All posts by nagaraj11081993

60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್ – Kannada News | Shreyas Iyer first net Session after injury

ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಮತ್ತೆ ಮೈದಾನಕ್ಕಿಳಿದಿದ್ದಾರೆ. ಅದು ಕೂಡ ಬರೋಬ್ಬರಿ 60 ದಿನಗಳ ನಂತರ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ಅಯ್ಯರ್ ಅಕ್ಟೋಬರ್​ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಸಂಪೂರ್ಣ ಚೇತರಿಸಿಕೊಂಡಿರುವ ಅವರು ಬೆಂಗಳೂರಿನ ಸಿಒಇ ಮೈದಾನದಲ್ಲಿ ಅಭ್ಯಾಸ ಶುರು ಮಾಡಿದ್ದಾರೆ.

ಶ್ರೇಯಸ್ ಅಯ್ಯರ್ 2 ತಿಂಗಳುಗಳ ಬಳಿಕ ನೆಟ್ಸ್​​ನಲ್ಲಿ ಅಭ್ಯಾಸ ನಡೆಸಿದ್ದು, ಹೀಗಾಗಿ ಮುಂಬರುವ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ಅವರನ್ನು ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿಯಬಹುದು. ಹೀಗಾಗಿಯೇ ಇದೀಗ ನೆಟ್ಸ್​ನಲ್ಲಿ ಬೆವರಿಳಿಸಲಾರಂಭಿಸಿದ್ದಾರೆ.

ಶ್ರೇಯಸ್ ಅಯ್ಯರ್​ಗೆ ಏನಾಗಿತ್ತು?

ಅಕ್ಟೋಬರ್ 25 ರಂದು ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್ ರಾಣಾ ಅವರ ಎಸೆತದಲ್ಲಿ ಅಲೆಕ್ಸ್ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು.

ಈ ಡೈವಿಂಗ್ ವೇಳೆ ಅವರ ಎಡ ಪಕ್ಕೆಲುಬುಗಳಿಗೆ ಗಂಭೀರ ಪೆಟ್ಟಾಗಿದೆ. ಇದರಿಂದ ಅವರ ಪೆಕ್ಕೆಲುಬಿನ ಮೇಲ್ಭಾಗದ ಅಂಗದಲ್ಲಿ (ಗುಲ್ಮ) ಆಂತರಿಕ ರಕ್ತಸ್ರಾವವಾಗಿತ್ತು. ಇದರಿಂದಾಗಿ ಅವರು ಅಸ್ವಸ್ಥರಾಗಿದ್ದರು. ಸ್ಕ್ಯಾನಿಂಗ್ ರಿಪೋರ್ಟ್​ನಲ್ಲಿ ಶ್ರೇಯಸ್ ಅಯ್ಯರ್ ಅವರ ಗುಲ್ಮದ ಭಾಗವು ಛಿದ್ರವಾಗಿರುವುದು ಕಂಡು ಬಂದಿದೆ. ಹೀಗಾಗಿ ಅವರನ್ನು ಇಂಟರ್ವೆನ್ಷನಲ್ ಟ್ರಾನ್ಸ್-ಕ್ಯಾತಿಟರ್ ಎಂಬೋಲೈಸೇಶನ್‌ ಚಿಕಿತ್ಸೆಗೆ ಒಳಪಡಿಸಲಾಗಿತ್ತು.

ಇದೀಗ ಸಂಪೂರ್ಣವಾಗಿ ಫಿಟ್​ನೆಸ್ ಸಾಧಿಸಿರುವ ಶ್ರೇಯಸ್ ಅಯ್ಯರ್ ಅಭ್ಯಾಸ ಶುರು ಮಾಡಿದ್ದಾರೆ. ಹೀಗಾಗಿ ಜನವರಿ 11 ರಿಂದ ಶುರುವಾಗಲಿರುವ ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

Source link

ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಹೆಚ್ಚಾಗ್ತಿದೆಯಾ ಗೊಂದಲ? ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂದ ದೇವೇಗೌಡ – Kannada News | JDS BJP Alliance Under Strain? HD Deve Gowda Rules Out Tie Up in Local Body Elections, Know What Vijayendra says here

ಬೆಂಗಳೂರು, ಡಿಸೆಂಬರ್ 27: ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ (JDS) ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda) ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ (BJP) ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದು, ಈ ಬಗ್ಗೆ ಪ್ರತಿಕ್ರಿಯಿಸಲು ದೇವೇಗೌಡ ನಿರಾಕರಿಸಿದ್ದಾರೆ. ಈ ಬೆಳವಣಿಗೆಗಳು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಗೊಂದಲ, ಬಿರುಕು ಹೆಚ್ಚಾಗುತ್ತಿದೆಯಾ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಹೆಚ್​ಡಿ ದೇವೇಗೌಡರು ಹೇಳಿದ್ದೇನು?

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ದೇವೇಗೌಡ, ನಾವು ಲೋಕಸಭೆ, ವಿಧಾನಸಭೆ ಮತ್ತು ಪರಿಷತ್ತಿನ ಚುನಾವಣೆಗಳಲ್ಲಿ ಬಿಜೆಪಿ ಮೈತ್ರಿಯೊಂದಿಗೆ ಸ್ಪರ್ಧಿಸಲಿದ್ದೇವೆ. ಬಿಜೆಪಿ ರಾಜ್ಯ ಅಧ್ಯಕ್ಷರು ಹೇಳಿರುವ ವಿಚಾರದ ಬಗ್ಗೆ ನಾನು ಯಾವುದೇ ಪ್ರಶ್ನೆಗಳನ್ನು ಎತ್ತುವುದಿಲ್ಲ. ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿಯೂ ಜೆಡಿಎಸ್ ಸ್ವಂತ ಬಲದ ಮೇಲೆ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ.

ಕಳೆದ ಲೋಕಸಭೆ ಚುನಾವಣೆ ವೇಳೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಜೆಡಿಎಸ್, ಆ ಮೂಲಕ ಎನ್​ಡಿಎ ಮಿತ್ರಕೂಟದ ಭಾಗವಾಗಿದೆ. ಇದೀಗ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಲಿವೆ.

ಬಿವೈ ವಿಜಯೇಂದ್ರ ಹೇಳಿದ್ದೇನು?

4 ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಅಧಿಕಾರ ಹಿಡಿದ ಕೂಡಲೇ ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯುವ ಲೆಕ್ಕಾಚಾರಕ್ಕೆ ಇಳಿದಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. ಇದು, 2028ರ ವಿಧಾನಸಭೆ ವೇಳೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ಮುರಿದು ಬೀಳುತ್ತಾ ಎಂಬ ಪ್ರಶ್ನೆ ಮೂಡಲು ಕಾರಣವಾಗಿದೆ. ಆದರೆ, ವಿಜಯೇಂದ್ರ ಹೇಳಿಕೆ ಬಗ್ಗೆ ಜಾಣತನದಿಂದ ಪ್ರತಿಕ್ರಿಯಿರುವ ದೇವೇಗೌಡರು, ಆ ಬಗ್ಗೆ ಪ್ರಶ್ನೆ ಮಾಡಲು ಹೋಗುವುದಿಲ್ಲ ಎಂದಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ರಚನೆಯಾಗಿದ್ದರೂ ಅದಕ್ಕೆ ಬಿಜೆಪಿ ರಾಜ್ಯ ನಾಯಕರ ಸಂಪೂರ್ಣ ಸಹಮತ ಸಿಕ್ಕಿಲ್ಲ ಎಂಬುದು ನಂತರದ ಬೆಳವಣಿಗೆಗಳಿಂದ ಸ್ಪಷ್ಟವಾಗಿದೆ. ವರಿಷ್ಠರ ಕಟ್ಟಪ್ಪಣೆಗೆ ಮಣಿದ ನಾಯಕರು, ನಾವು ಜೊತೆಗಿದ್ದೇವೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಆದರೆ, ಸರ್ಕಾರದ ವಿರುದ್ಧ ಜಂಟಿಯಾಗಿ ಹೋರಾಟ ರೂಪಿಸುವಲ್ಲಿ ಈ ಮೈತ್ರಿ ಸಫಲವಾಗಿಲ್ಲ. ಆಗೊಮ್ಮೆ ಈಗೊಮ್ಮೆ ಸಭೆ ನಡೆದರೂ ಅದು ಟೀ-ಕಾಫಿಗಷ್ಟೇ ಸೀಮಿತವಾಗಿದೆ ಎಂಬ ಬಗ್ಗೆ ರಾಜಕೀಯ ಪಡಸಾಲೆಯಲ್ಲಿ ಹಲವು ಬಾರಿ ಚರ್ಚೆಗಳಾಗಿವೆ.

ಇದನ್ನೂ ಓದಿ: ಕಾಂಗ್ರೆಸ್ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ, ಸುಮ್ನೆ ಭಾಷಣ ಮಾಡಿ ಹೋಗಿಲ್ಲ: ಖರ್ಗೆ ನಿವಾಸದ ಎದುರೇ ಡಿಕೆಶಿ ಖಡಕ್ ಮಾತು

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿಯೂ ಮೈತ್ರಿಯಾಗಿ ವಿಪಕ್ಷಗಳು ಕ್ರಾಂತಿ ಮಾಡಿಲ್ಲ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸ್ವಂತ ಬಲದ ಬಗ್ಗೆ ಮಾತನಾಡಿದ್ದಾರೆ. ಜೆಡಿಎಸ್ ಸಹ ಸ್ವಂತ ಬಲದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಎದುರಿಸುವ ಘೋಷಣೆ ಮಾಡಿದೆ. ಇದು ಮುಂದೆ ಯಾವ ಮಟ್ಟಕ್ಕೆ ತಲುಪಲಿದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಈ ವಾರ ಒಟಿಟಿಗೆ ಬಂದಿವೆ ಹಿಟ್ ಸಿನಿಮಾಗಳು: ಪಟ್ಟಿ ಇಲ್ಲಿದೆ – Kannada News | OTT Release this week, From December 23 to December 30

ಮುನಿಕಾಂತ್, ರಾಧಾ ರವಿ ಇನ್ನೂ ಕೆಲವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಮಿಡ್ಲ್ ಕ್ಲಾಸ್’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಮಧ್ಯಮವರ್ಗಗಳ ಬದುಕು, ಬವಣೆಗಳನ್ನು ಹಾಸ್ಯಪ್ರಧಾನವಾಗಿ ಸಿನಿಮಾನಲ್ಲಿ ತೋರಿಸಲಾಗಿದೆ. ಸಿನಿಮಾ ಅನ್ನು ಜೀ5ನಲ್ಲಿ ವೀಕ್ಷಿಸಬಹುದಾಗಿದೆ.

Source link

ಬರೋಬ್ಬರಿ 94 ವರ್ಷಗಳ ಬಳಿಕ ಬಾಕ್ಸಿಂಗ್ ಡೇನಲ್ಲಿ 20 ವಿಕೆಟ್..! – Kannada News | AUS vs ENG: Ashes Boxing Day 2025 enters history

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದ ಮೊದಲ ದಿನವೇ 20 ವಿಕೆಟ್​ಗಳು ಉರುಳಿವೆ. ಅಂದರೆ ಒಂದೇ ದಿನವೇ ಎರಡೂ ತಂಡಗಳು ಆಲೌಟ್ ಆಗಿವೆ. ಆಸ್ಟ್ರೇಲಿಯಾದಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್​ನ ಮೊದಲ ದಿನ 20 ವಿಕೆಟ್​ಗಳು ಉರುಳಿರುವುದು 94 ವರ್ಷಗಳ ಬಳಿಕ ಎಂಬುದು ವಿಶೇಷ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಕೇವಲ 152 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 110 ರನ್​ಗಳಿಗೆ ಸರ್ವಪತನ ಕಂಡಿದೆ. ಅಂದರೆ ಉಭಯ ತಂಡಗಳು ಬ್ಯಾಟಿಂಗ್ ಮಾಡಿರುವುದು 75.1 ಓವರ್​ಗಳನ್ನು ಮಾತ್ರ.

ಇದಕ್ಕೂ ಮುನ್ನ ಬಾಕ್ಸಿಂಗ್ ಡೇ (ಕ್ರಿಸ್ಮಸ್​ ಮರುದಿನ) ಟೆಸ್ಟ್ ಪಂದ್ಯದ ಮೊದಲ ದಿನವೇ 20 ವಿಕೆಟ್​ ಉರುಳಿರುವುದು 1931 ರಲ್ಲಿ. ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ನಡುವಣ ಈ ಪಂದ್ಯದ ಮೊದಲ ದಿನವೇ ಉಭಯ ತಂಡಗಳು ಆಲೌಟ್ ಆಗಿದ್ದವು.

ಇದಾದ ಬಳಿಕ ಆಸ್ಟ್ರೇಲಿಯಾದಲ್ಲಿ ನಡೆದ ಯಾವುದೇ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲ ದಿನವೇ ಉಭಯ ತಂಡಗಳು ಪ್ರಥಮ ಇನಿಂಗ್ಸ್ ಅಂತ್ಯಗೊಳಿಸಿರಲಿಲ್ಲ. ಇದೀಗ 94 ವರ್ಷಗಳ ಬಳಿಕ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲ ದಿನ 20 ವಿಕೆಟ್​ಗಳ ಪತನಕ್ಕೆ ಸಾಕ್ಷಿಯಾಗಿದೆ.

 

Source link

ನಮ್ಮವರು ಬೇರೆ ಭಾಷೆಗೆ ಹೋಗ್ತಾರೆ, ಆದ್ರೆ ಪರಭಾಷೆಯವರು ಬರಲ್ಲ; ಸುದೀಪ್ ಬೇಸರ – Kannada News | Kichcha Sudeep express sadness over other language Actors

ಕನ್ನಡ ಕಲಾವಿದರಿಗೆ ಈಗ ಸಾಕಷ್ಟು ಬೇಡಿಕೆ ಬರುತ್ತಿದೆ. ಅನೇಕ ಸ್ಟಾರ್ ಕಲಾವಿದರು ಪರಭಾಷೆಗೆ ತೆರಳಿ ಅತಿಥಿ ಪಾತ್ರ ಮಾಡಿದ್ದು ಇದೆ. ಶಿವರಾಜ್​​ಕುಮಾರ್ ಅವರು ‘ಜೈಲರ್​’ ಅಲ್ಲಿ, ಉಪೇಂದ್ರ ಅವರು ‘ಕೂಲಿ’ ಚಿತ್ರದಲ್ಲಿಅತಿಥಿ ಪಾತ್ರ ಮಾಡಿದ್ದಾರೆ. ಅತಿಥಿ ಪಾತ್ರಗಳ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ನಮ್ಮ ಕಲಾವಿದರು ಅಲ್ಲಿಗೆ ತೆರಳಿ ಅತಿಥಿ ಪಾತ್ರ ಮಾಡುವ ಬಗ್ಗೆ ಅವರಿಗೆ ಯಾವುದೇ ತಕರಾರು ಇಲ್ಲ. ಆದರೆ, ಅಲ್ಲಿಯವರು ಇಲ್ಲಿಗೆ ಬರೋದಿಲ್ಲ ಎಂಬ ಬೇಸರ ಅವರನ್ನು ಕಾಡುತ್ತಿದೆ.

ಈ ಬಗ್ಗೆ ಸಂದರ್ಶನ ಒಂದರಲ್ಲಿ ಸುದೀಪ್ ಮಾತನಾಡಿದ್ದಾರೆ. ‘ನಾವು ಕನ್ನಡ ಕಲಾವಿದರು ಬೇರೆ ಭಾಷೆಗಳಲ್ಲಿ ಸಾಕಷ್ಟು ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತೇವೆ. ಆದರೆ, ಬೇರೆ ಭಾಷೆಯವರು ನಮ್ಮ ಸಿನಿಮಾಗಳಲ್ಲಿ ನಟಿಸಲು ಸಿದ್ಧರಿರುವುದಿಲ್ಲ’ ಎಂದಿದ್ದಾರೆ ಸುದೀಪ್.

‘ನಮ್ಮ ಸಿನಿಮಾಗಳಲ್ಲಿ ನಟಿಸುವಂತೆ ನಾನು ವೈಯಕ್ತಿಕವಾಗಿ ಕೆಲವು ನಟರನ್ನು ಕೇಳಿಕೊಂಡೆ. ಆದರೆ, ಅದು ಸಾಧ್ಯವಾಗಿಲ್ಲ. ಇದು ಎರಡೂ ಕಡೆಗಳಿಂದ ಹಾಕಬೇಕಾದ ಶ್ರಮ. ಆದರೆ, ಈಗ ನನಗೆ ಅದು ಕಾಣಿಸುತ್ತಿಲ್ಲ’ ಎಂದು ಸುದೀಪ್ ಅವರು ಬೇಸರ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಯುದ್ಧಕ್ಕೆ ಸಿದ್ಧ ಎಂದ ಸುದೀಪ್ ಮಾತಿಗೆ ಅರ್ಜುನ್ ಜನ್ಯ ಮೊದಲ ರಿಯಾಕ್ಷನ್

ಕನ್ನಡದ ಕಲಾವಿದರು ಪರಭಾಷೆಯಲ್ಲಿ ನಟಿಸೋದನ್ನು ಸಾಕಷ್ಟು ಕಾಣಬಹುದು. ಆದರೆ, ಅವರು ಇಲ್ಲಿ ಬಂದು ನಟಿಸಿದ್ದು ಕಡಿಮೆ. ಸುದೀಪ್ ಅವರು ಕೂಡ ಈ ಮೊದಲು ಅತಿಥಿ ಪಾತ್ರ ಮಾಡಿದ್ದರು. ‘ಬಾಹುಬಲಿ’ ಸಿನಿಮಾದಲ್ಲಿ ಅವರು ಅತಿಥಿ ಕಲಾವಿದರಾಗಿ ನಟಿಸಿದ್ದರು.

ಸದ್ಯ ಸುದೀಪ್ ಹೇಳಿದ ಮಾತನ್ನು ಅನೇಕರು ಬೆಂಬಲಿಸಿದ್ದಾರೆ. ಸಂಜಯ್ ದತ್ ಸೇರಿದಂತೆ ಅನೇಕ ಕಲಾವಿದರು ದೊಡ್ಡ ದೊಡ್ಡ ಬಜೆಟ್ ಸಿನಿಮಾಗಳಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದನ್ನು ಹೊರತುಪಡಿಸಿದರೆ ಯಾರೊಬ್ಬರೂ ಸಿನಿಮಾಗಳಲ್ಲಿ ಅತಿಥಿ ಪಾತ್ರ ಮಾಡುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಓಪನ್: ಎಸ್ಟೀಮ್ ಮಾಲ್, ತುಮಕೂರು ರಸ್ತೆ ವಾಹನಗಳ ‌ಮೇಖ್ರೀ ಸರ್ಕಲ್ ಪ್ರವೇಶ ತುಂಬಾ ಸುಲಭ – Kannada News | Hebbal Flyover New Loop Opens: Easy Access to Mekhri Circle for Esteem Mall and Tumakuru Road Vehicles

ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಓಪನ್

ಬೆಂಗಳೂರು, ಡಿಸೆಂಬರ್ 27: ತುಂಬಾ ವರ್ಷಗಳಿಂದ ಕಾಯುತ್ತಾ ಇದ್ದ ವಾಹನ ಸವಾರರಿಗೆ ಕೊನೆಗೂ ಶುಭ ಸುದ್ದಿ ಸಿಕ್ಕಿದೆ. ಹೆಬ್ಬಾಳ ಮೇಲ್ಸೇತುವೆಯ (Hebbal Flyover) ಮತ್ತೊಂದು ಹೊಸ ಲೂಪ್ ರ್ಯಾಂಪ್ ಸಂಚಾರಕ್ಕೆ ಮುಕ್ತ ಆಗಿದೆ. ಇದರಿಂದ ಎಸ್ಟೀಮ್ ಮಾಲ್ ಮತ್ತು ತುಮಕೂರು ರಸ್ತೆ ವಾಹನ ಸವಾರರು ಮೇಖ್ರಿ ಸರ್ಕಲ್ ಪ್ರವೇಶಿಸುವುದಕ್ಕೆ ತುಂಬಾ ಅನುಕೂಲಕವಾಗಲಿದೆ. ಜತೆಗೆ, ಯಲಹಂಕ, ಜಕ್ಕೂರು, ಸಹಕಾರ ನಗರದಿಂದ ನಗರದ ಪ್ರವೇಶಕ್ಕೆ ತುಂಬಾ ಅನುಕೂಲವಾಗಲಿದೆ.

ಕಳೆದ ಆಗಸ್ಟ್ ನಲ್ಲಿ ಕೆಆರ್ ಪುರದಿಂದ ಮೇಖ್ರಿ ಸರ್ಕಲ್ ಕಡೆಗೆ ಲೂಪ್ ರ್ಯಾಂಪ್ ಓಪ‌ನ್ ಆಗಿತ್ತು. ಈಗ ಮತ್ತೆ ಎಸ್ಟೀಮ್ ಮಾಲ್​ನಿಂದ ಮೇಖ್ರಿ ಸರ್ಕಲ್ ಕಡೆಗೆ ಹೊಸ ಲೂಪ್ ರ್ಯಾಂಪ್ ಓಪನ್ ಆಗಿರುವುದು ವಾಹನ ಸವಾರರಿಗೆ ಖುಷಿ ತಂದಿದೆ. ಟ್ರಾಫಿಕ್ ಕಡಿಮೆ ಆಗಿದೆ, ಇದರಿಂದ ತುಂಬಾ ಅನುಕೂಲ ಆಗಿದೆ ಎಂದು ವಾಹನ ಸವಾರರು ಪ್ರತಿಕ್ರಿಯಿಸಿದ್ದಾರೆ.

ಹೊಸ ಲೂಪ್ ರ್ಯಾಂಪ್​​ನಿಂದ ಹೆಬ್ಬಾಳ ಪ್ಲೈ ಓವರ್ ಬಳಿ ಟ್ರಾಫಿಕ್ ಜಾಮ್ ಕಡಿಮೆ ಆಗುತ್ತದೆ. ಆದರೆ ಪ್ಲೈ ಓವರ್ ಮೇಲೆ ಹೋಗುವ ವಾಹನಗಳು ಮೇಖ್ರಿ ಸರ್ಕಲ್ ಬಳಿ ನಿಲ್ಲುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗಲಿದ್ದು, ಅದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ.

ಇದನ್ನೂ ಓದಿ: ಬೆಂಗಳೂರು: ಚಿತ್ರದುರ್ಗ ಬಸ್ ದುರಂತದ ಕಹಿ ನೆನಪು ಮಾಸುವ ಮುನ್ನವೇ ಡ್ರಂಕ್ ಆ್ಯಂಡ್ ಡ್ರೈವ್ ಮಾಡಿ ಸಿಕ್ಕಿಬಿದ್ದ ಖಾಸಗಿ ಬಸ್ ಚಾಲಕ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಹರ್ಮನ್​ಪ್ರೀತ್ ಕೌರ್​ – Kannada News | Captain Harmanpreet Kaur created history in womens T20I

ಶ್ರೀಲಂಕಾ ಮಹಿಳಾ ತಂಡದ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ಮಹಿಳಾ ತಂಡ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಕ್ರಮವಾಗಿ 8 ಮತ್ತು 7 ವಿಕೆಟ್​ಗಳ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಮೂರನೇ ಮ್ಯಾಚ್​ನಲ್ಲಿ 8 ವಿಕೆಟ್​ಗಳ ಗೆಲುವು ದಾಖಲಿಸಿದೆ.

Source link

ನವವಿವಾಹಿತೆ ಸೂಸೈಡ್ ಕೇಸ್​ನಲ್ಲಿ ಬಿಗ್ ಟ್ವಿಸ್ಟ್: ನಾಗಪುರದಲ್ಲಿ ಆತ್ಮಹತ್ಯೆಗೆ ಶರಣಾದ ಗಾನವಿ ಪತಿ ಸೂರಜ್! – Kannada News | Big twist in Bengaluru newly wed Ganavi case: Husband Suraj commits Suicide

ನಾಗಪುರದಲ್ಲಿ ಆತ್ಮಹತ್ಯೆಗೆ ಶರಣಾದ ಗಾನವಿ ಪತಿ ಸೂರಜ್!

ಬೆಂಗಳೂರು, ಡಿಸೆಂಬರ್ 27: ಬೆಂಗಳೂರು ನವವಿವಾಹಿತೆ ಗಾನವಿ (26) (Ganavi Suicide Case)ಆತ್ಮಹತ್ಯೆ ಪ್ರಕರಣದಲ್ಲೀಗ ಮಹತ್ವದ ತಿರುವು ಸಿಕ್ಕಿದೆ. ಎರಡು ತಿಂಗಳ ಹಿಂದೆಯಷ್ಟೇ ಸೂರಜ್​ ಅನ್ನು ವರಿಸಿದ್ದ ಗಾನವಿ ಆತ್ಮಹತ್ಯೆಗೆ ಯತ್ನಿಸಿ, ನಂತರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಆಕೆಯ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿರುವುದರ ಜೊತೆ ಆತನ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿರುವುದು ಈ ಪ್ರಕರಣಕ್ಕೆ ಹೊಸ ತಿರುವು ತಂದಿದೆ.

ಮರ್ಯಾದೆಗೆ ಅಂಜಿ ಸೂರಜ್ ಆತ್ಮಹತ್ಯೆ

ಗಂಡನೊಂದಿಗೆ ಮನಸ್ತಾಪ ಮಾಡಿಕೊಂಡು ಪಾಲಕರ ಮನೆಗೆ ಮರಳಿದ್ದ ಗಾನವಿ, ಆತ್ಮಹತ್ಯೆಗೆ ಯತ್ನಿದಸಿದ್ದರು. ಅಸ್ವಸ್ಥಳಾಗಿದ್ದ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಬ್ರೈನ್ ಡೆಡ್ ಆಗಿದ್ದ ಕಾರಣ ಕೊನೆಯುಸಿರೆಳೆದಿದ್ದರು. ಇದೀಗ ಮಹಾರಾಷ್ಟ್ರದಲ್ಲಿ ಸೂರಜ್ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ. ಗಾನವಿಯ ಸಾವಿನ ಬಳಿಕ ಸೂರಜ್ ತಾಯಿ ಜಯಂತಿ ಹಾಗೂ ಸಹೋದರ ಸಂಜಯ್ ಜೊತೆ ನಾಗಪುರಕ್ಕೆ ತೆರಳಿದ್ದರು. ಪತ್ನಿಯ ಆತ್ಮಹತ್ಯೆಯ ವಿಚಾರದಲ್ಲಿ ಆಕೆಯ ಪೋಷಕರು ಹಾಗೂ ಸಂಬಂಧಿಕರ ಆಕ್ರೋಶ ಮತ್ತು ಅವರಿಂದಾದ ಅವಮಾನ ತಡೆಯಲಾಗದೆ ತಾಯಿ- ಮಗ ಇಬ್ಬರೂ ಈ ನಿರ್ಧಾರ ತೆಗೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ ‘ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ’

ಗಾನವಿಯ ವಿವಾಹಪೂರ್ವ ಸಂಬಂಧದ ವಿಚಾರದಿಂದ ದಾಂಪತ್ಯದಲ್ಲಿ ಬಿರುಕು

ಸೂರಜ್ ಮತ್ತು ಗಾನವಿ ಹನಿಮೂನ್‌ಗೆ ಶ್ರೀಲಂಕಾಗೆ ತೆರಳಿದ್ದರು. ಆದರೆ ಅಲ್ಲಿ ದಂಪತಿ ನಡುವೆ ಕಲಹಗಳು ಏರ್ಪಟ್ಟಿತ್ತು. ಜೊತೆಗೆ ಗಾನವಿಯ ವಿವಾಹಪೂರ್ವ ಸಂಬಂಧದ ವಿಚಾರದಿಂದ ದಾಂಪತ್ಯದಲ್ಲಿ ಕಲಹ ಉಂಟಾಗಿತ್ತು ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಎಲ್ಲಾ ಕಾರಣದಿಂದ ಹನಿಮೂನ್ ಮಧ್ಯದಲ್ಲೇ ಮೊಟಕುಗೊಳಿಸಿ ಗಾನವಿ ಬೆಂಗಳೂರಿಗೆ ವಾಪಸ್ ಆಗಿದ್ದರು. ಶ್ರೀಲಂಕಾದಿಂದ ವಾಪಸ್ ಆದ ಬಳಿಕ ಗಾನವಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಈ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ಆರಂಭದಲ್ಲೇ ನಿಯಮ ಮುರಿದಿದ್ದಕ್ಕೆ ಬಿಗ್ ಬಾಸ್ ಎಚ್ಚರಿಕೆ – Kannada News | Gilli Nata Became Captain Of Bigg Boss Kannada House For the first Time

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಇಷ್ಟು ದಿನ ಅವರು ಕ್ಯಾಪ್ಟನ್ ಆಗಿಲ್ಲ ಎಂಬ ಕೊರಗು ಅವರಲ್ಲಿ ಇತ್ತು. ಈ ಕೊರಗು ಈಡೇರಿದೆ. ಗಿಲ್ಲಿ ಟಾಸ್ಕ್ ಆಡಿಯೇ ಕ್ಯಾಪ್ಟನ್ ಆಗಿದ್ದಾರೆ. ಗಿಲ್ಲಿ ನಿಯಮ ಮುರಿಯಲು ಎತ್ತಿದ ಕೈ. ಈಗ ಕ್ಯಾಪ್ಟನ್ ಆಗುತ್ತಿದ್ದಂತೆ ಅವರು ನಿಯಮ ಮುರಿದಿದ್ದಾರೆ. ಆ ಸಂದರ್ಭದ ಪ್ರೋಮೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಹ ಸ್ಪರ್ಧಿಗಳ ಕುಟುಂಬದವರ ಹಾರೈಕೆ: ಕೊನೆಗೂ ಕ್ಯಾಪ್ಟನ್ ಆದ ಗಿಲ್ಲಿ – Kannada News | Bigg Boss Kannada: Gilli became house captain by family members vote

ಈ ವಾರ ಬಿಗ್​​ಬಾಸ್ (Bigg Boss) ಮನೆಯಲ್ಲಿ ಫ್ಯಾಮಿಲಿ ವಾರವಾಗಿತ್ತು. ಮನೆಯ ಸದಸ್ಯರಿಗೆ ಯಾವುದೇ ಟಾಸ್ಕ್ ಇರಲಿಲ್ಲ. ಆದರೆ ಮನೆಯ ಸದಸ್ಯರ ಓಟಿನ ಆಧಾರದ ಮೇಲೆ ಮನೆಯ ಕ್ಯಾಪ್ಟನ್ ಆಯ್ಕೆ ನಡೆದಿದೆ. ಮನೆಗೆ ಬಂದ ಸ್ಪರ್ಧಿಗಳ ಕುಟುಂಬದವರೇ ಈ ಬಾರಿ ಕ್ಯಾಪ್ಟನ್ ಆಯ್ಕೆ ಮಾಡಬೇಕಿತ್ತು. ಅದರಂತೆ ಯಾರಿಗೆ ಯಾರು ಕ್ಯಾಪ್ಟನ್ ಆಗಬೇಕು ಎಂದು ಎಲ್ಲರೂ ಸೂಚಿಸಿದರು. ಈ ವೇಳೆ ಗಿಲ್ಲಿಗೆ ಹೆಚ್ಚು ಓಟು ಬಂದಿತ್ತು, ಅಶ್ವಿನಿ ಅವರಿಗೂ ಸಹ ಹೆಚ್ಚು ಮತಗಳು ಬಂದಿದ್ದವು.

ಅಂತಿಮವಾಗಿ ಅಶ್ವಿನಿ ಮತ್ತು ಗಿಲ್ಲಿ ನಡುವೆ ಅಂತಿಮ ಕ್ಯಾಪ್ಟೆನ್ಸಿ ಟಾಸ್ಕ್ ನಡೆದಿದ್ದು, ಟಾಸ್ಕ್​​ನಲ್ಲಿ ಗಿಲ್ಲಿ ಗೆಲುವು ಸಾಧಿಸಿ ಮೊಟ್ಟ ಮೊದಲ ಬಾರಿಗೆ ಮನೆಯ ಕ್ಯಾಪ್ಟನ್ ಆಗಿದ್ದಾರೆ. ಗಿಲ್ಲಿ ಕ್ಯಾಪ್ಟನ್ ಆಗಿರುವ ಎಪಿಸೋಡ್ ಇನ್ನೂ ಪ್ರಸಾರ ಆಗಿಲ್ಲವಾದರೂ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ ಜೋರಾಗಿ ನಡೆದಿದೆ. ಇಂದು (ಡಿಸೆಂಬರ್ 27) ಬೆಳಿಗ್ಗೆ ಬಿಡುಗಡೆ ಮಾಡಿರುವ ಪ್ರೋಮೊನಲ್ಲಿ ಸಹ ಗಿಲ್ಲಿ ಕ್ಯಾಪ್ಟನ್ ಆಗಿದ್ದನ್ನೇ ಹಾಕಲಾಗಿದೆ.

ಅಂತೂ ಇಂತು ಮೊಟ್ಟ ಮೊದಲ ಬಾರಿಗೆ ಗಿಲ್ಲಿ ಮನೆಯ ಕ್ಯಾಪ್ಟನ್ ಆಗಿದ್ದಾರೆ. ಬೇರೆಯವರು ಕ್ಯಾಪ್ಟನ್ ಆದಾಗೆಲ್ಲ ಗಿಲ್ಲಿ ಟಾರ್ಗೆಟ್ ಆಗಿರುತ್ತಿದ್ದರು. ಗಿಲ್ಲಿಯಿಂದ ಕೆಲಸ ತೆಗೆಸುವುದೇ ಬೇರೆ ಕ್ಯಾಪ್ಟನ್​​ಗಳಿಗೆ ಹರ ಸಾಹಸ ಆಗಿರುತ್ತಿತ್ತು. ರಘು, ರಾಶಿಕಾ ಇನ್ನೂ ಕೆಲವರು ಕ್ಯಾಪ್ಟನ್ ಆಗಿದ್ದಾಗೆಲ್ಲ ಗಿಲ್ಲಿಯನ್ನು ಸಖತ್ ಆಗಿ ಗೋಳು ಹೊಯ್ದು ಕೊಂಡಿದ್ದೂ ಸಹ ಇದೆ. ಆದರೆ ಈಗ ಸ್ವತಃ ಗಿಲ್ಲಿಯೇ ಕ್ಯಾಪ್ಟನ್ ಆಗಿದ್ದು, ಅವರು ಕ್ಯಾಪ್ಟೆನ್ಸಿಯನ್ನು ಹೇಗೆ ನಿಭಾಯಿಸುತ್ತಾರೆ ಎಂಬುದು ಕಾದು ನೋಡಬೇಕಿದೆ.

ಇದನ್ನೂ ಓದಿ:ಗಿಲ್ಲಿ ಬಗ್ಗೆ ಇದ್ದ ದೊಡ್ಡ ಅನುಮಾನ ಕ್ಲಿಯರ್ ಮಾಡಿದ ತಂದೆ-ತಾಯಿ

ಗಿಲ್ಲಿ ಕ್ಯಾಪ್ಟನ್ ಆಗಿರುವುದು ಮನೆಯ ಕೆಲವರಿಗೆ ಇಷ್ಟವಾದರೆ ಇನ್ನು ಕೆಲವರಿಗೆ ಇಷ್ಟವಾದಂತಿಲ್ಲ. ರಘು ಹಾಗೂ ಸೂರಜ್ ಅವರು ‘ಗಿಲ್ಲಿ ಹೇಗೋ ಟಾಸ್ಕ್ ಆಡಿ ಗೆದ್ದು ಕ್ಯಾಪ್ಟನ್ ಆಗುವುದಿಲ್ಲ ಆದರೆ ಹೀಗಾದರೂ ಕ್ಯಾಪ್ಟನ್ ಆಗಲಿ ಎಂದು ಬಿಗ್​ಬಾಸ್ ಹೀಗೆ ಮಾಡಿದ್ದಾರೆ’ ಎಂದೆಲ್ಲ ಮಾತನಾಡಿದ್ದಾರೆ.

ಆದರೆ ಗಿಲ್ಲಿಯ ದುರಾದೃಷ್ಟಕ್ಕೆ, ಗಿಲ್ಲಿ ಕ್ಯಾಪ್ಟನ್ ಆದ ವಾರವೇ ಸುದೀಪ್ ಅವರು ಬಿಗ್​​ಬಾಸ್​​ಗೆ ಗೈರಾಗಿದ್ದಾರೆ. ಈ ವಾರ ಸುದೀಪ್ ಅವರು ಬಿಗ್​​ಬಾಸ್ ನಡೆಸಲು ಬರುತ್ತಿಲ್ಲ. ಪ್ರತಿ ವಾರವೂ ಸುದೀಪ್ ಅವರು ಬಂದಾಗ ಹೊಸ ಕ್ಯಾಪ್ಟನ್​​ಗೆ ಶುಭಾಶಯ ಕೋರುವುದು ಸಾಮಾನ್ಯ. ಆದರೆ ಗಿಲ್ಲಿ ಕ್ಯಾಪ್ಟನ್ ಆದಾಗಲೇ ಸುದೀಪ್ ಅವರು ಗೈರಾಗಿ, ಗಿಲ್ಲಿ ಅವಕಾಶದಿಂದ ವಂಚಿತರಾಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link