ಬೆಂಗಳೂರಲ್ಲಿ ಪೊಲೀಸರು ಇದ್ದಾರಾ.. ಇಲ್ವಾ?: ಹೈವೇಯಲ್ಲೇ ಕಾರಿನ ರೂಫ್ ಟಾಪ್ ಓಪನ್ ಮಾಡಿ ಬಾಟಲಿ ಎತ್ತಿದ ವ್ಯಕ್ತಿ
ಬೆಂಗಳೂರು, ಮಾ.31: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ಪುಂಡರ ಹಾವಳಿ ಮಿತಿಮೀರಿದ್ದು, ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನ ರೂಫ್ ಟಾಪ್ ಓಪನ್ ಮಾಡಿ ಯುವಕನೊಬ್ಬ ಮದ್ಯ ಸೇವಿಸಿರುವ ಘಟನೆ ಬೆಂಗಳೂರು-ನೆಲಮಂಗಲ ಮಾರ್ಗದಲ್ಲಿ ನಡೆದಿದೆ. ಈ ಪುಂಡಾಟದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. KA 01 MM 7215 ನೋಂದಣಿ ಸಂಖ್ಯೆಯ XUV 500 ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೊಬ್ಬ, ಚಲಿಸುತ್ತಿದ್ದ ವಾಹನದ ರೂಫ್ ಟಾಪ್‌ನಿಂದ ಹೊರಬಂದು ಮದ್ಯ ಸೇವಿಸಿದ್ದಾನೆ. ನೀರಿನ ಬಾಟಲಿಯಲ್ಲಿ ಮದ್ಯ ತುಂಬಿಸಿಕೊಂಡು ಯಾರಿಗೂ ಹೆದರದೆ…