Headlines

nagaraj11081993

ನೂತನ ಸಿಎಂ ಡಿಕೆ ಶಿವಕುಮಾರ್​​ಗೆ ಶುಭ ಹಾರೈಸಿದ ಲಿಂಗಾಯತ ಸ್ವಾಮೀಜಿಗಳು – Kannada News

ಬೆಂಗಳೂರು, ಜೂನ್​​ 06: ಸಿಎಂ ಡಿಕೆ ಶಿವಕುಮಾರ್​​ರ ಬೆಂಗಳೂರಿನಲ್ಲಿರುವ ನಿವಾಸಕ್ಕೆ ಲಿಂಗಾಯತ ಸ್ವಾಮೀಜಿಗಳು ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸ್ವಾಮೀಜಿಗಳು ಡಿಕೆ ಶಿವಕುಮಾರ್​​​ಗೆ ಆಶೀರ್ವಾದ ಮಾಡಿ ಶುಭ ಹಾರೈಸಿದರು. ಧಾರವಾಡ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಸಿಂದಗಿಯ ಡಾಕ್ಟರ್ ಪ್ರಭು ಸಾರಂಗದೇವ ಸ್ವಾಮೀಜಿ, ಸೊಲ್ಲಾಪುರದ ಶ್ರೀಕಂಠ ಶಿವಾಚಾರ್ಯರು, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯರು, ಶಿವಗಂಗಿಯ ಡಾಕ್ಟರ್ ಮಲೆಯ ಶಾಂತಮುನಿ ಶಿವಾಚಾರ್ಯರು, ಬೆಂಗಳೂರಿನ ಡಾಕ್ಟರ್ ಮಹಾಂತಲಿಂಗ ಶಿವಾಚಾರ್ಯರು ಮತ್ತು ಶಹಾಪುರದ ಶ್ರೀ ಸುಗೂರೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ಉಪಸ್ಥಿತರಿದ್ದರು….

Read More

ಒಟಿಟಿಗೆ ಈ ವಾರ ಭರ್ಜರಿ ಸಿನಿಮಾಗಳು, ನೋಡಿ ನೋಡಿ ಮರುಳಾಗಿ

ಬ್ಲಾಕ್ ಬಸ್ಟರ್ ಸಿನಿಮಾ ‘ಧುರಂಧರ್ 2’ ಈ ವಾರ ಒಟಿಟಿಗೆ ಬಂದಿದೆ. ಕೆಲ ವಾರಗಳ ಹಿಂದಷ್ಟೆ ‘ಧುರಂಧರ್ 2’ ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿತ್ತು ಆದರೆ ಹೊರ ರಾಷ್ಟ್ರಗಳಲ್ಲಿ ಮಾತ್ರ. ಇದೀಗ ಭಾರತದಲ್ಲಿ ಜಿಯೋ ಹಾಟ್​​ಸ್ಟಾರ್​​ನಲ್ಲಿ ಇದೇ ಸಿನಿಮಾ ಬಿಡುಗಡೆ ಆಗಿದೆ. ಅದೂ ಅನ್​​ಕಟ್ ವರ್ಷನ್ ಆಗಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಅಬ್ಬರಿಸಿದ್ದ ಧ್ರುವ ಸರ್ಜಾ ನಟನೆಯ ‘ಕೆಡಿ: ದಿ ಡೆವಿಲ್’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಪ್ರೇಮ್ ನಿರ್ದೇಶಿಸಿ, ಧ್ರುವ ಸರ್ಜಾ, ಸಂಜಯ್ ದತ್,…

Read More

ಜಸ್ಟ್‌ ಐಸ್‌ಕ್ಯೂಬ್‌ನಿಂದ ಟಾಯ್ಲೆಟ್‌ ಕಲೆ, ವಾಸನೆಯನ್ನು ಹೋಗಲಾಡಿಸಬಹುದು; ಅದು ಹೇಗೆ ಗೊತ್ತಾ? – Kannada News

ಮನೆಯ ವಾತಾವರಣ ಆರೋಗ್ಯಕರವಾಗಿರಬೇಕೆಂದರೆ ಬಾತ್‌ರೂಮ್‌ ಮತ್ತು ಟಾಯ್ಲೆಟ್‌ ತುಂಬಾನೇ ಕ್ಲೀನ್‌ ಆಗಿರಬೇಕು. ಅದರಲ್ಲೂ ಶೌಚಾಲಯದ (toilet) ನೈರ್ಮಲ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕು ಇಲ್ಲದಿದ್ದರೆ ರೋಗಾಣುಗಳು ಹರಡುವ ಸಾಧ್ಯತೆ ಇರುತ್ತದೆ. ಇದಕ್ಕಾಗಿಯೇ ಪ್ರತಿಯೊಬ್ಬರೂ ಪ್ರತಿನಿತ್ಯ ಶೌಚಾಲಯವನ್ನು ಕ್ಲೀನ್‌ ಮಾಡುತ್ತಾರೆ. ಟಾಯ್ಲೆಟ್‌ ಅನ್ನು ನಿತ್ಯ ಕ್ಲೀನ್‌ ಮಾಡಿದರೂ, ದುಬಾರಿ ಕ್ಲೀನರ್‌ಗಳನ್ನು ಬಳಸಿ ತಿಕ್ಕಿ ತೊಳೆದರೂ ಹಳದಿ ಕಲೆ, ವಾಸನೆ ಹೋಗೋದೆ ಇಲ್ಲ. ಹೀಗಿರುವಾಗ ಶೌಚಾಲಯವನ್ನು ಐಸ್ ಕ್ಯೂಬ್‌ಗಳಿಂದ ಬಹಳ ಸುಲಭವಾಗಿ ಸ್ವಚ್ಛಗೊಳಿಸಬಹುದು. ಈ ಐಸ್‌ಕ್ಯೂಬ್‌ ಟ್ರಿಕ್ಸ್‌ ಟಾಯ್ಲೆಟ್‌ನ…

Read More

ಡಿಕೆಶಿ-ಸಿದ್ದು ಕೈಲಾಗದ ಸಂಧಾನ ಸುರ್ಜೇವಾಲ ಸಮ್ಮುಖದಲ್ಲಿ ಸಕ್ಸಸ್ ಆಗಿದ್ದೇಗೆ?: ರಾಮಲಿಂಗಾರೆಡ್ಡಿ ಮನವೊಲಿಕೆಗೆ ನೀಡಿದ ಆಫರ್ ಏನು? – Kannada News

ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ಬೆಂಗಳೂರು, ಜೂ.6: ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆಯಾದರೂ, ಈ ಸಂಧಾನದ ಹಿಂದೆ ನಡೆದಿರುವ ಹೈಡ್ರಾಮಾ ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಡೆಸಿದ ಸರಣಿ ಮನವೊಲಿಕೆ ಪ್ರಯತ್ನಗಳಿಗೆ ಕರಗದ ರಾಮಲಿಂಗಾರೆಡ್ಡಿ ಅವರನ್ನು ಶಾಂತಗೊಳಿಸಲು ಕೊನೆಗೂ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರೇ ಅಖಾಡಕ್ಕೆ ಇಳಿಯಬೇಕಾಯಿತು. ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿ…

Read More

IND vs AFG: ಮೊದಲ ದಿನವೇ 2 ಶತಕ, 2 ಅರ್ಧಶತಕ; ಬೃಹತ್ ಮೊತ್ತದತ್ತ ಟೀಂ ಇಂಡಿಯಾ – Kannada News

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯದ ಮೊದಲ ದಿನದಾಟ ಅಂತ್ಯವಾಗಿದೆ. ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಆತಿಥೇಯ ಟೀಂ ಇಂಡಿಯಾ ಮೊದಲ ದಿನದಾಟದಂತ್ಯಕ್ಕೆ ಮೂರು ವಿಕೆಟ್​ಗಳನ್ನು ಕಳೆದುಕೊಂಡು 368 ರನ್ ಕಲೆಹಾಕಿದೆ. ಮೊದಲ ದಿನದಂದು ತಂಡದ ಪರ ಎರಡು ಶತಕಗಳು ಹಾಗೂ ಎರಡು ಅರ್ಧಶತಕಗಳು ದಾಖಲಾಗಿವೆ. ಆರಂಭಿಕ ಕೆಎಲ್ ರಾಹುಲ್ ಹಾಗೂ ನಾಯಕ ಶುಭ್​ಮನ್ ಗಿಲ್ ಶತಕ ಬಾರಿಸಿದರೆ,…

Read More

ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾರೆಡ್ಡಿ: ಸಚಿವ ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ – Kannada News

ಬೆಂಗಳೂರು, ಜೂನ್​​ 06: ತೀವ್ರ ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದೆ. ಸಾಲು ಸಾಲು ಸಭೆಗಳ ಬಳಿಕ ರಾಮಲಿಂಗಾರೆಡ್ಡಿ ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಅಲ್ಲಿಗೆ ಸಿಎಂ ಡಿಕೆ ಶಿವಕುಮಾರ್​ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ರಾಮಲಿಂಗಾರೆಡ್ಡಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿ ಮತ್ತು ಕೃಷ್ಣ…

Read More

IND vs AFG: 11ನೇ ಟೆಸ್ಟ್ ಶತಕ ಬಾರಿಸಿದ ನಾಯಕ ಶುಭ್​ಮನ್ ಗಿಲ್

ಅಫ್ಘಾನಿಸ್ತಾನದ ವಿರುದ್ಧ ಇಂದಿನಿಂದ ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ತಂಡದ ಪರ ಆರಂಭಿಕ ಕೆಎಲ್ ರಾಹುಲ್ ಶತಕ ಬಾರಿಸುವುದರ ಜೊತೆಗೆ ನಾಯಕ ಶುಭ್​ಮನ್ ಗಿಲ್ ಕೂಡ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಗಿಲ್ ಅವರ ಟೆಸ್ಡ್ ವೃತ್ತಿಜೀವನದ 11ನೇ ಶತಕವಾಗಿದೆ. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 138 ಎಸೆತಗಳನ್ನು ಎದುರಿಸಿದ ಗಿಲ್ 11 ಬೌಂಡರಿ ಹಾಗೂ 1…

Read More

‘ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ’; ಹಾನಗಲ್‌ನಲ್ಲಿ ಮುಸ್ಲಿಂ ಸಮುದಾಯದಿಂದ ಸರ್ಕಾರಕ್ಕೆ ಮನವಿ – Kannada News

‘ಹಸುವನ್ನು ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಾವೇರಿ, ಜೂ.6: ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್‌ಗಿರಿಗೆ ಬ್ರೇಕ್ ಹಾಕಲು ಹಾಗೂ ಗೋಸಂರಕ್ಷಣೆಗೆ ಕಾನೂನಾತ್ಮಕ ಬಲ ತುಂಬಲು ‘ಹಸುವನ್ನು ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಮುಸ್ಲಿಂ ಸಮುದಾಯದ ನೂರಾರು ಜನರು ಹಾವೇರಿ ಜಿಲ್ಲೆಯಲ್ಲಿ ಹಠಾತ್ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಹಾನಗಲ್‌ ಪಟ್ಟಣದ ಪ್ರಮುಖ ಕೇಂದ್ರವಾದ ಎಂ.ಜೆ ಸರ್ಕಲ್‌ನಲ್ಲಿ ಜಮಾಯಿಸಿದ ಅಂಜುಮನ್-ಎ-ಇಸ್ಲಾಂ ಕಮಿಟಿಯ ಪದಾಧಿಕಾರಿಗಳು, ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ನೂರಾರು ಸಾರ್ವಜನಿಕರು ರಾಜ್ಯ…

Read More

ವಿಜಯ್ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಮತ್ತೊಬ್ಬ ಸ್ಟಾರ್ ನಟ – Kannada News

ತಮಿಳುನಾಡಿನ ಸಿಎಂ ಆಗಿ ವಿಜಯ್ (Vijay) ಪ್ರಮಾಣ ವಚನ ಸ್ವೀಕರಿಸಿ ತಿಂಗಳಾಗುತ್ತಾ ಬರುತ್ತಿದೆ. ತಮಿಳುನಾಡು ವಿಧಾನಸಭೆಗೆ ಎರಡು ಕ್ಷೇತ್ರಗಳಿಂದ ವಿಜಯ್ ಸ್ಪರ್ಧಿಸಿದ್ದರು. ಪೆರಂಬೂರು ಮತ್ತು ತಿರುಚ್ಚಿ ಈಸ್ಟ್. ಎರಡೂ ಕ್ಷೇತ್ರಗಳಲ್ಲಿಯೂ ವಿಜಯ್ ದೊಡ್ಡ ಗೆಲುವು ಸಾಧಿಸಿದ್ದರು. ಆದರೆ ನಿಯಮದ ಅನ್ವಯ ಒಂದು ಕ್ಷೇತ್ರವನ್ನಷ್ಟೆ ಅವರು ಉಳಿಸಿಕೊಳ್ಳಬೇಕಿತ್ತು. ವಿಜಯ್ ಅವರು ತಿರುಚ್ಚಿ ಈಸ್ಟ್ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ಪೆರಂಬೂರು ಕ್ಷೇತ್ರದ ಎಂಎಲ್​​ಎ ಎನಿಸಿಕೊಂಡು ಬಳಿಕ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇದೀಗ ವಿಜಯ್ ರಾಜಿನಾಮೆ ಕೊಟ್ಟ…

Read More

ವಿದೇಶಿ ಒತ್ತಡಕ್ಕೆ ಭಾರತ ಬಗ್ಗುವುದಿಲ್ಲ; ರಷ್ಯಾದಿಂದ ತೈಲ ಖರೀದಿ ವಿಚಾರದಲ್ಲಿ ಟ್ರಂಪ್‌ಗೆ ಪುಟಿನ್ ತಿರುಗೇಟು – Kannada News

ಮಾಸ್ಕೋ, ಜೂನ್ 6: ರಷ್ಯಾದ ಜೊತೆಗಿನ ಸಹಕಾರವನ್ನು ಕಡಿಮೆ ಮಾಡುವಂತೆ ಭಾರತದ ಮೇಲೆ ನಿರಂತರ ಒತ್ತಡ ಹೇರುತ್ತಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತೀಕ್ಷ್ಣ ಸಂದೇಶ ರವಾನಿಸಿದ್ದಾರೆ. “ಭಾರತ ಎಂದಿಗೂ ಯಾವುದೇ ವಿದೇಶಿ ಶಕ್ತಿಯ ಆದೇಶಗಳಿಗೆ ಬಗ್ಗುವುದಿಲ್ಲ. ಭಾರತ ಸಾರ್ವಭೌಮ ರಾಷ್ಟ್ರವಾಗಿಯೇ ತನ್ನ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ” ಎಂದು ಪುಟಿನ್ ಭಾರತದ ಪರ ಬ್ಯಾಟಿಂಗ್ ಮಾಡಿದ್ದಾರೆ. ಪ್ರಮುಖ ಮುಖ್ಯಾಂಶಗಳು: ವಿದೇಶಿ ಆದೇಶಗಳಿಗೆ ಭಾರತ ಬಗ್ಗುವುದಿಲ್ಲ ಎಂದ ಪುಟಿನ್ ಭಾರತವು…

Read More