nagaraj11081993

ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ಬೆಂಗಳೂರು, (ಏಪ್ರಿಲ್ 03): ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆಯವರು (Lokayukta retired justice santosh hegde ) ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು (ಏಪ್ರಿಲ್ 03) ಸ್ಕೌಟ್ಸ್ & ಗೈಡ್ಸ್ ಆಯುಕ್ತ PGR ಸಿಂಧ್ಯಾಗೆ ಅಭಿನಂದನಾ ಸಮಾರಂಭದಲ್ಲಿ ಸಂತೋಷ್ ಹೆಗ್ಡೆ ಭಾಗವಹಿಸಿದ್ದು, ಈ ವೇಳೆ ಭಾಷಣ ಮಾಡುವಾಗ ಅಸ್ವಸ್ಥಗೊಂಡಿದ್ದಾರೆ. ಬಳಿಕ ಭಾಷಣ ಮುಗಿಸಿ ವೇದಿಕೆ ಮೇಲಿನ ಕುರ್ಚಿ…

Read More

ಏಪ್ರಿಲ್​ನಲ್ಲಿ ಚಿನ್ನ ಸಖತ್ ದುಬಾರಿ? ಕಳೆದ 45 ವರ್ಷದಲ್ಲೆ ಬಂಗಾರಕ್ಕೆ ಗರಿಷ್ಠ ಡಿಮ್ಯಾಂಡ್; 20,000 ರೂಗೆ ಏರುತ್ತಾ ಬೆಲೆ?

ನವದೆಹಲಿ, ಏಪ್ರಿಲ್ 3: ಕಳೆದ 1 ವರ್ಷದಿಂದ ಚಿನ್ನದ ಬೆಲೆ (Gold Rates) ಬಹಳ ಏರಿದೆ. 2025ರ ಏಪ್ರಿಲ್ 3ರಂದು ಅಪರಂಜಿ ಚಿನ್ನದ ಬೆಲೆ 9,164 ರೂ ಇತ್ತು. ಒಂದು ವರ್ಷದ ನಂತರ ಇವತ್ತು ಅದರ ಬೆಲೆ 15,093 ರೂಗೆ ಏರಿದೆ. ಒಂದು ವರ್ಷದಲ್ಲಿ ಬೆಲೆಯಲ್ಲಿ ಶೇ. 65ರಷ್ಟು ಏರಿಕೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ 4,700 ಡಾಲರ್ ದಾಟಿ, 4,800 ಡಾಲರ್ ಗಡಿಯತ್ತ ಸಾಗಿದೆ. ಒಂದು ಔನ್ಸ್ ಎಂದರೆ 28.35 ಗ್ರಾಮ್….

Read More

ಹೈದರಾಬಾದ್‌ನ ಪಬ್‌ನಲ್ಲಿ ನಟಿ ಹೇಮಾ ಕೊಲ್ಲಗೆ ಡ್ರಗ್ಸ್ ಪರೀಕ್ಷೆ

ಬೆಂಗಳೂರಿನ ಪಾರ್ಟಿಯೊಂದರಲ್ಲಿ ಭಾಗಿ ಆಗಿ ಡ್ರಗ್ಸ್ ಸೇವಿಸಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ನಟಿ ಹೇಮಾ ಕೊಲ್ಲ (Hema Kolla) ಇದಿಗ ಮತ್ತೊಮ್ಮೆ ಪಾರ್ಟಿಯೊಂದರಲ್ಲಿ ಡ್ರಗ್ಸ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ನಟಿ ಹೇಮಾ ಕೊಲ್ಲ ಹೈದರಾಬಾದ್​​ನ ಪಬ್ ಒಂದರಲ್ಲಿ ಪಾರ್ಟಿಯಲ್ಲಿ ಭಾಗಿ ಆಗಿದ್ದರು. ಈ ವೇಳೆ ಪಬ್​ ಮೇಲೆ ಪೊಲೀಸ್ ದಾಳಿ ಆಗಿದ್ದು, ಅಲ್ಲಿ ನಟಿ ಹೇಮಾ ಅವರಿಗೆ ಡ್ರಗ್ಸ್ ಪರೀಕ್ಷೆ ಮಾಡಲಾಗಿತ್ತು. ಹೈದರಾಬಾದ್‌ನ ಕೊಂಡಾಪುರದಲ್ಲಿರುವ ‘ಕ್ವಾಕ್ ಅರೀನಾ ಪಬ್’ ಮೇಲೆ ಇತ್ತೀಚೆಗೆ ಹೈದರಾಬಾದ್ ಪೊಲೀಸರು ಮತ್ತು ಮಾದಕ…

Read More

ಮೈಸೂರು ರೈಲ್ವೆ ದಾಖಲೆ: ಸರಕು ಸಾಗಣೆ-ಪಾರ್ಸೆಲ್, ಟಿಕೆಟ್ ಪರಿಶೀಲನೆಯಲ್ಲಿ ಕೋಟ್ಯಂತರ ರೂ ಆದಾಯ

ಮೈಸೂರು, ಏಪ್ರಿಲ್​ 03: ನೈರುತ್ಯ ರೈಲ್ವೆ ಮೈಸೂರು ವಿಭಾಗವು (mysuru railway division) 2025-26ನೇ ಸಾಲಿನ ಹಣಕಾಸು ವರ್ಷದಲ್ಲಿ ಭರ್ಜರಿ ಸಾಧನೆ ಮಾಡಿದೆ. 449.13 ಕೋಟಿ ರೂ ಪ್ರಯಾಣಿಕ ಆದಾಯ ಗಳಿಸುವ ಮೂಲಕ ಈ ಹಿಂದಿನ ದಾಖಲೆಯನ್ನು ಮೀರಿಸಿದೆ. ಜೊತೆಗೆ ಸರಕ ಸಾಗಾಣೆಯಲ್ಲೂ ವಿಭಾಗ ಉತ್ತಮ ಸಾಧನೆ ಮಾಡಿದ್ದು, ಇತಿಹಾಸದಲ್ಲೇ ಹೆಚ್ಚು ಸರಕು ಸಾಗಾಣೆ ಮಾಡಿದ ಎರಡನೇ ಅತ್ಯುನ್ನತ ಸಾಧನೆ ಆಗಿದೆ ಎಂದು ವಿಭಾಗೀಯ ಮುಖ್ಯಸ್ಥ ಮುದಿತ್​ ಮಿತ್ತಲ್ ಮಾಹಿತಿ ನೀಡಿದ್ದಾರೆ. ಮುದಿತ್​ ಮಿತ್ತಲ್ ಹೇಳಿದ್ದಿಷ್ಟು  ಇಂದು…

Read More

ಇರಾನ್​ನಿಂದ ಅಮೆರಿಕದ ಎರಡನೇ ಎಫ್-35 ಫೈಟರ್ ಜೆಟ್ ಪತನ; ಪೈಲಟ್ ಬದುಕುಳಿದ ಸಾಧ್ಯತೆ ಕಡಿಮೆ

ಟೆಹ್ರಾನ್, ಏಪ್ರಿಲ್ 3: ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಅಮೆರಿಕದ ಎರಡನೇ F-35 ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ ಎಂದು ಇರಾನಿನ (Iran War) ರಾಜ್ಯ ಮಾಧ್ಯಮ ಇಂದು ತಿಳಿಸಿದೆ. ಅಮೆರಿಕದ ಮತ್ತೊಂದು ಯುದ್ಧ ವಿಮಾನ ಪತನವಾಗಿ ಸಂಪೂರ್ಣವಾಗಿ ನಾಶವಾಗಿದೆ. ವಿಮಾನಕ್ಕೆ ತೀವ್ರ ಹಾನಿಯಾಗಿದ್ದರಿಂದ ಪೈಲಟ್ ಬದುಕಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ ಎಂದು ಐಆರ್‌ಜಿಸಿ ತಿಳಿಸಿದೆ. ಆದರೆ, ಅಮೆರಿಕದಿಂದ ಈ ಬಗ್ಗೆ ಇಲ್ಲಿಯವರೆಗೆ ಯಾವುದೇ ದೃಢೀಕರಣ ಬಂದಿಲ್ಲ. F-35 ಯುಎಸ್‌ನ ಅತ್ಯಂತ ಮುಂದುವರಿದ ಸ್ಟೆಲ್ತ್ ಫೈಟರ್…

Read More

ಹುಬ್ಬಳ್ಳಿಯಲ್ಲೊಂದು ಲವ್ ಜಿಹಾದ್: ಜಿಮ್ ಟ್ರೈನರ್​ನ​​​​​​​​​ ಕಾಮುಕ ಮುಖ ಬಿಚ್ಚಿಟ್ಟ ಯುವತಿ

ಹುಬ್ಬಳ್ಳಿ, (ಏಪ್ರಿಲ್ .03): ನಗರದಲ್ಲಿ ಲವ್ ಜಿಹಾದ್ (love jihad) ಆರೋಪದ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಹಳೆ ಹುಬ್ಬಳ್ಳಿ  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳಿಯ (Hubballi) ವಿಜಯನಗರದ ನಿವಾಸಿ ಸಮೀರ್ ಎನ್ನುವಾತ ಜಿಮ್​​ನಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡು ಬಳಿಕ ಆಕೆಯೊಂದಿಗೆ ಸಲುಗೆ ಬೆಳೆಸಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಹಿಂದೂ ಪರ ಸಂಘಟನೆ ಕಾರ್ಯಕರ್ತರು, ಮನೆಗೆ ಹೋಗಿ ಸಮೀರ್​​​ ನನ್ನು ಹಿಡಿದು ಥಳಿಸಿ ಬಳಿಕ…

Read More

ಬೆಂಗಳೂರಿಗರಿಗೆ ಬ್ಯಾಡ್​​ ನ್ಯೂಸ್​: ಸದ್ಯ ಸಾರ್ವಜನಿಕ ಸೇವೆಗೆ ಲಭ್ಯವಾಗಲ್ಲ ಬಹುನಿರೀಕ್ಷಿತ ಈ ಫ್ಲೈಓವರ್​

ಬೆಂಗಳೂರು, ಏಪ್ರಿಲ್​​ 03: ನಾನಾ ಕಾರಣಗಳಿಂದಾಗಿ ಕುಂಟುತ್ತಾ ಸಾಗಿರುವ ಬೆಂಗಳೂರಿನ (Bengaluru) ಬಹು ನಿರೀಕ್ಷಿತ ಈಜಿಪುರ ಫ್ಲೈಓವರ್ ಸಾರ್ವಜನಿಕ ಬಳಕೆಗೆ ಲಭ್ಯವಾಗುವುದು ಮತ್ತಷ್ಟು ವಿಳಂಬವಾಗಲಿದೆ. ಈಗಿನ ಮಾಹಿತಿಯ ಪ್ರಕಾರ ಜೂನ್​​ ಒಳಗೆ ಮುಗಿಯಬೇಕಿದ್ದ ಮೇಲ್ಸೇತುವೆಯ ಕೆಲಸ ಆಗಸ್ಟ್ ವೇಳೆಗೆ ಕಂಪ್ಲೀಟ್​​ ಆಗಬಹುದು ಎನ್ನಲಾಗ್ತಿದೆ. ಮಾರ್ಚ್ ಗಡುವನ್ನು ಹೊಂದಿದ್ದ ಈ ಕಾಮಗಾರಿ ಭೂಸ್ವಾಧೀನ ಹಾಗೂ ಇಂಜಿನಿಯರ್ ವರ್ಗಾವಣೆ ಸಮಸ್ಯೆಗಳ ಕಾರಣದಿಂದ ಅದಾಗಲೇ ವಿಳಂಬವಾಗಿತ್ತು ಎನ್ನುವುದಿಲ್ಲಿ ಗಮನಾರ್ಹ. 2017ರಲ್ಲಿ ಸಿಂಪ್ಲೆಕ್ಸ್​​ ಇನ್ಫ್ರಾಸ್ಟ್ರಕ್ಚರ್​​ ಸಂಸ್ಥೆ ಈ ಫ್ಲೈಓವರ್ ಕಾಮಗಾರಿ ಆರಂಭಿಸಿತ್ತು. ಆದರೆ…

Read More

‘ಎಲ್ಲವನ್ನು ಸರಿಪಡಿಸಿಕೊಳ್ಳೋಣ’; ಬಿಸಿಸಿಐಗೆ ಪತ್ರ ಬರೆದ ಬಾಂಗ್ಲಾ ಕ್ರಿಕೆಟ್ ಮಂಡಳಿ

ಬಿಸಿಸಿಐ (BCCI) ಎದುರು ತೊಡೆ ತಟ್ಟಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ಇದೀಗ ಸೋತು ಶರಣಾದಂತೆ ತೋರುತ್ತಿದೆ. ಬಿಸಿಸಿಐ ಜೊತೆ ಜಿದ್ದಿಗೆ ಬಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಇದರ ಪರಿಣಾಮವಾಗಿ ತನ್ನ ತಂಡದ ಆಟಗಾರರು ಐಪಿಎಲ್ ಆಡದಂತ್ತಾಯಿತು. ಇದರ ಜೊತೆಗೆ ತನ್ನ ತಂಡ ಟಿ20 ವಿಶ್ವಕಪ್​ನಲ್ಲಿ ಭಾಗವಹಿಸದಂತ್ತಾಯಿತು. ಇದೀಗ ಮುಂಬರುವ ಉಭಯ ದೇಶಗಳ ಸರಣಿಯೂ ರದ್ದಾಗುವ ಸಾಧ್ಯತೆಯಿದೆ. ಹಾಗೆಯೇ ಮುಂದಿನ ಆವೃತ್ತಿಯ ಏಷ್ಯಾಕಪ್ ಕೂಡ ಕೈಜಾರುವ ಸ್ಥಿತಿಯಲ್ಲಿದೆ. ಈಗಾಗಲೇ ನಷ್ಟದ ಸುಳಿಯಲ್ಲಿ ಸಿಲುಕಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ,…

Read More

ಬೆಂಗಳೂರಿನ ಐದೂ ಪಾಲಿಕೆಗಳಿಗೆ ಲೋಗೋ ಭಾಗ್ಯ: ಲಾಂಛನಗಳ ವಿಶೇಷತೆ ತಿಳಿಯಿರಿ

ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್​ ಬೆಂಗಳೂರು ಪ್ರಾಧಿಕಾರ ಸೇರಿದಂತೆ 5 ನಗರ ಪಾಲಿಕೆಗಳಿಗೆ ಕೊನೆಗೂ ಹೊಸ ಲೋಗೋ ಅನಾವರಣಗೊಳಿಸಲಾಗಿದೆ. ಇತ್ತೀಚೆಗೆ 2026-27ರ ಸಾಲಿನ ಬಜೆಟ್​ ಮಂಡನೆ ಮಾಡಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಇದೀಗ 5 ನಗರ ಪಾಲಿಕೆಗಳ ಹೊಸ ಲೋಗೋವನ್ನು ಬಿಡುಗಡೆ ಮಾಡಿದೆ. ಖಡ್ಗ ಹಿಡಿದು ನಿಂತಿರುವ ಕೆಂಪೇಗೌಡರ ಚಿತ್ರಣ ಲೋಗೋದ ಪ್ರಮುಖ ಆಕರ್ಷಣೆ. ಬೆಂಗಳೂರಿನ ಪರಂಪರೆ ಮತ್ತು ವೈಭವವನ್ನು ಪ್ರತಿಬಿಂಬಿಸುವಂತೆ ಲೋಗೋವನ್ನು ಹೊಸ ರೀತಿಯಲ್ಲಿ ರೂಪಿಸಲಾಗಿದೆ. ಹಳೆಯ ಬಿಬಿಎಂಪಿ ಚಿಹ್ನೆಯಲ್ಲಿದ್ದ ಕೆಂಪೇಗೌಡರ ಗೋಪುರವನ್ನು ಇಲ್ಲಿಯೂ ಬಳಸಿಕೊಳ್ಳಲಾಗಿದ್ದು,…

Read More

‘ದಿ ಕೇರಳ ಸ್ಟೋರಿ’ ಬಗ್ಗೆ ಮಲಯಾಳಂ ಸ್ಟಾರ್ ನಟ ಟೊವಿನೊ ಥಾಮಸ್ ಹೇಳಿದ್ದೇನು?

ಇತ್ತೀಚೆಗಷ್ಟೆ ‘ದಿ ಕೇರಳ ಸ್ಟೋರಿ 2’ (The Kerala story 2) ಸಿನಿಮಾ ಬಿಡುಗಡೆ ಆಯ್ತು. ಮೊದಲ ಭಾಗದಷ್ಟು ದೊಡ್ಡ ಹಿಟ್ ಆಗದಿದ್ದರೂ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಸೋಲನ್ನೇನೂ ಕಾಣಲಿಲ್ಲ. ಆದರೆ ಸಿನಿಮಾದ ಮೊದಲ ಭಾಗಕ್ಕೆ ಬಂದಷ್ಟು ವಿರೋಧ ವಿಶೇಷವಾಗಿ ಕೇರಳದಿಂದ ಈ ಬಾರಿ ವ್ಯಕ್ತವಾಗಲಿಲ್ಲ. ಮೊದಲ ಭಾಗ ಬಿಡುಗಡೆ ಆಗುವಾಗ ಖುದ್ದು ಸರ್ಕಾರವೇ ಸಿನಿಮಾದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ ಮಾಡಿತ್ತು. ಕೆಲವಾರು ಸೆಲೆಬ್ರಿಟಿಗಳು ಸಹ ಸಿನಿಮಾದ ವಿರುದ್ಧ ಮಾತನಾಡಿದ್ದರು. ಆದರೆ ಈ ಬಾರಿ ಅಂಥಹದ್ದೇನೂ ಹೆಚ್ಚಿಗೆ…

Read More