ವಿಜಯಪುರ: ಎಸ್ಪಿ ಲಕ್ಷ್ಮಣ ನಿಂಬರಗಿ ಹೆಸರಲ್ಲೇ ನಕಲಿ ಫೇಸ್‌ಬುಕ್ ಖಾತೆ! ಲಕ್ಷ ಲಕ್ಷ ಪೀಕಿದ್ದ ಕಿಲಾಡಿ ಅಂದರ್ – Kannada News
ವಿಜಯಪುರ, ಜೂನ್ 8: ವಿಜಯಪುರ (Vijayapura) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಲಕ್ಷ್ಮಣ ನಿಂಬರಗಿ ಅವರ ಹೆಸರಿನಲ್ಲೇ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ, ಸಾರ್ವಜನಿಕರಿಗೆ ಸರ್ಕಾರಿ ನೌಕರಿ ಕೊಡಿಸುವ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಅಂತರಜಿಲ್ಲಾ ಸೈಬರ್ ವಂಚಕನನ್ನು ವಿಜಯಪುರ ಸಿಇಎನ್ (CEN) ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ದುರದುಂಡಿ ಗ್ರಾಮದ ಹಣಮಂತ ಭಜಂತ್ರಿ ಎಂದು ಗುರುತಿಸಲಾಗಿದೆ. ಮುಖ್ಯಾಂಶಗಳು ಎಸ್ಪಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಐಡಿ ಸೃಷ್ಟಿಸಿ ವಂಚನೆ. ಪಿಡಬ್ಲ್ಯೂಡಿ…