ಆರ್ಸಿಬಿ ಸೇರಿದಂತೆ ಈ 3 ಐಪಿಎಲ್ ತಂಡಗಳ ಆಟಗಾರರಿಗಿಲ್ಲ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ – Kannada News | 2026 T20 World Cup India Squad: IPL Team Breakdown, RCB, LSG, RR Players Miss Out
2026 ರ ಟಿ20 ವಿಶ್ವಕಪ್‌ಗಾಗಿ (T20 World Cup 2026) ಹಾಲಿ ಚಾಂಪಿಯನ್ ಟೀಂ ಇಂಡಿಯಾವನ್ನು ಘೋಷಿಸಲಾಗಿದೆ. ಡಿಸೆಂಬರ್ 20 ರಂದು, ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಮತ್ತು ಆ ನಂತರ ನಡೆಯಲಿರುವ ಟಿ20 ವಿಶ್ವಕಪ್‌ಗೆ 15 ಸದಸ್ಯರ ಬಲಿಷ್ಠ ತಂಡವನ್ನು ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಪ್ರಕಟಿಸಿದೆ. ಆಯ್ಕೆಯಾದ ತಂಡದಲ್ಲಿ ಭಾಗಶಃ ಎಲ್ಲರೂ ನಿರೀಕ್ಷಿಸಿದ್ದ ಆಟಗಾರರೇ ಇದ್ದು, ಈ ಬಾರಿಯೂ ಭಾರತವೇ ಚಾಂಪಿಯನ್ ಆಗುವ ಲಕ್ಷಣಗಳು ಗೋಚರಿಸುತ್ತಿವೆ. ಆದಾಗ್ಯೂ…