ಹುಬ್ಬಳ್ಳಿ, ರಾಯಚೂರಲ್ಲಿ ಕುಡಿಯುವ ನೀರಿಗೂ ಪರದಾಟ: ರಸ್ತೆ ತಡೆದು ಪ್ರತಿಭಟನೆ
ಹುಬ್ಬಳ್ಳಿ/ರಾಯಚೂರು, ಮಾರ್ಚ್ 31: ಬೇಸಿಗೆ ಆರಂಭವಾಗುತ್ತಿದ್ದಂತೆ ಕರ್ನಾಟಕದ ಹಲವೆಡೆ ನೀರಿನ ಸಮಸ್ಯೆ ತಲೆದೋರಿದ್ದು, ಹುಬ್ಬಳ್ಳಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಹೆಚ್ಚಾಗಿದೆ. ಹುಬ್ಬಳ್ಳಿಯ ಕಿಲ್ಲೆ ವಾರ್ಡ್‌ನಲ್ಲಿ ವಾರಕ್ಕೊಮ್ಮೆ ಮಾತ್ರ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಸ್ಥಳೀಯರು ಪ್ರತಿದಿನವೂ ನೀರಿಗಾಗಿ ಪರದಾಡುತ್ತಿದ್ದಾರೆ. ಹೀಗಾಗಿ ರಸ್ತೆ ತಡೆದು ಸಾರ್ವಜನಿಕರು ಪ್ರತಿಭಟನೆ ನಡೆಸಿರುವ ಪ್ರಸಂಗ ನಡೆದಿದೆ. ಅತ್ತ ರಾಯಚೂರು ಜಿಲ್ಲೆಯ ಹಲವು ಭಾಗಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡ ಹಿನ್ನೆಲೆ, ಜಿಲ್ಲಾಧಿಕಾರಿಗಳು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ…