುರಕ್ಷತೆಯ ದೃಷ್ಟಿಯಿಂದ ಖಾಲಿ ಸ್ಥಳದಲ್ಲಿ ಸರದಿ ರೂಪಿಸಿಕೊಳ್ಳುವಂತೆ ಇಂದ್ರಜಿತ್ ಸೂಚನೆ ನೀಡಿದರು. ಆದರೆ ಅವರು ಸೂಚನೆ ಪಾಲಿಸದೆ 12.47ಕ್ಕೆ ಬಂದ ರೈಲನ್ನು ತಪ್ಪಿಸಿಕೊಂಡರು.

ಇದನ್ನೂ ಓದಿ ಮೆಟ್ರೋ ಪ್ರಯಾಣಿಕರಿಗೆ ಶುಭಸುದ್ದಿ: ಹಸಿರು ಮಾರ್ಗಕ್ಕೆ ಸೇರ್ಪಡೆಗೊಳ್ಳಲಿವೆ 21 ಹೊಸ ರೈಲುಗಳು

ಮುಂದಿನ ರೈಲಿಗೆ ಸರದಿಯಲ್ಲಿ ನಿಲ್ಲುವಂತೆ ಪುನಃ ಹೇಳಿದಾಗ, ಆರೋಪಿಗಳಲ್ಲಿ ಒಬ್ಬರು ಇಂದ್ರಜಿತ್‌ಗೆ ಏಳು ಬಾರಿ ಕಪಾಳಮೋಕ್ಷ ಮಾಡಿದ್ದು, ಮತ್ತೊಬ್ಬರು ಕಾಲಿನಿಂದ ಒದ್ದಿದ್ದಾರೆ ಎನ್ನಲಾಗಿದೆ. ಹಲ್ಲೆಯ ಬಳಿಕ ಮೆಟ್ರೋ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಈ ವೇಳೆ ಇಬ್ಬರು ವಯೋವೃದ್ಧ ಪ್ರಯಾಣಿಕರು ಆರೋಪಿಗಳನ್ನು ಪ್ರಶ್ನಿಸಿ ಮುಂದಿನ ರೈಲಿಗೆ ಏರದಂತೆ ತಡೆದಿದ್ದಾರೆ. ಉಪ್ಪಾರಪೇಟೆ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ನಾಲ್ವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದುದೊಯ್ದಿದ್ದು, ಇಂದ್ರಜಿತ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link