IND vs AFG: ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್ – Kannada News
ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದೊಂದಿಗೆ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಟೀಂ ಇಂಡಿಯಾದ ಯುವ ಆಲ್‌ರೌಂಡರ್ ಮಾನವ್ ಸುತಾರ್ ಚೊಚ್ಚಲ ಪಂದ್ಯದಲ್ಲಿತೇ ತಮ್ಮ ಛಾಪು ಮೂಡಿಸಿದ್ದಾರೆ. ಮೊದಲು ಬ್ಯಾಟಿಂಗ್ನಲ್ಲಿ 28 ರನ್‌ಗಳ ಇನ್ನಿಂಗ್ಸ್ ಆಡಿದ ಸುತಾರ್, ವಾಷಿಂಗ್ಟನ್ ಸುಂದರ್ ಅವರೊಂದಿಗೆ 54 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡು ತಂಡವನ್ನು 500 ರನ್‌ಗಳ ಗಡಿ ದಾಟಿಸಿದರು. ಸುತಾರ್ ತಮ್ಮ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿದರು. ಬ್ಯಾಟಿಂಗ್ ಬಳಿಕ ಬೌಲಿಂಗ್ನಲ್ಲೂ ಕಮಾಲ್ ಮಾಡಿದ ಸುತಾರ್, ತಾನು…