VHT 2025-26: ಕೇವಲ ಬೌಂಡರಿಗಳಿಂದಲೇ ಅರ್ಧಶತಕ ಚಚ್ಚಿದ ವಿರಾಟ್ ಕೊಹ್ಲಿ
ಸುಮಾರು 15 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುತ್ತಿರುವ ಟೀಂ ಇಂಡಿಯಾದ ಸೂಪರ್‌ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ಅತ್ಯುತ್ತಮ ಫಾರ್ಮ್ ಅನ್ನು ಮುಂದುವರೆಸಿದ್ದಾರೆ. ದೆಹಲಿ ತಂಡದ ಪರ ಆಡುತ್ತಿರುವ ವಿರಾಟ್ ತಮ್ಮ ಮೊದಲ ಪಂದ್ಯದಲ್ಲೇ ಅದ್ಭುತ ಶತಕ ಬಾರಿಸಿದರೆ, ಪಂದ್ಯಾವಳಿಯ ತಮ್ಮ ಎರಡನೇ ಪಂದ್ಯದಲ್ಲಿ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಬೆಂಗಳೂರಿನಲ್ಲಿರುವ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯ ಎರಡನೇ ಪಂದ್ಯದಲ್ಲಿ ದೆಹಲಿ ತಂಡವು ಡಿಸೆಂಬರ್ 26 ರ…