ಚೇಸಿಂಗ್ನಲ್ಲಿ ಹೊಸ ವಿಶ್ವ ದಾಖಲೆ ಬರೆದ ನ್ಯೂಝಿಲೆಂಡ್
ಮಹಿಳಾ ಏಕದಿನ ಅಂತರಾಷ್ಟ್ರೀಯ (ODI) ಕ್ರಿಕೆಟ್ ಇತಿಹಾಸದಲ್ಲಿ ನ್ಯೂಝಿಲೆಂಡ್ ತಂಡ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ವೆಲ್ಲಿಂಗ್ಟನ್ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ಮಹಿಳಾ ತಂಡವು 347 ರನ್‌ಗಳ ಬೃಹತ್ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟುವ ಮೂಲಕ ಈ ವಿಶ್ವ ದಾಖಲೆ ಬರೆದಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ಮೊದಲು ಬ್ಯಾಟ್ ಮಾಡಿ 6 ವಿಕೆಟ್ ನಷ್ಟಕ್ಕೆ 346 ರನ್‌ಗಳ ಸವಾಲಿನ ಮೊತ್ತವನ್ನು ಪೇರಿಸಿತ್ತು. ಇದನ್ನು ಬೆನ್ನಟ್ಟಿದ ನ್ಯೂಝಿಲೆಂಡ್ ತಂಡವು ಕೇವಲ…