ಮದುವೆಯಾಗು ಎಂದಿದ್ದಕ್ಕೆ ಕತ್ತು ಸೀಳಿ ಕೊಂದ ಪ್ರಿಯಕರ: ನರ್ಸ್ ಮನೆಯಲ್ಲಿ ಹರಿದಿತ್ತು ರಕ್ತದೋಕುಳಿ! – Kannada News | Bengaluru Nurse Murder: Jayadeva Staff Nurse murdered by her lover in Kumaraswamy Layout
ಕುಮಾರಸ್ವಾಮಿ ಲೇಔಟ್‌ನಲ್ಲಿ ಸ್ಟಾಫ್ ನರ್ಸ್ ಕತ್ತು ಸೀಳಿ ಭೀಕರ ಕೊಲೆ! ಬೆಂಗಳೂರು, ಡಿಸೆಂಬರ್ 26: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ (Kumaraswamy Layout) ಮನೆಯೊಂದರಲ್ಲಿ ಒಂಟಿಯಾಗಿದ್ದ ಸ್ಟಾಫ್ ನರ್ಸ್ ಅನ್ನು ಭೀಕರವಾಗಿ ಹತ್ಯೆಗೈದ ಘಟನೆ ಡಿಸೆಂಬರ್ 24ರ ರಾತ್ರಿ ನಡೆದಿದೆ. ಆಕೆ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿದ ಆಕೆಯ ಪ್ರಿಯಕರ, ಕತ್ತುಕುಯ್ದು ಆಕೆಯ ಹತ್ಯೆ ಮಾಡಿರುವುದು ತಿಳಿದುಬಂದಿದೆ. ಮಾಹಿತಿ ಸಿಕ್ಕ ಕೂಡಲೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಮದುವೆಯಾಗದೇ ಒಂಟಿಯಾಗಿದ್ದ…