ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್? – Kannada News | Karnataka Transport Corporations Seeks Government about Bus Fare Hike
ಬೆಂಗಳೂರು, (ಜೂನ್ 19): ಪೆಟ್ರೋಲ್ ಡೀಸೆಲ್ ಹಾಗೂ ಗ್ಯಾಸ್ ಸಿಲೆಂಡರ್ ದರ ಏರಿಕೆ ಬೆನ್ನಲ್ಲೇ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಇದರ ಮಧ್ಯೆ ಇದೀಗ ಕರ್ನಾಟಕದಲ್ಲಿ ಸಾರಿಗೆ ಬಸ್ ಟಿಕೆಟ್ ದರ ಏರಿಕೆ ಚರ್ಚೆಗಳು ನಡೆದಿವೆ. ಹೀಗಾಗಿ ಸಾರ್ವಜನಿಕರಿಗೆ ಮತ್ತೊಂದು ಬೆಲೆ ಏರಿಕೆ ಆತಂಕ ಶುರುವಾಗಿದೆ. ಹೌದು…ಬಸ್ ಪ್ರಯಾಣ ದರ ಹೆಚ್ಚಳ ಮಾಡುವಂತೆ ಸಾರಿಗೆ ನಿಗಮಗಳು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿವೆ. ಇಮದು (ಜೂನ್ 19) ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ…