ಸಿಎಂ ಡಿಕೆ ಶಿವಕುಮಾರ್ ಹೇಳಿದ ಆ ಒಂದು ಮಾತು ನನ್ನ ನಿರ್ಧಾರ ಬದಲಿಸಿದೆ ಎಂದ ರಾಮಲಿಂಗಾರೆಡ್ಡಿ – Kannada News
ಬೆಂಗಳೂರು, ಜೂ.6 : ನೂತನ ಸಚಿವರಾದ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಜಟಾಪಟಿಯು ಬಹುತೇಕ ಇತ್ಯರ್ಥಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಕುರಿತು ಟಿವಿ9 ಜೊತೆ ಮಾತನಾಡಿರುವ ರಾಮಲಿಂಗಾರೆಡ್ಡಿ, “ನೆನ್ನೆ ರಾತ್ರಿ ನಾನು ಮತ್ತು ಮುಖ್ಯಮಂತ್ರಿಗಳು ಭೇಟಿಯಾಗಿ ಮಾತುಕತೆ ನಡೆಸಿದೆವು. ನನ್ನ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ತಗೊಳ್ಳೋದಿಲ್ಲ, ನಾನು ಅದನ್ನು ಸ್ವೀಕರಿಸುವುದಿಲ್ಲ ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಇನ್ನು ಎರಡು ವರ್ಷ ಕಾಲ ನಮ್ಮ ಜೊತೆ ಇದ್ದು ಕೆಲಸ ಮಾಡಬೇಕು…