Middle East Flight Advisory: ದುಬೈ, ಅಬುಧಾಬಿಗೆ ಹೋಗುವ ಪ್ರಯಾಣಿಕರಿಗೆ ಕೆಲವು ಸಲಹೆಗಳ ಕೊಟ್ಟ ಏರ್ ಇಂಡಿಯಾ, ಇಂಡಿಗೋ
ನವದೆಹಲಿ, ಏಪ್ರಿಲ್ 1: ಭಾರತದ ಎರಡು ದೊಡ್ಡ ವಿಮಾನಯಾನ ಸಂಸ್ಥೆಗಳಾದ ಏರ್ ಇಂಡಿಯಾ(Air India) ಹಾಗೂ ಇಂಡಿಗೋ ದುಬೈ, ಅಬುಧಾಭಿ ಅಥವಾ ಇತರೆ ಗಲ್ಫ್ ದೇಶಗಳಿಗೆ ಹೋಗುವ ಪ್ರಯಾಣಿಕರಿಗೆ ಕೆಲವು ಸಲಹೆಗಳನ್ನು ನೀಡಿವೆ. ಮಧ್ಯಪ್ರಾಚ್ಯದಲ್ಲಿ ಬದಲಾಗುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ ಏರ್‌ಲೈನ್ಸ್ ಪ್ರಯಾಣಿಕರಿಗೆ ಪ್ರಯಾಣ ಸಲಹೆಯನ್ನು ನೀಡಿದೆ. ಪ್ರದೇಶದಲ್ಲಿನ ಪ್ರಸ್ತುತ ಪರಿಸ್ಥಿತಿಯಿಂದಾಗಿ, ವಿಮಾನ ವೇಳಾಪಟ್ಟಿಗಳು ಆಗಾಗ ಬದಲಾಗುತ್ತಿರುತ್ತವೆ. ಆದ್ದರಿಂದ, ಎಲ್ಲಾ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಹೊರಡುವ ಮೊದಲು ಪ್ರಸ್ತುತ ಪರಿಸ್ಥಿತಿ ಬಗ್ಗೆ ಪರಿಶೀಲಿಸಿ ಎಂದು ವಿನಂತಿಸಿದ್ದಾರೆ. ಪ್ರಯಾಣಿಕರ…