Headlines

nagaraj11081993

ಮೊದಲ ಭಾರಿಗೆ ಸ್ವಕ್ಷೇತ್ರಕ್ಕೆ ಭೇಟಿ ನೀಡುತ್ತಿರುವ ಡಿಕೆ ಶಿವಕುಮಾರ್​: ಮೆಟ್ರೋದಲ್ಲಿ ಸಂಚರಿಸಲು ಸಿಎಂ ನಿರ್ಧಾರ – Kannada News

ಬೆಂಗಳೂರು, ಜೂನ್​​ 07: ಸಿಎಂ ಡಿ.ಕೆ. ಶಿವಕುಮಾರ್​ ಇಂದು ಬೆಂಗಳೂರು ದಕ್ಷಿಣ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸಿಎಂ ಆದ ಬಳಿಕ ಸ್ವಕ್ಷೇತ್ರ ಕನಕಪುರಕ್ಕೆ ಮೊದಲ ಭಾರಿಗೆ ಭೇಟಿ ನೀಡುತ್ತಿರುವ ಡಿಕೆ ಶಿವಕುಮಾರ್​ ಹಾರೋಹಳ್ಳಿ ಮತ್ತು ಕನಕಪುರ ತಾಲೂಕಿನಲ್ಲಿ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗಿಯಾದಲಿದ್ದಾರೆ. ವಿಧಾನಸೌಧದ ಮೆಟ್ರೋ ಸ್ಟೇಷನ್‌ನಿಂದ ಕನಕಪುರ ರಸ್ತೆವರೆಗೂ ಮೆಟ್ರೋದಲ್ಲಿ ಸಿಎಂ ಪ್ರಯಾಣಿಸಲಿದ್ದಾರೆ. ಜೀರೋ ಟ್ರಾಫಿಕ್​ನಿಂದ ವಾಹನ ಸವಾರರಿಗೆ ಆಗುವ ತೊಂದರೆಯನ್ನು ತಪ್ಪಿಸಲು ಈ ನಿರ್ಧಾರ ಕೈಗೊಂಡಿದ್ದಾರೆ. ಕನಕಪುರ ರಸ್ತೆ ತಲುಪಿದ ಬಳಿಕ ಅಲ್ಲಿಂದ ರಸ್ತೆ…

Read More

ರಾಷ್ಟ್ರ ಪ್ರಶಸ್ತಿ ವಿಜೇತ ಹಿರಿಯ ನಟ ಸಲೀಂ ಕುಮಾರ್ ನಿಧನ: ಕಂಬನಿ ಮಿಡಿದ ಮಮ್ಮುಟ್ಟಿ – Kannada News

ಮಲಯಾಳಂ ಚಿತ್ರರಂಗದ ಖ್ಯಾತ ಹಾಸ್ಯ ಕಲಾವಿದ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಲೀಂ ಕುಮಾರ್ (Salim Kumar) ಶನಿವಾರ (ಜೂನ್ 6) ರಾತ್ರಿ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ನ್ಯುಮೋನಿಯಾ ಹಾಗೂ ಲಿವರ್ (Liver) ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಶನಿವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಿ ವೆಂಟಿಲೇಟರ್‌ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ 10.43ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಸಲೀಂ ಕುಮಾರ್ ಅವರು…

Read More

ಕೆಎಲ್ ರಾಹುಲ್ ನಟನೆಗೆ ‘ಆಸ್ಕರ್’ ಪ್ರಶಸ್ತಿ ನೀಡಬೇಕು: ಗ್ರೇಮ್ ಸ್ವಾನ್ – Kannada News

ನ್ಯೂ ಚಂಡೀಗಢದಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದ ಮೊದಲ ದಿನವೇ ಭಾರತದ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಎರಡು ಕಾರಣಗಳಿಂದ ಸುದ್ದಿಯಾಗಿದ್ದಾರೆ. ಮೊದಲಿಗೆ ಡಿಆರ್‌ಎಸ್​ನಿಂದ ಪಾರಾಗಿ ಸುದ್ದಿಯಾಗಿದ್ದ ರಾಹುಲ್, ಆ ಬಳಿಕ ಸೆಂಚುರಿ ಸಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಹೀಗೆ ಡಿಆರ್​ಎಸ್​​ ಹಾಗೂ ಸೆಂಚುರಿಗಳಿಂದ ಸುದ್ದಿಯಾಗಲು ಮುಖ್ಯ ಕಾರಣ 11ನೇ ಓವರ್​ನಲ್ಲೇ ಸಿಕ್ಕ ಜೀವದಾನ! 11ನೇ ಓವರ್‌ನಲ್ಲಿ ಅಫ್ಘಾನಿಸ್ತಾನ್ ವೇಗಿ ಝಿಯಾವುರ್ ರೆಹಮಾನ್ ಶರೀಫಿ ಎಸೆದ ಚೆಂಡನ್ನು ರಾಹುಲ್ ಕಟ್ ಮಾಡಲು ಪ್ರಯತ್ನಿಸಿದ್ದರು. ಆದರೆ…

Read More

Vasthu Tips: ಮನೆಯಲ್ಲಿ ದೀಪ ಹಚ್ಚುವಾಗ ಈ 5 ತಪ್ಪು ಮಾಡಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News

ಭಾರತೀಯ ಸಂಸ್ಕೃತಿಯಲ್ಲಿ, ಪ್ರತಿದಿನ ಮನೆಯಲ್ಲಿ ದೀಪ ಹಚ್ಚುವುದನ್ನು ಅತ್ಯಂತ ಪವಿತ್ರ ಆಚರಣೆ ಎಂದು ಪರಿಗಣಿಸಲಾಗುತ್ತದೆ. ದೀಪ ಹಚ್ಚುವುದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಾಗುವುದಲ್ಲದೆ, ಮನಸ್ಸಿಗೆ ಶಾಂತಿ ಮತ್ತು ಕುಟುಂಬಕ್ಕೆ ಅದೃಷ್ಟ ಬರುತ್ತದೆ ಎಂಬುದು ಶತಮಾನಗಳ ನಂಬಿಕೆ. ಆದಾಗ್ಯೂ, ವಾಸ್ತು ಶಾಸ್ತ್ರಗಳ ಪ್ರಕಾರ, ದೀಪ ಪೂಜೆಯಲ್ಲಿ ನಾವು ಮಾಡುವ ಕೆಲವು ಸಣ್ಣ ತಪ್ಪುಗಳು ಅದರ ಆಧ್ಯಾತ್ಮಿಕ ಪ್ರಯೋಜನಗಳನ್ನು ಕಡಿಮೆ ಮಾಡಬಹುದು. ಮನೆಯಲ್ಲಿ ಶಾಂತಿ, ಸಮೃದ್ಧಿ ಮತ್ತು ಸಂಪತ್ತನ್ನು ವೃದ್ಧಿಸಿಕೊಳ್ಳಲು ದೀಪ ಹಚ್ಚುವಾಗ ಪಾಲಿಸಬೇಕಾದ ಆ ಪ್ರಮುಖ ನಿಯಮಗಳ ಸಂಪೂರ್ಣ…

Read More

ಮಮತಾ ಅಥವಾ ಯಾವುದೇ ಟಿಎಂಸಿ ನಾಯಕರು ನನಗೆ ರಾಜೀನಾಮೆ ನೀಡುವಂತೆ ಕೇಳಿಲ್ಲ: ಯೂಸುಫ್ ಪಠಾಣ್

ಕೋಲ್ಕತ್ತಾ, ಜೂನ್ 07: ಮಮತಾ ಬ್ಯಾನರ್ಜಿ(Mamata Banerjee)ಯಾಗಲಿ ಅಥವಾ ಯಾವುದೇ ಟಿಎಂಸಿ ನಾಯಕರು ನನ್ನ ಬಳಿ ರಾಜೀನಾಮೆ ನೀಡುವಂತೆ ಕೇಳಿಲ್ಲ ಎಂದು ಬಹರಾಮ್‌ಪುರ ಲೋಕಸಭಾ ಕ್ಷೇತ್ರದ ಸಂಸದ ಯೂಸುಫ್ ಪಠಾಣ್ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮಗೆ ರಾಜೀನಾಮೆ ನೀಡುವಂತೆ ಕೇಳಿದ್ದಾರೆ ಎಂಬುದೆಲ್ಲ ಕೇವಲ ಅನಧಿಕೃತ ವದಂತಿಗಳಾಗಿದ್ದು, ಪಕ್ಷದಲ್ಲಿ ಎಲ್ಲವೂ ಅತ್ಯಂತ ಸೌಹಾರ್ದಯುತವಾಗಿದೆ ಎಂದು ಅವರು ದೃಢಪಡಿಸಿದ್ದಾರೆ. ಈ ಸ್ಪಷ್ಟನೆಯು ಟಿಎಂಸಿ ಪಕ್ಷದ ಆಂತರಿಕ ಒಗ್ಗಟ್ಟು ಮತ್ತು ನಾಯಕರ ನಡುವಿನ ದೃಢವಾದ…

Read More

Bengaluru Air Quality: ಬೆಂಗಳೂರಿನಲ್ಲಿ ಉತ್ತಮ ವಾಯು ಗುಣಮಟ್ಟ: ಸಿಲ್ಕ್ ಬೋರ್ಡ್‌ನಲ್ಲಿ ಮಾತ್ರ ಕೊಂಚ ಏರಿಕೆ – Kannada News

ಬೆಂಗಳೂರಿನಲ್ಲಿ ಉತ್ತಮ ವಾಯು ಗುಣಮಟ್ಟ: ಸಿಲ್ಕ್ ಬೋರ್ಡ್‌ನಲ್ಲಿ ಮಾತ್ರ ಕೊಂಚ ಏರಿಕೆ ಬೆಂಗಳೂರು, ಜೂನ್ 07: ರಾಜ್ಯದಲ್ಲಿ ಮುಂಗಾರು ಮಳೆಯ ಆರಂಭದ ಬೆನ್ನಲ್ಲೇ ವಾಯು ಮಾಲಿನ್ಯದ (AQI) ಮಟ್ಟದಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದಿದೆ. ಇಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಆಶಾದಾಯಕವಾಗಿದ್ದು, ಜನಸಾಮಾನ್ಯರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿದ ಮಳೆಯ ಕಾರಣದಿಂದಾಗಿ ಗಾಳಿಯ ಗುಣಮಟ್ಟ ಗಣನೀಯವಾಗಿ ಸುಧಾರಿಸಿದೆ. ಒಟ್ಟಾರೆ ಬೆಂಗಳೂರಿನ ಸರಾಸರಿ AQI ಪ್ರಸ್ತುತ 11 ರಿಂದ…

Read More

ಒಂದೇ ತಂಡವಾದ ಎರಡು ಟೀಮ್​​ಗಳು..! – Kannada News

ಆಸ್ಟ್ರೇಲಿಯಾದ ಪ್ರತಿಷ್ಠಿತ ಟಿ20 ಟೂರ್ನಿ ಬಿಗ್ ಬ್ಯಾಷ್ ಲೀಗ್​ನ (BBL) ಎರಡು ತಂಡಗಳು ವಿಲೀನಗೊಂಡಿವೆ. ಮೆಲ್ಬೋರ್ನ್ ನಗರದ ಸಾಂಪ್ರದಾಯಿಕ ಎದುರಾಳಿಗಳಾದ ‘ಮೆಲ್ಬೋರ್ನ್ ಸ್ಟಾರ್ಸ್’ (Melbourne Stars) ಮತ್ತು ‘ಮೆಲ್ಬೋರ್ನ್ ರೆನೆಗೇಡ್ಸ್’ (Melbourne Renegades) ತಂಡಗಳು ಈಗ ಒಂದಾಗಿದ್ದು, ಮುಂಬರುವ ಸೀಸನ್​​ನಲ್ಲಿ ಒಂದೇ ತಂಡವಾಗಿ ಕಣಕ್ಕಿಳಿಯಲಿದೆ. ವಿಲೀನದ ಹಿಂದಿನ ಮುಖ್ಯ ಉದ್ದೇಶವೇನು? ಬಿಬಿಎಲ್ ಟೂರ್ನಿಯನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸಲು ಕ್ರಿಕೆಟ್ ಆಸ್ಟ್ರೇಲಿಯಾ ಸಜ್ಜಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಎರಡು ಪ್ರತ್ಯೇಕ ತಂಡಗಳನ್ನು ನಡೆಸಿ ಸಂಪನ್ಮೂಲಗಳನ್ನು ವ್ಯರ್ಥ ಮಾಡುವ ಬದಲು, ಆಡಳಿತವನ್ನು ಸುಗಮಗೊಳಿಸಲು…

Read More

ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನರ ನೆಮ್ಮದಿ ಕಸಿದ ಮಳೆರಾಯ: ಮನೆಗಳಿಗೆ ನುಗ್ಗಿದ ನೀರು, ಕುಸಿದ ಸೇತುವೆ

ಕೇರಳಂಗೆ ಮುಂಗಾರು ಪ್ರವೇಶವಾಗಿದ್ದು, ರಾಜ್ಯದಲ್ಲೂ ಮಳೆ ಚುರುಕುಗೊಂಡಿದೆ. ನಿನ್ನೆಯಷ್ಟೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದ್ದು, ಅಲ್ಲಲ್ಲಿ ಭಾರೀ ಸಮಸ್ಯೆಗಳು ಕಂಡು ಬಂದಿವೆ. ಜೂನ್ 9ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಕೇರಳಂನ ಕಾಸರಗೋಡು ಜಿಲ್ಲೆಯಾದ್ಯಂತ ಭಾರೀ ಮಳೆ ಆಗಿದೆ. ಅಡೂರು ಎಂಬಲ್ಲಿ ನಿರಂತರ ಮಳೆಗೆ ಮಣ್ಣು ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮನೆ ಸಮೀಪ ಆಟವಾಡುತ್ತಿದ್ದಾಗ ಆವರಣದ ಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಮಣ್ಣಿನಡಿ…

Read More

5 ಕಟ್ಟಡಗಳು, 13 ಪ್ಲಾಟ್​ಗಳು, 2 ಕೋಟಿ ರೂ. ನಗದು, ಒಡಿಶಾ ಎಂಜಿನಿಯರ್ ಬಳಿ ಸಿಕ್ಕಿದ್ದೇನು? – Kannada News

ಭುವನೇಶ್ವರ, ಜೂನ್ 07: ದೇಶಾದ್ಯಂತ ಸರ್ಕಾರಿ ವಲಯದಲ್ಲಿ ಪಾರದರ್ಶಕತೆ, ಪ್ರಾಮಾಣಿಕತೆ ಹಾಗೂ ಜವಾಬ್ದಾರಿ ಆಡಳಿತವನ್ನು ಖಚಿತಪಡಿಸುವ ನಿಟ್ಟಿನಲ್ಲಿ ಒಡಿಶಾ ರಾಜ್ಯ ವಿಜಿಲೆನ್ಸ್​ ಇಲಾಖೆಯು ಕಾರ್ಯಾಚರಣೆಯೊಂದನ್ನು ನಡೆಸಿದೆ. ಕಂಧಮಾಲ್ ಜಿಲ್ಲೆಯ ಬಾಲಿಗುಡದ ಸಮಗ್ರ ಬುಡಕಟ್ಟು ಅಭಿವೃದ್ಧಿ ಸಂಸ್ಥೆಯ ಸಹಾಯ ಕಾರ್ಯನಿರ್ವಾಹಕ ಎಂಜಿನಿಯರ್ ವೈಕುಂಠನಾಥ್ ಬೆಹೆರಾ ವಿರುದ್ಧ ಬಂದ ಸಾರ್ವಜನಿಕ ದೂರುಗಳಿಗೆ ತಕ್ಷಣವೇ ಸ್ಪಂದಿಸಿರುವ ಅಧಿಕಾರಿಗಳು, ಬೃಹತ್ ಮಟ್ಟದ ಆಸ್ತಿ ಶೋಧ ನಡೆಸಿದ್ದಾರೆ. ಜೂನ್ 6, 2026 ರಂದು ಭುವನೇಶ್ವರದ ವಿಶೇಷ ವಿಜಿಲೆನ್ಸ್ ನ್ಯಾಯಾಲಯದ ಶೋಧ ವಾರಂಟ್ ಮೇರೆಗೆ ಇಬ್ಬರು…

Read More

‘ರಣವೀರ್ ಸಿಂಗ್‌ ಶಕ್ತಿಮಾನ್ ಆಗಲು ಮುಖೇಶ್ ಖನ್ನಾ ಒಪ್ಪಿಲ್ಲ ಎಂಬುದೆಲ್ಲ ಪ್ರಚಾರದ ಗಿಮಿಕ್’ – Kannada News

ಭಾರತದ ಮೊದಲ ಸೂಪರ್ ಹೀರೋ ‘ಶಕ್ತಿಮಾನ್’ (Shaktimaan) ಮತ್ತೆ ಸುದ್ದಿಯಲ್ಲಿದೆ. ಈ ಐಕಾನಿಕ್ ಕಥೆಯನ್ನು ಬಿಗ್ ಸ್ಕ್ರೀನ್ ಮೇಲೆ ತರಲು ಬಾಲಿವುಡ್‌ನಲ್ಲಿ ಪ್ರಯತ್ನ ನಡೆಯುತ್ತಿರುವುದು ಹಳೆಯ ವಿಷಯವಾದರೂ, ಶಕ್ತಿಮಾನ್ ಪಾತ್ರಕ್ಕೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿಯೇ ಸದ್ಯದ ದೊಡ್ಡ ಚರ್ಚೆ. ಶಕ್ತಿಮಾನ್ ಪಾತ್ರಧಾರಿ ಹಾಗೂ ನಿರ್ಮಾಪಕ ಮುಖೇಶ್ ಖನ್ನಾ (Mukesh Khanna) ಅವರು ರಣವೀರ್ ಸಿಂಗ್ ಆಯ್ಕೆಯನ್ನು ತೀವ್ರವಾಗಿ ವಿರೋಧಿಸುತ್ತಾ ಬಂದಿದ್ದಾರೆ. ಆದರೆ, ಈಗ ಈ ಇಡೀ ವಿವಾದದ ಹಿಂದೆ ಪ್ರಚಾರದ ಗಿಮಿಕ್ ಅಡಗಿದೆ ಎಂದು ಸಹನಟ…

Read More