Headlines

nagaraj11081993

ಕ್ರೈಮಿಯಾದಲ್ಲಿ ಬಂಡೆಗೆ ಅಪ್ಪಳಿಸಿದ ರಷ್ಯಾದ ಮಿಲಿಟರಿ ವಿಮಾನ, 29 ಮಂದಿ ಸಾವು

ಮಾಸ್ಕೋ, ಏಪ್ರಿಲ್ 1: ರಷ್ಯಾ(Russia)ದ ಮಿಲಿಟರಿ ಸಾರಿಗೆ ವಿಮಾನವು ಕ್ರೈಮಿಯಾದಲ್ಲಿ ಬಂಡೆಗೆ ಅಪ್ಪಳಿಸಿದೆ, ಅದರಲ್ಲಿದ್ದ ಎಲ್ಲಾ 29 ಜನರು ಸಾವನ್ನಪ್ಪಿದ್ದಾರೆ. ಸಂಪರ್ಕ ಕಳೆದುಕೊಂಡಿದ್ದ ಆನ್ -26 ವಿಮಾನವು 2014 ರಲ್ಲಿ ರಷ್ಯಾ ಉಕ್ರೇನ್‌ನಿಂದ ಸ್ವಾಧೀನಪಡಿಸಿಕೊಂಡ ಕಪ್ಪು ಸಮುದ್ರ ಬಳಿಯ ದ್ವೀಪದಲ್ಲಿ ಪತನಗೊಂಡಿದೆ. ರಕ್ಷಣಾ ಸಚಿವಾಲಯವು 23 ಪ್ರಯಾಣಿಕರು ಮತ್ತು ಆರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದೆ. ಯಾರೂ ಬದುಕುಳಿದ ಬಗ್ಗೆ ವರದಿಯಾಗಿಲ್ಲ. ತಾಂತ್ರಿಕ ಸಮಸ್ಯೆಗಳು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ಹೇಳುತ್ತಿವೆ ಎಂದು ಆರ್‌ಐಎ ಸುದ್ದಿ…

Read More

‘ಧುರಂಧರ್ 2’ ಬಳಿಕ ಬರ್ತಿದೆ ಏಳೂವರೆ ಗಂಟೆ ಸಿನಿಮಾ; ಎರಡು ಇಂಟರ್​​ವಲ್

‘ಧುರಂಧರ್’ (Dhurandhar) ಸಿನಿಮಾದ ಅವಧಿ 3 ಗಂಟೆ 34 ನಿಮಿಷ ಇತ್ತು. ಅದೇ ರೀತಿ, ‘ಧುರಂಧರ್ 2’ ಸಿನಿಮಾ 3 ಗಂಟೆ 49 ನಿಮಿಷ ಇತ್ತು. ಇಷ್ಟು ದೀರ್ಘ ಅವಧಿ ಇದ್ದರೂ ಸಿನಿಮಾ ಯಶಸ್ಸು ಕಂಡಿತ್ತು. ಇದಾದ ಬೆನ್ನಲ್ಲೇ ಏಳು ಗಂಟೆ 30 ನಿಮಿಷಗಳ ಸಿನಿಮಾ ತೆರೆಗೆ ಬರೋಕೆ ರೆಡಿ ಆಗಿದೆ! ಇದು ಅಚ್ಚರಿ ಎನಿಸಿದರೂ ನಿಜ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾದ ಸೆನ್ಸಾರ್ ಪ್ರಮಾಣಪತ್ರ ವೈರಲ್ ಆಗಿದೆ. ಈ ಮೊದಲು ‘ಬಾಹುಬಲಿ’ ಹಾಗೂ ‘ಬಾಹುಬಲಿ 2’…

Read More

ಶುಭ್​​ಮನ್ ಗಿಲ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಗುಜರಾತ್ ಟೈಟಾನ್ಸ್​

ಐಪಿಎಲ್ 2026ರ ಸೀಸನ್‌ನ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಗುಜರಾತ್ ಟೈಟಾನ್ಸ್ (GT)  ಮೂರು ವಿಕೆಟ್‌ಗಳ ಸೋಲನ್ನು ಅನುಭವಿಸಿತು. ಆದರೆ, ಈ ಸೋಲಿಗಿಂತ ಹೆಚ್ಚಾಗಿ ಚರ್ಚೆಯಾಗುತ್ತಿರುವುದು ನಾಯಕ ಶುಭ್​ಮನ್ ಗಿಲ್ ಅವರ ಒಂದು ವಿಚಿತ್ರ ನಿರ್ಧಾರ. ಅದುವೇ ತಂಡದ ಪ್ರಮುಖ ವೇಗಿ ಮೊಹಮ್ಮದ್ ಸಿರಾಜ್ ಅವರಿಗೆ ಪೂರ್ಣ ಓವರ್‌ಗಳನ್ನು ನೀಡದೇ ಇರುವುದು! ಮುಲ್ಲನ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 162 ರನ್‌ಗಳ ಸಾಧಾರಣ ಮೊತ್ತವನ್ನು ಕಲೆಹಾಕಿತು. ಈ ಮೊತ್ತವನ್ನು…

Read More

Commercial LPG Cylinder Price: ಗಾಯದ ಮೇಲೆ ಬರೆ; ಕಮರ್ಷಿಯಲ್​​ ಸಿಲಿಂಡರ್​​ ದರ 195ರೂ. ಹೆಚ್ಚಳ

ನವದೆಹಲಿ, ಏಪ್ರಿಲ್​​ 01: ಕಮರ್ಷಿಯಲ್​​ ಸಿಲಿಂಡರ್​​ ಅಭಾವದ ನಡುವೆ ಬಳಕೆದಾರರಿಗೆ ಮತ್ತೊಂದು ಶಾಕ್​​ ಎದುರಾಗಿದೆ. ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡಿರುವ ಸಂಘರ್ಷದ ಹಿನ್ನೆಲೆ ಜಾಗತಿಕ ತೈಲ ಬೆಲೆ ಏರಿಕೆಯಾಗಿರುವ ಕಾರಣ, ಇಂದಿನಿಂದ (ಏಪ್ರಿಲ್ 1) ವಾಣಿಜ್ಯ ಬಳಕೆಯ LPG ಸಿಲಿಂಡರ್‌ಗಳ ಬೆಲೆಯಲ್ಲಿ 195.50 ರೂ. ಹೆಚ್ಚಳವಾಗಿದೆ. ಇದಕ್ಕೂ ಮೊದಲು ಮಾರ್ಚ್ 1ರಂದು 19 ಕೆ.ಜಿ. ಸಿಲಿಂಡರ್‌ ಬೆಲೆ 114.5 ರೂ. ಏರಿಕೆಯಾಗಿತ್ತು. ಯುದ್ಧದ ಕಾರಣಕ್ಕೆ ಭಾರತಕ್ಕೆ ಇಂಧನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಿಗೆ LPG ಪೂರೈಕೆ…

Read More

Daily Devotional: ನೀವು ಸತ್ತಂತೆ ಕನಸು ಕಂಡಿದ್ದೀರಾ? ಇದರ ಹಿಂದಿನ ರಹಸ್ಯವೇನು ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ನಮ್ಮ ಕನಸಿನಲ್ಲಿ ನಾವು ಸಾವನ್ನಪ್ಪಿದರೆ ಏನು ಅರ್ಥ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸ್ವಪ್ನಶಾಸ್ತ್ರದ ಪ್ರಕಾರ, ಮರಣಕ್ಕೆ ಸಂಬಂಧಿಸಿದ ಕನಸುಗಳು ಸಾಮಾನ್ಯವಾಗಿ ಶುಭ ಸೂಚಕವಾಗಿರುತ್ತವೆ. ನಿಮ್ಮ ಸಾವು ಕನಸಿನಲ್ಲಿ ಕಂಡರೆ ಅದು ಕಷ್ಟಗಳಿಂದ ಪಾರಾಗುವ, ಸಂಕಟಗಳು ದೂರವಾಗುವ, ದೋಷಗಳು ನಿವಾರಣೆಯಾಗುವ ಮತ್ತು ಅದೃಷ್ಟ ಕೂಡಿ ಬರುವ ಸೂಚನೆಯಾಗಿದೆ. ಬೇರೆಯವರ ಮರಣವನ್ನು ಕನಸಿನಲ್ಲಿ ಕಂಡರೆ ಅವರಿಗೆ ಆಯುಷ್ಯ ವೃದ್ಧಿಯಾಗುತ್ತದೆ. ಬ್ರಹ್ಮ ವೈವರ್ತ ಪುರಾಣದಲ್ಲಿ  ಇದನ್ನು ಸ್ಪಷ್ಟಪಡಿಸಲಾಗಿದೆ. ಇಂತಹ ಕನಸುಗಳು ಶುಭವನ್ನು ತರುವುದರಿಂದ ಯಾವುದೇ…

Read More

ಯಾವುದೇ ಒಪ್ಪಂದವಿಲ್ಲದೆ 2-3 ವಾರಗಳಲ್ಲಿ ಇರಾನ್-ಅಮೆರಿಕ ಯುದ್ಧ ಕೊನೆಗೊಳ್ಳುತ್ತೆ ಎಂದ ಟ್ರಂಪ್

ವಾಷಿಂಗ್ಟನ್, ಏಪ್ರಿಲ್ 1: ಇರಾನ್(Iran) ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೊಸ ಗಡುವನ್ನು ನಿಗದಿಪಡಿಸಿದ್ದಾರೆ. ಇರಾನ್ ಯುದ್ಧವು ಎರಡು, ಮೂರು ವಾರಗಳಲ್ಲಿ ಕೊನೆಗೊಳ್ಳಲಿದೆ ಎಂದು ಟ್ರಂಪ್ ಹೇಳಿದ್ದಾರೆ. ಅಮೆರಿಕ ಶೀಘ್ರದಲ್ಲೇ ಇರಾನ್​ನಿಂದ ತನ್ನ ಸೈನ್ಯವನ್ನು ಹಿಂತೆಗೆದುಕೊಳ್ಳಲಿದೆ. ಇರಾನ್‌ನಲ್ಲಿ ಆಡಳಿತ ಬದಲಾವಣೆಯ ಗುರಿಯನ್ನು ಸಾಧಿಸಲಾಗಿದೆ , ಈ ಸಂಘರ್ಷವನ್ನು ಮುಂದುವರಿಸಲು ಅಮೆರಿಕ ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇರಾನ್ ಯುದ್ಧವನ್ನು ಕೊನೆಗೊಳಿಸಲು ಯಾವುದೇ ಒಪ್ಪಂದದ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಒಪ್ಪಂದ ಅಸಾಧ್ಯ ಎಂದು ಅವರು…

Read More

Horoscope Today: ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಉತ್ತಮ ದಿನ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 1, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಚತುರ್ದಶಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ. ರವಿ ಮೀನ ರಾಶಿಯಲ್ಲಿ…

Read More

ಮುಗಿಯದ ಓವರ್… ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದ ಮೂಲಕ ಪಂಜಾಬ್ ಕಿಂಗ್ಸ್ ತಂಡದ ಎಡಗೈ ವೇಗಿ ಅರ್ಷದೀಪ್ ಸಿಂಗ್ (Arshdeep singh) ಅತ್ಯಂತ ಹೀನಾಯ ದಾಖಲೆ ಬರೆದಿದ್ದಾರೆ. ಅದು ಸಹ ದೀರ್ಘಾವಧಿ ಬೌಲಿಂಗ್ ಮಾಡುವ ಮೂಲಕ ಎಂಬುದು ವಿಶೇಷ.  ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 19 ಓವರ್​ಗಳಲ್ಲಿ 150 ರನ್ ಕಲೆಹಾಕಿದ್ದರು. ಅದರಂತೆ 20ನೇ ಓವರ್ ಎಸೆಯಲು ಬಂದ ಅರ್ಷದೀಪ್ ಸಿಂಗ್ ಮೊದಲ ಎಸೆತವನ್ನು ವೈಡ್ ಮಾಡಿದರು….

Read More

ಬೀದಿನಾಯಿಗಳ ದಾಳಿಗೆ ಬೆಚ್ಚಿಬಿದ್ದ ಸೂರ್ಯನಗರ ಜನ: ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಕಿಡಿ

ಆನೇಕಲ್​​, ಏಪ್ರಿಲ್​​ 01: ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ಸಮೀಪದ ಸೂರ್ಯನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಶ್ವಾನಗಳ ಕಾಟಕ್ಕೆ ಸ್ಥಳೀಯ ನಿವಾಸಿಗಳು ಹೈರಾಣಾಗಿದ್ದಾರೆ. ಗುಂಪು ಗುಂಪಾಗಿ ರಸ್ತೆಗಳಲ್ಲಿ ಬೀಡುಬಿಟ್ಟಿರುವ ರಕ್ಕಸ ಬೀದಿನಾಯಿಗಳು ಮನೆ ಮುಂದೆ ಆಟವಾಡುವ ಮಕ್ಕಳು, ವಾಕಿಂಗ್ ಮಾಡುವ ಮಹಿಳೆಯರು ಸೇರಿದಂತೆ ಪಾದಚಾರಿಗಳ ಮೇಲೆ ದಾಳಿ ನಡೆಸುತ್ತಿವೆ. ಬೈಕ್ ಸವಾರರನ್ನೂ ಅಡ್ಡಗಟ್ಟಿ ಅಟ್ಯಾಕ್​​ ಮಾಡುತ್ತಿವೆ. ದಿನನಿತ್ಯ ಇವುಗಳ ದಾಳಿಯಿಂದ ಸಾರ್ವಜನಿಕರು ಆಸ್ಪತ್ರೆಗೆ ಅಲೆದಾಡುವಂತಾಗಿದೆ. ಆದರೆ ಪುರಸಭೆ ಅಧಿಕಾರಿಗಳು ಮಾತ್ರ ಈ ಬಗ್ಗೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಏನೇ ಮಾಡಿದರೂ ಬುದ್ಧಿಯಿಂದ ಬದಲಾಗಲಾರರು..

ಮೇಷ ರಾಶಿ: ನಿಮ್ಮ ಆತ್ಮವಿಶ್ವಾಸದಿಂದ ಆಗಬೇಕಾದ ಕಾರ್ಯವನ್ನು ಸಾಧಿಸಿಕೊಳ್ಳಬಹುದು.‌ ಹಳೆಯ ಯೋಜನೆಗಳನ್ನು ಇಂದು ಕಾರ್ಯಕ್ಕೆ ತರುವಿರಿ. ವಿದೇಶ ಪ್ರವಾಸವು ನಿಶ್ಚಯವಾಗಲಿದೆ. ನಿಷ್ಠುರವಾಗಿ ವರ್ತಿಸುವುದು ಅವಶ್ಯಕವಾಗಿದೆ. ನಿಮ್ಮವರನ್ನು ಭಿನ್ನಾಭಿಪ್ರಾಯ ಬರದಂತೆ ಇಟ್ಟುಕೊಳ್ಳುವುದೂ ನಿಮ್ಮ ಮುಖ್ಯ. ನೀವು ಕೆಲವು ಪ್ರಮುಖ ವಿಷಯಗಳಲ್ಲಿ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಮಾನಸಿಕ ನೋವಿನಿಂದ ಹೊರಬರಲು ನಿಮಗೆ ಕಷ್ಟವಾದೀತು. ದಿನದಲ್ಲಿ ಬದಲಾವಣೆಯನ್ನು ತಂದುಕೊಳ್ಳುವಿರಿ.‌ ವೃಷಭ ರಾಶಿ: ಯಾವುದೋ ಕಾರಣಕ್ಕೆ ಮಾಡಿದ ಪ್ರಯಾಣ ಇನ್ನಾವುದೋ ವಿಚಾರಕ್ಕೆ ಅನುಕೂಲವಾಗಿರುವುದು. ಉತ್ತಮ ಫಲಿತಾಂಶಗಳನ್ನು ಪರೀಕ್ಷೆಯಲ್ಲಿ ಪಡೆಯುತ್ತೀರಿ. ವ್ಯವಹಾರದಲ್ಲಿ ಒಂದು ಹೆಜ್ಜೆ…

Read More